ಅನಾವರಣವಾಯ್ತು ಹೊಸ ಹಾರ್ಲೆ ಡೇವಿಡ್ಸನ್ ಪ್ಯಾನ್ ಅಮೆರಿಕ 1250 ಅಡ್ವೆಂಚರ್ ಬೈಕ್

ಹಾರ್ಲೆ ಡೇವಿಡ್ಸನ್ ತನ್ನ ಪ್ರಮುಖ ಅಡ್ವೆಂಚರ್ ಬೈಕ್ ಆದ ಪ್ಯಾನ್ ಅಮೆರಿಕ 1250 ಮಾದರಿಯನ್ನು ಅಧಿಕೃತವಾಗಿ ಅನಾವರಣಗೊಳಿಸಿದೆ. ಹೊಸ ಹಾರ್ಲೆ ಡೇವಿಡ್ಸನ್ ಪ್ಯಾನ್ ಅಮೆರಿಕ 1250 ಅಡ್ವೆಂಚರ್ ಬೈಕ್ ವೆರಿಯೆಂಟ್ ಗಳಲ್ಲಿ ಬಿಡುಗಡೆಯಾಗಲಿದೆ.

ಅನಾವರಣವಾಯ್ತು ಹೊಸ ಹಾರ್ಲೆ ಡೇವಿಡ್ಸನ್ ಪ್ಯಾನ್ ಅಮೆರಿಕ 1250 ಅಡ್ವೆಂಚರ್ ಬೈಕ್

ಈ ಪ್ಯಾನ್ ಅಮೆರಿಕ 1250 ಅಡ್ವೆಂಚರ್ ಬೈಕ್ ಸ್ಟ್ಯಾಂಡರ್ಡ್ ಮತ್ತು ಸ್ಪೆಷಲ್ ಎಂಬ ಎರಡು ರೂಪಾಂತರಗಳಲ್ಲಿ ಲಭ್ಯವಿರುತ್ತದೆ. ಈ ಐಷಾರಾಮಿ ಹಾರ್ಲೆ ಡೇವಿಡ್ಸನ್ ಪ್ಯಾನ್ ಅಮೆರಿಕ 1250 ಅಡ್ವೆಂಚರ್ ಬೈಕ್ ಬಿಎಂಡಬ್ಲ್ಯು ಆರ್1250ಜಿಎಸ್ ಮಾದರಿಗೆ ನೇರವಾಗಿ ಪೈಪೋಟಿ ನೀಡುತ್ತದೆ. ಪ್ಯಾನ್ ಅಮೆರಿಕ 1250 ಸಂಪೂರ್ಣವಾಗಿ ಹೊಸ ಬೈಕು ಆಗಿದ್ದು, ಇದನ್ನು ಸಂಪೂರ್ಣವಾಗಿ ಹೊಸದಾಗಿ ವಿನ್ಯಾಸಗೊಳಿಸಲಾಗಿದೆ ಮತ್ತು ಅಭಿವೃದ್ಧಿಪಡಿಸಲಾಗಿದೆ.

ಅನಾವರಣವಾಯ್ತು ಹೊಸ ಹಾರ್ಲೆ ಡೇವಿಡ್ಸನ್ ಪ್ಯಾನ್ ಅಮೆರಿಕ 1250 ಅಡ್ವೆಂಚರ್ ಬೈಕ್

ಇದರ ವಿನ್ಯಾಸದ ಬಗ್ಗೆ ಹೇಳುವುದಾದರೆ, ಅಡ್ವೆಂಚರ್ ಪ್ರಿಯರಿಗಾಗಿ ಸಂಪೂರ್ಣವಾಗಿ ವಿಶಿಷ್ಟವಾದ ವಿನ್ಯಾಸವನ್ನು ಹೊಂದಿದೆ. ಫ್ಲಾಟ್ ಎಲ್ಇಡಿ ಹೆಡ್ ಲೈಟ್ ಅನ್ನ್ ನೀಡಿದ್ದು, ಇದು ಹೆಚ್ಚು ಪ್ರಕಾಶಮಾನವಾಗಿದೆ.

MOST READ: ಹೊಸ ಬಣ್ಣದ ಆಯ್ಕೆಯನ್ನು ಪಡೆದುಕೊಂಡ 2021ರ ಕವಾಸಕಿ ನಿಂಜಾ 1000 ಎಸ್‌ಎಕ್ಸ್ ಬೈಕ್

ಅನಾವರಣವಾಯ್ತು ಹೊಸ ಹಾರ್ಲೆ ಡೇವಿಡ್ಸನ್ ಪ್ಯಾನ್ ಅಮೆರಿಕ 1250 ಅಡ್ವೆಂಚರ್ ಬೈಕ್

ಇನ್ನು ಈ ಬೈಕಿನಲ್ಲಿ ಟೂ-ಪೀಸ್ ಸ್ಪ್ಲೀಟ್ ಸೀಟುಗಳು, ಅಪ್‌ಸ್ವೆಪ್ಟ್ ಮಫ್ಲರ್ ಮತ್ತು ಎಕ್ಸಾಸ್ಟ್ ಪೈಪ್ ಗಳು ಮತ್ತು ಇತರ ಆಕರ್ಷಕ ಮುಖ್ಯಾಂಶಗಳನ್ನು ಒಳಗೊಂಡಿದೆ. ಬೈಕು ಮುಖ್ಯವಾಗಿ ಮ್ಯಾಟ್ ಫಿನಿಶಿಂಗ್ ನಿಂದ ಕೂಡಿದೆ. ಹಾರ್ಲೆ ಡೇವಿಡ್ಸನ್ ಪ್ಯಾನ್ ಅಮೆರಿಕ 1250 ಅಡ್ವೆಂಚರ್ ಬೈಕ್ ಬೋಲ್ಟ್-ಆನ್ ರಿಯರ್ ಸಬ್‌ಫ್ರೇಮ್ ಮತ್ತು ಕ್ಯಾಸ್ಟ್ ಫ್ರೇಮ್‌ನಿಂದ ಆಧಾರವಾಗಿದೆ.

ಅನಾವರಣವಾಯ್ತು ಹೊಸ ಹಾರ್ಲೆ ಡೇವಿಡ್ಸನ್ ಪ್ಯಾನ್ ಅಮೆರಿಕ 1250 ಅಡ್ವೆಂಚರ್ ಬೈಕ್

ಹೊಸ ಹಾರ್ಲೆ ಡೇವಿಡ್ಸನ್ ಪ್ಯಾನ್ ಅಮೆರಿಕ 1250 ಅಡ್ವೆಂಚರ್ ಬೈಕಿನ ಸಸ್ಪೆಂಕ್ಷನ್ ಸೆಟಪ್ ಬಗ್ಗೆ ಹೇಳುವುದಾದರೆ, ಶೋವಾದಿಂದ ಸಂಪೂರ್ಣವಾಗಿ ಹೊಂದಾಣಿಕೆಯಾಗಿದ್ದು, ಮುಂಭಾಗ ಮತ್ತು ಹಿಂಭಾಗದ ತುದಿಗಳಲ್ಲಿ ಪ್ರಿ ಲೋಡ್ ಮತ್ತು ರಿಬೌಂಡ್ ಡ್ಯಾಂಪಿಂಗ್ಗಾಗಿ ಟ್ಯೂನ್ ಮಾಡಲಾಗಿದೆ. ಇದರ ಮುಂಭಾಗದಲ್ಲಿ 47 ಎಂಎಂ ಯುಎಸ್ಡಿ ಫೋರ್ಕ್ ಗಳು ಮತ್ತು ಹಿಂಭಾಗದಲ್ಲಿ ಮೊನೊ ಶಾಕ್ ಸೆಟಪ್ ಅನ್ನು ಪಡೆಯುತ್ತದೆ.

MOST READ: ಬಿಡುಗಡೆಯಾಯ್ತು ಹೊಸ ಕವಾಸಕಿ ವಲ್ಕನ್ ಎಸ್ ಬೈಕ್

ಅನಾವರಣವಾಯ್ತು ಹೊಸ ಹಾರ್ಲೆ ಡೇವಿಡ್ಸನ್ ಪ್ಯಾನ್ ಅಮೆರಿಕ 1250 ಅಡ್ವೆಂಚರ್ ಬೈಕ್

ಇನ್ನು ಪ್ಯಾನ್ ಅಮೆರಿಕ 1250 ಅಡ್ವೆಂಚರ್ ಬೈಕಿನ ಬ್ರೇಕಿಂಗ್ ಸಿಸ್ಟಂ ಬಗ್ಗೆ ಹೇಳುವುದಾದರೆ, ಮುಂಭಾಗದಲ್ಲಿ ಟ್ವಿನ್ 320 ಎಂಎಂ ಡಿಸ್ಕ್ ಮತ್ತು ಹಿಂಭಾಗದಲ್ಲಿ ಸಿಂಗಲ್ 280 ಎಂಎಂ ಡಿಸ್ಕ್ ಬ್ರೇಕ್ ಅನ್ನು ನೀಡಿದೆ. ಇದರಲ್ಲಿ ಮುಂಭಾಗ 17 ಇಂಚಿನ ಮತ್ತು ಹಿಂಭಾಗ 19-ಇಂಚಿನ 5-ಸ್ಪೋಕ್ ಅಲಾಯ್ ವ್ಹೀಲ್ ಗಳನ್ನು ಒಳಗೊಂಡಿದೆ.

ಅನಾವರಣವಾಯ್ತು ಹೊಸ ಹಾರ್ಲೆ ಡೇವಿಡ್ಸನ್ ಪ್ಯಾನ್ ಅಮೆರಿಕ 1250 ಅಡ್ವೆಂಚರ್ ಬೈಕ್

ಹೊಸ ಹಾರ್ಲೆ ಡೇವಿಡ್ಸನ್ ಪ್ಯಾನ್ ಅಮೆರಿಕ 1250 ಅಡ್ವೆಂಚರ್ ಬೈಕ್ 1250 ಸಿಸಿ ವಿ-ಟ್ವಿನ್ ಡಿಒಹೆಚ್‌ಸಿ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 8750 ಆರ್‌ಪಿಎಂನಲ್ಲಿ 150 ಬಿಹೆಚ್‌ಪಿ ಪವರ್ ಮತ್ತು 6750 ಆರ್‌ಪಿಎಂನಲ್ಲಿ 128 ಎನ್‌ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

MOST READ: ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್‍‍ಮಾಸ್ಟರ್ ಬೈಕ್

ಅನಾವರಣವಾಯ್ತು ಹೊಸ ಹಾರ್ಲೆ ಡೇವಿಡ್ಸನ್ ಪ್ಯಾನ್ ಅಮೆರಿಕ 1250 ಅಡ್ವೆಂಚರ್ ಬೈಕ್

ಹೊಸ ಹಾರ್ಲೆ ಡೇವಿಡ್ಸನ್ ಪ್ಯಾನ್ ಅಮೆರಿಕ 1250 ಅಡ್ವೆಂಚರ್ ಬೈಕಿನ ಆಫ್-ರೋಡ್ ಮತ್ತು ಸವಾರಿ ಸಾಮರ್ಥ್ಯಗಳನ್ನು ಹೆಚ್ಚಿಸಲು ಇದು ಎಲೆಕ್ಟ್ರಾನಿಕ್ ಫೀಚರ್ ಗಳನ್ನು ಒಳಗೊಂಡಿದೆ. ವುಗಳಲ್ಲಿ ರೈಡ್-ಬೈ-ವೈರ್, ಕಾರ್ನರಿಂಗ್ ಎಬಿಎಸ್ ಮತ್ತು ಟ್ರಾಕ್ಷನ್ ಕಂಟ್ರೋಲ್ ಅನ್ನು ಹೊಂದಿವೆ.

ಅನಾವರಣವಾಯ್ತು ಹೊಸ ಹಾರ್ಲೆ ಡೇವಿಡ್ಸನ್ ಪ್ಯಾನ್ ಅಮೆರಿಕ 1250 ಅಡ್ವೆಂಚರ್ ಬೈಕ್

ಇನ್ನು ಈ ಹೊಸ ಅಡ್ವೆಂಚರ್ ಬೈಕ್ ಸ್ಪೋರ್ಟ್ಸ್, ರೈಮ್, ಆಫ್-ರೋಡ್ ಮತ್ತು ಆಫ್-ರೋಡ್ ಪ್ಲಸ್ ಎಂಬ ರೈಡಿಂಗ್ ಮೋಡ್ ಗಳನ್ನು ಒಳಗೊಂಡಿದೆ. ಸವಾರರು ತಮ್ಮ ಆದ್ಯತೆಯ ಪ್ರಕಾರ ಟಿಸಿಎಸ್, ಎಬಿಎಸ್, ಟಾರ್ಕ್ ಡೆಲಿವರಿ, ಥ್ರೊಟಲ್ ರೆಸ್ಪಾನ್ಸ್ ಮತ್ತು ಸಸ್ಪೆಂಕ್ಷನ್ ಸೆಟ್ಟಿಂಗ್‌ಗಳನ್ನು ಕಾನ್ಫಿಗರ್ ಮಾಡಲು ಆಫ್-ರೋಡ್ ಮೋಡ್ ಅನ್ನು ಕಸ್ಟಮೈಸ್ ಮಾಡುವ ಆಯ್ಕೆಯನ್ನು ಸಹ ಪಡೆಯುತ್ತಾರೆ.

More from DriveSpark

Article Published On: Tuesday, February 23, 2021, 20:03 [IST]
English summary
2021 Harley Davidson Pan America 1250 Adventure Unveiled. Read In Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+