ಹಬ್ಬದ ಋತುಗಳಲ್ಲಿ ಹೀರೋ ಎಲೆಕ್ಟ್ರಿಕ್ ಸ್ಕೂಟರ್ ಮಾರಾಟ ದುಪ್ಪಟ್ಟು ಹೆಚ್ಚಳ

ಎಲೆಕ್ಟ್ರಿಕ್ ವಾಹನ ಕಂಪನಿಗಳು ಕಳೆದ ಕೆಲ ತಿಂಗಳಿನಿಂದ ಹೆಚ್ಚಿನ ಮಟ್ಟದ ಬೇಡಿಕೆ ಪಡೆದುಕೊಳ್ಳುತ್ತಿದ್ದು, ದೇಶದ ಅತಿದೊಡ್ಡ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಮಾರಾಟ ಕಂಪನಿಯಾಗಿರುವ ಹೀರೋ ಎಲೆಕ್ಟ್ರಿಕ್ ಕಂಪನಿಯು ಕೂಡಾ ಕಳೆದ ಕೆಲ ತಿಂಗಳಿನಿಂದ ಅತಿ ಹೆಚ್ಚು ಬೇಡಿಕೆ ಪಡೆದುಕೊಂಡಿದೆ.

ಹಬ್ಬದ ಋತುಗಳಲ್ಲಿ ಹೀರೋ ಎಲೆಕ್ಟ್ರಿಕ್ ಸ್ಕೂಟರ್ ಮಾರಾಟ ದುಪ್ಪಟ್ಟು ಹೆಚ್ಚಳ

ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಳ ಪರಿಣಾಮ ಇವಿ ವಾಹನಗಳ ಬಳಕೆಯು ಕಳೆದ ಎರಡು ವರ್ಷಗಳಿಂದ ದ್ವಿಗುಣಗೊಂಡಿದ್ದು, ಹೊಸ ಎಲೆಕ್ಟ್ರಿಕ್ ವಾಹನ ಮಾದರಿಗಳ ವಿಚಾರಣೆಯೂ ಕೂಡಾ ಹೆಚ್ಚಿದೆ. ಹೆಚ್ಚಿನ ಮಟ್ಟದ ಮೈಲೇಜ್ ಹೊಂದಿರುವ ಇವಿ ವಾಹನಗಳ ಖರೀದಿಗೆ ಆಸಕ್ತಿ ತೋರುತ್ತಿದ್ದು, ಬಜೆಟ್ ಬೆಲೆಯಲ್ಲಿ ಉತ್ತಮ ಇವಿ ಸ್ಕೂಟರ್ ಮಾರಾಟ ಹೊಂದಿರುವ ಹೀರೋ ಎಲೆಕ್ಟ್ರಿಕ್ ಕೂಡಾ ಭರ್ಜರಿ ಬೇಡಿಕೆ ಪಡೆದುಕೊಂಡಿದೆ.

ಹಬ್ಬದ ಋತುಗಳಲ್ಲಿ ಹೀರೋ ಎಲೆಕ್ಟ್ರಿಕ್ ಸ್ಕೂಟರ್ ಮಾರಾಟ ದುಪ್ಪಟ್ಟು ಹೆಚ್ಚಳ

ಹೀರೋ ಎಲೆಕ್ಟ್ರಿಕ್ ಕಂಪನಿಯು ದಸರಾ ಮತ್ತು ದೀಪಾವಳಿ ಸಂಭ್ರಮಕ್ಕಾಗಿ ಘೋಷಣೆ ಮಾಡಲಾಗಿದ್ದ ಕೆಲವು ಆಫರ್‌ಗಳಿಂದ ಹೆಚ್ಚಿನ ಬೇಡಿಕೆ ಸಲ್ಲಿಕೆಯಾಗಿದ್ದು, ಇದು ಕಳೆದ ವರ್ಷದ ಹಬ್ಬದ ಋತುವಿನ ಇವಿ ಸ್ಕೂಟರ್ ಮಾರಾಟಕ್ಕಿಂತಲೂ ಎರಡು ಪಟ್ಟು ಹೆಚ್ಚಳವಾಗಿದೆ.

ಹಬ್ಬದ ಋತುಗಳಲ್ಲಿ ಹೀರೋ ಎಲೆಕ್ಟ್ರಿಕ್ ಸ್ಕೂಟರ್ ಮಾರಾಟ ದುಪ್ಪಟ್ಟು ಹೆಚ್ಚಳ

ಈ ವರ್ಷದ ದಸರಾ ಮತ್ತು ದೀಪಾವಳಿ ಸಂಭ್ರಮದಲ್ಲಿ(ಅಕ್ಟೋಬರ್ 1ರಿಂದ ನವೆಂಬರ್ ಮಧ್ಯಂತರ) ಹೀರೋ ಎಲೆಕ್ಟ್ರಿಕ್ ಕಂಪನಿಯು ಒಟ್ಟು 24 ಸಾವಿರ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಮಾರಾಟ ಮಾಡಿದ್ದು, ಇದು ಕಳೆದ ವರ್ಷದ ಇವಿ ಸ್ಕೂಟರ್ ಮಾರಾಟದಲ್ಲಿ ಅರ್ಧದಷ್ಟು ಪ್ರಮಾಣವು ಕೆಲವು ಒಂದೂವರೆ ತಿಂಗಳಿನಲ್ಲಿ ಮಾರಾಟಗೊಂಡಿವೆ.

ಹಬ್ಬದ ಋತುಗಳಲ್ಲಿ ಹೀರೋ ಎಲೆಕ್ಟ್ರಿಕ್ ಸ್ಕೂಟರ್ ಮಾರಾಟ ದುಪ್ಪಟ್ಟು ಹೆಚ್ಚಳ

ಇನ್ನು 2021ರಲ್ಲಿನ ಇವಿ ಸ್ಕೂಟರ್ ಮಾರಾಟ ವರದಿ ಪ್ರಕಟಿಸಿರುವ ಹೀರೋ ಎಲೆಕ್ಟ್ರಿಕ್ ಕಂಪನಿಯು ಸುಮಾರು 60 ಸಾವಿರ ಯುನಿಟ್ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ವಿತರಣೆ ಮಾಡಿರುವುದಾಗಿ ಘೋಷಣೆ ಮಾಡಿದ್ದು, ಇದು ಈ ಹಿಂದಿನ ಮೂರು ವರ್ಷಗಳ ಅವಧಿಯಲ್ಲಿನ ಇವಿ ವಾಹನ ಮಾರಾಟಕ್ಕೆ ಸಮವಾಗಿದೆ.

ಹಬ್ಬದ ಋತುಗಳಲ್ಲಿ ಹೀರೋ ಎಲೆಕ್ಟ್ರಿಕ್ ಸ್ಕೂಟರ್ ಮಾರಾಟ ದುಪ್ಪಟ್ಟು ಹೆಚ್ಚಳ

ಈ ವರ್ಷದ ಜನವರಿಯಿಂದ ಅಕ್ಟೋಬರ್ ಕೊನೆಯ ತನಕ ಹೀರೋ ಎಲೆಕ್ಟ್ರಿಕ್ ಕಂಪನಿಯು ಒಟ್ಟು 60 ಸಾವಿರ ಇವಿ ಸ್ಕೂಟರ್‌ಗಳನ್ನು ಮಾರಾಟ ಮಾಡಿದ್ದು, ಶೀಘ್ರದಲ್ಲೇ ಬುಕ್ಕಿಂಗ್ ಸಲ್ಲಿಕೆಯಾಗಿರುವ 16 ಸಾವಿರ ಯುನಿಟ್‌ಗಳನ್ನು ವಿತರಣೆ ಮಾಡಲು ಸಜ್ಜಾಗಿದೆ.

ಹಬ್ಬದ ಋತುಗಳಲ್ಲಿ ಹೀರೋ ಎಲೆಕ್ಟ್ರಿಕ್ ಸ್ಕೂಟರ್ ಮಾರಾಟ ದುಪ್ಪಟ್ಟು ಹೆಚ್ಚಳ

ಗ್ರಾಹಕರ ಬೇಡಿಕೆಯ ಆಧಾರದ ಮೇಲೆ ಇವಿ ವಾಹನಗಳ ಮಾರಾಟವನ್ನು ಮಳಿಗೆಗಳನ್ನು ದೇಶಾದ್ಯಂತ ವಿಸ್ತರಿಸುತ್ತಿದ್ದು, ಈಗಾಗಲೇ ಮಾರಾಟ ಮಳಿಗೆಗಳನ್ನು ಹೊಂದಿರುವ ನಗರಗಳಲ್ಲಿ ಮತ್ತಷ್ಟು ಹೊಸ ಮಾರಾಟ ಮಳಿಗೆಗಳನ್ನು ತೆರೆಯಲು ಯೋಜಿಸಿದೆ.

ಹಬ್ಬದ ಋತುಗಳಲ್ಲಿ ಹೀರೋ ಎಲೆಕ್ಟ್ರಿಕ್ ಸ್ಕೂಟರ್ ಮಾರಾಟ ದುಪ್ಪಟ್ಟು ಹೆಚ್ಚಳ

ಕಳೆದ ಒಂದು ವರ್ಷದ ಅವಧಿಯಲ್ಲಿ ಗ್ರಾಹಕರ ಬೇಡಿಕೆಯೆಂತೆ ಪ್ರಮುಖ ನಗರಗಳಲ್ಲಿ ಹಲವು ಹೊಸ ಮಾರಾಟ ಮಳಿಗೆಗಳನ್ನು ತೆರೆದಿರುವ ಹೀರೋ ಎಲೆಕ್ಟ್ರಿಕ್ ಕಂಪನಿಯು ಮುಂದಿನ ಮೂರು ವರ್ಷಗಳಲ್ಲಿ ಪ್ರತಿವರ್ಷ 2.5 ಲಕ್ಷಕ್ಕೂ ಹೆಚ್ಚು ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡುವ ಗುರಿಯನ್ನು ಹೊಂದಿದೆ.

ಹಬ್ಬದ ಋತುಗಳಲ್ಲಿ ಹೀರೋ ಎಲೆಕ್ಟ್ರಿಕ್ ಸ್ಕೂಟರ್ ಮಾರಾಟ ದುಪ್ಪಟ್ಟು ಹೆಚ್ಚಳ

ಸದ್ಯ ದೇಶಾದ್ಯಂತ 500 ನಗರಗಳಲ್ಲಿ 700ಕ್ಕೂ ಹೆಚ್ಚು ಮಾರಾಟ ಮಳಿಗೆಗಳನ್ನು ಹೊಂದಿರುವ ಹೀರೋ ಎಲೆಕ್ಟ್ರಿಕ್ ಕಂಪನಿಯು ಅಗತ್ಯತೆಯ ಆಧಾರದ ಮೇಲೆ ಕಳೆದ ವರ್ಷ ಸುಮಾರು 1,500 ಹೊಸ ಫಾಸ್ಟ್ ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪಿಸಿದ್ದು, ಶೀಘ್ರದಲ್ಲೇ ಮತ್ತಷ್ಟು ಹೊಸ ಮಾರಾಟ ಮಳಿಗೆಗಳನ್ನು ತೆರೆಯಲು ಸಿದ್ದವಾಗಿದೆ.

ಹಬ್ಬದ ಋತುಗಳಲ್ಲಿ ಹೀರೋ ಎಲೆಕ್ಟ್ರಿಕ್ ಸ್ಕೂಟರ್ ಮಾರಾಟ ದುಪ್ಪಟ್ಟು ಹೆಚ್ಚಳ

2022 ಆರ್ಥಿಕ ವರ್ಷದ ಕೊನೆಯಲ್ಲಿ ದೇಶಾದ್ಯಂತ ಒಟ್ಟು ಒಂದು ಸಾವಿರ ಟಚ್ ಪಾಯಿಂಟ್(ಮಾರಾಟ ಮಳಿಗೆಗಳನ್ನು) ಹೊಂದುವ ಗುರಿಹೊಂದಿದ್ದು, ಚಾರ್ಜಿಂಗ್ ನಿಲ್ದಾಣಗಳ ಲಭ್ಯತೆಯ ಆಧಾರದ ಮೇಲೆ ಹೊಸ ಟಚ್ ಪಾಯಿಂಟ್ ತೆರೆಯಲಾಗುತ್ತಿದೆ.

ಹಬ್ಬದ ಋತುಗಳಲ್ಲಿ ಹೀರೋ ಎಲೆಕ್ಟ್ರಿಕ್ ಸ್ಕೂಟರ್ ಮಾರಾಟ ದುಪ್ಪಟ್ಟು ಹೆಚ್ಚಳ

ಅಂದಾಜಿನ ಪ್ರಕಾರ, ಮುಂದಿನ ಹಣಕಾಸು ವರ್ಷದಲ್ಲಿ ಹೀರೋ ಎಲೆಕ್ಟ್ರಿಕ್ ಸ್ಕೂಟರ್ ಕಂಪನಿಯ ಇವಿ ಸ್ಕೂಟರ್ ಮಾರಾಟವು ಶೇಕಡಾ 20ರಿಂದ ಶೇ.30 ರಷ್ಟು ಹೆಚ್ಚಳವಾಗುವ ನೀರಿಕ್ಷೆಗಳಿದ್ದು, 12 ವರ್ಷಗಳ ಇವಿ ವಾಹನ ಮಾರಾಟದಲ್ಲಿ ಮೊದಲ ಬಾರಿಗೆ ಇವಿ ವಾಹನ ಮಾರಾಟವು ದ್ವಿಗುಣಗೊಳ್ಳುತ್ತಿದೆ.

ಹಬ್ಬದ ಋತುಗಳಲ್ಲಿ ಹೀರೋ ಎಲೆಕ್ಟ್ರಿಕ್ ಸ್ಕೂಟರ್ ಮಾರಾಟ ದುಪ್ಪಟ್ಟು ಹೆಚ್ಚಳ

ಇವಿ ಸ್ಕೂಟರ್ ಉತ್ಪಾದನೆಯಲ್ಲಿ ಸುಮಾರು 12 ವರ್ಷಗಳನ್ನು ಪೂರೈಸಿರುವ ಹೀರೋ ಎಲೆಕ್ಟ್ರಿಕ್ ಕಂಪನಿಯು ಇದುವರೆಗೆ 3 ಲಕ್ಷ ಯುನಿಟ್ ಮಾರಾಟ ಮಾಡಿದ್ದು, ಗ್ರಾಹಕರ ಬೇಡಿಕೆಯೆಂತೆ ಇವಿ ಉತ್ಪನ್ನಗಳಲ್ಲಿ ಹಲವಾರು ಬದಲಾವಣೆಗಳೊಂದಿಗೆ ಗ್ರಾಹಕರನ್ನು ಸೆಳೆಯುತ್ತಿದೆ.

ಹಬ್ಬದ ಋತುಗಳಲ್ಲಿ ಹೀರೋ ಎಲೆಕ್ಟ್ರಿಕ್ ಸ್ಕೂಟರ್ ಮಾರಾಟ ದುಪ್ಪಟ್ಟು ಹೆಚ್ಚಳ

ಹೀರೋ ಎಲೆಕ್ಟ್ರಿಕ್ ಕಂಪನಿಯು ತನ್ನ ಪ್ರಮುಖ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಗಳಲ್ಲಿ ಸಿಟಿ ಸ್ಪೀಡ್ ಸೆಗ್ಮೆಂಟ್ ಬಿಡುಗಡೆ ಮಾಡಿದ್ದು, ಹೊಸ ಮಾದರಿಯು ಬೆಸ್ಟ್ ಇನ್ ಕ್ಲಾಸ್ ಫೀಚರ್ಸ್‌ನೊಂದಿಗೆ ಅತ್ಯುತ್ತಮ ಮೈಲೇಜ್ ರೇಂಜ್ ಪಡೆದುಕೊಳ್ಳಲು ಸಹಕಾರಿಯಾಗಿದೆ.

ಹಬ್ಬದ ಋತುಗಳಲ್ಲಿ ಹೀರೋ ಎಲೆಕ್ಟ್ರಿಕ್ ಸ್ಕೂಟರ್ ಮಾರಾಟ ದುಪ್ಪಟ್ಟು ಹೆಚ್ಚಳ

ಪ್ರಸ್ತುತ ಮಾರುಕಟ್ಟೆಯಲ್ಲಿರುವ ವಿವಿಧ ಎಲೆಕ್ಟ್ರಿಕ್ ಸ್ಕೂಟರ್ ಆವೃತ್ತಿಗಳಿಗೆ ಪೈಪೋಟಿಯಾಗಿ ಸಿಟಿ ಸೆಗ್ಮೆಂಟ್ ಅಭಿವೃದ್ದಿಪಡಿಸಿರುವ ಹೀರೋ ಎಲೆಕ್ಟ್ರಿಕ್ ಕಂಪನಿಯು ಕಂಫರ್ಟ್ ಸ್ಪೀಡ್, ಎಕ್ಸೆಂಡ್ ರೇಂಜ್ ಮಾದರಿಗಳೊಂದಿಗೆ ಇದೀಗ ಸಿಟಿ ಸ್ಪೀಡ್ ಮಾದರಿಗಳನ್ನು ಅಭಿವೃದ್ದಿಗೊಳಿಸಿದೆ.

ಹೆಚ್ಚುತ್ತಿರುವ ಇಂಧನ ಬೆಲೆ ಮತ್ತು ಮಾಲಿನ್ಯದ ಕಾರಣಕ್ಕೆ ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದ್ದು, ಕೇಂದ್ರ ಸರ್ಕಾರದ ಜೊತೆಗೆ ವಿವಿಧ ರಾಜ್ಯ ಸರ್ಕಾರಗಳು ಸಹ ಎಲೆಕ್ಟ್ರಿಕ್ ವಾಹನ ನೀತಿಯನ್ನು ಅಳವಡಿಸಿಕೊಳ್ಳುತ್ತಿರುವ ಇವಿ ವಾಹನ ಮಾಲೀಕರಿಗೆ ಹೆಚ್ಚಿನ ಮಟ್ಟದ ಪ್ರೋತ್ಸಾಹವು ಹೊಸ ಬದಲಾವಣೆಗೆ ಕಾರಣವಾಗುತ್ತಿದೆ.

Most Read Articles

Kannada
English summary
Hero electric scooter sales increased by two folds in festive retail
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X