ಎಲೆಕ್ಟ್ರಿಕ್ ಸ್ಕೂಟರಿನ ಸೈಡ್ ಪ್ರೊಫೈಲ್ ಚಿತ್ರ ಬಿಡುಗಡೆಗೊಳಿಸಿದ ಹೀರೋ ಮೋಟೊಕಾರ್ಪ್

ಹೀರೋ ಮೋಟೊಕಾರ್ಪ್ ಹಾಗೂ ಹೋಂಡಾ ಮೋಟಾರ್ ಸೈಕಲ್ ಕಂಪನಿಗಳ ಸಹಭಾಗಿತ್ವವು 2011 ರಲ್ಲಿ ಕೊನೆಗೊಂಡಿತು. ಇದಾದ ನಂತರ ಈ ಎರಡೂ ಕಂಪನಿಗಳು ಭಾರತದಲ್ಲಿ ಪ್ರತ್ಯೇಕವಾಗಿ ಕಾರ್ಯ ನಿರ್ವಹಿಸುತ್ತಿವೆ. ಹೀರೋ ಮೋಟೊಕಾರ್ಪ್ ಕಂಪನಿಯು ತನ್ನ ಹತ್ತನೇ ವಾರ್ಷಿಕೋತ್ಸವವನ್ನು ಆಚರಿಸುತ್ತಿದೆ.

ಎಲೆಕ್ಟ್ರಿಕ್ ಸ್ಕೂಟರಿನ ಸೈಡ್ ಪ್ರೊಫೈಲ್ ಚಿತ್ರ ಬಿಡುಗಡೆಗೊಳಿಸಿದ ಹೀರೋ ಮೋಟೊಕಾರ್ಪ್

ಈ ಸಂದರ್ಭವನ್ನು ಸ್ಮರಣೀಯವಾಗಿಸಲು ಕಂಪನಿಯು ತನ್ನ ಹೊಸ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಅಧಿಕೃತವಾಗಿ ಅನಾವರಣಗೊಳಿಸಿದೆ. ಕಂಪನಿಯ ಅಧ್ಯಕ್ಷ, ವ್ಯವಸ್ಥಾಪಕ ನಿರ್ದೇಶಕ ಹಾಗೂ ಸಿಇಒ ಆದ ಪವನ್ ಮುಂಜಾಲ್ ರವರು ಈ ಸ್ಕೂಟರ್ ಚಿತ್ರವನ್ನು ಅನಾವರಣಗೊಳಿಸಿದ್ದಾರೆ.

ಎಲೆಕ್ಟ್ರಿಕ್ ಸ್ಕೂಟರಿನ ಸೈಡ್ ಪ್ರೊಫೈಲ್ ಚಿತ್ರ ಬಿಡುಗಡೆಗೊಳಿಸಿದ ಹೀರೋ ಮೋಟೊಕಾರ್ಪ್

ಎಲೆಕ್ಟ್ರಿಕ್ ಸ್ಕೂಟರ್‌ನ ಸಂಪೂರ್ಣ ಚಿತ್ರವನ್ನು ಬಿಡುಗಡೆ ಮಾಡಿಲ್ಲ. ಬದಲಿಗೆ ಈ ಸ್ಕೂಟರಿನ ಸೈಡ್ ಪ್ರೊಫೈಲ್ ಚಿತ್ರವನ್ನು ಮಾತ್ರ ತೋರಿಸಲಾಗಿದೆ. ಕಂಪನಿಯು ಈ ಎಲೆಕ್ಟ್ರಿಕ್ ಸ್ಕೂಟರ್‌ನ ಫೀಚರ್'ಗಳ ಬಗ್ಗೆ ಯಾವುದೇ ಮಾಹಿತಿಯನ್ನು ಬಿಡುಗಡೆ ಮಾಡಿಲ್ಲ ಎಂಬುದು ಗಮನಾರ್ಹ.

ಎಲೆಕ್ಟ್ರಿಕ್ ಸ್ಕೂಟರಿನ ಸೈಡ್ ಪ್ರೊಫೈಲ್ ಚಿತ್ರ ಬಿಡುಗಡೆಗೊಳಿಸಿದ ಹೀರೋ ಮೋಟೊಕಾರ್ಪ್

ಹೀರೋ ಮೋಟೊಕಾರ್ಪ್ ಕಂಪನಿಯು ಶೀಘ್ರದಲ್ಲಿಯೇ ಈ ಸ್ಕೂಟರಿನ ಪ್ರಮುಖ ವಿವರಗಳನ್ನು ಬಿಡುಗಡೆಗೊಳಿಸುವ ನಿರೀಕ್ಷೆಗಳಿವೆ. ಹೀರೋ ಮೋಟೊಕಾರ್ಪ್‌ನ ಈ ಎಲೆಕ್ಟ್ರಿಕ್ ಸ್ಕೂಟರ್ ಶೀಘ್ರದಲ್ಲಿಯೇ ಮಾರಾಟಕ್ಕೆ ಬರಲಿದೆ ಎಂದು ವರದಿಯಾಗಿದೆ.

ಎಲೆಕ್ಟ್ರಿಕ್ ಸ್ಕೂಟರಿನ ಸೈಡ್ ಪ್ರೊಫೈಲ್ ಚಿತ್ರ ಬಿಡುಗಡೆಗೊಳಿಸಿದ ಹೀರೋ ಮೋಟೊಕಾರ್ಪ್

ಪವನ್ ಮುಂಜಾಲ್ ಅವರ ಪರಿಶ್ರಮದಿಂದ ಇದು ಸಾಧ್ಯವಾಗಿದೆ. ಹೀರೋ ಎಲೆಕ್ಟ್ರಿಕ್ ಸ್ಕೂಟರ್ ಬಗ್ಗೆ ಹೆಚ್ಚು ಮಾಹಿತಿ ಲಭ್ಯವಾಗದಿದ್ದರೂ, ಪ್ರಸ್ತುತ ಬಿಡುಗಡೆಯಾಗಿರುವ ಚಿತ್ರಗಳ ಮೂಲಕ ಕೆಲವು ಪ್ರಮುಖ ಮಾಹಿತಿಯನ್ನು ಬಿಡುಗಡೆಗೊಳಿಸಲಾಗಿದೆ.

ಎಲೆಕ್ಟ್ರಿಕ್ ಸ್ಕೂಟರಿನ ಸೈಡ್ ಪ್ರೊಫೈಲ್ ಚಿತ್ರ ಬಿಡುಗಡೆಗೊಳಿಸಿದ ಹೀರೋ ಮೋಟೊಕಾರ್ಪ್

ಹೀರೋ ಮೋಟೊಕಾರ್ಪ್ ಕಂಪನಿಯ ಈ ಎಲೆಕ್ಟ್ರಿಕ್ ಸ್ಕೂಟರ್ ಮುಂಭಾಗದಲ್ಲಿ 12 ಇಂಚಿನ ವ್ಹೀಲ್ ಹಾಗೂ ಹಿಂಭಾಗದಲ್ಲಿ 10 ಇಂಚಿನ ವ್ಹೀಲ್ ಹೊಂದಿದೆ. ಇದರ ಜೊತೆಗೆ ಫ್ರಂಟ್ ವ್ಹೀಲ್ ಮೇಲೆ ಟೆಲಿಸ್ಕೋಪಿಕ್ ಫೋರ್ಕ್ ಹಾಗೂ ರೇರ್ ವ್ಹೀಲ್ ಮೇಲೆ ಮೊನೊಶಾಕ್ ಅಬ್ಸಾರ್ಬರ್ ಅಳವಡಿಸಲಾಗಿದೆ.

ಎಲೆಕ್ಟ್ರಿಕ್ ಸ್ಕೂಟರಿನ ಸೈಡ್ ಪ್ರೊಫೈಲ್ ಚಿತ್ರ ಬಿಡುಗಡೆಗೊಳಿಸಿದ ಹೀರೋ ಮೋಟೊಕಾರ್ಪ್

ಈ ಎಲೆಕ್ಟ್ರಿಕ್ ಸ್ಕೂಟರ್ ಆಧುನಿಕ ನೋಟದೊಂದಿಗೆ ಆಕರ್ಷಕ ಶೈಲಿಯನ್ನು ಹೊಂದಿರುವುದು ತಿಳಿದುಬಂದಿದೆ. ಈ ಎಲೆಕ್ಟ್ರಿಕ್ ಸ್ಕೂಟರ್ ಸ್ಲೊಪಿಂಗ್ ಏಪ್ರನ್ ಹಾಗೂ ಸಣ್ಣ ಫ್ಲೈ ಸ್ಕ್ರೀನ್ ಅನ್ನು ಸಹ ಹೊಂದಿದೆ.

ಎಲೆಕ್ಟ್ರಿಕ್ ಸ್ಕೂಟರಿನ ಸೈಡ್ ಪ್ರೊಫೈಲ್ ಚಿತ್ರ ಬಿಡುಗಡೆಗೊಳಿಸಿದ ಹೀರೋ ಮೋಟೊಕಾರ್ಪ್

ಹೀರೋ ಮೋಟೊಕಾರ್ಪ್ ಕಂಪನಿಯು ಈ ಎಲೆಕ್ಟ್ರಿಕ್ ಸ್ಕೂಟರ್ ಗಾಗಿ ತೈವಾನೀಸ್ ಕಂಪನಿಯೊಂದಿಗೆ ಸಹಭಾಗಿತ್ವವನ್ನು ಮಾಡಿಕೊಂಡಿದೆ. ಈ ಸಹಭಾಗಿತ್ವವು ಕಳೆದ ಏಪ್ರಿಲ್ ನಲ್ಲಿ ಆರಂಭವಾಯಿತು. ಹೀರೋ ಮೋಟೊಕಾರ್ಪ್ ಕಂಪನಿಯು ಗೊಗೊರೋ ಎಂಬ ಕಂಪನಿಯೊಂದಿಗೆ ಮೈತ್ರಿ ಮಾಡಿಕೊಂಡಿದೆ.

ಎಲೆಕ್ಟ್ರಿಕ್ ಸ್ಕೂಟರಿನ ಸೈಡ್ ಪ್ರೊಫೈಲ್ ಚಿತ್ರ ಬಿಡುಗಡೆಗೊಳಿಸಿದ ಹೀರೋ ಮೋಟೊಕಾರ್ಪ್

ಈ ಕಂಪನಿಯು ಹೀರೋ ಕಂಪನಿಯ ಎಲೆಕ್ಟ್ರಿಕ್ ಸ್ಕೂಟರ್‌ಗಳಿಗಾಗಿ ಸ್ವೇಬಲ್ ಬ್ಯಾಟರಿಯನ್ನು ತಯಾರಿಸಲಿದೆ. ಈ ಮೈತ್ರಿಯ ಆಧಾರದ ಮೇಲೆ ಭವಿಷ್ಯದ ಹೀರೋ ಮೋಟೊಕಾರ್ಪ್‌ನ ಎಲೆಕ್ಟ್ರಿಕ್ ಸ್ಕೂಟರ್‌ಗಳ ಬ್ಯಾಟರಿಯನ್ನು ತಯಾರಿಸಲಾಗುತ್ತದೆ.

ಎಲೆಕ್ಟ್ರಿಕ್ ಸ್ಕೂಟರಿನ ಸೈಡ್ ಪ್ರೊಫೈಲ್ ಚಿತ್ರ ಬಿಡುಗಡೆಗೊಳಿಸಿದ ಹೀರೋ ಮೋಟೊಕಾರ್ಪ್

ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳಿಗೆ ದಿನದಿಂದ ದಿನಕ್ಕೆ ಬೇಡಿಕೆ ಹೆಚ್ಚುತ್ತಿದೆ. ಹಿಂದೆಂದಿಗಿಂತಲೂ ಈಗ ಎಲೆಕ್ಟ್ರಿಕ್ ವಾಹನಗಳ ಮಾರಾಟವು ಹಲವು ಪಟ್ಟು ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಹೀರೋ ಮೋಟೊಕಾರ್ಪ್ ತನ್ನ ಮೊದಲ ಎಲೆಕ್ಟ್ರಿಕ್ ಸ್ಕೂಟರಿನ ಟೀಸರ್ ಚಿತ್ರವನ್ನು ಬಿಡುಗಡೆ ಮಾಡಿದೆ.

ಎಲೆಕ್ಟ್ರಿಕ್ ಸ್ಕೂಟರಿನ ಸೈಡ್ ಪ್ರೊಫೈಲ್ ಚಿತ್ರ ಬಿಡುಗಡೆಗೊಳಿಸಿದ ಹೀರೋ ಮೋಟೊಕಾರ್ಪ್

ಭಾರತದಲ್ಲಿ ಈ ಎಲೆಕ್ಟ್ರಿಕ್ ಸ್ಕೂಟರ್ ಮಾತ್ರವಲ್ಲದೆ ಇನ್ನೂ ಹಲವು ಕಂಪನಿಯ ಎಲೆಕ್ಟ್ರಿಕ್ ಸ್ಕೂಟರ್ ಗಳು ಶೀಘ್ರವೇ ಮಾರಾಟಕ್ಕೆ ಬರಲಿವೆ. ಪ್ರಮುಖವಾಗಿ ಓಲಾಹಾಗೂ ಸಿಂಪಲ್ ಒನ್ ಕಂಪನಿಯ ಎಲೆಕ್ಟ್ರಿಕ್ ಸ್ಕೂಟರ್ ಗಳು ಭಾರತೀಯರಲ್ಲಿ ಸಾಕಷ್ಟು ಆಸಕ್ತಿ ಹುಟ್ಟಿಸಿವೆ.

ಎಲೆಕ್ಟ್ರಿಕ್ ಸ್ಕೂಟರಿನ ಸೈಡ್ ಪ್ರೊಫೈಲ್ ಚಿತ್ರ ಬಿಡುಗಡೆಗೊಳಿಸಿದ ಹೀರೋ ಮೋಟೊಕಾರ್ಪ್

ಈ ಎರಡು ಎಲೆಕ್ಟ್ರಿಕ್ ಸ್ಕೂಟರ್ ಗಳ ಮಾರಾಟವು ಆಗಸ್ಟ್ 15 ರಿಂದ ಆರಂಭವಾಗಲಿದೆ ಎಂಬುದು ಗಮನಾರ್ಹ. ಆಗಸ್ಟ್ 15 ರಂದು ಈ ಎಲೆಕ್ಟ್ರಿಕ್ ಸ್ಕೂಟರ್‌ಗಳ ಬೆಲೆ ಹಾಗೂ ಇನ್ನಿತರ ಪ್ರಮುಖ ಮಾಹಿತಿಗಳು ಲಭ್ಯವಾಗಲಿವೆ.

ಎಲೆಕ್ಟ್ರಿಕ್ ಸ್ಕೂಟರಿನ ಸೈಡ್ ಪ್ರೊಫೈಲ್ ಚಿತ್ರ ಬಿಡುಗಡೆಗೊಳಿಸಿದ ಹೀರೋ ಮೋಟೊಕಾರ್ಪ್

ಆಗಸ್ಟ್ 15 ಭಾರತೀಯರಿಗೆ ಮರೆಯಲಾಗದ ದಿನವಾಗಲಿದೆ ಎಂದರೆ ತಪ್ಪಾಗಲಾರದು. ಸ್ವಾತಂತ್ರ್ಯ ದಿನಾಚರಣೆಯಂದು ಹಲವು ಕಂಪನಿಗಳ ಎಲೆಕ್ಟ್ರಿಕ್ ವಾಹನಗಳು ಬಿಡುಗಡೆಯಾಗಲಿವೆ.

ಎಲೆಕ್ಟ್ರಿಕ್ ಸ್ಕೂಟರಿನ ಸೈಡ್ ಪ್ರೊಫೈಲ್ ಚಿತ್ರ ಬಿಡುಗಡೆಗೊಳಿಸಿದ ಹೀರೋ ಮೋಟೊಕಾರ್ಪ್

ಅಂದು ಕೇವಲ ಎಲೆಕ್ಟ್ರಿಕ್ ಸ್ಕೂಟರ್‌ಗಳು ಮಾತ್ರವಲ್ಲದೆ ಕೆಲವು ಹೊಸ ವಾಹನಗಳು ಸಹ ಬಿಡುಗಡೆಯಾಗಲಿವೆ. ಮಹೀಂದ್ರಾ ಅಂಡ್ ಮಹೀಂದ್ರಾ ಕಂಪನಿಯು ತನ್ನ ಏಳು ಸೀಟುಗಳ ಎಕ್ಸ್‌ಯು‌ವಿ 700 ಕಾರ್ ಅನ್ನು ಆಗಸ್ಟ್ 15 ರಂದು ಬಿಡುಗಡೆಗೊಳಿಸಲು ಸಜ್ಜಾಗಿದೆ.

ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳಿಗೆ ಬೇಡಿಕೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ವಿಶ್ವದ ಅತಿ ದೊಡ್ಡ ದ್ವಿಚಕ್ರ ವಾಹನ ತಯಾರಿಕ ಕಂಪನಿಯಾದ ಹೀರೋ ಮೋಟೊ ಕಾರ್ಪ್ ಸಹ ಎಲೆಕ್ಟ್ರಿಕ್ ಸ್ಕೂಟರ್ ಗಳನ್ನು ಬಿಡುಗಡೆಗೊಳಿಸುವುದಕ್ಕೆ ಮುಂದಾಗಿದೆ.

ಓಲಾ ಎಲೆಕ್ಟ್ರಿಕ್ ಸ್ಕೂಟರ್ ಹೀರೋ ಮೋಟೊಕಾರ್ಪ್ ಕಂಪನಿಯ ಎಲೆಕ್ಟ್ರಿಕ್ ಸ್ಕೂಟರಿಗೆ ತೀವ್ರ ಪೈಪೋಟಿ ನೀಡುವ ಸಾಧ್ಯತೆಗಳಿವೆ. ಓಲಾ ಎಲೆಕ್ಟ್ರಿಕ್ ಸ್ಕೂಟರ್ ಹೊರತಾಗಿ, ಹೀರೋ ಮೋಟೊಕಾರ್ಪ್ ಕಂಪನಿಯ ಎಲೆಕ್ಟ್ರಿಕ್ ಸ್ಕೂಟರ್ ಬಜಾಜ್ ಕಂಪನಿಯ ಚೇತಕ್, ಟಿವಿಎಸ್ ಕಂಪನಿಯ ಐ ಕ್ಯೂಬ್ ಹಾಗೂ ಅಥೆರ್ 450 ಎಕ್ಸ್ ಸ್ಕೂಟರಿಗಳೊಂದಿಗೆ ಸ್ಪರ್ಧಿಸಲಿದೆ.

ಗಮನಿಸಿ: ಮೊದಲ ಎರಡು ಚಿತ್ರಗಳನ್ನು ಹೊರತುಪಡಿಸಿ ಉಳಿದ ಚಿತ್ರಗಳನ್ನು ರೆಫರೆನ್ಸ್'ಗಾಗಿ ಬಳಸಲಾಗಿದೆ.

Most Read Articles

Kannada
English summary
Hero motocorp ceo shows electric scooter side profile photo details
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X