Just In
- 2 hrs ago
ಅನಾವರಣವಾಯ್ತು ಫೋಕ್ಸ್ವ್ಯಾಗನ್ ಗಾಲ್ಫ್ ಜಿಟಿಐ ಕ್ಲಬ್ಸ್ಪೋರ್ಟ್ 45 ಕಾರು
- 4 hrs ago
35 ಸಾವಿರಕ್ಕೂ ಹೆಚ್ಚು ಸಿಬ್ಬಂದಿಗಳಿಗೆ ಉಚಿತ ಲಸಿಕೆ ನೀಡಲು ಮುಂದಾದ ಟಿವಿಎಸ್ ಕಂಪನಿ
- 7 hrs ago
ವಾರದ ಪ್ರಮುಖ ಸುದ್ದಿ: ಏರ್ಬ್ಯಾಗ್ ಕಡ್ಡಾಯ, ಬಿಡುಗಡೆಗೆ ಸಜ್ಜಾದ ಸಿಟ್ರನ್, ಟೊಯೊಟಾ ನೌಕರರ ಮುಷ್ಕರ ಅಂತ್ಯ!
- 16 hrs ago
ವೆಂಟೊ ಟ್ರೆಂಡ್ಲೈನ್ ವೆರಿಯೆಂಟ್ ಬುಕ್ಕಿಂಗ್ ಪ್ರಕ್ರಿಯೆಗೆ ಸ್ಥಗಿತಗೊಳಿಸಿದ ಫೋಕ್ಸ್ವ್ಯಾಗನ್
Don't Miss!
- News
ಈ ವರ್ಷದ ಬಜೆಟ್ ಹೇಗಿರಲಿದೆ? ಸುಳಿವು ಕೊಟ್ಟ ಮುಖ್ಯಮಂತ್ರಿ ಯಡಿಯೂರಪ್ಪ!
- Movies
ರಾಖಿ ಸಾವಂತ್ ಬಯೋಪಿಕ್ ಈ ಸ್ಟಾರ್ ನಟಿಯೇ ಮಾಡಬೇಕಂತೆ
- Sports
ಐಪಿಎಲ್ 2021: ಈ ಬಾರಿಯ ಆವೃತ್ತಿಯ ಕೆಲ ಗಮನಾರ್ಹ ಬದಲಾವಣೆಗಳು
- Finance
ದಕ್ಷಿಣ ಭಾರತದ ಅತಿದೊಡ್ಡ ಆಭರಣ ರೀಟೈಲರ್ ಮೇಲೆ ಐಟಿ ದಾಳಿ
- Lifestyle
"ವಾರ ಭವಿಷ್ಯ: ಈ ವಾರ 12 ರಾಶಿಗಳ ರಾಶಿಫಲ ಹೇಗಿದೆ?"
- Education
Mandya District Court Recruitment 2021: 10 ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಸ್ಥಗಿತವಾಯ್ತು ಹಾರ್ಲೆ ಡೇವಿಡ್ಸನ್ ಸ್ಟ್ರೀಟ್ 750 ಮತ್ತು ಸ್ಟ್ರೀಟ್ ರಾಡ್ ಬೈಕುಗಳು
ಅಮೆರಿಕ ಮೂಲದ ಜನಪ್ರಿಯ ಮತ್ತು ದುಬಾರಿ ದ್ವಿಚಕ್ರ ವಾಹನ ತಯಾರಕ ಕಂಪನಿಯಾದ ಹಾರ್ಲೆ ಡೇವಿಡ್ಸನ್ ಕಂಪನಿಯು ಸ್ವತಂತ್ರ ಬ್ರ್ಯಾಂಡ್ ಆಗಿ ಭಾರತದಲ್ಲಿ ತನ್ನ ಉತ್ಪಾದನಾ ಕಾರ್ಯಾಚರಣೆಯನ್ನು ಇತ್ತೀಚೆಗೆ ಸ್ಥಗಿತಗೊಳಿಸಿತು.

ಇದರ ಪರಿಣಾಮವಾಗಿ, ಸ್ಥಳೀಯವಾಗಿ ಉತ್ಪಾದಿಸಲಾದ ಸ್ಟ್ರೀಟ್ 750 ಮತ್ತು ಸ್ಟ್ರೀಟ್ ರಾಡ್ ಬೈಕುಗಳನ್ನು ಭಾರತೀಯ ಮಾರುಕಟ್ಟೆಯಲ್ಲಿ ಸ್ಥಗಿತಗೊಳಿಸಲಾಗಿದೆ. ದೇಶದಲ್ಲಿ ಬ್ರ್ಯಾಂಡ್ ತನ್ನ ಉತ್ಪಾದನಾ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸುವುದರೊಂದಿಗೆ ಈ ಎರಡೂ ಬೈಕುಗಳ ಹೆಸರನ್ನು ಈಗ ವೆಬ್‌ಸೈಟ್‌ನಿಂದ ತೆಗೆದುಹಾಕಲಾಗಿದೆ. ಇದೀಗ ಭಾರತೀಯ ಮಾರುಕಟ್ಟೆಯಲ್ಲಿ ಮಾರಾಟವಾಗುವ ಎಲ್ಲಾ ಹಾರ್ಲೆ ಡೇವಿಡ್ಸನ್ ಬೈಕುಗಳನ್ನು ಸಿಬಿಯುಯಾಗಿ ಆಮದು ಮಾಡಿಕೊಳ್ಳಲಾಗುವುದು.

ಹಾರ್ಲೆ ಡೇವಿಡ್ಸನ್ ಸ್ಟ್ರೀಟ್ 750 ಮತ್ತು ಸ್ಟ್ರೀಟ್ ರಾಡ್ ಬೈಕುಗಳು ಬ್ರ್ಯಾಂಡ್‌ನ ಎಂಟ್ರಿ ಲೆವೆಲ್ ಬೈಕುಗಳಾಗಿದೆ. ಇನ್ನು ಬ್ರ್ಯಾಂಡ್‌ನ ಐರನ್ 883 ದೇಶದಲ್ಲಿ ಎಂಟ್ರಿ ಲೆವೆಲ್ ಮಾದರಿಯಾಗಿದೆ.
MOST READ: ಯೂನಿಕಾರ್ನ್ ಬೈಕಿನ ಬೆಲೆ ಹೆಚ್ಚಿಸಿದ ಹೋಂಡಾ ಮೋಟಾರ್‌ಸೈಕಲ್

ಹಾರ್ಲೆ ಡೇವಿಡ್ಸನ್ ಸ್ಟ್ರೀಟ್ ರಾಡ್ ಬೈಕಿನಲ್ಲಿ ವಿಶಾಲವಾದ ಹ್ಯಾಂಡಲ್‌ಬಾರ್, ಟಿಯರ್-ಡ್ರಾಪ್ ಆಕಾರದ ಉದ್ದವಾದ ಫ್ಯೂಯಲ್ ಟ್ಯಾಂಕ್, ದೈತ್ಯ ರೇಡಿಯೇಟರ್, ದುಂಡಗಿನ ಆಕಾರದ ಎಲ್ಇಡಿ ಹೆಡ್‌ಲ್ಯಾಂಪ್, ಟೈಲ್-ಲ್ಯಾಂಪ್ ಮತ್ತು ಟರ್ನ್ ಇಂಡಿಕೇಟರ್ಸ್ ಅನ್ನು ಹೊಂದಿದೆ.

ಇನ್ನು ಈ ಬೈಕಿನಲ್ಲಿ ಲಾಂಗ್ ಎಕ್ಸಾಸ್ಟ್, ಫ್ರಂಟ್-ಸೀಟ್ ಫುಟ್‌ಪೆಗ್ಸ್ ಮತ್ತು ಉತ್ತಮವಾದ ಮೆತ್ತನೆಯ ರೈಡರ್ ಮತ್ತು ಪಿಲಿಯನ್ ಸೀಟುಗಳನ್ನು ಒಳಗೊಂಡಿದೆ. ಇದರಿಂದ ಈ ಬೈಕ್ ಅನ್ನು ಆರಾಮದಾಯಕವಾಗಿ ರೈಡ್ ಮಾಡಬಹುದು.
MOST READ: ಹೊಸ ಬಣ್ಣದ ಆಯ್ಕೆಯನ್ನು ಪಡೆದುಕೊಂಡ 2021ರ ಕವಾಸಕಿ ನಿಂಜಾ 1000 ಎಸ್‌ಎಕ್ಸ್ ಬೈಕ್

ಈ ಹೊಸ ಹಾರ್ಲೆ ಡೇವಿಡ್ಸನ್ ಸ್ಟ್ರೀಟ್ ರಾಡ್ ಬೈಕಿನ ಮುಂಭಾಗದಲ್ಲಿ ಯುಎಸ್ಡಿ ಫೋರ್ಕ್ ಗಳು ಮತ್ತು ಹಿಂಭಾಗದಲ್ಲಿ ಗ್ಯಾಸ್-ಚಾರ್ಜ್ಡ್ ರಿಯರ್ ಸಂಸ್ಪೆಕ್ಷನ್ ಅನ್ನು ಹೊಂದಿದೆ. ಈ ಬೈಕಿನಲ್ಲಿ ಬ್ರೇಕಿಂಗ್ ಗಾಗಿ ಡ್ಯುಯಲ್-ಚಾನೆಲ್ ಎಬಿಎಸ್ ನೊಂದಿಗೆ ಎರಡೂ ತುದಿಗಳಲ್ಲಿ ಡಿಸ್ಕ್ ಬ್ರೇಕ್ ಅನ್ನು ಅಳವಡಿಸಲಾಗಿದೆ.

ಇನ್ನು ಹಾರ್ಲೆ ಡೇವಿಡ್ಸನ್ ಸ್ಟ್ರೀಟ್ 750 ಮತ್ತು ಸ್ಟ್ರೀಟ್ ರಾಡ್ ಬೈಕುಗಳಲ್ಲಿ 749ಸಿಸಿ ವಿ ಟ್ವಿನ್ ಲಿಕ್ವಿಡ್ ಕೂಲ್ಡ್ ಪೆಟ್ರೋಲ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 3,750 ಆರ್‌ಪಿಎಂನಲ್ಲಿ 60 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಈ ಎಂಜಿನ್‍ಗೆ ಆರು ಸ್ಪೀಡಿನ ಗೇರ್‌ಬಾಕ್ಸ್ ಜೋಡಿಸಲಾಗಿದೆ.
MOST READ: ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್‍ಮಾಸ್ಟರ್ ಬೈಕ್

ಹಾರ್ಲೆ ಡೇವಿಡ್ಸನ್ ಸ್ಟ್ರೀಟ್ 750 ಮತ್ತು ಸ್ಟ್ರೀಟ್ ರಾಡ್ ಮಾದರಿಗಳು ದೇಶಿಯ ಮಾರುಕಟ್ಟೆಯಲ್ಲಿ ರಾಯಲ್ ಎನ್‌ಫೀಲ್ಡ್ ಕಾಂಟಿನೆಂಟಲ್ ಜಿಟಿ 650 ಹಾಗೂ ಇಂಟರ್‌ಸೆಪ್ಟರ್ 650 ಬೈಕುಗಳಿಗೆ ಪೈಪೋಟಿ ನೀಡುತ್ತಿತ್ತು.

ಭಾರತದಲ್ಲಿ ಐಷಾರಾಮಿ ಬೈಕ್ ಮಾದರಿಗಳನ್ನು ಅಭಿವೃದ್ದಿಗೊಳಿಸಿ ಮಾರಾಟ ಮಾಡುತ್ತಿದ್ದ ಹಾರ್ಲೆ ಡೇವಿಡ್ಸನ್ ಕಂಪನಿಯು ನಿರ್ವಹಣಾ ವೆಚ್ಚಗಳನ್ನು ತಗ್ಗಿಸಲು ದೇಶದ ಜನಪ್ರಿಯ ಬೈಕ್ ಉತ್ಪಾದನಾ ಕಂಪನಿಯಾಗಿರುವ ಹೀರೋ ಮೋಟೊಕಾರ್ಪ್ ಜೊತೆ ಪಾಲುಗಾರಿಗೆಯನ್ನು ಹೊಂದಿದೆ. ಈಗಾಗಲೇ ದೇಶದಲ್ಲಿ ಜಂಟಿ ಕಾರ್ಯಾಚರಣೆಯನ್ನು ಪ್ರಾರಂಭಿಸಲು ಒಂದೆರಡು ಹಾರ್ಲೆ ಡೇವಿಡ್ಸನ್ ವಿತರಕರನ್ನು ಆನ್‌ಬೋರ್ಡ್ ಮಾಡಿದೆ.

ಹಾರ್ಲೆ ಡೇವಿಡ್ಸನ್ ಸ್ಟ್ರೀಟ್ 750 ಮತ್ತು ಸ್ಟ್ರೀಟ್ ರಾಡ್ ಬೈಕುಗಳು ದೇಶದಲ್ಲಿ ಐಷಾರಾಮಿ ಪ್ರೀಮಿಯಂ ಬೈಕುಗಳಲ್ಲಿ ಖರೀದಿಸಬೇಕೆಂಬ ಅನೇಕ ಗ್ರಾಹಕರ ಕನಸ್ಸನ್ನು ಈಡೇರಿಸಿದ ಎಂಟ್ರಿ ಲೆವೆಲ್ ಮಾದರಿಗಳಾಗಿದೆ. ಆದರೆ ಬ್ರ್ಯಾಂಡ್ ತನ್ನ ಉತ್ಪಾದನಾ ಕಾರ್ಯಾಚರಣೆಯನ್ನು ನಿಲ್ಲಿಸಿರುವುದರಿಂದ ಈ ಎರಡೂ ಬೈಕುಗಳನ್ನು ಸ್ಥಗಿತಗೊಳಿಸಲಾಗಿದೆ.