ಗಜಗಾತ್ರದ ಐಷಾರಾಮಿ ಅಡ್ವೆಂಚರ್ ಬೈಕ್ ಹಾರ್ಲೆ ಡೇವಿಡ್ಸನ್ ಪ್ಯಾನ್ ಅಮೆರಿಕ ವಿಡಿಯೋ

2021ರ ಇಂಡಿಯಾ ಬೈಕ್ ವೀಕ್‌ನಲ್ಲಿ ಅಮೆರಿಕದ ಐಷಾರಾಮಿ ಬೈಕ್ ಉತ್ಪಾದನಾ ಕಂಪನಿಯಾಗಿರುವ ಹಾರ್ಲೆ ಡೇವಿಡ್ಸನ್ ತನ್ನ ಜನಪ್ರಿಯ ಪ್ಯಾನ್ ಅಮೆರಿಕ 1250 ಅಡ್ವೆಂಚರ್ ಬೈಕ್ ಮಾದರಿಯನ್ನು ಪ್ರದರ್ಶನ ಮಾಡಿದ್ದು, ಅತ್ಯಾಧುನಿಕ ವೈಶಿಷ್ಟ್ಯತೆ ಹೊಂದಿರುವ ಹೊಸ ಬೈಕ್ ಮಾದರಿಯು ಇದೀಗ ಭಾರತದಲ್ಲೂ ಖರೀದಿಗೆ ಲಭ್ಯವಿದೆ.

ಹಾರ್ಲೆ ಡೇವಿಡ್ಸನ್ ಕಂಪನಿಯು ಹೊಸ ಬೈಕ್ ಮಾದರಿಯನ್ನು ಇಂಡಿಯಾ ಬೈಕ್ ವೀಕ್‌ನಲ್ಲಿ ಅಡ್ವೆಂಚರ್ ರೈಡಿಂಗ್ ಆಕ್ಸೆಸರಿಸ್ ಪ್ಯಾಕೇಜ್‌ನೊಂದಿಗೆ ಪ್ರದರ್ಶನಗೊಳಿಸಿದ್ದು, ಹೊಸ ಬೈಕ್ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಈ ವಿಡಿಯೋ ವೀಕ್ಷಿಸಿಸಬಹುದಾಗಿದೆ. ಪ್ಯಾನ್ ಅಮೆರಿಕ 1250 ಅಡ್ವೆಂಚರ್ ಬೈಕ್ ಬೆಲೆಯು ಭಾರತದಲ್ಲಿ ಎಕ್ಸ್ ಶೋರೂಂ ಪ್ರಕಾರ ಆರಂಭಿಕವಾಗಿ ರೂ.16.90 ಲಕ್ಷಗಳಾಗಿದ್ದು, ಹೆಚ್ಚಿನ ಸಂಖ್ಯೆಯ ಎಲೆಕ್ಟ್ರಾನಿಕ್ ಸೌಲಭ್ಯಗಳನ್ನು ಹೊಂದಿರುವ ಟಾಪ್ ಎಂಡ್ ಮಾದರಿಯು ರೂ.19.99 ಲಕ್ಷ ಬೆಲೆ ಹೊಂದಿದೆ.

ಹೊಸ ಬೈಕಿನ ಎರಡು ರೂಪಾಂತರಗಳಲ್ಲಿ ಒಂದೇ ರೀತಿಯಲ್ಲಿ ತಾಂತ್ರಿಕ ಅಂಶಗಳನ್ನು ನೀಡಿದ್ದರೂ ಟಾಪ್ ಎಂಡ್ ಮಾದರಿಯ ಗಮನಸೆಳೆಯಲು ಫುಲ್-ಎಲ್ಇಡಿ ಲೈಟಿಂಗ್, ಬ್ಲೂಟೂತ್-ಕನೆಕ್ಟಿವಿಟಿ ಹೊಂದಿರುವ 6.8-ಇಂಚಿನ ಕಲರ್ ಡಿಸ್ ಪ್ಲೇ ಮತ್ತು ಯುಎಸ್‌ಬಿ ಸಿ-ಟೈಪ್ ಔಟ್ ಲೈಟ್ ಅನ್ನು ಒಳಗೊಂಡಿದೆ.

ಹೊಸ ಬೈಕಿನಲ್ಲಿಅಡ್ವೆಂಚರ್ ಪ್ರಿಯರಿಗಾಗಿ ಹಲವಾರು ಹೊಸ ವೈಶಿಷ್ಟ್ಯತೆಗಳಿದ್ದು, ಐದು ರೈಡಿಂಗ್ ಮೋಡ್‌ಗಳೊಂದಿಗೆ ನಾಲ್ಕು ಪ್ರಿ-ಪ್ರೊಗಾಮ್ ಮಾಡಲಾದ ರೋಡ್, ಸ್ಪೋರ್ಟ್, ರೈನ್, ಆಫ್-ರೋಡ್ ಮತ್ತು ಒಂದು ಕಸ್ಟಮ್ ಮೋಡ್ ಅನ್ನು ರೈಡರ್ ತನ್ನ ಸ್ವಂತ ಆದ್ಯತೆಯ ಪ್ರಕಾರ ಹೊಂದಿಸಿಕೊಳ್ಳಬಹುದಾಗಿದೆ.

ಎರಡು ರೂಪಾಂತರಗಳಲ್ಲೂ ಕಂಪನಿಯು 1,252 ಸಿಸಿ ರೆವಲ್ಯೂಷನ್ ಮ್ಯಾಕ್ಸ್ ಎಂಜಿನ್ ಅನ್ನು ಅಳವಡಿಸಿದ್ದು, 9,000 ಆರ್‌ಪಿಎಂನಲ್ಲಿ 148 ಬಿಹೆಚ್‌ಪಿ ಪವರ್ ಮತ್ತು 6,750 ಆರ್‌ಪಿಎಂನಲ್ಲಿ 127 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಬರೋಬ್ಬರಿ 245 ಕೆಜಿ ತೂಕ ಹೊಂದಿರುವ ಪ್ಯಾನ್ ಅಮೆರಿಕಾ 1250 ವಿಶೇಷ ರೂಪಾಂತರವು ಲೋಡ್ ಕಂಟ್ರೋಲ್, ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಂ, ಸ್ಟ್ಯಾಂಡರ್ಡ್ ಸೆಂಟರ್ ಸ್ಟ್ಯಾಂಡ್, ಹೊಂದಾಣಿಕೆ ಮಾಡಬಹುದಾದ ರಿಯರ್ ಬ್ರೇಕ್ ಪೆಡಲ್, ಅಲ್ಯೂಮಿನಿಯಂ ಸ್ಕಿಡ್-ಪ್ಲೇಟ್, ಸ್ಟೀರಿಂಗ್ ಡ್ಯಾಂಪರ್ ಮತ್ತು ಅಡಾಪ್ಟಿವ್ ರೈಡ್ ಎಂಬ ಹೆಚ್ಚುವರಿ ಫೀಚರ್ ಗಳನ್ನು ಹೊಂದಿದೆ.

Most Read Articles

Kannada
English summary
Harley davidson pan america kannada walkaround video
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X