ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಎರಡನೇ ಎಲೆಕ್ಟ್ರಿಕ್ ಸ್ಕೂಟರ್ ಶೋರೂಂ ತೆರೆದ ಹೀರೋ ಎಲೆಕ್ಟ್ರಿಕ್

ಇಂಧನಗಳ ಬೆಲೆ ಏರಿಕೆಯ ಪರಿಣಾಮ ಹೊಸ ವಾಹನ ಖರೀದಿದಾರರು ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಆದ್ಯತೆ ನೀಡುತ್ತಿದ್ದು, ಗ್ರಾಹಕರ ಬೇಡಿಕೆಗೆ ತಕ್ಕಂತೆ ವಾಹನ ತಯಾರಕ ಕಂಪನಿಗಳು ಮಾರಾಟ ಸೌಲಭ್ಯವನ್ನು ಹೆಚ್ಚಿಸುತ್ತಿವೆ.

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಎರಡನೇ ಎಲೆಕ್ಟ್ರಿಕ್ ಸ್ಕೂಟರ್ ಶೋರೂಂ ತೆರೆದ ಹೀರೋ ಎಲೆಕ್ಟ್ರಿಕ್

ಭಾರತದ ಅತಿ ದೊಡ್ಡ ಎಲೆಕ್ಟ್ರಿಕ್ ವಾಹನ ತಯಾರಕ ಕಂಪನಿಯಾಗಿರುವ ಹೀರೋ ಎಲೆಕ್ಟ್ರಿಕ್ ಕೂಡಾ ಗ್ರಾಹಕರ ಬೇಡಿಕೆಯೆಂತೆ ತನ್ನ ಮಾರಾಟ ಜಾಲವನ್ನು ವಿಸ್ತರಿಸುತ್ತಿದ್ದು, 2022ರ ಆರ್ಥಿಕ ವರ್ಷದ ಅಂತ್ಯಕ್ಕೆ ದೇಶಾದ್ಯಂತ ಒಟ್ಟು 1 ಸಾವಿರ ಶೋರೂಂ ಹೊಂದುವ ಗುರಿಹೊಂದಿದೆ. ಹೀಗಾಗಿ ಶೋರೂಂ ಸಂಖ್ಯೆಯನ್ನು ಹಂತ-ಹಂತವಾಗಿ ಹೆಚ್ಚಿಸುತ್ತಿದ್ದು, ಕಂಪನಿಯು ಇತ್ತೀಚೆಗೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ತನ್ನ ಎರಡನೇ ಶೋರೂಂ ಆರಂಭಿಸಿತು.

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಎರಡನೇ ಎಲೆಕ್ಟ್ರಿಕ್ ಸ್ಕೂಟರ್ ಶೋರೂಂ ತೆರೆದ ಹೀರೋ ಎಲೆಕ್ಟ್ರಿಕ್

ಹೀರೋ ಎಲೆಕ್ಟ್ರಿಕ್ ಕಂಪನಿಯು ಹೊಸ ಶೋರೂಂ ಅನ್ನು ಇವಿ ಆಟೋ ಹೌಸ್ ಸಂಸ್ಥೆಯ ಸಹಭಾಗಿತ್ವದಲ್ಲಿ ಆರಂಭಿಸಿದ್ದು, ಹೊಸ ಸ್ಕೂಟರ್ ಶೋರೂಂ ಅನ್ನು ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸಾನಿಧ್ಯದಲ್ಲಿ ಅಧಿಕೃತವಾಗಿ ಮಾರಾಟಕ್ಕೆ ಚಾಲನೆ ನೀಡಲಾಯ್ತು.

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಎರಡನೇ ಎಲೆಕ್ಟ್ರಿಕ್ ಸ್ಕೂಟರ್ ಶೋರೂಂ ತೆರೆದ ಹೀರೋ ಎಲೆಕ್ಟ್ರಿಕ್

ಗ್ರಾಹಕರ ಬೇಡಿಕೆಯೆಂತೆ ಒಟ್ಟು ಒಂಬತ್ತು ಇವಿ ಸ್ಕೂಟರ್ ಮಾದರಿಗಳನ್ನು ಮಾರಾಟ ಮಾಡುತ್ತಿರುವ ಹೀರೋ ಎಲೆಕ್ಟ್ರಿಕ್ ಕಂಪನಿಯು ಅತ್ಯುತ್ತಮ ಬೇಡಿಕೆ ಹೊಂದಿದ್ದು, ಕಂಪನಿಯು ಹೊಸ ಶೋರೂಂಗಳ ಮೂಲಕ ಮಾರಾಟ ಪ್ರಮಾಣವನ್ನು ದ್ವಿಗುಣಗೊಳಿಸುತ್ತಿದೆ.

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಎರಡನೇ ಎಲೆಕ್ಟ್ರಿಕ್ ಸ್ಕೂಟರ್ ಶೋರೂಂ ತೆರೆದ ಹೀರೋ ಎಲೆಕ್ಟ್ರಿಕ್

ದುಬಾರಿ ಬೆಲೆ ಹಿನ್ನಲೆಯಲ್ಲಿ ಕಳೆದ ಒಂದು ವರ್ಷದ ಅವಧಿಯಲ್ಲಿ ವಿವಿಧ ಎಲೆಕ್ಟ್ರಿಕ್ ವಾಹನ ಕಂಪನಿಗಳು ಹೆಚ್ಚಿನ ಮಟ್ಟದ ಬೇಡಿಕೆ ಪಡೆದುಕೊಳ್ಳುತ್ತಿದ್ದು, ದೇಶದ ಅತಿದೊಡ್ಡ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಮಾರಾಟ ಕಂಪನಿಯಾಗಿರುವ ಹೀರೋ ಎಲೆಕ್ಟ್ರಿಕ್ ಕಂಪನಿಯು ಕೂಡಾ ಕಳೆದ ಕೆಲ ತಿಂಗಳಿನಿಂದ ಅತಿ ಹೆಚ್ಚು ಬೇಡಿಕೆ ಪಡೆದುಕೊಂಡಿದೆ.

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಎರಡನೇ ಎಲೆಕ್ಟ್ರಿಕ್ ಸ್ಕೂಟರ್ ಶೋರೂಂ ತೆರೆದ ಹೀರೋ ಎಲೆಕ್ಟ್ರಿಕ್

ಹೊಸ ಎಲೆಕ್ಟ್ರಿಕ್ ವಾಹನ ಮಾದರಿಗಳ ವಿಚಾರಣೆಯೂ ಕೂಡಾ ಹೆಚ್ಚಿದ್ದು, ಹೆಚ್ಚಿನ ಮಟ್ಟದ ಮೈಲೇಜ್ ಹೊಂದಿರುವ ಇವಿ ವಾಹನಗಳ ಖರೀದಿಗೆ ಆಸಕ್ತಿ ತೋರುತ್ತಿದ್ದಾರೆ. ಹೀಗಾಗಿ ಗ್ರಾಹಕರ ಬೇಡಿಕೆಯೆಂತೆ ವಿವಿಧ ಇವಿ ಸ್ಕೂಟರ್‌ಗಳನ್ನು ಮಾರಾಟ ಮಾಡುತ್ತಿರುವ ಹೀರೋ ಎಲೆಕ್ಟ್ರಿಕ್ ಕಂಪನಿಯು ಶೀಘ್ರದಲ್ಲೇ ಮತ್ತಷ್ಟು ಹೊಸ ನರಗಳಲ್ಲಿ ತನ್ನ ಮಾರಾಟ ಪ್ರಕ್ರಿಯೆಯನ್ನು ಆರಂಭಿಸುತ್ತಿದೆ.

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಎರಡನೇ ಎಲೆಕ್ಟ್ರಿಕ್ ಸ್ಕೂಟರ್ ಶೋರೂಂ ತೆರೆದ ಹೀರೋ ಎಲೆಕ್ಟ್ರಿಕ್

2020-21ರ ಅವಧಿಯಲ್ಲಿನ ಇವಿ ಸ್ಕೂಟರ್ ಮಾರಾಟ ವರದಿಯಲ್ಲಿ ಹೀರೋ ಎಲೆಕ್ಟ್ರಿಕ್ ಕಂಪನಿಯು ಒಟ್ಟು 70 ಸಾವಿರ ಯುನಿಟ್ ಎಲೆಕ್ಟ್ರಿಕ್ ಸ್ಕೂಟರ್ ಮಾರಾಟ ಮಾಡಿದ್ದು, ಇದು ಈ ಹಿಂದಿನ ಮೂರು ವರ್ಷಗಳ ಅವಧಿಯಲ್ಲಿನ ಇವಿ ವಾಹನ ಮಾರಾಟಕ್ಕೆ ಸಮವಾಗಿದೆ.

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಎರಡನೇ ಎಲೆಕ್ಟ್ರಿಕ್ ಸ್ಕೂಟರ್ ಶೋರೂಂ ತೆರೆದ ಹೀರೋ ಎಲೆಕ್ಟ್ರಿಕ್

ಹೀಗಾಗಿ ಗ್ರಾಹಕರ ಬೇಡಿಕೆಯ ಆಧಾರದ ಮೇಲೆ ಇವಿ ವಾಹನಗಳ ಮಾರಾಟವನ್ನು ಮಳಿಗೆಗಳನ್ನು ದೇಶಾದ್ಯಂತ ವಿಸ್ತರಿಸುತ್ತಿದ್ದು, ಈಗಾಗಲೇ ಮಾರಾಟ ಮಳಿಗೆಗಳನ್ನು ಹೊಂದಿರುವ ನಗರಗಳಲ್ಲಿ ಮತ್ತಷ್ಟು ಹೊಸ ಮಾರಾಟ ಮಳಿಗೆಗಳನ್ನು ತೆರೆಯಲು ಯೋಜಿಸಿದೆ.

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಎರಡನೇ ಎಲೆಕ್ಟ್ರಿಕ್ ಸ್ಕೂಟರ್ ಶೋರೂಂ ತೆರೆದ ಹೀರೋ ಎಲೆಕ್ಟ್ರಿಕ್

ಕಳೆದ ಒಂದು ವರ್ಷದ ಅವಧಿಯಲ್ಲಿ ಗ್ರಾಹಕರ ಬೇಡಿಕೆಯೆಂತೆ ಪ್ರಮುಖ ನಗರಗಳಲ್ಲಿ ಹಲವು ಹೊಸ ಮಾರಾಟ ಮಳಿಗೆಗಳನ್ನು ತೆರೆದಿರುವ ಹೀರೋ ಎಲೆಕ್ಟ್ರಿಕ್ ಕಂಪನಿಯು ಮುಂದಿನ ಮೂರು ವರ್ಷಗಳಲ್ಲಿ ಪ್ರತಿವರ್ಷ 2.5 ಲಕ್ಷಕ್ಕೂ ಹೆಚ್ಚು ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡುವ ಗುರಿಯನ್ನು ಹೊಂದಿದೆ.

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಎರಡನೇ ಎಲೆಕ್ಟ್ರಿಕ್ ಸ್ಕೂಟರ್ ಶೋರೂಂ ತೆರೆದ ಹೀರೋ ಎಲೆಕ್ಟ್ರಿಕ್

ಸದ್ಯ ದೇಶಾದ್ಯಂತ 500 ನಗರಗಳಲ್ಲಿ 700ಕ್ಕೂ ಹೆಚ್ಚು ಮಾರಾಟ ಮಳಿಗೆಗಳನ್ನು ಹೊಂದಿರುವ ಹೀರೋ ಎಲೆಕ್ಟ್ರಿಕ್ ಕಂಪನಿಯು ಅಗತ್ಯತೆಯ ಆಧಾರದ ಮೇಲೆ ಕಳೆದ ವರ್ಷ ಸುಮಾರು 1,500 ಹೊಸ ಫಾಸ್ಟ್ ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪಿಸಿದ್ದು, ಶೀಘ್ರದಲ್ಲೇ ಮತ್ತಷ್ಟು ಹೊಸ ಮಾರಾಟ ಮಳಿಗೆಗಳನ್ನು ತೆರೆಯಲು ಸಿದ್ದವಾಗಿದೆ.

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಎರಡನೇ ಎಲೆಕ್ಟ್ರಿಕ್ ಸ್ಕೂಟರ್ ಶೋರೂಂ ತೆರೆದ ಹೀರೋ ಎಲೆಕ್ಟ್ರಿಕ್

2022 ಆರ್ಥಿಕ ವರ್ಷದ ಕೊನೆಯಲ್ಲಿ ದೇಶಾದ್ಯಂತ ಒಟ್ಟು ಒಂದು ಸಾವಿರ ಟಚ್ ಪಾಯಿಂಟ್(ಮಾರಾಟ ಮಳಿಗೆಗಳನ್ನು) ಹೊಂದುವ ಗುರಿಹೊಂದಿದ್ದು, ಚಾರ್ಜಿಂಗ್ ನಿಲ್ದಾಣಗಳ ಲಭ್ಯತೆಯ ಆಧಾರದ ಮೇಲೆ ಹೊಸ ಟಚ್ ಪಾಯಿಂಟ್‌ಗಳನ್ನು ತೆರೆಯಲಾಗುತ್ತಿದೆ.

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಎರಡನೇ ಎಲೆಕ್ಟ್ರಿಕ್ ಸ್ಕೂಟರ್ ಶೋರೂಂ ತೆರೆದ ಹೀರೋ ಎಲೆಕ್ಟ್ರಿಕ್

ಇವಿ ಸ್ಕೂಟರ್ ಉತ್ಪಾದನೆಯಲ್ಲಿ ಸುಮಾರು 12 ವರ್ಷಗಳನ್ನು ಪೂರೈಸಿರುವ ಹೀರೋ ಎಲೆಕ್ಟ್ರಿಕ್ ಕಂಪನಿಯು ಇದುವರೆಗೆ 3 ಲಕ್ಷ ಯುನಿಟ್ ಮಾರಾಟ ಮಾಡಿದ್ದು, ಗ್ರಾಹಕರ ಬೇಡಿಕೆಯೆಂತೆ ಇವಿ ಉತ್ಪನ್ನಗಳಲ್ಲಿ ಹಲವಾರು ಬದಲಾವಣೆಗಳೊಂದಿಗೆ ಗ್ರಾಹಕರನ್ನು ಸೆಳೆಯುತ್ತಿದೆ.

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಎರಡನೇ ಎಲೆಕ್ಟ್ರಿಕ್ ಸ್ಕೂಟರ್ ಶೋರೂಂ ತೆರೆದ ಹೀರೋ ಎಲೆಕ್ಟ್ರಿಕ್

ಹೀರೋ ಎಲೆಕ್ಟ್ರಿಕ್ ಕಂಪನಿಯು ತನ್ನ ಪ್ರಮುಖ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಗಳಲ್ಲಿ ಸಿಟಿ ಸ್ಪೀಡ್ ಸೆಗ್ಮೆಂಟ್ ಬಿಡುಗಡೆ ಮಾಡಿದ್ದು, ಹೊಸ ಮಾದರಿಯು ಬೆಸ್ಟ್ ಇನ್ ಕ್ಲಾಸ್ ಫೀಚರ್ಸ್‌ನೊಂದಿಗೆ ಅತ್ಯುತ್ತಮ ಮೈಲೇಜ್ ರೇಂಜ್ ಪಡೆದುಕೊಳ್ಳಲು ಸಹಕಾರಿಯಾಗಿದೆ.

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಎರಡನೇ ಎಲೆಕ್ಟ್ರಿಕ್ ಸ್ಕೂಟರ್ ಶೋರೂಂ ತೆರೆದ ಹೀರೋ ಎಲೆಕ್ಟ್ರಿಕ್

ಪ್ರಸ್ತುತ ಮಾರುಕಟ್ಟೆಯಲ್ಲಿರುವ ವಿವಿಧ ಎಲೆಕ್ಟ್ರಿಕ್ ಸ್ಕೂಟರ್ ಆವೃತ್ತಿಗಳಿಗೆ ಪೈಪೋಟಿಯಾಗಿ ಸಿಟಿ ಸೆಗ್ಮೆಂಟ್ ಅಭಿವೃದ್ದಿಪಡಿಸಿರುವ ಹೀರೋ ಎಲೆಕ್ಟ್ರಿಕ್ ಕಂಪನಿಯು ಕಂಫರ್ಟ್ ಸ್ಪೀಡ್, ಎಕ್ಸೆಂಡ್ ರೇಂಜ್ ಮಾದರಿಗಳೊಂದಿಗೆ ಇದೀಗ ಸಿಟಿ ಸ್ಪೀಡ್ ಮಾದರಿಗಳನ್ನು ಅಭಿವೃದ್ದಿಗೊಳಿಸಿದೆ.

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಎರಡನೇ ಎಲೆಕ್ಟ್ರಿಕ್ ಸ್ಕೂಟರ್ ಶೋರೂಂ ತೆರೆದ ಹೀರೋ ಎಲೆಕ್ಟ್ರಿಕ್

ಇನ್ನು ಹೆಚ್ಚುತ್ತಿರುವ ಇಂಧನ ಬೆಲೆ ಮತ್ತು ಮಾಲಿನ್ಯದ ಕಾರಣಕ್ಕೆ ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದ್ದು, ಕೇಂದ್ರ ಸರ್ಕಾರದ ಜೊತೆಗೆ ವಿವಿಧ ರಾಜ್ಯ ಸರ್ಕಾರಗಳು ಸಹ ಎಲೆಕ್ಟ್ರಿಕ್ ವಾಹನ ನೀತಿಯನ್ನು ಅಳವಡಿಸಿಕೊಳ್ಳುತ್ತಿರುವ ಇವಿ ವಾಹನ ಮಾಲೀಕರಿಗೆ ಹೆಚ್ಚಿನ ಮಟ್ಟದ ಪ್ರೋತ್ಸಾಹವು ಹೊಸ ಬದಲಾವಣೆಗೆ ಕಾರಣವಾಗುತ್ತಿದೆ.

More from DriveSpark

Article Published On: Thursday, October 28, 2021, 17:34 [IST]
English summary
Hero electric opens new dealership in mysore details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+