ಎಲೆಕ್ಟ್ರಿಕ್ ವಾಹನ ಉತ್ಪಾದನಾ ಸಾಮರ್ಥ್ಯವನ್ನು ಹೆಚ್ಚಿಸಲು ಮುಂದಾದ Hero Electric

ಪ್ರಮುಖ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ತಯಾರಕ ಕಂಪನಿಯಾದ ಹೀರೋ ಎಲೆಕ್ಟ್ರಿಕ್ (Hero Electric) ಮುಂದಿನ ಐದು ವರ್ಷಗಳಲ್ಲಿ ತನ್ನ ಉತ್ಪಾದನಾ ಸಾಮರ್ಥ್ಯವನ್ನು 5 ಮಿಲಿಯನ್ ಯುನಿಟ್‌ಗಳಿಗೆ ಹೆಚ್ಚಿಸುವ ಯೋಜನೆಯಲ್ಲಿ ಕಾರ್ಯನಿರ್ವಹಿಸುತ್ತಿದೆ. ಕಂಪನಿಯು ಲುಧಿಯಾನದಲ್ಲಿರುವ ತನ್ನ ಉತ್ಪಾದನಾ ಘಟಕದಲ್ಲಿ 2022ರ ಮಧ್ಯದ ವೇಳೆಗೆ ಉತ್ಪಾದನೆಯನ್ನು ವಾರ್ಷಿಕ 5 ಲಕ್ಷ ಯುನಿಟ್‌ಗಳಿಗೆ ಹೆಚ್ಚಿಸಲಿದೆ.

ಎಲೆಕ್ಟ್ರಿಕ್ ವಾಹನ ಉತ್ಪಾದನಾ ಸಾಮರ್ಥ್ಯವನ್ನು ಹೆಚ್ಚಿಸಲು ಮುಂದಾದ Hero Electric

ನಂತರ ಕಂಪನಿಯು ಹೊಸ ಸ್ಥಳದಲ್ಲಿ ಉತ್ಪಾದನಾ ಘಟಕವನ್ನು ತೆರೆಯುವ ಮೂಲಕ ಉತ್ಪಾದನೆಯನ್ನು ಹೆಚ್ಚಿಸಲಿದೆ. ಫೇಮ್ 2 ಯೋಜನೆ ಹಾಗೂ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಹೆಚ್ಚಿನ ಸಬ್ಸಿಡಿ ನೀಡುತ್ತಿರುವುದು ಎಲೆಕ್ಟ್ರಿಕ್ ವಾಹನಗಳ ಮಾರಾಟದಲ್ಲಿ ಹೆಚ್ಚಳ ಕಂಡು ಬರುವುದಕ್ಕೆ ಕಾರಣವಾಗಿದೆ ಎಂದು ಹೀರೋ ಎಲೆಕ್ಟ್ರಿಕ್‌ನ ಎಂಡಿ ನವೀನ್ ಮುಂಜಾಲ್ ಹೇಳಿದ್ದಾರೆ.

ಎಲೆಕ್ಟ್ರಿಕ್ ವಾಹನ ಉತ್ಪಾದನಾ ಸಾಮರ್ಥ್ಯವನ್ನು ಹೆಚ್ಚಿಸಲು ಮುಂದಾದ Hero Electric

ಕಳೆದ ಎಂಟು ತಿಂಗಳ ಅವಧಿಯಲ್ಲಿ ಹೀರೋ ಎಲೆಕ್ಟ್ರಿಕ್‌ನ ದ್ವಿಚಕ್ರ ವಾಹನಗಳ ಬೇಡಿಕೆಯೂ ತೀವ್ರವಾಗಿ ಹೆಚ್ಚಿದೆ ಎಂದು ಅವರು ಹೇಳಿದರು. ಸದ್ಯ ಬೇಡಿಕೆಗೆ ತಕ್ಕಂತೆ ಉತ್ಪಾದನೆ ಮಾಡಲು ಸಾಧ್ಯವಾಗುತ್ತಿಲ್ಲವೆಂದು ಅವರು ತಿಳಿಸಿದರು. ನವೀನ್ ಮುಂಜಾಲ್ ರವರ ಪ್ರಕಾರ, ಹೀರೋ ಎಲೆಕ್ಟ್ರಿಕ್ ತನ್ನ ಸಂಪೂರ್ಣ ಸಾಮರ್ಥ್ಯದಲ್ಲಿ ವಾಹನಗಳನ್ನು ಉತ್ಪಾದಿಸುತ್ತಿದೆ. ಕಂಪನಿಯು ಪ್ರಸಕ್ತ ಹಣಕಾಸು ವರ್ಷದಲ್ಲಿ 1 ಲಕ್ಷ ಯೂನಿಟ್ ಎಲೆಕ್ಟ್ರಿಕ್ ವಾಹನಗಳ ಉತ್ಪಾದನಾ ಗುರಿಯನ್ನು ಹೊಂದಿದೆ.

ಎಲೆಕ್ಟ್ರಿಕ್ ವಾಹನ ಉತ್ಪಾದನಾ ಸಾಮರ್ಥ್ಯವನ್ನು ಹೆಚ್ಚಿಸಲು ಮುಂದಾದ Hero Electric

ಈ ಗುರಿಯು ಹಿಂದಿನ ಆರ್ಥಿಕ ವರ್ಷದ ಉತ್ಪಾದನೆಗಿಂತ ದ್ವಿಗುಣವಾಗಿದೆ. ಇದಲ್ಲದೆ, ಕಂಪನಿಯು ಉತ್ಪಾದನಾ ಸಾಮರ್ಥ್ಯಗಳನ್ನು ಸುಧಾರಿಸಲು ಹೂಡಿಕೆ ಮಾಡಲು ನೋಡುತ್ತಿದೆ. ನವೆಂಬರ್ ತಿಂಗಳಲ್ಲಿ, ಹೀರೋ ಎಲೆಕ್ಟ್ರಿಕ್ ಭಾರತದಲ್ಲಿ 7,000 ಸಿಟಿ ಸ್ಪೀಡ್ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಮಾರಾಟ ಮಾಡಿದೆ. ಕಳೆದ ವರ್ಷ ನವೆಂಬರ್‌ನಲ್ಲಿ ಕಂಪನಿಯು ಕೇವಲ 1,169 ಯುನಿಟ್‌ಗಳನ್ನು ಮಾರಾಟ ಮಾಡಿತ್ತು.

ಎಲೆಕ್ಟ್ರಿಕ್ ವಾಹನ ಉತ್ಪಾದನಾ ಸಾಮರ್ಥ್ಯವನ್ನು ಹೆಚ್ಚಿಸಲು ಮುಂದಾದ Hero Electric

ಹೀರೋ ಎಲೆಕ್ಟ್ರಿಕ್ ಈ ವರ್ಷದ ಅಕ್ಟೋಬರ್ ತಿಂಗಳಿನಲ್ಲಿ 6,366 ಯುನಿಟ್ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಮಾರಾಟ ಮಾಡಿತ್ತು. ಕಂಪನಿಯ ಹೈ ಸ್ಪೀಡ್ ಸಿಟಿ ಸ್ಕೂಟರ್ ವಿಭಾಗದಲ್ಲಿ Optima ಹಾಗೂ NYX ಪ್ರಮುಖ ವಾಹನಗಳಾಗಿವೆ. ಈ ವರ್ಷದ ಜನವರಿ - ಜುಲೈ ಅವಧಿಯಲ್ಲಿ ಕಂಪನಿಯು ಈ ಎರಡೂ ಎಲೆಕ್ಟ್ರಿಕ್ ಹೈ ಸ್ಪೀಡ್ ಸ್ಕೂಟರ್‌ಗಳ 15,000 ಯುನಿಟ್‌ಗಳನ್ನು ದೇಶಾದ್ಯಂತ ಮಾರಾಟ ಮಾಡಿದೆ.

ಎಲೆಕ್ಟ್ರಿಕ್ ವಾಹನ ಉತ್ಪಾದನಾ ಸಾಮರ್ಥ್ಯವನ್ನು ಹೆಚ್ಚಿಸಲು ಮುಂದಾದ Hero Electric

ಹೀರೋ ಎಲೆಕ್ಟ್ರಿಕ್ ಹೆಚ್ಚಿನ ವೇಗದ ಹಾಗೂ ಕಡಿಮೆ ವೇಗದ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಮಾರಾಟ ಮಾಡುತ್ತದೆ. ಈ ಎಲೆಕ್ಟ್ರಿಕ್ ಸ್ಕೂಟರ್ ಗಳನ್ನು ಚಾಲನೆ ಮಾಡಲು ಚಾಲನಾ ಪರವಾನಗಿಯ ಅಗತ್ಯವಿಲ್ಲ. ಹೀರೋ ಎಲೆಕ್ಟ್ರಿಕ್ ಕಂಪನಿಯು ಕಳೆದ ವರ್ಷ ನವೆಂಬರ್‌ನಲ್ಲಿ ಸಿಟಿ ಸ್ಪೀಡ್ ಸರಣಿಯಲ್ಲಿ ಆಪ್ಟಿಮಾ ಹೆಚ್‌ಎಕ್ಸ್, ಫೋಟಾನ್ ಹೆಚ್‌ಎಕ್ಸ್ ಹಾಗೂ ಎನ್‌ವೈಎಕ್ಸ್ ಹೆಚ್‌ಎಕ್ಸ್ ಎಂಬ ಮೂರು ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಬಿಡುಗಡೆ ಮಾಡಿತ್ತು.

ಎಲೆಕ್ಟ್ರಿಕ್ ವಾಹನ ಉತ್ಪಾದನಾ ಸಾಮರ್ಥ್ಯವನ್ನು ಹೆಚ್ಚಿಸಲು ಮುಂದಾದ Hero Electric

ಈ ಎಲ್ಲಾ ಸ್ಕೂಟರ್ ಗಳು 30 ಕಿ.ಮೀಗಿಂತ ಹೆಚ್ಚಿನ ವೇಗವನ್ನು ಹೊಂದಿರುವ ಎಲೆಕ್ಟ್ರಿಕ್ ಸ್ಕೂಟರ್‌ಗಳಾಗಿವೆ. ಈ ಸ್ಕೂಟರ್‌ಗಳನ್ನು ಎಲ್ಲಾ ರೀತಿಯ ನಗರ ರಸ್ತೆಗಳಲ್ಲಿ ಚಲಿಸುವಂತೆ ವಿನ್ಯಾಸಗೊಳಿಸಲಾಗಿದೆ. ಈ ಸ್ಕೂಟರ್ ಗಳನ್ನು ಫ್ಲೈಓವರ್‌ ಹಾಗೂ ಕ್ಲೈಂಬಿಂಗ್ ಪಥಗಳಲ್ಲಿ ಸುಲಭವಾಗಿ ಚಾಲನೆ ಮಾಡಬಹುದು. ಕಂಪನಿಯು ಈ ಸ್ಕೂಟರ್‌ಗಳೊಂದಿಗೆ ಪವರ್ ಹಾಗೂ ಪರ್ಫಾಮೆನ್ಸ್'ಗಳ ಅತ್ಯುತ್ತಮ ಸಂಯೋಜನೆಯನ್ನು ನೀಡಿದೆ.

ಎಲೆಕ್ಟ್ರಿಕ್ ವಾಹನ ಉತ್ಪಾದನಾ ಸಾಮರ್ಥ್ಯವನ್ನು ಹೆಚ್ಚಿಸಲು ಮುಂದಾದ Hero Electric

ಎಲೆಕ್ಟ್ರಿಕ್ ವಾಹನಗಳ ಮಾರಾಟವನ್ನು ಉತ್ತೇಜಿಸಲು, ಕೇಂದ್ರ ಸರ್ಕಾರವು ಎಲ್ಲಾ ರೀತಿಯ ಎಲೆಕ್ಟ್ರಿಕ್ ವಾಹನಗಳಿಗೆ ನೋಂದಣಿ ಹಾಗೂ ನವೀಕರಣ ಶುಲ್ಕದಿಂದ ವಿನಾಯಿತಿ ನೀಡುತ್ತಿದೆ. ಇದರ ಜೊತೆಗೆ ಕೇಂದ್ರ ಸರ್ಕಾರದ ಫೇಮ್ 2 ಯೋಜನೆಯಡಿಯಲ್ಲಿ ನೀಡುವ ಸಬ್ಸಿಡಿ ಹಾಗೂ ಆಯಾ ರಾಜ್ಯ ಸರ್ಕಾರಗಳು ತಮ್ಮ ಎಲೆಕ್ಟ್ರಿಕ್ ವಾಹನ ನೀತಿ ಅಡಿಯಲ್ಲಿ ನೀಡುವ ಸಬ್ಸಿಡಿಗಳ ನಂತರ ಹೀರೋ ಎಲೆಕ್ಟ್ರಿಕ್ ಸ್ಕೂಟರ್ ಬೆಲೆ ಮತ್ತಷ್ಟು ಕಡಿಮೆಯಾಗುತ್ತದೆ.

ಎಲೆಕ್ಟ್ರಿಕ್ ವಾಹನ ಉತ್ಪಾದನಾ ಸಾಮರ್ಥ್ಯವನ್ನು ಹೆಚ್ಚಿಸಲು ಮುಂದಾದ Hero Electric

ಹೀರೋ ಎಲೆಕ್ಟ್ರಿಕ್ ಭಾರತದಾದ್ಯಂತ ಎಲೆಕ್ಟ್ರಿಕ್ ವಾಹನಗಳಿಗೆ ಚಾರ್ಜಿಂಗ್ ಮೂಲಸೌಕರ್ಯವನ್ನು ಒದಗಿಸಲು ಮುಂದಾಗುತ್ತಿದೆ. ಕಂಪನಿಯು ಮಾಸಿವ್ ಮೊಬಿಲಿಟಿ ಸಹಭಾಗಿತ್ವದಲ್ಲಿ ದೇಶಾದ್ಯಂತ 10,000 ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪಿಸುವ ಗುರಿಯನ್ನು ಹೊಂದಿದೆ. ಹೀರೋ ಎಲೆಕ್ಟ್ರಿಕ್ ಭಾರತದಾದ್ಯಂತ ಸುಮಾರು 1,650 ಚಾರ್ಜಿಂಗ್ ಕೇಂದ್ರಗಳನ್ನು ನಿರ್ವಹಿಸುತ್ತಿದೆ. ಕಂಪನಿಯು ಮುಂದಿನ ವರ್ಷದ ಅಂತ್ಯದ ವೇಳೆಗೆ ಈ ಸಂಖ್ಯೆಯನ್ನು 20,000 ಕ್ಕೆ ಏರಿಸುವ ಗುರಿಯನ್ನು ಹೊಂದಿದೆ.

ಎಲೆಕ್ಟ್ರಿಕ್ ವಾಹನ ಉತ್ಪಾದನಾ ಸಾಮರ್ಥ್ಯವನ್ನು ಹೆಚ್ಚಿಸಲು ಮುಂದಾದ Hero Electric

ಹೀರೋ ಎಲೆಕ್ಟ್ರಿಕ್ ಈಗ ದೇಶದಲ್ಲಿರುವ ಪ್ರಮುಖ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ತಯಾರಕ ಕಂಪನಿಗಳಲ್ಲಿ ಒಂದಾಗಿದೆ. ಕಂಪನಿಯು ಹಲವಾರು ಸ್ಕೂಟರ್ ಮಾದರಿಗಳನ್ನು ಉತ್ಪಾದಿಸುತ್ತದೆ. ಜೊತೆಗೆ ಕಂಪನಿಯು ದೇಶದಲ್ಲಿ ಎಲೆಕ್ಟ್ರಿಕ್ ವಾಹನಗಳಿಗೆ ಮೂಲಸೌಕರ್ಯವನ್ನು ನಿರ್ಮಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ. ಕಂಪನಿಯು ಶೀಘ್ರದಲ್ಲಿಯೇ ಬೆಂಗಳೂರು ಮೂಲದ ಚಾರ್ಜರ್ ಕಂಪನಿಯ ಸಹಯೋಗದ ಮೂಲಕ 30 ನಗರಗಳಲ್ಲಿ 10,000 ಚಾರ್ಜಿಂಗ್ ಕೇಂದ್ರಗಳನ್ನು ತೆರೆಯಲಿದೆ.

ಎಲೆಕ್ಟ್ರಿಕ್ ವಾಹನ ಉತ್ಪಾದನಾ ಸಾಮರ್ಥ್ಯವನ್ನು ಹೆಚ್ಚಿಸಲು ಮುಂದಾದ Hero Electric

ಇದು ಹೀರೋ ಎಲೆಕ್ಟ್ರಿಕ್ ಡೀಲರ್‌ಶಿಪ್‌ಗಳ ಚಾರ್ಜರ್‌ಗಳನ್ನು ಸಹ ಒಳಗೊಂಡಿರುತ್ತದೆ. ಹೀರೋ ಎಲೆಕ್ಟ್ರಿಕ್‌ನ ಚಾರ್ಜಿಂಗ್ ಕೇಂದ್ರಗಳಿರುವ ಸ್ಥಳಗಳನ್ನು ಮೊಬೈಲ್ ಅಪ್ಲಿಕೇಶನ್ ಹಾಗೂ ವೆಬ್‌ಸೈಟ್ ಮೂಲಕ ಕಂಡುಹಿಡಿಯಬಹುದು. ಭಾರತದಲ್ಲಿ ಅಥೆರ್ ಎನರ್ಜಿ, ಓಕಿನಾವಾ ಆಟೋಟೆಕ್, ಓಲಾ ಎಲೆಕ್ಟ್ರಿಕ್, ಆಂಪಿಯರ್ ಹಾಗೂ ಸಿಂಪಲ್ ಎನರ್ಜಿ ಸೇರಿದಂತೆ ಇನ್ನೂ ಹಲವು ಕಂಪನಿಗಳು ಹೀರೋ ಎಲೆಕ್ಟ್ರಿಕ್‌ನ ಪ್ರಮುಖ ಪ್ರತಿಸ್ಪರ್ಧಿಗಳಾಗಿವೆ.

ಎಲೆಕ್ಟ್ರಿಕ್ ವಾಹನ ಉತ್ಪಾದನಾ ಸಾಮರ್ಥ್ಯವನ್ನು ಹೆಚ್ಚಿಸಲು ಮುಂದಾದ Hero Electric

ಇವಿಗಳಿಗೆ ಮೂಲ ಸೌಕರ್ಯ ಒದಗಿಸಲು ಹಲವಾರು ಸ್ಟಾರ್ಟ್ಅಪ್ ಕಂಪನಿಗಳು ಇವಿ ಚಾರ್ಜಿಂಗ್ ಸೌಲಭ್ಯವನ್ನು ಹೆಚ್ಚಿಸುತ್ತಿವೆ. ಈಗ ಇವಿ ದ್ವಿಚಕ್ರ ವಾಹನ ಮಾರಾಟದಲ್ಲಿ ಮುಂಚೂಣಿಯಲ್ಲಿರುವ ಹೀರೋ ಎಲೆಕ್ಟ್ರಿಕ್ ಹಾಗೂ ಖಾಸಗಿ ಬಳಕೆಯ ಇವಿ ಚಾರ್ಜಿಂಗ್ ಸೌಲಭ್ಯವನ್ನು ಒದಗಿಸುವ ಚಾರ್ಜರ್ ಕಂಪನಿಗಳು ಜೊತೆಗೂಡಿ ಬೃಹತ್ ಪ್ರಮಾಣದಲ್ಲಿ ಇವಿ ಚಾರ್ಜಿಂಗ್ ನಿಲ್ದಾಣಗಳ ಜಾಲ ತೆರೆಯುವ ಯೋಜನೆಗೆ ಚಾಲನೆ ನೀಡಿವೆ.

ಎಲೆಕ್ಟ್ರಿಕ್ ವಾಹನ ಉತ್ಪಾದನಾ ಸಾಮರ್ಥ್ಯವನ್ನು ಹೆಚ್ಚಿಸಲು ಮುಂದಾದ Hero Electric

ಭಾರತದಲ್ಲಿ ಹೆಚ್ಚುತ್ತಿರುವ ಇವಿ ವಾಹನಗಳಿಗೆ ಪೂರಕವಾಗಿ ವಿವಿಧ ಖಾಸಗಿ ಮತ್ತು ಸರ್ಕಾರಿ ಸಂಸ್ಥೆಗಳು ಇವಿ ವಾಹನಗಳ ಚಾರ್ಜಿಂಗ್ ನಿಲ್ದಾಣಗಳ ನಿರ್ಮಾಣ ಪ್ರಕ್ರಿಯೆಯನ್ನು ಹೆಚ್ಚಿಸಿದ್ದು, ಚಾರ್ಜಿಂಗ್ ಕೇಂದ್ರಗಳ ಹೆಚ್ಚಳಕ್ಕೆ ಪ್ರಮುಖ ಕಂಪನಿಗಳು ವಿಶೇಷ ಆಸಕ್ತಿ ವಹಿಸಿವೆ.

Most Read Articles

Kannada
English summary
Hero electric to increase production to 5 million units in next five years details
Story first published: Wednesday, December 15, 2021, 16:45 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X