ಸೆಪ್ಟೆಂಬರ್ ತಿಂಗಳಿನಲ್ಲಿ ಗರಿಷ್ಠ ಪ್ರಮಾಣದಲ್ಲಿ ವಾಹನಗಳನ್ನು ಮಾರಾಟ ಮಾಡಿದ Hero Electric

ಭಾರತದಲ್ಲಿ ಸುಮಾರು ಒಂದು ವರ್ಷದಿಂದ ಪೆಟ್ರೋಲ್, ಡೀಸೆಲ್ ಬೆಲೆ ಗಗನಕ್ಕೇರಿದೆ. ಭಾರತದ ಬಹುತೇಕ ಎಲ್ಲಾ ಭಾಗಗಳಲ್ಲಿ ಪೆಟ್ರೋಲ್ ಬೆಲೆ ರೂ. 100 ಗಳ ಗಡಿ ದಾಟಿದೆ. ಇನ್ನು ಕೆಲವು ರಾಜ್ಯಗಳಲ್ಲಿ ಡೀಸೆಲ್ ಬೆಲೆಯೂ ಸಹ ರೂ. 100 ಗಳ ಗಡಿ ದಾಟಿದೆ. ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಿಂದ ತತ್ತರಿಸಿರುವ ವಾಹನ ಸವಾರರು ಅನಿವಾರ್ಯವಾಗಿ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಮುಂದಾಗಿದ್ದಾರೆ.

ಸೆಪ್ಟೆಂಬರ್ ತಿಂಗಳಿನಲ್ಲಿ ಗರಿಷ್ಠ ಪ್ರಮಾಣದಲ್ಲಿ ವಾಹನಗಳನ್ನು ಮಾರಾಟ ಮಾಡಿದ Hero Electric

ಈ ಹಿನ್ನೆಲೆಯಲ್ಲಿ ಕಳೆದ ಕೆಲವು ತಿಂಗಳುಗಳಿಂದ ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳ ಮಾರಾಟ ಹೆಚ್ಚಾಗಿದೆ. ದೇಶದಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಗಳು ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟವಾಗುತ್ತವೆ ಎಂಬುದು ಗಮನಾರ್ಹ. ಎಲೆಕ್ಟ್ರಿಕ್ ಸ್ಕೂಟರ್ ಗಳ ಮಾರಾಟ ಪ್ರಮಾಣವು ಪ್ರತಿ ತಿಂಗಳು ಹೆಚ್ಚಾಗುತ್ತಿದೆ. ಪ್ರಮುಖ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ತಯಾರಕ ಕಂಪನಿಯಾದ Hero Electric ಕಳೆದ ತಿಂಗಳು ತನ್ನ ವಾಹನಗಳು ಸಾರ್ವಕಾಲಿಕ ಗರಿಷ್ಠ ಮಟ್ಟದಲ್ಲಿ ಮಾರಾಟವಾಗಿವೆ ಎಂದು ಹೇಳಿದೆ.

ಸೆಪ್ಟೆಂಬರ್ ತಿಂಗಳಿನಲ್ಲಿ ಗರಿಷ್ಠ ಪ್ರಮಾಣದಲ್ಲಿ ವಾಹನಗಳನ್ನು ಮಾರಾಟ ಮಾಡಿದ Hero Electric

ಸೆಪ್ಟೆಂಬರ್ ತಿಂಗಳಿನಲ್ಲಿ Hero Electric ಕಂಪನಿಯು ಒಟ್ಟು 6,500 ಯೂನಿಟ್ ಎಲೆಕ್ಟ್ರಿಕ್ ದ್ವಿ ಚಕ್ರ ವಾಹನಗಳನ್ನು ಮಾರಾಟ ಮಾಡಿದೆ. ಈ ಮಾರಾಟದ ಅಂಕಿ ಅಂಶಗಳ ಆಧಾರದ ಮೇಲೆ ಅನುಸರಿಸಿ, Hero Electric ಈ ಹೇಳಿಕೆಯನ್ನು ನೀಡಿದೆ. ಈ ಪರಿಸ್ಥಿತಿಯು ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳಿಗೆ ಹೆಚ್ಚುತ್ತಿರುವ ಬೇಡಿಕೆಯನ್ನು ಸೂಚಿಸುತ್ತದೆ.

ಸೆಪ್ಟೆಂಬರ್ ತಿಂಗಳಿನಲ್ಲಿ ಗರಿಷ್ಠ ಪ್ರಮಾಣದಲ್ಲಿ ವಾಹನಗಳನ್ನು ಮಾರಾಟ ಮಾಡಿದ Hero Electric

ಎಲೆಕ್ಟ್ರಿಕ್ ವಾಹನಗಳು ಪರಿಸರ ಸ್ನೇಹಿಯಾಗಿದ್ದು, ಹೆಚ್ಚು ಲಾಭದಾಯಕವೆಂದು ಹೇಳಲಾಗುತ್ತದೆ. ಈ ಕಾರಣಕ್ಕೆ ಎಲೆಕ್ಟ್ರಿಕ್ ವಾಹನಗಳು ಹಿಂದೆಂದಿಗಿಂತಲೂ ಈಗ ಹೆಚ್ಚಿನ ಸಂಖ್ಯೆಯಲ್ಲಿ ಜನರನ್ನು ಸೆಳೆಯುತ್ತಿವೆ. ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯು ಸಹ ಜನರನ್ನು ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಪ್ರೇರೇಪಿಸಿದೆ ಎಂದು ಹೇಳಬಹುದು. ಈ ಸನ್ನಿವೇಶದಲ್ಲಿಯೇ Hero Electric ತನ್ನ ಕಂಪನಿಯ ಎಲೆಕ್ಟ್ರಿಕ್ ವಾಹನಗಳಿಗೆ ಹೆಚ್ಚು ಬೇಡಿಕೆ ಉಂಟಾಗಿದೆ ಎಂದು ಹೇಳಿದೆ.

ಸೆಪ್ಟೆಂಬರ್ ತಿಂಗಳಿನಲ್ಲಿ ಗರಿಷ್ಠ ಪ್ರಮಾಣದಲ್ಲಿ ವಾಹನಗಳನ್ನು ಮಾರಾಟ ಮಾಡಿದ Hero Electric

ವರದಿಗಳ ಪ್ರಕಾರ ಕಂಪನಿಯ Optima ಹಾಗೂ NYX ಎಲೆಕ್ಟ್ರಿಕ್ ಸ್ಕೂಟರ್‌ಗಳಿಗೆ ಭಾರತೀಯರಿಂದ ಹೆಚ್ಚು ಬೇಡಿಕೆ ವ್ಯಕ್ತವಾಗಿದೆ. ಈ ಎರಡೂ ಹೈಸ್ಪೀಡ್ ಎಲೆಕ್ಟ್ರಿಕ್ಸ್ಕೂಟರ್ ಗಳಾಗಿವೆ. ಕಳೆದ ವರ್ಷ ಎಲೆಕ್ಟ್ರಿಕ್ ವಾಹನಗಳ ಮಾರಾಟ ಹೆಚ್ಚಾಗಿದ್ದರೆ ಪೆಟ್ರೋಲ್, ಡೀಸೆಲ್ ಚಾಲಿತ ವಾಹನಗಳ ಮಾರಾಟ ಪ್ರಮಾಣವು ಹಲವು ಪಟ್ಟುಕಡಿಮೆಯಾಗಿದೆ.

ಸೆಪ್ಟೆಂಬರ್ ತಿಂಗಳಿನಲ್ಲಿ ಗರಿಷ್ಠ ಪ್ರಮಾಣದಲ್ಲಿ ವಾಹನಗಳನ್ನು ಮಾರಾಟ ಮಾಡಿದ Hero Electric

ಆದರೆ ಭಾರತದಲ್ಲಿ ಇನ್ನೂ ಅನೇಕ ಜನರು ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸಲು ಹಿಂಜರಿಯುತ್ತಾರೆ. ಇದಕ್ಕೆ ಪ್ರಮುಖ ಕಾರಣ ಎಲೆಕ್ಟ್ರಿಕ್ ವಾಹನಗಳಿಗೆ ಅಗತ್ಯವಿರುವ ಮೂಲಭೂತ ಸೌಕರ್ಯಗಳ ಕೊರತೆ. ಎಲೆಕ್ಟ್ರಿಕ್ ವಾಹನಗಳು ಪೆಟ್ರೋಲ್ ಹಾಗೂ ಡೀಸೆಲ್ ವಾಹನಗಳಂತೆ ಹೆಚ್ಚು ಮೂಲ ಸೌಕರ್ಯಗಳನ್ನು ಹೊಂದಿಲ್ಲ. ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ಈ ಪರಿಸ್ಥಿತಿಯನ್ನು ಬದಲಿಸುವ ಪ್ರಯತ್ನಗಳನ್ನು ತೀವ್ರಗೊಳಿಸಿವೆ.

ಸೆಪ್ಟೆಂಬರ್ ತಿಂಗಳಿನಲ್ಲಿ ಗರಿಷ್ಠ ಪ್ರಮಾಣದಲ್ಲಿ ವಾಹನಗಳನ್ನು ಮಾರಾಟ ಮಾಡಿದ Hero Electric

ಸರ್ಕಾರಗಳ ಜೊತೆಗೆ ಇತರ ಕಂಪನಿಗಳು ಸಹ ಕೈ ಜೋಡಿಸಿವೆ. ದೇಶಾದ್ಯಂತ ಎಲೆಕ್ಟ್ರಿಕ್ ವಾಹನ ಚಾರ್ಜಿಂಗ್ ಕೇಂದ್ರಗಳನ್ನು ತೆರೆಯುವ ಪ್ರಕ್ರಿಯೆ ಜಾರಿಯಲ್ಲಿದೆ. ಹಲವೆಡೆ ಸಣ್ಣ ಎಲೆಕ್ಟ್ರಿಕ್ ವಾಹನಗಳಿಗೆ ಪುನರ್ಭರ್ತಿ ಮಾಡಬಹುದಾದ ಬ್ಯಾಟರಿಗಳನ್ನು ಒದಗಿಸುವ ವಿತರಣಾ ಕೇಂದ್ರಗಳನ್ನು ತೆರೆಯಲಾಗಿದೆ. Hero Electric ಕೂಡ ಈ ನಿಟ್ಟಿನಲ್ಲಿ ಮುಂದಾಗಿರುವುದು ಗಮನಾರ್ಹ.

ಸೆಪ್ಟೆಂಬರ್ ತಿಂಗಳಿನಲ್ಲಿ ಗರಿಷ್ಠ ಪ್ರಮಾಣದಲ್ಲಿ ವಾಹನಗಳನ್ನು ಮಾರಾಟ ಮಾಡಿದ Hero Electric

Hero Electric ದೆಹಲಿ ಮೂಲದ ಬೃಹತ್ ಮೊಬಿಲಿಟಿ ಕಂಪನಿಯೊಂದಿಗೆ ಮೈತ್ರಿ ಮಾಡಿಕೊಂಡಿದೆ. ಈ ಎರಡು ಕಂಪನಿಗಳು ಜಂಟಿಯಾಗಿ 10,000 ಕ್ಕೂ ಹೆಚ್ಚು ಚಾರ್ಜಿಂಗ್ ಕೇಂದ್ರಗಳನ್ನು ದೇಶದ ಪ್ರಮುಖ ಪ್ರದೇಶಗಳಲ್ಲಿ ತೆರೆಯಲು ಸಜ್ಜಾಗಿವೆ. ಈ ಎರಡೂ ಕಂಪನಿಗಳು ಮುಂದಿನ ಒಂದು ವರ್ಷದೊಳಗೆ ಈ ಯೋಜನೆಯನ್ನು ಆರಂಭಿಸುವ ನಿರೀಕ್ಷೆಗಳಿವೆ.

ಸೆಪ್ಟೆಂಬರ್ ತಿಂಗಳಿನಲ್ಲಿ ಗರಿಷ್ಠ ಪ್ರಮಾಣದಲ್ಲಿ ವಾಹನಗಳನ್ನು ಮಾರಾಟ ಮಾಡಿದ Hero Electric

ಈ ಚಾರ್ಜಿಂಗ್ ಕೇಂದ್ರಗಳನ್ನು ಎಲ್ಲಾ ರೀತಿಯ ಎಲೆಕ್ಟ್ರಿಕ್ ದ್ವಿಚಕ್ರ, ಎಲೆಕ್ಟ್ರಿಕ್ ತ್ರಿ ಚಕ್ರ, ಹಾಗೂ ಎಲೆಕ್ಟ್ರಿಕ್ ನಾಲ್ಕು ಚಕ್ರ ವಾಹನಗಳು ಬಳಸುವಂತೆ ವಿನ್ಯಾಸಗೊಳಿಸಲಾಗಿದೆ. ಇದುವರೆಗೂ Hero Electric ದೇಶದಾದ್ಯಂತ 1,650 ಚಾರ್ಜಿಂಗ್ ಕೇಂದ್ರಗಳನ್ನು ತೆರೆದಿದೆ. 2022 ರ ಅಂತ್ಯದ ವೇಳೆಗೆ ಈ ಸಂಖ್ಯೆಯನ್ನು 20,000 ಕ್ಕೆ ಹೆಚ್ಚಿಸುವ ಗುರಿಯನ್ನು Hero Electric ಕಂಪನಿ ಹೊಂದಿದೆ.

ಸೆಪ್ಟೆಂಬರ್ ತಿಂಗಳಿನಲ್ಲಿ ಗರಿಷ್ಠ ಪ್ರಮಾಣದಲ್ಲಿ ವಾಹನಗಳನ್ನು ಮಾರಾಟ ಮಾಡಿದ Hero Electric

ಎಲೆಕ್ಟ್ರಿಕ್ ವಾಹನ ಬಳಕೆದಾರರಲ್ಲಿ ಆತ್ಮವಿಶ್ವಾಸ ಮೂಡಿಸಲು ಹಾಗೂ ಎಲೆಕ್ಟ್ರಿಕ್ ವಾಹನಗಳತ್ತ ಜನರನ್ನು ಆಕರ್ಷಿಸಲು ಕಂಪನಿಯು ಹಲವಾರು ಕ್ರಮಗಳನ್ನುಕೈಗೊಳ್ಳುತ್ತಿದೆ. ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಚಾರ್ಜಿಂಗ್ ಕೇಂದ್ರಗಳನ್ನು ತೆರೆಯುವ ಮೂಲಕ ಇವಿಗಳಿಗೆ ಅಗತ್ಯವಾದ ಮೂಲ ಸೌಕರ್ಯವನ್ನು ಸುಧಾರಿಸುವ ಕೆಲಸ ಮಾಡುತ್ತಿದೆ ಎಂದು ಇತ್ತೀಚಿಗಷ್ಟೇ ಕೇಂದ್ರ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದರು.

ಸೆಪ್ಟೆಂಬರ್ ತಿಂಗಳಿನಲ್ಲಿ ಗರಿಷ್ಠ ಪ್ರಮಾಣದಲ್ಲಿ ವಾಹನಗಳನ್ನು ಮಾರಾಟ ಮಾಡಿದ Hero Electric

ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳ ಮಾರಾಟವು ಗಣನೀಯ ಪ್ರಮಾಣದಲ್ಲಿ ಹೆಚ್ಚಾಗುತ್ತಿದೆ. ಹೊಸ ಸ್ಟಾರ್ಟ್ ಅಪ್‌ ಕಂಪನಿಗಳ ಎಲೆಕ್ಟ್ರಿಕ್ ಸ್ಕೂಟರ್‌ಗಳು ದೇಶಿಯ ಮಾರುಕಟ್ಟೆಯಲ್ಲಿ ಉತ್ತಮ ಸ್ವಾಗತವನ್ನು ಪಡೆಯುತ್ತಿವೆ ಎಂದು ಅವರು ಹೇಳಿದ್ದಾರೆ. ಬ್ಯಾಟರಿ ಸೇರಿದಂತೆ ಎಲೆಕ್ಟ್ರಿಕ್ ವಾಹನಗಳ ಬಿಡಿ ಭಾಗಗಳನ್ನು ಹೆಚ್ಚು ಕಾಲ ಬಾಳಿಕೆ ಬರುವಂತೆ, ಕಡಿಮೆ ವೆಚ್ಚದಲ್ಲಿ ಅಭಿವೃದ್ಧಿ ಪಡಿಸುವ ಅಗತ್ಯವಿದೆ ಎಂದು ನಿತಿನ್ ಗಡ್ಕರಿ ಹೇಳಿದರು.

Most Read Articles

Kannada
English summary
Hero electric sells more electric two wheelers in september 2021 details
Story first published: Thursday, October 7, 2021, 10:11 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X