ಭಾರತದಲ್ಲಿ ಮೊದಲ ಐಷಾರಾಮಿ ಹಾರ್ಲೆ ಡೇವಿಡ್ಸನ್ ಪ್ಯಾನ್ ಅಮೆರಿಕ 1250 ಬೈಕ್ ವಿತರಣೆ ಪಡೆದ ಯುವತಿ

ಐಷಾರಾಮಿ ದ್ವಿಚಕ್ರ ತಯಾರಕ ಕಂಪನಿಯಾದ ಹಾರ್ಲೆ ಡೇವಿಡ್ಸನ್ ತನ್ನ ಹೊಸ ಪ್ಯಾನ್ ಅಮೆರಿಕ 1250 ಬೈಕನ್ನು ಭಾರತದಲ್ಲಿ ಪರಿಚಯಿಸಲಾಗಿದೆ. ಈ ಹೊಸ ಹಾರ್ಲೆ ಡೇವಿಡ್ಸನ್ ಪ್ಯಾನ್ ಅಮೆರಿಕ 1250 ಜಾಗತಿಕವಾಗಿ ಜನಪ್ರಿಯ ಅಡ್ವೆಂಚರ್-ಟೂರರ್ ಬೈಕ್ ಆಗಿದೆ.

ಭಾರತದಲ್ಲಿ ಮೊದಲ ಐಷಾರಾಮಿ ಹಾರ್ಲೆ ಡೇವಿಡ್ಸನ್ ಪ್ಯಾನ್ ಅಮೆರಿಕ 1250 ಬೈಕ್ ವಿತರಣೆ ಪಡೆದ ಯುವತಿ

ಹಾರ್ಲೆ ಡೇವಿಡ್ಸನ್ ಕಂಪನಿಯು ಭಾರತದಲ್ಲಿ ತನ್ನ ಪ್ಯಾನ್ ಅಮೆರಿಕ 1250 ಅಡ್ವೆಂಚರ್ ಬೈಕಿನ ವಿತರಣೆಯನ್ನು ಪ್ರಾರಂಭಿಸಿದ್ದಾರೆ. ಭಾರತದಲ್ಲಿ ಈ ಜನಪ್ರಿಯ ಅಡ್ವೆಂಚರ್-ಟೂರರ್ ಬೈಕ್ ಅನ್ನು ಮೊದಲ ವಿತರಣೆಯನ್ನು ಪಡೆದವರು ಲೇಡೀಸ್ ಆಫ್ ಹಾರ್ಲೆಯ ಸಹಾಯಕ ನಿರ್ದೇಶಕಿ ಅನುಶ್ರೀಯ ಗುಲಾಟಿ ಅವರು ಅಗಿದ್ದಾರೆ. ಈ ಅಡ್ವೆಂಚರ್ ಬೈಕಿನ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.16.90 ಲಕ್ಷಗಳಾಗಿದೆ.

ಭಾರತದಲ್ಲಿ ಮೊದಲ ಐಷಾರಾಮಿ ಹಾರ್ಲೆ ಡೇವಿಡ್ಸನ್ ಪ್ಯಾನ್ ಅಮೆರಿಕ 1250 ಬೈಕ್ ವಿತರಣೆ ಪಡೆದ ಯುವತಿ

ಈ ಹೊಸ ಹಾರ್ಲೆ ಡೇವಿಡ್ಸನ್ ಪ್ಯಾನ್ ಅಮೆರಿಕ 1250 ಅಡ್ವೆಂಚರ್ ಬೈಕ್ ಎರಡು ರೂಪಾಂತರಗಳಲ್ಲಿ ಭಾರತದಲ್ಲಿ ಲಭ್ಯವಿದೆ. ಇದರಲ್ಲಿ ಬೇಸ್ ಸ್ಪೆಕ್ ಬೆಲೆಯು ರೂ.16.90 ಲಕ್ಷಗಳಾದರೆ, ಟಾಪ್-ಸ್ಪೆಕ್ ಪ್ಯಾನ್ ಅಮೇರಿಕಾ 1250 ಸ್ಪೆಷಲ್‌ಗೆ ರೂ.19.99 ಲಕ್ಷಗಳಾಗಿದೆ. ಈ ಎಲ್ಲಾ ಬೆಲೆಗಳು ಭಾರತದ ಎಕ್ಸ್ ಶೋರೂಂ ಪ್ರಕಾರವಾಗಿದೆ.

ಭಾರತದಲ್ಲಿ ಮೊದಲ ಐಷಾರಾಮಿ ಹಾರ್ಲೆ ಡೇವಿಡ್ಸನ್ ಪ್ಯಾನ್ ಅಮೆರಿಕ 1250 ಬೈಕ್ ವಿತರಣೆ ಪಡೆದ ಯುವತಿ

ಈ ಹೊಸ ಬೈಕಿನ ಎರಡು ಬೈಕಿನಲ್ಲಿ ವಿಭಿನ್ನವಾಗಿ ಫೀಚರ್ ಗಳನ್ನು ನೀಡಲಾಗಿದೆ. ಆದರೆ ಕೆಲವು ಫೀಚರ್ ಗಳು ಎರಡು ರೂಪಾಂತರಗಳಲ್ಲಿ ಒಂದೇ ರೀತಿಯಲ್ಲಿ ನೀಡಿದ್ದಾರೆ. ಇದು ಫುಲ್-ಎಲ್ಇಡಿ ಲೈಟಿಂಗ್, ಬ್ಲೂಟೂತ್-ಕನೆಕ್ಟಿವಿಟಿ ಹೊಂದಿರುವ 6.8-ಇಂಚಿನ ಕಲರ್ ಡಿಸ್ ಪ್ಲೇ ಮತ್ತು ಯುಎಸ್‌ಬಿ ಸಿ-ಟೈಪ್ ಔಟ್ ಲೈಟ್ ಅನ್ನು ಕೂಡ ಹೊಂದಿದೆ,

ಭಾರತದಲ್ಲಿ ಮೊದಲ ಐಷಾರಾಮಿ ಹಾರ್ಲೆ ಡೇವಿಡ್ಸನ್ ಪ್ಯಾನ್ ಅಮೆರಿಕ 1250 ಬೈಕ್ ವಿತರಣೆ ಪಡೆದ ಯುವತಿ

ಇನ್ನು ಈ ಪ್ಯಾನ್ ಅಮೆರಿಕ 1250 ಸಂಪೂರ್ಣವಾಗಿ ಹೊಸ ಬೈಕ್ ಆಗಿದ್ದು, ಇದನ್ನು ಸಂಪೂರ್ಣವಾಗಿ ಹೊಸದಾಗಿ ವಿನ್ಯಾಸಗೊಳಿಸಲಾಗಿದೆ ಮತ್ತು ಅಭಿವೃದ್ಧಿಪಡಿಸಲಾಗಿದೆ. ಇದರ ವಿನ್ಯಾಸದ ಬಗ್ಗೆ ಹೇಳುವುದಾದರೆ, ಅಡ್ವೆಂಚರ್ ಪ್ರಿಯರನ್ನು ಸೆಳೆಯುವಂತೆ ವಿನ್ಯಾಸದಿಂದ ಕೂಡಿದೆ.

ಭಾರತದಲ್ಲಿ ಮೊದಲ ಐಷಾರಾಮಿ ಹಾರ್ಲೆ ಡೇವಿಡ್ಸನ್ ಪ್ಯಾನ್ ಅಮೆರಿಕ 1250 ಬೈಕ್ ವಿತರಣೆ ಪಡೆದ ಯುವತಿ

ಹಾರ್ಲೆ ಡೇವಿಡ್ಸನ್ ಪ್ಯಾನ್ ಅಮೆರಿಕ 1250 ಅಡ್ವೆಂಚರ್ ಬೈಕಿನ ಸ್ಟ್ಯಾಂಡರ್ಡ್ ರೂಪಾಂತರದಲ್ಲಿ ಐದು ರೈಡಿಂಗ್ ಮೋಡ್ ಗಳನ್ನು ಪಡೆಯುತ್ತದೆ. ಇವುಗಳು ನಾಲ್ಕು ಪ್ರಿ-ಪ್ರೊಗಾಮ್ ಮಾಡಲಾದ ರೋಡ್, ಸ್ಪೋರ್ಟ್, ರೈನ್, ಆಫ್-ರೋಡ್ ಮತ್ತು ಒಂದು ಕಸ್ಟಮ್ ಮೋಡ್ ಅನ್ನು ರೈಡರ್ ತನ್ನ ಸ್ವಂತ ಆದ್ಯತೆಯ ಪ್ರಕಾರ ಹೊಂದಿಸಬಹುದು.

ಭಾರತದಲ್ಲಿ ಮೊದಲ ಐಷಾರಾಮಿ ಹಾರ್ಲೆ ಡೇವಿಡ್ಸನ್ ಪ್ಯಾನ್ ಅಮೆರಿಕ 1250 ಬೈಕ್ ವಿತರಣೆ ಪಡೆದ ಯುವತಿ

ಈ ಬೈಕಿನ ಟಾಪ್-ಸ್ಪೆಕ್ ಆದ ಸ್ಪೆಷಲ್ ರೂಪಾಂತರದಲ್ಲಿ ಕಸ್ಟಮೈಸ್ ಮಾಡಬಹುದಾದ ಎರಡು ಹೆಚ್ಚುವರಿ ಮೋಡ್‌ಗಳನ್ನು ಪಡೆಯುತ್ತದೆ. ಇನ್ನು ಮೆಕ್ಯಾನಿಕಲ್‌ಗಳ ವಿಷಯದಲ್ಲಿ ಎರಡು ರೂಪಾಂತರಗಳಲ್ಲಿ ಒಂದೇ ರೀತಿಯ 1,252 ಸಿಸಿ, ರೆವಲ್ಯೂಷನ್ ಮ್ಯಾಕ್ಸ್ ಎಂಜಿನ್ ಅನ್ನು ಹೊಂದಿದೆ

ಭಾರತದಲ್ಲಿ ಮೊದಲ ಐಷಾರಾಮಿ ಹಾರ್ಲೆ ಡೇವಿಡ್ಸನ್ ಪ್ಯಾನ್ ಅಮೆರಿಕ 1250 ಬೈಕ್ ವಿತರಣೆ ಪಡೆದ ಯುವತಿ

ಈ ಎಂಜಿನ್ 9,000 ಆರ್‌ಪಿಎಂನಲ್ಲಿ 150 ಬಿಹೆಚ್‌ಪಿ ಪವರ್ ಮತ್ತು 6,750 ಆರ್‌ಪಿಎಂನಲ್ಲಿ 127 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎಂಜಿನ್ ಅನ್ನು 6-ಸ್ಪೀಡ್ ಗೇರ್ ನೊಂದಿಗೆ ಅನ್ನು ಜೋಡಿಸಲಾಗಿದೆ.

ಭಾರತದಲ್ಲಿ ಮೊದಲ ಐಷಾರಾಮಿ ಹಾರ್ಲೆ ಡೇವಿಡ್ಸನ್ ಪ್ಯಾನ್ ಅಮೆರಿಕ 1250 ಬೈಕ್ ವಿತರಣೆ ಪಡೆದ ಯುವತಿ

ಹೊಸ ಪ್ಯಾನ್ ಅಮೇರಿಕಾ 1250 ಸ್ಪೆಷಲ್ ರೂಪಾಂತರವು ಲೋಡ್ ಕಂಟ್ರೋಲ್, ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಂ, ಸ್ಟ್ಯಾಂಡರ್ಡ್ ಸೆಂಟರ್ ಸ್ಟ್ಯಾಂಡ್, ಹೊಂದಾಣಿಕೆ ಮಾಡಬಹುದಾದ ರಿಯರ್ ಬ್ರೇಕ್ ಪೆಡಲ್, ಅಲ್ಯೂಮಿನಿಯಂ ಸ್ಕಿಡ್-ಪ್ಲೇಟ್, ಸ್ಟೀರಿಂಗ್ ಡ್ಯಾಂಪರ್ ಮತ್ತು ಅಡಾಪ್ಟಿವ್ ರೈಡ್ ಎಂಬ ಫೀಚರ್ ಗಳನ್ನು ಹೊಂದಿವೆ.

ಭಾರತದಲ್ಲಿ ಮೊದಲ ಐಷಾರಾಮಿ ಹಾರ್ಲೆ ಡೇವಿಡ್ಸನ್ ಪ್ಯಾನ್ ಅಮೆರಿಕ 1250 ಬೈಕ್ ವಿತರಣೆ ಪಡೆದ ಯುವತಿ

ಇನ್ನು ಹಾರ್ಲೆ ಡೇವಿಡ್ಸನ್ ಕಂಪನಿಯು ತನ್ನ ಹೊಸ ಸ್ಪೋರ್ಟ್‌ಸ್ಟರ್ ಎಸ್ ಬೈಕನ್ನು ಇತ್ತೀಚೆಗೆ ಜಾಗತಿಕವಾಗಿ ಅನಾವರಣಗೊಳಿಸಿತು. ಈ ಹೊಸ ಹಾರ್ಲೆ ಡೇವಿಡ್ಸನ್ ಸ್ಪೋರ್ಟ್‌ಸ್ಟರ್ ಎಸ್ ಬೈಕ್ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿದೆ. ಹಾರ್ಲೆ-ಡೇವಿಡ್ಸನ್ ತನ್ನ ಭಾರತೀಯ ವೆಬ್‌ಸೈಟ್‌ನಲ್ಲಿ ಹೊಸ ಸ್ಪೋರ್ಟ್‌ಸರ್ ಎಸ್ ಬೈಕಿನ ಹೆಸರನ್ನು ಪಟ್ಟಿ ಮಾಡಿದೆ. ಈ ಬಹುನಿರೀಕ್ಷಿತ ಬೈಕ್ ಶೀಘ್ರದಲ್ಲೇ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿದೆ.

ಭಾರತದಲ್ಲಿ ಮೊದಲ ಐಷಾರಾಮಿ ಹಾರ್ಲೆ ಡೇವಿಡ್ಸನ್ ಪ್ಯಾನ್ ಅಮೆರಿಕ 1250 ಬೈಕ್ ವಿತರಣೆ ಪಡೆದ ಯುವತಿ

ಈ ಹೊಸ ಸ್ಪೋರ್ಟ್‌ಸರ್ ಎಸ್ ಬೈಕ್ ಹಾರ್ಲಿಯ ರೆವಲ್ಯೂಷನ್ ಮ್ಯಾಕ್ಸ್ ಪ್ಲಾಟ್‌ಫಾರ್ಮ್ ಅನ್ನು ಆಧರಿಸಿದೆ. ಹಾರ್ಲೆ ಡೇವಿಡ್ಸನ್ ಸ್ಪೋರ್ಟ್‌ಸ್ಟರ್ ಎಸ್ ಬೈಕ್ 227.7 ಕೆಜಿ ತೂಕವನ್ನು ಹೊಂದಿದೆ. ಈ ಹೊಸ ಹಾರ್ಲೆ ಡೇವಿಡ್ಸನ್ ಸ್ಪೋರ್ಟ್‌ಸ್ಟರ್ ಎಸ್ ಬೈಕಿನಲ್ಲಿ 1250 ಸಿಸಿ ರೆವಲ್ಯೂಷನ್ ಮ್ಯಾಕ್ಸ್ 1250 ಟಿ ವಿ-ಟ್ವಿನ್ ಎಂಜಿನ್‌ ಅನ್ನು ಹೊಂದಿದೆ. ಈ ಎಂಜಿನ್ 121 ಬಿಹೆಚ್‍ಪಿ ಪವರ್ ಮತ್ತು 127 ಎನ್ಎಂ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ.

ಭಾರತದಲ್ಲಿ ಮೊದಲ ಐಷಾರಾಮಿ ಹಾರ್ಲೆ ಡೇವಿಡ್ಸನ್ ಪ್ಯಾನ್ ಅಮೆರಿಕ 1250 ಬೈಕ್ ವಿತರಣೆ ಪಡೆದ ಯುವತಿ

ಇನ್ನು ಈ ಐಷಾರಾಮಿ ಹಾರ್ಲೆ ಡೇವಿಡ್ಸನ್ ಪ್ಯಾನ್ ಅಮೆರಿಕ 1250 ಅಡ್ವೆಂಚರ್ ಬೈಕಿನಲ್ಲಿ ಸೆಮಿ-ಆಕ್ಟಿವ್ ಸಸ್ಪೆಂಕ್ಷನ್ ಸೆಟಪ್ ಅನ್ನು ಹೊಂದಿದೆ. ಪ್ಯಾನ್ ಅಮೇರಿಕಾ 1250 ಹಾರ್ಲೆ-ಡೇವಿಡ್ಸನ್‌ನಿಂದ ಬಂದ ಮೊದಲ ಅಡ್ವೆಂಚರ್ ಬೈಕ್ ಆಗಿದೆ. ಹೊಸ ಹಾರ್ಲೆ ಡೇವಿಡ್ಸನ್ ಪ್ಯಾನ್ ಅಮೆರಿಕ 1250 ಬೈಕ್ ಅಗ್ರೇಸಿವ್ ಮತ್ತು ರಗಡ್ ಲುಕ್ ಅನ್ನು ಹೊಂದಿರುವ ಫ್ಯೂಚರಿಸ್ಟಿಕ್ ಫ್ರಂಟ್ ಎಂಡ್ ಅನ್ನು ಹೊಂದಿದೆ. ಐಷಾರಾಮಿ ಅಡ್ವೆಂಚರ್ ಬೈಕ್ ಪ್ರಿಯರಿಗೆ ಉತ್ತಮ ಆಯ್ಕೆಯಾಗಿದೆ.

Most Read Articles

Kannada
English summary
Harley davidson started deliveries of pan america 1250 adventure tourer in india details
Story first published: Wednesday, August 11, 2021, 12:55 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X