ಬ್ಯಾಟ್‌ವ್ಹೀಲ್ಜ್ ಮೊಬಿಲಿಟಿ ಕಂಪನಿಗೆ 4 ಸಾವಿರ ಇವಿ ಸ್ಕೂಟರ್ ಒದಗಿಸಲಿದೆ ಹೀರೋ ಎಲೆಕ್ಟ್ರಿಕ್

ಎಲೆಕ್ಟ್ರಿಕ್ ವಾಹನಗಳ ಬಳಕೆ ಉತ್ತೇಜಿಸಲು ಕೇಂದ್ರ ಸರ್ಕಾರದೊಂದಿಗೆ ವಿವಿಧ ರಾಜ್ಯ ಸರ್ಕಾರಗಳು ಸಹ ಹಲವಾರು ಹೊಸ ಯೋಜನೆಗಳನ್ನು ಜಾರಿಗೆ ತಂದಿದ್ದು, ಫೇಮ್ 2 ಸಬ್ಸಡಿ ಯೋಜನೆ ಅಡಿಯಲ್ಲಿ ಎಲೆಕ್ಟ್ರಿಕ್ ವಾಹನಗಳನ್ನು ಉತ್ತೇಜಿಸಲು ವಿವಿಧ ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತಂದಿರುವುದು ಹೊಸ ಬದಲಾವಣೆಗೆ ಕಾರಣವಾಗಿದೆ.

ಬ್ಯಾಟ್‌ವ್ಹೀಲ್ಜ್ ಮೊಬಿಲಿಟಿ ಕಂಪನಿಗೆ 4 ಸಾವಿರ ಇವಿ ಸ್ಕೂಟರ್ ಒದಗಿಸಲಿದೆ ಹೀರೋ ಎಲೆಕ್ಟ್ರಿಕ್

ಹೆಚ್ಚುತ್ತಿರುವ ಇಂಧನಗಳ ಬೆಲೆ ಮತ್ತು ಮಾಲಿನ್ಯದ ಕಾರಣಕ್ಕೆ ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದ್ದು, ಇವಿ ವಾಹನ ವಾಹನಗಳಿಗೆ ಪೂರಕವಾದ ಹೊಸ ಯೋಜನೆಗಳು ರೂಪಗೊಳ್ಳುತ್ತಿವೆ. ಬ್ಯಾಟ್‌ವ್ಹೀಲ್ಜ್ ಮೊಬಿಲಿಟಿ ಕಂಪನಿಯು ಕೂಡಾ ತನ್ನ ಸರಕು ಸಾಗಾಣಿಕೆ ಮತ್ತು ಬಿಟುಬಿ ವಾಹನಗಳಿಗಾಗಿ ಇವಿ ವಾಹನಗಳನ್ನು ಅಳವಡಿಸಿಕೊಳ್ಳುತ್ತಿದ್ದು, ಹೊಸ ಯೋಜನೆಗಾಗಿ ಹೀರೋ ಎಲೆಕ್ಟ್ರಿಕ್ ಕಂಪನಿಯೊಂದಿಗೆ ಪಾಲುದಾರಿಕೆ ಪ್ರಕಟಿಸಿದೆ.

ಬ್ಯಾಟ್‌ವ್ಹೀಲ್ಜ್ ಮೊಬಿಲಿಟಿ ಕಂಪನಿಗೆ 4 ಸಾವಿರ ಇವಿ ಸ್ಕೂಟರ್ ಒದಗಿಸಲಿದೆ ಹೀರೋ ಎಲೆಕ್ಟ್ರಿಕ್

ಬ್ಯಾಟ್‌ವ್ಹೀಲ್ಜ್ ಮೊಬಿಲಿಟಿ ಕಂಪನಿಯು 2022-23ರ ಹಣಕಾಸು ವರ್ಷದಲ್ಲಿ ನಾಲ್ಕು ಸಾವಿರ ಹೀರೋ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಖರೀದಿಸಲು ನಿರ್ಧರಿಸಲಿದ್ದು, ಹಂತ-ಹಂತವಾಗಿ ಇವಿ ಸ್ಕೂಟರ್‌ಗಳು ವಿತರಣೆಗೊಳ್ಳಲಿವೆ.

ಬ್ಯಾಟ್‌ವ್ಹೀಲ್ಜ್ ಮೊಬಿಲಿಟಿ ಕಂಪನಿಗೆ 4 ಸಾವಿರ ಇವಿ ಸ್ಕೂಟರ್ ಒದಗಿಸಲಿದೆ ಹೀರೋ ಎಲೆಕ್ಟ್ರಿಕ್

ಬಿಟುಬಿ ಮತ್ತು ಗ್ಲೊಸರಿ ಪ್ಯಾಕೇಜ್ ವಿತರಣಾ ವಾಹನಗಳನ್ನು ಇವಿ ಮಾದರಿಗಳಿಗೆ ಪರಿವರ್ತಿಸಲಾಗುತ್ತಿದ್ದು, ಕೊನೆಯ ಮೈಲಿ ತನಕವು ಇವಿ ವಾಹನಗಳನ್ನು ಬಳಕೆ ಮಾಡಲು ಯೋಜಿಸಲಾಗುತ್ತಿದೆ.

ಬ್ಯಾಟ್‌ವ್ಹೀಲ್ಜ್ ಮೊಬಿಲಿಟಿ ಕಂಪನಿಗೆ 4 ಸಾವಿರ ಇವಿ ಸ್ಕೂಟರ್ ಒದಗಿಸಲಿದೆ ಹೀರೋ ಎಲೆಕ್ಟ್ರಿಕ್

ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಮಾರಾಟದಲ್ಲಿ ಮುಂಚೂಣಿ ಸಾಧಿಸುತ್ತಿರುವ ಹೀರೋ ಎಲೆಕ್ಟ್ರಿಕ್ ಕಂಪನಿಯು ಗ್ರಾಹಕರ ಬೇಡಿಕೆಯೆಂತೆ ವಿವಿಧ ನಗರಗಳಲ್ಲಿ ತನ್ನ ಮಾರಾಟ ಸೌಲಭ್ಯವನ್ನು ವಿಸ್ತರಿಸುತ್ತಿದ್ದು, ಇವಿ ವಾಹನ ಮಾರಾಟದಲ್ಲಿ ಕಂಪನಿಯು ಇದೀಗ ಮೈಲಿಗಲ್ಲು ಸಾಧಿಸಿದೆ.

ಬ್ಯಾಟ್‌ವ್ಹೀಲ್ಜ್ ಮೊಬಿಲಿಟಿ ಕಂಪನಿಗೆ 4 ಸಾವಿರ ಇವಿ ಸ್ಕೂಟರ್ ಒದಗಿಸಲಿದೆ ಹೀರೋ ಎಲೆಕ್ಟ್ರಿಕ್

ಎಲೆಕ್ಟ್ರಿಕ್ ವಾಹನ ಕಂಪನಿಗಳು ದುಬಾರಿ ಇಂಧನ ಪರಿಣಾಮ ಹೆಚ್ಚಿನ ಮಟ್ಟದ ಬೇಡಿಕೆ ಪಡೆದುಕೊಳ್ಳುತ್ತಿದ್ದು, ದೇಶದ ಅತಿದೊಡ್ಡ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಮಾರಾಟ ಕಂಪನಿಯಾಗಿರುವ ಹೀರೋ ಎಲೆಕ್ಟ್ರಿಕ್ ಕಂಪನಿಯು ಕೂಡಾ ಕಳೆದ ವರ್ಷದಿಂದಲೂ ಹೆಚ್ಚಿನ ಮಟ್ಟದ ಬೇಡಿಕೆ ಪಡೆದುಕೊಂಡಿದೆ. ಹೊಸ ಎಲೆಕ್ಟ್ರಿಕ್ ವಾಹನ ಮಾದರಿಗಳ ವಿಚಾರಣೆಯೂ ಕೂಡಾ ಹೆಚ್ಚಿದ್ದು, ಹೆಚ್ಚಿನ ಮಟ್ಟದ ಮೈಲೇಜ್ ಹೊಂದಿರುವ ಇವಿ ವಾಹನಗಳ ಖರೀದಿಗೆ ಆಸಕ್ತಿ ತೋರುತ್ತಿದ್ದಾರೆ.

ಬ್ಯಾಟ್‌ವ್ಹೀಲ್ಜ್ ಮೊಬಿಲಿಟಿ ಕಂಪನಿಗೆ 4 ಸಾವಿರ ಇವಿ ಸ್ಕೂಟರ್ ಒದಗಿಸಲಿದೆ ಹೀರೋ ಎಲೆಕ್ಟ್ರಿಕ್

ಇವಿ ಸ್ಕೂಟರ್ ಉತ್ಪಾದನೆಯನ್ನು ಆರಂಭಿಸಿ ಸುಮಾರು 12 ವರ್ಷಗಳನ್ನು ಪೂರೈಸಿರುವ ಹೀರೋ ಎಲೆಕ್ಟ್ರಿಕ್ ಕಂಪನಿಯು ಇದುವರೆಗೆ 4 ಲಕ್ಷ ಯುನಿಟ್‌ಗಳಿಗೂ ಹೆಚ್ಚು ಇವಿ ವಾಹನಗಳನ್ನು ಮಾರಾಟ ಮಾಡಿದ್ದು, ಗ್ರಾಹಕರ ಬೇಡಿಕೆಯೆಂತೆ ಇವಿ ಉತ್ಪನ್ನಗಳಲ್ಲಿ ಹಲವಾರು ಬದಲಾವಣೆಗಳೊಂದಿಗೆ ಗ್ರಾಹಕರನ್ನು ಸೆಳೆಯುತ್ತಿದೆ.

ಬ್ಯಾಟ್‌ವ್ಹೀಲ್ಜ್ ಮೊಬಿಲಿಟಿ ಕಂಪನಿಗೆ 4 ಸಾವಿರ ಇವಿ ಸ್ಕೂಟರ್ ಒದಗಿಸಲಿದೆ ಹೀರೋ ಎಲೆಕ್ಟ್ರಿಕ್

ಹೀರೋ ಎಲೆಕ್ಟ್ರಿಕ್ ಕಂಪನಿಯು ಕಳೆದ ಎರಡು ವರ್ಷಗಳಿಂದ ಹೆಚ್ಚಿನ ಮಟ್ಟದ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಈ ಹಿಂದಿನ ಹತ್ತು ವರ್ಷಗಳಲ್ಲಿ ವಾಹನ ಮಾರಾಟ ಪ್ರಮಾಣವು ಕಳೆದ ಎರಡು ವರ್ಷಗಳಲ್ಲಿ ದ್ವಿಗುಣಗೊಂಡಿದೆ.

ಬ್ಯಾಟ್‌ವ್ಹೀಲ್ಜ್ ಮೊಬಿಲಿಟಿ ಕಂಪನಿಗೆ 4 ಸಾವಿರ ಇವಿ ಸ್ಕೂಟರ್ ಒದಗಿಸಲಿದೆ ಹೀರೋ ಎಲೆಕ್ಟ್ರಿಕ್

ಈ ಮೂಲಕ ಕಂಪನಿಯು ಇವಿ ದ್ವಿಚಕ್ರ ವಾಹನ ಮಾರಾಟ ವಿಭಾಗದಲ್ಲಿ ಶೇ.36 ಪಾಲು ತನ್ನದಾಗಿಸಿಕೊಳ್ಳುವ ಮೂಲಕ ಅಗ್ರಸ್ಥಾನ ಕಾಯ್ದುಕೊಂಡಿದ್ದು, ಇವಿ ಸ್ಕೂಟರ್ ಮಾರಾಟವನ್ನು ಮುಂದಿನ ವರ್ಷ ಪ್ರಸಕ್ತ ವರ್ಷದ ಮಾರಾಟಕ್ಕಿಂತ ಶೇಕಡಾ 15ರಷ್ಟು ಹೆಚ್ಚಿಸುವ ನೀರಿಕ್ಷೆಯಲ್ಲಿದೆ.

ಬ್ಯಾಟ್‌ವ್ಹೀಲ್ಜ್ ಮೊಬಿಲಿಟಿ ಕಂಪನಿಗೆ 4 ಸಾವಿರ ಇವಿ ಸ್ಕೂಟರ್ ಒದಗಿಸಲಿದೆ ಹೀರೋ ಎಲೆಕ್ಟ್ರಿಕ್

ಹೀಗಾಗಿ ಗ್ರಾಹಕರ ಬೇಡಿಕೆಯ ಆಧಾರದ ಮೇಲೆ ಇವಿ ವಾಹನಗಳ ಮಾರಾಟವನ್ನು ಮಳಿಗೆಗಳನ್ನು ದೇಶಾದ್ಯಂತ ವಿಸ್ತರಿಸುತ್ತಿದ್ದು, ಈಗಾಗಲೇ ಮಾರಾಟ ಮಳಿಗೆಗಳನ್ನು ಹೊಂದಿರುವ ನಗರಗಳಲ್ಲಿ ಮತ್ತಷ್ಟು ಹೊಸ ಮಾರಾಟ ಮಳಿಗೆಗಳನ್ನು ತೆರೆಯಲು ಯೋಜಿಸಿದೆ.

ಬ್ಯಾಟ್‌ವ್ಹೀಲ್ಜ್ ಮೊಬಿಲಿಟಿ ಕಂಪನಿಗೆ 4 ಸಾವಿರ ಇವಿ ಸ್ಕೂಟರ್ ಒದಗಿಸಲಿದೆ ಹೀರೋ ಎಲೆಕ್ಟ್ರಿಕ್

ಕಳೆದ ಒಂದು ವರ್ಷದ ಅವಧಿಯಲ್ಲಿ ಗ್ರಾಹಕರ ಬೇಡಿಕೆಯೆಂತೆ ಪ್ರಮುಖ ನಗರಗಳಲ್ಲಿ ಹಲವು ಹೊಸ ಮಾರಾಟ ಮಳಿಗೆಗಳನ್ನು ತೆರೆದಿರುವ ಹೀರೋ ಎಲೆಕ್ಟ್ರಿಕ್ ಕಂಪನಿಯು ಮುಂದಿನ ಮೂರು ವರ್ಷಗಳಲ್ಲಿ ಪ್ರತಿವರ್ಷ 2.5 ಲಕ್ಷಕ್ಕೂ ಹೆಚ್ಚು ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡುವ ಗುರಿಯನ್ನು ಹೊಂದಿದೆ.

ಬ್ಯಾಟ್‌ವ್ಹೀಲ್ಜ್ ಮೊಬಿಲಿಟಿ ಕಂಪನಿಗೆ 4 ಸಾವಿರ ಇವಿ ಸ್ಕೂಟರ್ ಒದಗಿಸಲಿದೆ ಹೀರೋ ಎಲೆಕ್ಟ್ರಿಕ್

ಸದ್ಯ ದೇಶಾದ್ಯಂತ 500 ನಗರಗಳಲ್ಲಿ 700ಕ್ಕೂ ಹೆಚ್ಚು ಮಾರಾಟ ಮಳಿಗೆಗಳನ್ನು ಹೊಂದಿರುವ ಹೀರೋ ಎಲೆಕ್ಟ್ರಿಕ್ ಕಂಪನಿಯು ಅಗತ್ಯತೆಯ ಆಧಾರದ ಮೇಲೆ ಕಳೆದ ವರ್ಷ ಸುಮಾರು 1,500 ಹೊಸ ಫಾಸ್ಟ್ ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪಿಸಿದ್ದು, ಶೀಘ್ರದಲ್ಲೇ ಮತ್ತಷ್ಟು ಹೊಸ ಮಾರಾಟ ಮಳಿಗೆಗಳನ್ನು ತೆರೆಯಲು ಸಿದ್ದವಾಗಿದೆ.

ಬ್ಯಾಟ್‌ವ್ಹೀಲ್ಜ್ ಮೊಬಿಲಿಟಿ ಕಂಪನಿಗೆ 4 ಸಾವಿರ ಇವಿ ಸ್ಕೂಟರ್ ಒದಗಿಸಲಿದೆ ಹೀರೋ ಎಲೆಕ್ಟ್ರಿಕ್

2022 ಆರ್ಥಿಕ ವರ್ಷದ ಕೊನೆಯಲ್ಲಿ ದೇಶಾದ್ಯಂತ ಒಟ್ಟು ಒಂದು ಸಾವಿರ ಟಚ್ ಪಾಯಿಂಟ್(ಮಾರಾಟ ಮಳಿಗೆಗಳನ್ನು) ಹೊಂದುವ ಗುರಿಹೊಂದಿದ್ದು, ಚಾರ್ಜಿಂಗ್ ನಿಲ್ದಾಣಗಳ ಲಭ್ಯತೆಯ ಆಧಾರದ ಮೇಲೆ ಹೊಸ ಟಚ್ ಪಾಯಿಂಟ್ ತೆರೆಯಲಾಗುತ್ತಿದೆ.

ಬ್ಯಾಟ್‌ವ್ಹೀಲ್ಜ್ ಮೊಬಿಲಿಟಿ ಕಂಪನಿಗೆ 4 ಸಾವಿರ ಇವಿ ಸ್ಕೂಟರ್ ಒದಗಿಸಲಿದೆ ಹೀರೋ ಎಲೆಕ್ಟ್ರಿಕ್

ಇದಲ್ಲದೆ ಹೀರೋ ಎಲೆಕ್ಟ್ರಿಕ್ ಮತ್ತು ಚಾರ್ಜರ್ ಕಂಪನಿಗಳು ಮುಂದಿನ ಮೂರು ವರ್ಷದಲ್ಲಿ ಒಟ್ಟು 1 ಲಕ್ಷ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯಲಿದ್ದು, ಮೊದಲ ವರ್ಷದಲ್ಲಿ ದೇಶದ ಪ್ರಮುಖ 30 ನಗರಗಳಲ್ಲಿ 10 ಸಾವಿರ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯುವ ಯೋಜನೆಯಲ್ಲಿದೆ.

Most Read Articles

Kannada
English summary
Hero electric partners with battwheelz mobility to strengthen last mile delivery segment
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X