ವರ್ಷದಲ್ಲಿ ಮೂರನೇ ಬಾರಿ ಬೆಲೆ ಏರಿಕೆ ಮಾಡಿದ ಹೀರೋ ಮೋಟೊಕಾರ್ಪ್

ದೇಶದ ಅಗ್ರ ಗಣ್ಯ ದ್ವಿಚಕ್ರ ವಾಹನ ತಯಾರಕ ಕಂಪನಿಯಾದ ಹೀರೋ ಮೋಟೊಕಾರ್ಪ್ ತನ್ನ ಬೈಕ್ ಹಾಗೂ ಸ್ಕೂಟರ್‌ಗಳ ಬೆಲೆಯನ್ನು ಜುಲೈ 1ರಿಂದ ಹೆಚ್ಚಿಸಲಿದೆ. ವೆಚ್ಚ ಹೆಚ್ಚಳದಿಂದಾಗಿ ವಾಹನ ತಯಾರಿಕೆ ವೆಚ್ಚವು ಹೆಚ್ಚಾಗಿದೆ ಎಂದು ಕಂಪನಿ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ವರ್ಷದಲ್ಲಿ ಮೂರನೇ ಬಾರಿ ಬೆಲೆ ಏರಿಕೆ ಮಾಡಿದ ಹೀರೋ ಮೋಟೊಕಾರ್ಪ್

ಈ ಪರಿಸ್ಥಿತಿಯಲ್ಲಿ ಕಂಪನಿಯು ವಾಹನಗಳ ಬೆಲೆಯನ್ನು ಹೆಚ್ಚಿಸುವ ಮೂಲಕ ಉತ್ಪಾದನಾ ವೆಚ್ಚದ ಹೊರೆಯನ್ನು ಕಡಿಮೆ ಮಾಡಿಕೊಳ್ಳಲಿದೆ. ಬೆಲೆ ಏರಿಕೆಯಿಂದಾಗಿ ಗ್ರಾಹಕರಿಗೆ ಯಾವುದೇ ಹೊರೆಯಾಗದಂತೆ ಕಂಪನಿ ಕಾಳಜಿ ವಹಿಸಲಿದೆ ಎಂದು ಹೀರೋ ಮೋಟೊಕಾರ್ಪ್ ತಿಳಿಸಿದೆ.

ವರ್ಷದಲ್ಲಿ ಮೂರನೇ ಬಾರಿ ಬೆಲೆ ಏರಿಕೆ ಮಾಡಿದ ಹೀರೋ ಮೋಟೊಕಾರ್ಪ್

ಜುಲೈ 1ರಿಂದ ತನ್ನ ಎಲ್ಲಾ ದ್ವಿಚಕ್ರ ವಾಹನಗಳ ಬೆಲೆ ರೂ.3,000ಗಳಷ್ಟು ಏರಿಕೆಯಾಗಲಿದೆ ಎಂದು ಕಂಪನಿ ಹೇಳಿದೆ. ಮಾದರಿಗಳಿಗೆ ತಕ್ಕಂತೆ ವಾಹನಗಳ ಬೆಲೆ ಏರಿಕೆಯಾಗಲಿದೆ.

ವರ್ಷದಲ್ಲಿ ಮೂರನೇ ಬಾರಿ ಬೆಲೆ ಏರಿಕೆ ಮಾಡಿದ ಹೀರೋ ಮೋಟೊಕಾರ್ಪ್

ಹೀರೋ ಮೋಟೊಕಾರ್ಪ್ ಕಂಪನಿಯು ಈ ವರ್ಷ ಮೂರನೇ ಬಾರಿ ಬೆಲೆ ಏರಿಕೆ ಮಾಡುತ್ತಿದೆ. ಈ ವರ್ಷ ಜನವರಿ ಹಾಗೂ ಏಪ್ರಿಲ್ ತಿಂಗಳಲ್ಲಿ ಕಂಪನಿಯು ತನ್ನ ವಾಹನಗಳ ಬೆಲೆಯನ್ನು ಹೆಚ್ಚಿಸಿತ್ತು.

ವರ್ಷದಲ್ಲಿ ಮೂರನೇ ಬಾರಿ ಬೆಲೆ ಏರಿಕೆ ಮಾಡಿದ ಹೀರೋ ಮೋಟೊಕಾರ್ಪ್

ಹೀರೋ ಮೋಟೊಕಾರ್ಪ್ ವಾಹನಗಳ ಮಾರಾಟದ ಬಗ್ಗೆ ಹೇಳುವುದಾದರೆ, ಕಂಪನಿಯು ಕಳೆದ ತಿಂಗಳು 1,83,044 ಯುನಿಟ್ ವಾಹನಗಳನ್ನು ಮಾರಾಟ ಮಾಡಿದೆ. 2020ರ ಮೇ ತಿಂಗಳಲ್ಲಿ ಕಂಪನಿಯು 1,12,682 ಯುನಿಟ್‌ಗಳನ್ನು ಮಾರಾಟ ಮಾಡಿತ್ತು.

ವರ್ಷದಲ್ಲಿ ಮೂರನೇ ಬಾರಿ ಬೆಲೆ ಏರಿಕೆ ಮಾಡಿದ ಹೀರೋ ಮೋಟೊಕಾರ್ಪ್

2021ರ ಏಪ್ರಿಲ್ ತಿಂಗಳಿಗೆ ಹೋಲಿಸಿದರೆ ಮೇ ತಿಂಗಳಿನಲ್ಲಿ ಕಂಪನಿಯು ಕಡಿಮೆ ವಾಹನಗಳನ್ನು ಮಾರಾಟ ಮಾಡಿದೆ. ಆದರೆ ಹೀರೋ ಮೋಟೊಕಾರ್ಪ್ ವಾಹನ ಮಾರಾಟವು ವರ್ಷದ ಮಾರಾಟಕ್ಕೆ ಹೋಲಿಸಿದರೆ 62.44%ನಷ್ಟು ಹೆಚ್ಚಾಗಿದೆ.

ವರ್ಷದಲ್ಲಿ ಮೂರನೇ ಬಾರಿ ಬೆಲೆ ಏರಿಕೆ ಮಾಡಿದ ಹೀರೋ ಮೋಟೊಕಾರ್ಪ್

ಮಾಹಿತಿಗಳ ಪ್ರಕಾರ, 2021ರ ಏಪ್ರಿಲ್ ತಿಂಗಳಿನಲ್ಲಿ ಹೀರೋ ಮೋಟೊಕಾರ್ಪ್ ಕಂಪನಿಯು 3,72,285 ಯುನಿಟ್ ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿದೆ. ಆದರೆ ಮೇ ತಿಂಗಳಿನಲ್ಲಿ ಕೇವಲ 1,83,044 ಯುನಿಟ್ ವಾಹನಗಳು ಮಾರಾಟವಾಗಿವೆ.

ವರ್ಷದಲ್ಲಿ ಮೂರನೇ ಬಾರಿ ಬೆಲೆ ಏರಿಕೆ ಮಾಡಿದ ಹೀರೋ ಮೋಟೊಕಾರ್ಪ್

ಹೀರೋ ಮೋಟೊಕಾರ್ಪ್ ಕಂಪನಿಯು ಈ ವರ್ಷದ ಮೇ ತಿಂಗಳಿನಲ್ಲಿ 1,78,076 ಬೈಕ್ ಹಾಗೂ 4,338 ಸ್ಕೂಟರ್‌ಗಳನ್ನು ಮಾರಾಟ ಮಾಡಿದೆ. ಕಂಪನಿಯು ಏಪ್ರಿಲ್ ತಿಂಗಳಿನಲ್ಲಿ 3,39,329 ಯುನಿಟ್ ಬೈಕ್ ಹಾಗೂ 32,956 ಯುನಿಟ್ ಸ್ಕೂಟರ್'ಗಳನ್ನು ಮಾರಾಟ ಮಾಡಿದೆ.

ವರ್ಷದಲ್ಲಿ ಮೂರನೇ ಬಾರಿ ಬೆಲೆ ಏರಿಕೆ ಮಾಡಿದ ಹೀರೋ ಮೋಟೊಕಾರ್ಪ್

ದೇಶದಲ್ಲಿ ಕರೋನಾ ವೈರಸ್ ಹರಡುವುದನ್ನು ಗಮನದಲ್ಲಿಟ್ಟುಕೊಂಡು ಉತ್ಪಾದನಾ ಘಟಕಗಳಲ್ಲಿ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಿದ್ದು ಮೇ ತಿಂಗಳ ಮಾರಾಟದ ಮೇಲೆ ಪ್ರತಿಕೂಲ ಪರಿಣಾಮ ಬೀರಿದೆ ಎಂದು ಹೀರೋ ಮೋಟೊಕಾರ್ಪ್ ಕಂಪನಿ ಹೇಳಿದೆ.

Most Read Articles

Kannada
English summary
Hero Motocorp increases prices of bikes and scooters for third time in the year. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X