ಕೋವಿಡ್ ಭೀತಿ: ಬೈಕ್ ಉತ್ಪಾದನೆಯನ್ನು ತಾತ್ಕಾಲಿಕವಾಗಿ ಬಂದ್ ಮಾಡಿದ ಹೀರೋ ಮೋಟೊಕಾರ್ಪ್

ದೇಶಾದ್ಯಂತ ಕೋವಿಡ್ 2ನೇ ಅಲೆ ಹೆಚ್ಚಿರುವುದರಿಂದ ವಿವಿಧ ರಾಜ್ಯಗಳಲ್ಲಿ ಹಲವು ಕಠಿಣ ಕ್ರಮಗಳೊಂದಿಗೆ ಭಾಗಶಃ ಲಾಕ್ಡೌನ್, ಕರ್ಫ್ಯೂ ಕೈಗೊಳ್ಳಲಾಗುತ್ತಿದ್ದು, ಹೊಸ ಸುರಕ್ಷಾ ಕ್ರಮಗಳ ಪರಿಣಾಮ ಆಟೋ ಉದ್ಯಮ ಮತ್ತೆ ನೆಲಕಚ್ಚುವ ಭೀತಿ ಎದುರಿಸುತ್ತಿದೆ.

ಬೈಕ್ ಉತ್ಪಾದನೆಯನ್ನು ತಾತ್ಕಾಲಿಕವಾಗಿ ಬಂದ್ ಮಾಡಿದ ಹೀರೋ ಮೋಟೊಕಾರ್ಪ್

ಕಳೆದ ವರ್ಷದ ಲಾಕ್‌ಡೌನ್‌ ಹೊಡೆತಕ್ಕೆ ಸಿಲುಕಿ ಸುಧಾರಿಸಿಕೊಳ್ಳುತ್ತಿದ್ದ ಆಟೋ ಉದ್ಯಮವು ಇದೀಗ ಮತ್ತೆ ಲಾಕ್‌ಡೌನ್ ಭೀತಿ ಎದುರಿಸುತ್ತಿದ್ದು, ಮಹಾರಾಷ್ಟ್ರದಲ್ಲಿ ನೆಲೆಗೊಂಡಿರುವು ಹಲವು ಆಟೋ ಕಂಪನಿಗಳು ಈಗಾಗಲೇ ಕನಿಷ್ಠ ಪ್ರಮಾಣದ ಉದ್ಯೋಗಿಗಳೊಂದಿಗೆ ಕಾರ್ಯನಿರ್ವಹಿಸುತ್ತಿವೆ. ಹೊಸ ವಾಹನಗಳಿಗೆ ಬೇಡಿಕೆ ಹೆಚ್ಚುತ್ತಿರುವ ಸಂದರ್ಭದಲ್ಲೇ ಮತ್ತೆ ಉತ್ಪಾದನೆಯು ತಗ್ಗಿರುವುರುವುದು ಭಾರೀ ನಷ್ಟ ಎದುರಿಸುವ ಭೀತಿ ಎದುರಾಗಿದ್ದು, ಹೊಸ ಸುರಕ್ಷಾ ಕ್ರಮ ಕೈಗೊಂಡು ಉತ್ಪಾದನೆ ಕೈಗೊಳ್ಳುತ್ತಿವೆ.

ಬೈಕ್ ಉತ್ಪಾದನೆಯನ್ನು ತಾತ್ಕಾಲಿಕವಾಗಿ ಬಂದ್ ಮಾಡಿದ ಹೀರೋ ಮೋಟೊಕಾರ್ಪ್

ಪುಣೆ ಸುತ್ತುಮತ್ತ ನೆಲೆಗೊಂಡಿರುವ ದೇಶದ ಪ್ರಮುಖ ಆಟೋ ಕಂಪನಿಗಳು ಶೇ.50ಕ್ಕಿಂತಲೂ ಕಡಿಮೆ ಪ್ರಮಾಣದ ಉದ್ಯೋಗಿಗಳೊಂದಿಗೆ ಕಾರ್ಯನಿರ್ವಹಣೆ ಮಾಡುತ್ತಿದ್ದು, ವಾಹನ ಮಾರಾಟದಲ್ಲೂ ಕೂಡಾ ಹೊಸ ತಂತ್ರಗಳನ್ನು ಅಳವಡಿಸಿಕೊಂಡು ವೈರಸ್ ಹರಡುವಿಕೆ ತಡೆಯೊಂದಿಗೆ ಉದ್ಯಮ ವ್ಯವಹಾರ ಕೈಗೊಳ್ಳುತ್ತಿವೆ.

ಬೈಕ್ ಉತ್ಪಾದನೆಯನ್ನು ತಾತ್ಕಾಲಿಕವಾಗಿ ಬಂದ್ ಮಾಡಿದ ಹೀರೋ ಮೋಟೊಕಾರ್ಪ್

ಇದರ ನಡುವೆ ದೇಶದ ಅತಿದೊಡ್ಡ ಬೈಕ್ ಉತ್ಪಾದನಾ ಕಂಪನಿಯಾಗಿರುವ ಹೀರೋ ಮೋಟೊಕಾರ್ಪ್ ಪರಿಸ್ಥಿತಿಗೆ ಅನುಗುಣವಾಗಿ ಹೊಸ ವಾಹನ ಉತ್ಪಾದನೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವುದಾಗಿ ತಿಳಿಸಿದ್ದು, 4 ನಾಲ್ಕು ದಿನಗಳ ಕಾಲ ಸಂಪೂರ್ಣವಾಗಿ ಹೊಸ ವಾಹನ ಉತ್ಪಾದನೆಯನ್ನು ಬಂದ್ ಮಾಡಲಿದೆ.

ಬೈಕ್ ಉತ್ಪಾದನೆಯನ್ನು ತಾತ್ಕಾಲಿಕವಾಗಿ ಬಂದ್ ಮಾಡಿದ ಹೀರೋ ಮೋಟೊಕಾರ್ಪ್

ಹೊಸ ಸುರಕ್ಷಾ ಮಾರ್ಗಸೂಚಿಗೆ ಅನುಗುಣವಾಗಿ ವಾಹನ ಉತ್ಪಾದನಾ ಘಟಕವನ್ನು ಸ್ಯಾನಿಟೈಜ್ ಮಾಡಲು ನಿರ್ಧರಿಸಿದ್ದು, ಉತ್ಪಾದನೆ ಹೊರತುಪಡಿಸಿ ಕಾರ್ಪೊರೇಟ್ ವ್ಯವಹಾರಗಳಲ್ಲಿ ಯಾವುದೇ ಬದಲಾವಣೆಯಿರುವುದಿಲ್ಲ ಎಂದಿದೆ. ಕಾರ್ಪೊರೇಟ್ ವ್ಯವಹಾರಗಳನ್ನು ಸಂಪೂರ್ಣವಾಗಿ ವರ್ಕ್ ಫ್ರಮ್ ಹೋಂ ವಿಧಾನವನ್ನು ಅಳವಡಿಸಿಕೊಂಡಿರುವುದರಿಂದ ಉದ್ಯಮ ವ್ಯವಹಾರಗಳಿಗೆ ತೊಂದರೆಯಿಲ್ಲ ಎಂದಿರುವ ಹೀರೋ ಮೋಟೊಕಾರ್ಪ್ ಕಂಪನಿಯು ಮಾರಾಟ ಮಳಿಗೆಗಳಲ್ಲೂ ಅತಿ ಕಡಿಮೆ ಉದ್ಯೋಗಿಗಳೊಂದಿಗೆ ಆನ್‌ಲೈನ್ ವ್ಯವಹಾರಗಳನ್ನು ಕೈಗೊಳ್ಳುತ್ತಿದೆ.

ಬೈಕ್ ಉತ್ಪಾದನೆಯನ್ನು ತಾತ್ಕಾಲಿಕವಾಗಿ ಬಂದ್ ಮಾಡಿದ ಹೀರೋ ಮೋಟೊಕಾರ್ಪ್

ಕೋವಿಡ್‌ನಿಂದಾಗಿ ಮುಂಜಾಗ್ರತ ಕ್ರಮವಾಗಿ ಲಭ್ಯವಿರುವ ಉದ್ಯೋಗಿಗಳೊಂದಿಗೆ ಡಿಜಿಟಲ್ ವ್ಯವಹಾರಗಳಿಗೆ ಹೆಚ್ಚಿನ ಒತ್ತು ನೀಡುತ್ತಿದ್ದು, ಆಟೋ ಉದ್ಯಮವು ಕಳೆದ ಕೆಲ ವರ್ಷಗಳಲ್ಲಿ ಹಲವಾರು ಬದಲಾವಣೆಗಳಿಗೆ ಸಾಕ್ಷಿಯಾಗಿದೆ.

ಬೈಕ್ ಉತ್ಪಾದನೆಯನ್ನು ತಾತ್ಕಾಲಿಕವಾಗಿ ಬಂದ್ ಮಾಡಿದ ಹೀರೋ ಮೋಟೊಕಾರ್ಪ್

ಹೊಸ ವಾಹನಗಳ ಮಾರಾಟವು ಪರಿಸ್ಥಿತಿಗೆ ಅನುಗುಣವಾಗಿ ಏರಿಳಿಕೆ ಆಗುತ್ತಿದ್ದರೂ ಕರೋನಾ ವೈರಸ್ ಪರಿಣಾಮದಿಂದಾಗಿ ಹೊಸ ವಾಹನಕ್ಕೆ ಅಡಚಣೆ ಎದುರಾಗುತ್ತಿದ್ದು, ವಾಹನಗಳ ಮಾರಾಟವನ್ನು ಸರಳ ಮತ್ತು ಸುರಕ್ಷಿತವಾಗಿಸಲು ಆನ್‌ಲೈನ್ ಪ್ಲ್ಯಾಟ್‌ಫಾರ್ಮ್‌ಗಳು ಸಾಕಷ್ಟು ಬಳಕೆಯಾಗುತ್ತಿರುವುದು ಹೊಸ ಬೆಳವಣಿಗೆಗೆ ಕಾರಣವಾಗಿದೆ.

MOST READ: ಅತಿ ಹೆಚ್ಚು ಮೈಲೇಜ್ ನೀಡುವ ಟಾಪ್ 10 ಬಜೆಟ್ ಬೆಲೆಯ ಬೈಕುಗಳಿವು..!

ಬೈಕ್ ಉತ್ಪಾದನೆಯನ್ನು ತಾತ್ಕಾಲಿಕವಾಗಿ ಬಂದ್ ಮಾಡಿದ ಹೀರೋ ಮೋಟೊಕಾರ್ಪ್

ಹೊಸ ವಾಹನ ಖರೀದಿಗಾಗಿ ಬಹುತೇಕ ಗ್ರಾಹಕರು ನೇರವಾಗಿ ಮಾರಾಟ ಮಳಿಗೆಗಳಿಗೆ ಭೇಟಿ ನೀಡುವುದು ಸಾಮಾನ್ಯವಾಗಿರುತ್ತದೆ. ಆದರೆ ಕರೋನಾ ವೈರಸ್ ಪರಿಣಾಮ ಗ್ರಾಹಕರನ್ನು ಮಳಿಗೆಗಳಿಗೆ ಭೇಟಿ ನೀಡದೆ ವಾಹನ ಖರೀದಿ ಪ್ರಕ್ರಿಯೆಯತ್ತ ಸೆಳೆಯಲು ಆಟೋ ಕಂಪನಿಗಳು ಮಾಡಿದ ಹೊಸ ಪ್ರಯತ್ನವು ಇಂದು ಸಾಕಷ್ಟು ಪ್ರಯೋಜಕಾರಿಯಾಗಿದೆ.

ಬೈಕ್ ಉತ್ಪಾದನೆಯನ್ನು ತಾತ್ಕಾಲಿಕವಾಗಿ ಬಂದ್ ಮಾಡಿದ ಹೀರೋ ಮೋಟೊಕಾರ್ಪ್

ವೈರಸ್ ಹರಡುವಿಕೆಯ ಸಂದರ್ಭದಲ್ಲಿ ಮಾರಾಟ ಮಳಿಗೆಗಳಿಗೆ ಭೇಟಿ ನೀಡದೆ ವಾಹನ ಪ್ರಕ್ರಿಯೆಯನ್ನು ಸರಳಗೊಳಿಸಲು ಆನ್‌ಲೈನ್ ಮಾರಾಟ ಮಳಿಗೆಗಳು ಸಾಕಷ್ಟು ಸಹಕಾರಿಯಾಗಿದ್ದು, ಬಳಕೆದಾರರ ಸಂಖ್ಯೆಯಲ್ಲೂ ಕೂಡಾ ಭಾರೀ ಪ್ರಮಾಣದಲ್ಲಿ ಹೆಚ್ಚಳವಾಗಿದೆ.

MOST READ: ಪ್ರತಿ ಚಾರ್ಜ್‌ಗೆ ಬರೋಬ್ಬರಿ 240ಕಿ.ಮೀ ಮೈಲೇಜ್ ನೀಡುವ ಇವಿ ಸ್ಕೂಟರ್ ಬಿಡುಗಡೆ ಮಾಡಲಿದೆ ಓಲಾ

ಬೈಕ್ ಉತ್ಪಾದನೆಯನ್ನು ತಾತ್ಕಾಲಿಕವಾಗಿ ಬಂದ್ ಮಾಡಿದ ಹೀರೋ ಮೋಟೊಕಾರ್ಪ್

ಕೋವಿಡ್ 19 ಹರಡುವಿಕೆಗೂ ಮೊದಲೇ ಹಲವಾರು ಆಟೋ ಕಂಪನಿಗಳು ಆನ್‌ಲೈನ್ ಪ್ಲ್ಯಾಟ್ ತೆರೆದಿದ್ದರೂ ಬಳಕೆದಾರರ ಸಂಖ್ಯೆಯು ತೀರಾ ವಿರಳವಾಗಿತ್ತು. ಆದರೆ ಕರೋನಾ ವೈರಸ್ ಹೆಚ್ಚಳವಾಗುತ್ತಿದ್ದಂತೆ ಸಾಮಾಜಿಕ ಅಂತರ ಅಗತ್ಯವಾಯಿತೋ ಆಗಿನಿಂದ ವಾಹನ ಮಾರಾಟಕ್ಕಾಗಿ ಆನ್‌ಲೈನ್ ಪ್ಲ್ಯಾಟ್‌ಫಾರ್ಮ್‌ಗಳ ಬಳಕೆಯು ಹೆಚ್ಚಳವಾಗುತ್ತಿದೆ.

Most Read Articles

Kannada
English summary
Hero MotoCorp has announced that its manufacturing operations will be temporarily suspended in the country. Read in Kannada.
Story first published: Wednesday, April 21, 2021, 11:55 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X