ದುಬಾರಿಯಾಯ್ತು ಜನಪ್ರಿಯ ಹೀರೋ ಎಕ್ಸ್‌ಪಲ್ಸ್ 200 ಬೈಕ್

ಭಾರತದ ಅತಿದೊಡ್ಡ ದ್ವಿಚಕ್ರ ವಾಹನ ತಯಾರಕ ಕಂಪನಿಯಾದ ಹೀರೋ ಮೋಟೊಕಾರ್ಪ್ ತನ್ನ ಸರಣಿಯಲ್ಲಿರುವ ಬೈಕುಗಳ ಮತ್ತು ಸ್ಕೂಟರ್‌ಗಳ ಬೆಲೆಗಳನ್ನು ಭಾರತೀಯ ಮಾರುಕಟ್ಟೆಯಲ್ಲಿ ಪರಿಷ್ಕರಿಸಿದೆ. ಇದರ ಪರಿಣಾಮವಾಗಿ ಹೀರೋ ಸರಣಿಯಲ್ಲಿರುವ ಜನಪ್ರಿಯ ಎಕ್ಸ್‌ಪಲ್ಸ್ 200 ಬೈಕ್ ಕೂಡ ದುಬಾರಿಯಾಗಿದೆ.

ದುಬಾರಿಯಾಯ್ತು ಹೊಸ ಹೀರೋ ಎಕ್ಸ್‌ಪಲ್ಸ್ 200 ಬೈಕ್

ಹೀರೋ ಮೋಟೊಕಾರ್ಪ್ ಕಂಪನಿಯು ತನ್ನ ಬಿಎಸ್-6 ಎಕ್ಸ್‌ಪಲ್ಸ್ 200 ಬೈಕನ್ನು ಭಾರತೀಯ ಮಾರುಕಟ್ಟೆಯಲ್ಲಿ ಕಳೆದ ವರ್ಷದ ಜುಲೈ ತಿಂಗಳಲ್ಲಿ ಬಿಡುಗಡೆಗೊಳಿಸಿತ್ತು. ಇದೀಗ ಹೀರೋ ಕಂಪನಿಯು ಎಕ್ಸ್‌ಪಲ್ಸ್ 200 ಬೈಕಿನ ಬೆಲೆಯನ್ನು ರೂ.1500 ಗಳವರೆಗೆ ಹೆಚ್ಚಿಸಿದೆ. ಬೆಲೆ ಏರಿಕೆಯ ಬಳಿಕ, ಪ್ರಸ್ತುತ ಹೀರೋ ಎಕ್ಸ್‌ಪಲ್ಸ್ 200 ಬೈಕಿನ ಆರಂಭಿಕ ಬೆಲೆಯು ದೆಹಲಿ ಎಕ್ಸ್ ಶೋರೂಂ ಪ್ರಕಾರ ರೂ.113,730 ಗಳಾಗಿದೆ.

ದುಬಾರಿಯಾಯ್ತು ಹೊಸ ಹೀರೋ ಎಕ್ಸ್‌ಪಲ್ಸ್ 200 ಬೈಕ್

ಹೊಸ ಎಕ್ಸ್‌ಪಲ್ಸ್ 200 ಬೈಕಿನ 199.6 ಸಿಸಿ ಎಂಜಿನ್‌ ಅನ್ನು ಹೊಂದಿದೆ. ಈ ಎಂಜಿನ್ 8,500 ಆರ್‌ಪಿಎಂನಲ್ಲಿ 17.8 ಬಿಹೆಚ್‌ಪಿ ಪವರ್ ಮತ್ತು 6,400 ಆರ್‌ಪಿಎಂನಲ್ಲಿ 16.4 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ ಐದು-ಸ್ಪೀಡ್ ಗೇರ್‌ಬಾಕ್ಸ್‌ ಅನ್ನು ಜೋಡಿಸಲಾಗಿದೆ.

MOST READ: ದುಬಾರಿಯಾಯ್ತು ಜನಪ್ರಿಯ ಬಿಎಸ್-6 ಯಮಹಾ ಎಂಟಿ-15 ಬೈಕ್

ದುಬಾರಿಯಾಯ್ತು ಹೊಸ ಹೀರೋ ಎಕ್ಸ್‌ಪಲ್ಸ್ 200 ಬೈಕ್

ಹೊಸ ಮಾದರಿಯಲ್ಲಿ ಏರ್/ಆಯಿಲ್-ಕೂಲಿಂಗ್ ಮತ್ತು ಫ್ಯೂಯಲ್ ಇಂಜೆಕ್ಷನ್ ಅನ್ನು ಸ್ಟ್ಯಾಂಡರ್ಡ್ ಆಗಿ ಅಳವಡಿಸಲಾಗಿದೆ. ಹೀರೋ ಎಕ್ಸ್‌ಪಲ್ಸ್ 200 ಬೈಕನ್ನು ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸಿದ ಬಳಿಕ ಹಿಂದಿನ ಮಾದರಿಗಿಂತ ತೂಕ ಹೆಚ್ಚಾಗಿದೆ. ಹೊಸ ಹೀರೋ ಎಕ್ಸ್‌ಪಲ್ಸ್ 200 ಬೈಕ್ 157 ಕೆಜೆ ತೂಕವನ್ನು ಹೊಂದಿದೆ.

ದುಬಾರಿಯಾಯ್ತು ಹೊಸ ಹೀರೋ ಎಕ್ಸ್‌ಪಲ್ಸ್ 200 ಬೈಕ್

ಬಿಎಸ್-6 ಎಕ್ಸ್‌ಪಲ್ಸ್ ಬೈಕಿನಲ್ಲಿ ಎಕ್ಸಾಸ್ಟ್ ಪೈಪಿನ ಸ್ಥಾನವನ್ನು ಬದಲಾಯಿಸಲಾಗಿದೆ. ಈ ಬೈಕಿನ ಎಂಜಿನ್ ಬೆಲ್ಲಿ-ಪ್ಯಾನ್ ಅನ್ನು ಮರುವಿನ್ಯಾಸಗೊಳಿಸಲಾಗಿದೆ. ಇದು ಈ ಬೈಕಿನ ಗ್ರೌಂಡ್ ಕ್ಲಿಯರೆನ್ಸ್ ಮೇಲೆ ಪರಿಣಾಮ ಬೀರಬಹುದೇ ಎಂದು ನೋಡಬೇಕಾಗಿದೆ. ಬಿಎಸ್-6 ಎಕ್ಸ್‌ಪಲ್ಸ್ ಮೊದಲಿನಂತೆಯೇ 220 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಅನ್ನು ಹೊಂದಿದೆ.

MOST READ: ಹೊಸ ಬಣ್ಣದ ಆಯ್ಕೆಯನ್ನು ಪಡೆದುಕೊಂಡ 2021ರ ಕವಾಸಕಿ ನಿಂಜಾ 1000 ಎಸ್‌ಎಕ್ಸ್ ಬೈಕ್

ದುಬಾರಿಯಾಯ್ತು ಹೊಸ ಹೀರೋ ಎಕ್ಸ್‌ಪಲ್ಸ್ 200 ಬೈಕ್

ಹೊಸ ಎಕ್ಸ್‌ಪಲ್ಸ್ 200 ಬೈಕಿನ ಸಸ್ಪೆಂಕ್ಷನ್ ಗಾಗಿ ಮುಂಭಾಗದಲ್ಲಿ 37 ಎಂಎಂ ಲಾಂಗ್-ಟ್ರಾವೆಲ್ ಟೆಲಿಸ್ಕೋಪಿಕ್ ಫೋರ್ಕ್‌ಗಳನ್ನು ಮತ್ತು ಹಿಂಭಾಗದಲ್ಲಿ 10-ಹಂತದ ಹೊಂದಾಣಿಕೆ ಮಾಡಬಹುದಾದ ಮೊನೊ-ಶಾಕ್ ಅನ್ನು ಹೊಂದಿರುತ್ತದೆ.

ದುಬಾರಿಯಾಯ್ತು ಹೊಸ ಹೀರೋ ಎಕ್ಸ್‌ಪಲ್ಸ್ 200 ಬೈಕ್

ಬ್ರೇಕಿಂಗ್ ಸಿಸ್ಟಂಗಾಗಿ ಮುಂಭಾಗದಲ್ಲಿ 276 ಎಂಎಂ ಪೆಟಲ್ ಡಿಸ್ಕ್ ಮತ್ತು ಹಿಂಭಾಗದಲ್ಲಿ 220 ಎಂಎಂ ಪೆಟಲ್ ಡಿಸ್ಕ್ ಬ್ರೇಕ್ ಅನ್ನು ಅಳವಡಿಸಲಾಗಿದೆ. ಇದರೊಂದಿಗೆ ಸಿಂಗಲ್-ಚಾನೆಲ್ ಎಬಿಎಸ್ ಅನ್ನು ಕೂಡ ಅಳವಡಿಸಲಾಗಿದೆ.

MOST READ: ಬಿಡುಗಡೆಯಾಯ್ತು ಹೊಸ ಕವಾಸಕಿ ವಲ್ಕನ್ ಎಸ್ ಬೈಕ್

ದುಬಾರಿಯಾಯ್ತು ಹೊಸ ಹೀರೋ ಎಕ್ಸ್‌ಪಲ್ಸ್ 200 ಬೈಕ್

ಬಿಎಸ್-6 ಹೀರೋ ಎಕ್ಸ್‌ಪಲ್ಸ್ 200 ಬೈಕಿನಲ್ಲಿ ಎಲ್‌ಇಡಿ ಹೆಡ್‌ಲೈಟ್, ಎಲ್‌ಇಡಿ ಟೈಲ್‌ಲೈಟ್, ಬ್ಲೂಟೂತ್ ಕನೆಕ್ಟ್ ಆಗಿರುವ ಇನ್ಸ್ ಟ್ರೂಮೆಂಟ್ ಕನ್ಸೋಲ್ ಮತ್ತು ಮತ್ತು ಟರ್ನ್-ಬೈ-ಟರ್ನ್ ನ್ಯಾವಿಗೇಷನ್ ಅನ್ನು ಹೊಂದಿದೆ.

ದುಬಾರಿಯಾಯ್ತು ಹೊಸ ಹೀರೋ ಎಕ್ಸ್‌ಪಲ್ಸ್ 200 ಬೈಕ್

ಹೀರೋ ಎಕ್ಸ್‌ಪಲ್ಸ್ 200 ಬೈಕ್ ವೈಟ್, ಮ್ಯಾಟ್ ಗ್ರೀನ್, ಮ್ಯಾಟ್ ಗ್ರೇ, ಸ್ಪೋರ್ಟ್ಸ್ ರೆಡ್ ಮತ್ತು ಪ್ಯಾಂಥರ್ ಬ್ಲ್ಯಾಕ್ ಎಂಬ ಐದು ಬಣ್ಣಗಳ ಆಯ್ಕೆಯಲ್ಲಿ ಲಭ್ಯವಿದೆ. ಈ ಹೀರೋ ಎಕ್ಸ್‌ಪಲ್ಸ್ 200 ಬೈಕ್ ಹೆಚ್ಚಾಗಿ ಯುವ ಗ್ರಾಹಕರನ್ನು ಸೆಳೆಯುತ್ತದೆ.

Article Published On: Tuesday, January 5, 2021, 20:06 [IST]
English summary
Hero Xpulse 200 Price Increased. Read In Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+