ದೇಶಾದ್ಯಂತ ಒಂದು ಲಕ್ಷ ಫಾಸ್ಟ್ ಚಾರ್ಜಿಂಗ್ ನಿರ್ಮಾಣ ಯೋಜನೆಗೆ ಚಾಲನೆ ನೀಡಿದ ಹೀರೋ ಎಲೆಕ್ಟ್ರಿಕ್

ಬೆಂಗಳೂರು ಮೂಲದ ಚಾರ್ಜರ್(Charzer) ಮತ್ತು ಹೀರೋ ಎಲೆಕ್ಟ್ರಿಕ್(Hero Electric) ಕಂಪನಿಗಳು ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ಹೆಚ್ಚಿಸಲು ಬೃಹತ್ ಯೋಜನೆಯೊಂದನ್ನು ರೂಪಿಸಿದ್ದು, ಹೊಸ ಯೋಜನೆಯಡಿ ಚಾರ್ಜರ್ ಮತ್ತು ಹೀರೋ ಎಲೆಕ್ಟ್ರಿಕ್ ಕಂಪನಿಗಳು ಬರೋಬ್ಬರಿ 1 ಲಕ್ಷ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯಲಿವೆ.

ದೇಶಾದ್ಯಂತ ಒಂದು ಲಕ್ಷ ಫಾಸ್ಟ್ ಚಾರ್ಜಿಂಗ್ ನಿರ್ಮಾಣ ಯೋಜನೆಗೆ ಚಾಲನೆ ನೀಡಿದ ಹೀರೋ ಎಲೆಕ್ಟ್ರಿಕ್

ಇವಿ ವಾಹನಗಳಿಗೆ ಪೂರಕವಾಗಿ ಹಲವಾರು ಸ್ಟಾರ್ಟ್ಅಪ್ ಕಂಪನಿಗಳು ಇವಿ ಚಾರ್ಜಿಂಗ್ ಸೌಲಭ್ಯವನ್ನು ಹೆಚ್ಚಿಸುವತ್ತ ವಿವಿಧ ಯೋಜನೆಗಳನ್ನು ಜಾರಿಗೆ ತಂದಿದ್ದು, ಇವಿ ದ್ವಿಚಕ್ರ ವಾಹನ ಮಾರಾಟದಲ್ಲಿ ಮುಂಚೂಣಿಯಲ್ಲಿರುವ ಹೀರೋ ಎಲೆಕ್ಟ್ರಿಕ್ ಮತ್ತು ಖಾಸಗಿ ಬಳಕೆಯ ಇವಿ ಚಾರ್ಜಿಂಗ್ ಸೌಲಭ್ಯವನ್ನು ಒದಗಿಸುವ ಚಾರ್ಜರ್ ಕಂಪನಿಯು ಜೊತೆಗೂಡಿ ಬೃಹತ್ ಪ್ರಮಾಣದಲ್ಲಿ ಇವಿ ಚಾರ್ಜಿಂಗ್ ನಿಲ್ದಾಣಗಳ ಜಾಲ ತೆರೆಯುವ ಯೋಜನೆಗೆ ಚಾಲನೆ ನೀಡಿವೆ.

ದೇಶಾದ್ಯಂತ ಒಂದು ಲಕ್ಷ ಫಾಸ್ಟ್ ಚಾರ್ಜಿಂಗ್ ನಿರ್ಮಾಣ ಯೋಜನೆಗೆ ಚಾಲನೆ ನೀಡಿದ ಹೀರೋ ಎಲೆಕ್ಟ್ರಿಕ್

ಭಾರತದಲ್ಲಿ ಹೆಚ್ಚುತ್ತಿರುವ ಇವಿ ವಾಹನಗಳಿಗೆ ಪೂರಕವಾಗಿ ವಿವಿಧ ಖಾಸಗಿ ಮತ್ತು ಸರ್ಕಾರಿ ಸಂಸ್ಥೆಗಳು ಇವಿ ವಾಹನಗಳ ಚಾರ್ಜಿಂಗ್ ನಿಲ್ದಾಣಗಳ ನಿರ್ಮಾಣ ಪ್ರಕ್ರಿಯೆಯನ್ನು ಹೆಚ್ಚಿಸಿದ್ದು, ಚಾರ್ಜಿಂಗ್ ಕೇಂದ್ರಗಳ ಹೆಚ್ಚಳಕ್ಕೆ ಪ್ರಮುಖ ಕಂಪನಿಗಳು ವಿಶೇಷ ಆಸಕ್ತಿ ವಹಿಸಿವೆ.

ದೇಶಾದ್ಯಂತ ಒಂದು ಲಕ್ಷ ಫಾಸ್ಟ್ ಚಾರ್ಜಿಂಗ್ ನಿರ್ಮಾಣ ಯೋಜನೆಗೆ ಚಾಲನೆ ನೀಡಿದ ಹೀರೋ ಎಲೆಕ್ಟ್ರಿಕ್

ಹೆಚ್ಚುತ್ತಿರುವ ಇಂಧನಗಳ ಬೆಲೆ ಮತ್ತು ಮಾಲಿನ್ಯದ ಕಾರಣಕ್ಕೆ ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಆದ್ಯತೆ ನೀಡಲಾಗುತ್ತಿದ್ದು, ಕೇಂದ್ರ ಸರ್ಕಾರದ ಜೊತೆಗೆ ವಿವಿಧ ರಾಜ್ಯ ಸರ್ಕಾರಗಳು ಸಹ ಎಲೆಕ್ಟ್ರಿಕ್ ವಾಹನ ನೀತಿಯನ್ನು ಅಳವಡಿಸಿಕೊಳ್ಳುತ್ತಿರುವ ಇವಿ ವಾಹನ ಮಾಲೀಕರಿಗೆ ಹೆಚ್ಚಿನ ಮಟ್ಟದ ಪ್ರೋತ್ಸಾಹವು ಹೊಸ ಬದಲಾವಣೆಗೆ ಕಾರಣವಾಗಿದೆ.

ದೇಶಾದ್ಯಂತ ಒಂದು ಲಕ್ಷ ಫಾಸ್ಟ್ ಚಾರ್ಜಿಂಗ್ ನಿರ್ಮಾಣ ಯೋಜನೆಗೆ ಚಾಲನೆ ನೀಡಿದ ಹೀರೋ ಎಲೆಕ್ಟ್ರಿಕ್

ಇಂಧನ ಚಾಲಿತ ವಾಹನಗಳನ್ನು ತಗ್ಗಿಸಿ ಪರಿಸರ ಸ್ನೇಹಿ ಎಲೆಕ್ಟ್ರಿಕ್ ವಾಹನಗಳತ್ತ ಸೆಳೆಯಲು ಕೇಂದ್ರ ಸರ್ಕಾರವು ಫೇಮ್ 2 ಸಬ್ಸಡಿ ಯೋಜನೆಯಡಿ ಎಲೆಕ್ಟ್ರಿಕ್ ವಾಹನಗಳ ಉತ್ಪಾದಕ ಕಂಪನಿಗಳಿಗೆ ಮತ್ತು ಖರೀದಿ ಮಾಡುವ ಗ್ರಾಹಕರಿಗೆ ಗರಿಷ್ಠ ಧನಸಹಾಯ ಒದಗಿಸುತ್ತಿದ್ದು, ಫೇಮ್ 2 ಯೋಜನೆಯ ಸಬ್ಸಡಿ ಜೊತೆಗೆ ವಿವಿಧ ರಾಜ್ಯದ ಸರ್ಕಾರಗಳು ಸಹ ಕೆಲವು ವಿನಾಯ್ತಿಗಳನ್ನು ನೀಡುತ್ತಿವೆ.

ದೇಶಾದ್ಯಂತ ಒಂದು ಲಕ್ಷ ಫಾಸ್ಟ್ ಚಾರ್ಜಿಂಗ್ ನಿರ್ಮಾಣ ಯೋಜನೆಗೆ ಚಾಲನೆ ನೀಡಿದ ಹೀರೋ ಎಲೆಕ್ಟ್ರಿಕ್

ಫೇಮ್ 2 ಸಬ್ಸಡಿ ಯೋಜನೆ ಅಡಿಯಲ್ಲಿ ಕೇಂದ್ರ ಸರ್ಕಾರವು ಎಲೆಕ್ಟ್ರಿಕ್ ವಾಹನ ಖರೀದಿದಾರರಿಗೆ ಜಿಎಸ್‌ಟಿ ವಿನಾಯ್ತಿ, ಗರಿಷ್ಠ ಸಬ್ಸಡಿ ಮತ್ತು ತೆರಿಗೆ ವಿನಾಯ್ತಿಗಳನ್ನು ನೀಡಲಾಗುತ್ತಿದ್ದು, ವಾಹನ ಉತ್ಪಾದನಾ ಕಂಪನಿಗಳಿಗೂ ಹಲವಾರು ಪ್ರೋತ್ಸಾಹ ಕ್ರಮಗಳನ್ನು ಕೈಗೊಳ್ಳಲಾಗಿದೆ.

ದೇಶಾದ್ಯಂತ ಒಂದು ಲಕ್ಷ ಫಾಸ್ಟ್ ಚಾರ್ಜಿಂಗ್ ನಿರ್ಮಾಣ ಯೋಜನೆಗೆ ಚಾಲನೆ ನೀಡಿದ ಹೀರೋ ಎಲೆಕ್ಟ್ರಿಕ್

ಎಲೆಕ್ಟ್ರಿಕ್ ವಾಹನಗಳ ಹೆಚ್ಚಳಕ್ಕಾಗಿ ಕೇಂದ್ರ ಸರ್ಕಾರದ ಫೇಮ್ 2 ಹೊರತುಪಡಿಸಿ ರಾಜ್ಯಗಳ ಮಟ್ಟದಲ್ಲೂ ವಿವಿಧ ರಾಜ್ಯ ಸರ್ಕಾರಗಳು ಸಹ ಹೆಚ್ಚಿನ ಮಟ್ಟದ ಪ್ರೊತ್ಸಾಹ ನೀಡುತ್ತಿದ್ದು ಕೇಂದ್ರ ಫೇಮ್ 2 ಜೊತೆಗೆ ವಿವಿಧ ರಾಜ್ಯ ಸರ್ಕಾರಗಳು ಕೂಡಾ ಹೊಸ ಇವಿ ನೀತಿ ಘೋಷಣೆ ಮಾಡುತ್ತಿವೆ.

ದೇಶಾದ್ಯಂತ ಒಂದು ಲಕ್ಷ ಫಾಸ್ಟ್ ಚಾರ್ಜಿಂಗ್ ನಿರ್ಮಾಣ ಯೋಜನೆಗೆ ಚಾಲನೆ ನೀಡಿದ ಹೀರೋ ಎಲೆಕ್ಟ್ರಿಕ್

ಹಾಗೆಯೇ ಇವಿ ವಾಹನಗಳಿಗೆ ಸೂಕ್ತವಾದ ಚಾರ್ಜಿಂಗ್ ನಿಲ್ದಾಣಗಳ ನಿರ್ಮಾಣವು ಇದೀಗ ಹೊಸ ಸವಾಲಾಗಿದ್ದು, ಇವಿ ವಾಹನಗಳು ಹೆಚ್ಚಿದಂತೆ ಅವುಗಳಿಗೆ ಸೂಕ್ತವಾದ ಚಾರ್ಜಿಂಗ್ ನಿಲ್ದಾಣಗಳನ್ನು ನಿರ್ಮಾಣಕ್ಕೂ ಯೋಜನೆ ಜಾರಿಗೆ ತರಲಾಗಿದೆ.

ದೇಶಾದ್ಯಂತ ಒಂದು ಲಕ್ಷ ಫಾಸ್ಟ್ ಚಾರ್ಜಿಂಗ್ ನಿರ್ಮಾಣ ಯೋಜನೆಗೆ ಚಾಲನೆ ನೀಡಿದ ಹೀರೋ ಎಲೆಕ್ಟ್ರಿಕ್

ಕೇಂದ್ರ ಸರ್ಕಾರವು ಎಲೆಕ್ಟ್ರಿಕ್ ವಾಹನಗಳ ಖರೀದಿ ಮಾಡುವ ಗ್ರಾಹಕರಿಗೆ ಮಾತ್ರವಲ್ಲ ಉತ್ಪಾದಕ ಕಂಪನಿಗಳಿಗೂ ಗರಿಷ್ಠ ಧನಸಹಾಯ ಒದಗಿಸುತ್ತಿದ್ದು, ಖಾಸಗಿ ಮತ್ತು ಸರ್ಕಾರಿ ಸಹಭಾಗೀತ್ವದಲ್ಲಿ ಚಾರ್ಜಿಂಗ್ ನಿಲ್ದಾಣಗಳು ಒಂದೊಂದಾಗಿ ಕಾರ್ಯನಿರ್ವಹಣೆ ಆರಂಭಿಸುತ್ತಿವೆ.

ದೇಶಾದ್ಯಂತ ಒಂದು ಲಕ್ಷ ಫಾಸ್ಟ್ ಚಾರ್ಜಿಂಗ್ ನಿರ್ಮಾಣ ಯೋಜನೆಗೆ ಚಾಲನೆ ನೀಡಿದ ಹೀರೋ ಎಲೆಕ್ಟ್ರಿಕ್

ಹೀರೋ ಎಲೆಕ್ಟ್ರಿಕ್ ಮತ್ತು ಚಾರ್ಜರ್ ಕಂಪನಿಗಳು ಮುಂದಿನ ಮೂರು ವರ್ಷದಲ್ಲಿ ಒಟ್ಟು 1 ಲಕ್ಷ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯಲಿದ್ದು, ಮೊದಲ ವರ್ಷದಲ್ಲಿ ದೇಶದ ಪ್ರಮುಖ 30 ನಗರಗಳಲ್ಲಿ 10 ಸಾವಿರ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯುವ ಯೋಜನೆಯಲ್ಲಿದೆ.

ದೇಶಾದ್ಯಂತ ಒಂದು ಲಕ್ಷ ಫಾಸ್ಟ್ ಚಾರ್ಜಿಂಗ್ ನಿರ್ಮಾಣ ಯೋಜನೆಗೆ ಚಾಲನೆ ನೀಡಿದ ಹೀರೋ ಎಲೆಕ್ಟ್ರಿಕ್

ಚಾರ್ಜರ್ ಕಂಪನಿಯು ಈಗಾಗಲೇ ದೇಶಾದ್ಯಂತ 20 ಪ್ರಮುಖ ನಗರಗಳಲ್ಲಿ ಆರಂಭಿಕ ಚಾರ್ಜಿಂಗ್ ನಿಲ್ದಾಣಗಳನ್ನು ನಿರ್ಮಾಣ ಮಾಡಿದ್ದು, ಇವಿ ವಾಹನ ಮಾಲೀಕರಿಗೆ ಚಾರ್ಜಿಂಗ್ ನಿಲ್ದಾಣಗಳನ್ನು ಸುಲಭವಾಗಿ ಪತ್ತೆ ಹಚ್ಚಲು ನೆರವಾಗುವಂತೆ ಪ್ರತ್ಯೇಕ ಆ್ಯಪ್ ಕೂಡಾ ಅಭಿವೃದ್ದಿಪಡಿಸಿದೆ.

ದೇಶಾದ್ಯಂತ ಒಂದು ಲಕ್ಷ ಫಾಸ್ಟ್ ಚಾರ್ಜಿಂಗ್ ನಿರ್ಮಾಣ ಯೋಜನೆಗೆ ಚಾಲನೆ ನೀಡಿದ ಹೀರೋ ಎಲೆಕ್ಟ್ರಿಕ್

ಆ್ಯಪ್ ಮೂಲಕ ಹತ್ತಿರದಲ್ಲಿರುವ ಚಾರ್ಜಿಂಗ್ ನಿಲ್ದಾಣಗಳ ಮಾಹಿತಿ ಮತ್ತು ಚಾರ್ಜಿಂಗ್ ನಿಲ್ದಾಣದಲ್ಲಿ ಚಾರ್ಜಿಂಗ್‌ಗಾಗಿ ಸರತಿ ಸಾಲಿನಲ್ಲಿರುವ ವಾಹನಗಳ ಸಂಖ್ಯೆ ಮತ್ತು ಯಾವ ನಿಲ್ದಾಣದಲ್ಲಿ ಕಡಿಮೆ ವಾಹನಗಳಿವೆ ಎನ್ನುವುದರ ಜೊತೆ ಚಾರ್ಜಿಂಗ್‌ಗಾಗಿ ತೆಗೆದುಕೊಳ್ಳುವ ನಿಖರವಾದ ಸಮಯದ ಮಾಹಿತಿಯನ್ನು ಬಳಕೆದಾರರಿಗೆ ನೀಡಲಿದೆ.

ದೇಶಾದ್ಯಂತ ಒಂದು ಲಕ್ಷ ಫಾಸ್ಟ್ ಚಾರ್ಜಿಂಗ್ ನಿರ್ಮಾಣ ಯೋಜನೆಗೆ ಚಾಲನೆ ನೀಡಿದ ಹೀರೋ ಎಲೆಕ್ಟ್ರಿಕ್

ಹೀರೋ ಎಲೆಕ್ಟ್ರಿಕ್ ಮತ್ತು ಚಾರ್ಜರ್ ಕಂಪನಿಗಳು ಸಾರ್ವಜನಿಕ ಬಳಕೆಯ ಇವಿ ಚಾರ್ಜಿಂಗ್ ನಿಲ್ದಾಣಗಳ ಜೊತೆಗೆ ಶಾಂಪಿಂಗ್ ಕಾಂಪ್ಲೆಕ್ಸ್, ಅಂಪಾರ್ಟ್‌ಮೆಂಟ್‌ಗಳು ಮತ್ತು ಮಾಲ್‌ಗಳಲ್ಲೂ ನಿರ್ದಿಷ್ಟ ವಾಹನ ಮಾಲೀಕರಿಗಾಗಿ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯಲಿದೆ.

ದೇಶಾದ್ಯಂತ ಒಂದು ಲಕ್ಷ ಫಾಸ್ಟ್ ಚಾರ್ಜಿಂಗ್ ನಿರ್ಮಾಣ ಯೋಜನೆಗೆ ಚಾಲನೆ ನೀಡಿದ ಹೀರೋ ಎಲೆಕ್ಟ್ರಿಕ್

ಚಾರ್ಜರ್ ಕಂಪನಿಯು ಗ್ರಾಹಕರ ಬೇಡಿಕೆ ಆಧಾರದ ಮೇಲೆ 3.3kW ಸಾಮರ್ಥ್ಯದ ಚಾರ್ಜರ್ ಲೈಟ್(Charzer Lite) ಮತ್ತು 22kW ಸಾಮರ್ಥ್ಯದ ಚಾರ್ಜರ್ ಟೆರಾ(Charzer Terra) ನಿಲ್ದಾಣಗಳನ್ನು ನಿರ್ಮಾಣ ಮಾಡಲಿದ್ದು, ಇದರಲ್ಲಿ ಚಾರ್ಜರ್ ಲೈಟ್ ಚಾರ್ಜಿಂಗ್ ಸೌಲಭ್ಯವನ್ನು ಇವಿ ವಾಹನ ಮಾಲೀಕರು ವ್ಯಯಕ್ತಿಕ ಬಳಕೆಗಾಗಿ ಅಳವಡಿಸಿಕೊಳ್ಳಬಹುದಾಗಿದೆ.

Most Read Articles

Kannada
English summary
Hero electric charzer to setup 1 lakh ev chargers details
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X