ಹೀರೋ ಡೆಸ್ಟಿನಿ 125 ಮತ್ತು ಮ್ಯಾಸ್ಟ್ರೊ ಎಡ್ಜ್ 110 ಸ್ಪೆಷಲ್ ಎಡಿಷನ್ ಬಿಡುಗಡೆ
ಹೀರೋ ಮೋಟೊಕಾರ್ಪ್ ಇತ್ತೀಚೆಗೆ ಬೈಕ್ ಉತ್ಪಾದನೆಯಲ್ಲಿ ಹೊಸ ಮೈಲಿಗಲ್ಲು ಸಾಧಿಸುವ ಮೂಲಕ 10 ಕೋಟಿ(100 ಮಿಲಿಯನ್) ಬೈಕ್ ಉತ್ಪಾದನೆಯನ್ನು ಪೂರ್ಣಗೊಳಿಸಿದ್ದು, ಹೊಸ ಮೈಲಿಗಲ್ಲು ಸಂಭ್ರಮಕ್ಕಾಗಿ ಪ್ರಮುಖ ಬೈಕ್ ಮತ್ತು ಸ್ಕೂಟರ್ ಮಾದರಿಗಳಲ್ಲಿ ಸ್ಪೆಷಲ್ ಎಡಿಷನ್‌ಗಳನ್ನು ಬಿಡುಗಡೆ ಮಾಡಿದೆ.

ಪ್ರಸ್ತುತ ಮಾರುಕಟ್ಟೆಯಲ್ಲಿ ಎಕ್ಸ್‌ಟ್ರಿಮ್ 160ಆರ್, ಎಕ್ಸ್‌ಪಲ್ಸ್ 200, ಎಕ್ಸ್‌ಟ್ರಿಮ್ 200ಎಸ್, ಎಕ್ಸ್‌ಪಲ್ಸ್ 200ಟಿ, ಪ್ಯಾಶನ್ ಪ್ರೋ, ಸ್ಲೈಂಡರ್ ಐ ಸ್ಮಾರ್ಟ್, ಗ್ಲ್ಯಾಮರ್, ಸ್ಲೈಂಡರ್ ಪ್ಲಸ್, ಹೆಚ್‍ಎಫ್ ಡಿಲಕ್ಸ್, ಸೂಪರ್ ಸ್ಲೈಂಡರ್, ಡೆಸ್ಟಿನಿ 125, ಮ್ಯಾಸ್ಟ್ರೊ ಎಡ್ಜ್ 125, ಮ್ಯಾಸ್ಟ್ರೊ ಎಡ್ಜ್ 110, ಪ್ರೆಷರ್ ಪ್ಲಸ್ ಆವೃತ್ತಿಗಳನ್ನು ಮಾರಾಟ ಮಾಡುತ್ತಿರುವ ಹೀರೋ ಮೊಟೋಕಾರ್ಪ್ ಕಂಪನಿಯು 10 ಕೋಟಿ ಬೈಕ್ ಉತ್ಪಾದನಾ ಸಂಭ್ರಮಕ್ಕಾಗಿ ಪ್ರಮುಖ ಬೈಕ್ ಮತ್ತು ಸ್ಕೂಟರ್‌ಗಳಲ್ಲಿ ಸ್ಪೆಷಲ್ ಎಡಿಷನ್‌ಗಳನ್ನು ಪರಿಚಯಿಸಿದೆ.

ಪ್ರೀಮಿಯಂ ಮಾದರಿಯಾದ ಎಕ್ಸ್‌ಟ್ರಿಮ್ 160ಆರ್ ಮತ್ತು ಎಂಟ್ರಿ ಲೆವಲ್ ಮಾದರಿಗಳಾದ ಸ್ಪ್ಲೆಂಡರ್ ಪ್ಲಸ್ ಮತ್ತು ಪ್ಯಾಶನ್ ಪ್ರೊ ಮಾದರಿಗಳಲ್ಲಿ ಈಗಾಗಲೇ ಸ್ಪೆಷಲ್ ಎಡಿಷನ್ ಬಿಡುಗಡೆ ಮಾಡಿರುವ ಹೀರೋ ಕಂಪನಿಯು ಇದೀಗ ಡೆಸ್ಟಿನಿ 125 ಮತ್ತು ಮ್ಯಾಸ್ಟ್ರೊ ಎಡ್ಜ್ 110 ಸ್ಪೆಷಲ್ ಸ್ಕೂಟರ್‌ಗಳಲ್ಲಿ ಹೊಸ ಎಡಿಷನ್ ಪರಿಚಯಿಸಿದೆ.

ಡೆಸ್ಟಿನಿ 125 ಮತ್ತು ಮ್ಯಾಸ್ಟ್ರೊ ಎಡ್ಜ್ 110 ಸ್ಪೆಷಲ್ ಎಡಿಷನ್‌ಗಳು ಆಕರ್ಷಕ ಗ್ರಾಫಿಕ್‌ನೊಂದಿಗೆ ಹೊಸ ಮೈಲಿಗಲ್ಲು ಸಾಧನೆಯ 100 ಮಿಲಿಯನ್ ಬ್ಯಾಡ್ಜ್ ಪಡೆದುಕೊಂಡಿದ್ದು, ಹೊಸ ಸ್ಕೂಟರ್‌ಗಳ ಬೆಲೆಯನ್ನು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಮ್ಯಾಸ್ಟ್ರೊ ಎಡ್ಜ್ 110 ಮಾದರಿಗೆ ರೂ. 65,250 ಮತ್ತು ಡೆಸ್ಟಿನಿ 125 ಮಾದರಿಗೆ ರೂ. 72,250 ಬೆಲೆ ನಿಗದಿ ಮಾಡಲಾಗಿದೆ.

ಹೊಸ ಎಡಿಷನ್‌ಗಳ ಬೆಲೆ ಸ್ಟ್ಯಾಂಡರ್ಡ್ ಮಾದರಿಗಿಂತಲೂ ರೂ. 1,200ರಿಂದ ರೂ.1,500 ಹೆಚ್ಚಳವಾಗಿದ್ದು, ಸ್ಪೆಷಲ್ ಎಡಿಷನ್‌ಗಳಲ್ಲಿ ಹೊಸ ಪೇಟಿಂಗ್ ಮತ್ತು ಬ್ರಾಂಡ್ ಅಂಬಾಸಿಡರ್ ನಟ ಶಾರುಖ್ ಖಾನ್ ಹಸ್ತಾಕ್ಷರ ಹೊಂದಿರುವ ಬ್ಯಾಡ್ಜ್ ಹೊರತುಪಡಿಸಿ ಸ್ಪೆಷಲ್ ಎಡಿಷನ್‌ಗಳು ಸ್ಟ್ಯಾಂಡರ್ಡ್ ಮಾದರಿಯಲ್ಲೇ ಬಹುತೇಕ ತಾಂತ್ರಿಕ ಅಂಶಗಳನ್ನು ಪಡೆದುಕೊಂಡಿವೆ.

ಡೆಸ್ಟಿನಿ 125 ಮಾದರಿಯು 124.6 ಸಿಸಿ ಮತ್ತು ಮ್ಯಾಸ್ಟ್ರೊ ಎಡ್ಜ್ 110 ಮಾದರಿಯು 110.9 ಸಿಸಿ ಎಂಜಿನ್ ಹೊಂದಿದ್ದು, ಹೊಸ ಸ್ಕೂಟರ್‌ಗಳಲ್ಲಿ ವೆರೊಮ್ಯಾಟಿಕ್ ಡ್ರೈವ್ ಸಿಸ್ಟಂ ಅನ್ನು ಜೋಡಿಸಲಾಗಿದೆ.
MOST READ: ಪ್ರತಿ ಚಾರ್ಜ್‌ಗೆ ಬರೋಬ್ಬರಿ 240ಕಿ.ಮೀ ಮೈಲೇಜ್ ನೀಡುವ ಇವಿ ಸ್ಕೂಟರ್ ಬಿಡುಗಡೆ ಮಾಡಲಿದೆ ಓಲಾ

ಇನ್ನು ಹೀರೋ ಮೋಟೊಕಾರ್ಪ್ ಕಂಪನಿಯು ಭಾರತದಲ್ಲಿ ಬೈಕ್ ಉತ್ಪಾದನೆಯ ಆರಂಭಿಸಿದ 36 ವರ್ಷಗಳ ಅವಧಿಯಲ್ಲಿ ಇದುವರೆಗೆ ಬರೋಬ್ಬರಿ 10 ಕೋಟಿ ಬೈಕ್ ಉತ್ಪಾದನೆಯನ್ನು ಪೂರ್ಣಗೊಳಿಸುವ ಮೂಲಕ ಹೊಸ ದಾಖಲೆಗೆ ಕಾರಣವಾಗಿದ್ದು, ಪ್ರತಿ 4.5 ಸೇಕೆಂಡುಗಳಲ್ಲಿ 1 ಬೈಕ್ ಮಾದರಿಯನ್ನು ನಿರ್ಮಾಣ ಮಾಡುವಷ್ಟು ಅತಿ ದೊಡ್ಡ ಬೈಕ್ ಕಂಪನಿಯಾಗಿ ಗುರುತಿಸಿಕೊಂಡಿದೆ.

1985ರಲ್ಲಿ ಹರಿಯಾಣದ ಧರುಹೆರ ಎಂಬಲ್ಲಿ ಮೊದಲ ಬೈಕ್ ಉತ್ಪಾದನಾ ಘಟಕಕ್ಕೆ ಚಾಲನೆ ನೀಡಿದ್ದ ಹೀರೋ-ಹೋಂಡಾ ಕಂಪನಿಯು ಸಹಭಾಗಿತ್ವದ ಯೋಜನೆಯ ಅಡಿಯಲ್ಲಿ ಮೊದಲ ಬೈಕ್ ಮಾದರಿಯಾಗಿ ಸಿಡಿ100 ಮಾದರಿಯನ್ನು ಮಾರುಕಟ್ಟೆಗೆ ಪರಿಚಯಿಸಿದ್ದವು.
MOST READ: ಅತಿ ಹೆಚ್ಚು ಮೈಲೇಜ್ ನೀಡುವ ಟಾಪ್ 10 ಬಜೆಟ್ ಬೆಲೆಯ ಬೈಕುಗಳಿವು..!

2010ರಲ್ಲಿ ಹೋಂಡಾದಿಂದ ಸ್ವತಂತ್ರವಾಗಿ ಕಾರ್ಯಾಚರಣೆ ಆಂಭಿಸಿದ ಹೀರೋ ಮೋಟೋಕಾರ್ಪ್ ಕಂಪನಿಯು ಸ್ವತಂತ್ರ ಕಾರ್ಯಾಚರಣೆ ಆರಂಭಿಸಿ 2013ರ ಹೊತ್ತಿಗೆ 5 ಕೋಟಿ ಬೈಕ್ ಉತ್ಪಾದನಾ ಗುರಿ ಸಾಧಿಸಿತ್ತು. ತದನಂತರದ 8 ವರ್ಷಗಳಲ್ಲಿ 5 ಕೋಟಿ ಬೈಕ್ ಮಾರಾಟ ಮಾಡಿದ್ದು, ಗ್ರಾಹಕರ ಬೇಡಿಕೆಯೆಂತೆ ಹಲವಾರು ವಾಹನಗಳನ್ನು ಮಾರಾಟ ಮಾಡುತ್ತಿದೆ.


Click it and Unblock the Notifications