Just In
- 51 min ago
ಫೋಕ್ಸ್ವ್ಯಾಗನ್ ಐಡಿ.4 ಜಿಟಿಎಕ್ಸ್ ಪರ್ಫಾಮೆನ್ಸ್ ಎಲೆಕ್ಟ್ರಿಕ್ ಕಾರಿನ ಟೀಸರ್ ಬಿಡುಗಡೆ
- 52 min ago
ಕೇವಲ 48 ನಿಮಿಷಗಳಲ್ಲಿ ಸೋಲ್ಡ್ ಔಟ್ ಆದ ಕೆಟಿಎಂ 1290 ಸೂಪರ್ ಡ್ಯೂಕ್ ಆರ್ಆರ್
- 2 hrs ago
ಹೆರ್ಮೆಸ್ 75 ವಾಣಿಜ್ಯ ಬಳಕೆಯ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ ಮಾಡಿದ ಕಬೀರಾ ಮೊಬಿಲಿಟಿ
- 3 hrs ago
ದುಬಾರಿ ಬೆಲೆಯ ಲ್ಯಾಂಡ್ ರೋವರ್ ಡಿಫೆಂಡರ್ ಎಸ್ಯುವಿ ಖರೀದಿಸಿದ ನಟ ಅರ್ಜುನ್ ಕಪೂರ್
Don't Miss!
- Movies
'ನೀವು ಬಸ್ ಡ್ರೈವರ್ ಮಗನೇ, ನಮ್ಮ ಮುಷ್ಕರ ಬೆಂಬಲಿಸಿ': ಯಶ್ಗೆ ಪತ್ರ ಬರೆದ ಸಾರಿಗೆ ನೌಕರರು?
- News
ಸರ್ಕಾರ v/s ಸಾರಿಗೆ ನೌಕರರು: 8ನೇ ದಿನಕ್ಕೆ ಕಾಲಿಟ್ಟ ಮುಷ್ಕರ
- Sports
ಸ್ವಿಗ್ಗಿಯಿಂದ ರೋಹಿತ್ ಶರ್ಮಾಗೆ ಅವಮಾನ ; ಕಿಡಿಕಾರಿದ ಫ್ಯಾನ್ಸ್
- Lifestyle
ರಕ್ತದಲ್ಲಿ ಕಬ್ಬಿಣದಂಶ ಹೆಚ್ಚಾದರೆ ಆಯುಸ್ಸು ಕಡಿಮೆಯಾಗುವುದು
- Education
NEET PG Admit Card 2021: ನೀಟ್ ಪಿಜಿ ಪ್ರವೇಶ ಪತ್ರ ಡೌನ್ಲೋಡ್ ಮಾಡುವುದು ಹೇಗೆ ?
- Finance
ಸುಮಾರು 5,550 ಕೋಟಿ ರು ಡಿವಿಡೆಂಡ್ ಘೋಷಿಸಿದ ಟಿಸಿಎಸ್
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಸ್ಪ್ಲೆಂಡರ್ ಬೈಕುಗಳ ಮೇಲೆ ಭರ್ಜರಿ ಡಿಸ್ಕೌಂಟ್ ನೀಡುತ್ತಿದೆ ಹೀರೋ ಮೋಟೊಕಾರ್ಪ್
ಹೀರೋ ಮೋಟೊಕಾರ್ಪ್ ಕಂಪನಿಯು ತನ್ನ ಸ್ಪ್ಲೆಂಡರ್ ಬೈಕುಗಳ ಮೇಲೆ ವಿವಿಧ ರಿಯಾಯಿತಿ ಹಾಗೂ ಕೊಡುಗೆಗಳನ್ನು ನೀಡುತ್ತಿದೆ. ವರದಿಗಳ ಪ್ರಕಾರ ಕಂಪನಿಯು ಸ್ಪ್ಲೆಂಡರ್ ಪ್ಲಸ್, ಸೂಪರ್ ಸ್ಪ್ಲೆಂಡರ್ ಹಾಗೂ ಸ್ಪ್ಲೆಂಡರ್ ಐ ಸ್ಮಾರ್ಟ್ ಬೈಕುಗಳ ಮೇಲೆ ರೂ.14,000ಗಳವರೆಗೆ ರಿಯಾಯಿತಿ ನೀಡಲಿದೆ.

ಹೊಸ ಹಣಕಾಸು ವರ್ಷದ (2021-22) ಆಗಮನಕ್ಕೂ ಮುನ್ನ ಕಂಪನಿಯು ಈ ರಿಯಾಯಿತಿಯನ್ನು ಘೋಷಿಸಿದೆ. ಕಂಪನಿಯು ಆಯ್ದ ಬ್ಯಾಂಕುಗಳ ಡೆಬಿಟ್ ಹಾಗೂ ಕ್ರೆಡಿಟ್ ಕಾರ್ಡ್ಗಳು ಸೇರಿದಂತೆ ಇಎಂಐ ವಹಿವಾಟಿನ ಮೇಲೆ ರೂ.12,000ಗಳ ಕ್ಯಾಶ್ಬ್ಯಾಕ್ ನೀಡುತ್ತದೆ.

ಇದರ ಜೊತೆಗೆ ಹಳೆಯ ಬೈಕ್ಗಳ ವಿನಿಮಯದ ಮೇಲೆ ಕಂಪನಿಯು ವಿನಿಮಯ ಹಾಗೂ ಲಾಯಲ್ಟಿ ಬೋನಸ್ಗಳಾಗಿ ರೂ.2,000 ಗಳ ರಿಯಾಯಿತಿ ನೀಡಲಿದೆ. ಈ ಎಲ್ಲಾ ರಿಯಾಯಿತಿಗಳು ಹೀರೋ ಸ್ಪ್ಲೆಂಡರ್, ಸ್ಪ್ಲೆಂಡರ್ ಪ್ಲಸ್ ಮತ್ತು ಸ್ಪ್ಲೆಂಡರ್ ಐ ಸ್ಮಾರ್ಟ್ ಬೈಕುಗಳಿಗೆ ಅನ್ವಯಿಸಲಿವೆ.
MOSTREAD: ಟ್ರ್ಯಾಕ್ಟರ್ಗಳ ಹಿಂಭಾಗದಲ್ಲಿ ದೊಡ್ಡ ಗಾತ್ರದ ಟಯರ್ಗಳಿರಲು ಕಾರಣಗಳಿವು

ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಹೀರೋ ಡೀಲರ್'ಗಳನ್ನು ಸಂಪರ್ಕಿಸಬಹುದು ಎಂದು ಕಂಪನಿ ತಿಳಿಸಿದೆ. ಹೀರೋ ಸ್ಪ್ಲೆಂಡರ್ ಪ್ಲಸ್, ಸ್ಪ್ಲೆಂಡರ್ ಸರಣಿಯಲ್ಲಿರುವ ಉತ್ತಮ ಬೈಕ್ ಆಗಿದೆ. ಸ್ಪ್ಲೆಂಡರ್ ಪ್ಲಸ್ ಬೈಕಿನಲ್ಲಿ 97.2 ಸಿಸಿ ಸಿಂಗಲ್ ಸಿಲಿಂಡರ್ ಎಂಜಿನ್ ಅಳವಡಿಸಲಾಗಿದೆ.

ಈ ಎಂಜಿನ್ 8.02 ಬಿಹೆಚ್ಪಿ ಪವರ್ ಹಾಗೂ 8.05 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಇನ್ನು ಹೀರೋ ಸೂಪರ್ ಸ್ಪ್ಲೆಂಡರ್ ಬೈಕಿನಲ್ಲಿ ಅಳವಡಿಸಿರುವ 125 ಸಿಸಿ ಎಂಜಿನ್ 10.8 ಬಿಹೆಚ್ಪಿ ಪವರ್ ಹಾಗೂ 10.6 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ.
MOSTREAD: ಚಿಕ್ಕ ಜಾಗದಲ್ಲಿ ದೊಡ್ಡ ಕಾರನ್ನು ಪಾರ್ಕ್ ಮಾಡಿದ ಅಪ್ರತಿಮ ಚಾಲಕನನ್ನು ಸನ್ಮಾನಿಸಿದ ಟೊಯೊಟಾ ಡೀಲರ್

ಸ್ಪ್ಲೆಂಡರ್ ಐಸ್ಮಾರ್ಟ್ ಬೈಕಿನಲ್ಲಿ 113.2 ಸಿಸಿ ಎಂಜಿನ್ ಅಳವಡಿಸಲಾಗಿದೆ. ಈ ಎಂಜಿನ್ 9 ಬಿಹೆಚ್ಪಿ ಪವರ್ ಹಾಗೂ 9.89 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಕಂಪನಿಯು 100 ಸಿಸಿ, 110 ಸಿಸಿ ಹಾಗೂ 125 ಸಿಸಿ ಸ್ಕೂಟರ್ಗಳನ್ನು ಮಾರಾಟ ಮಾಡುತ್ತದೆ.

ಹೀರೋ ಮೋಟೊಕಾರ್ಪ್ ದೇಶದ ಅತಿದೊಡ್ಡ ಬೈಕ್ ತಯಾರಕ ಕಂಪನಿಯಾಗಿದೆ. ಹೀರೋ ಮೋಟೊಕಾರ್ಪ್ 2021ರ ಜನವರಿ ತಿಂಗಳಿನಲ್ಲಿ 4,85,889 ಯುನಿಟ್ ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿದೆ.
MOSTREAD: ಲಾಕ್ಡೌನ್ ನಿಂದ ಕೆಲಸ ಕಳೆದುಕೊಂಡವ ಇಂದು ವಿಶ್ವ ವಿಖ್ಯಾತ ವ್ಯಕ್ತಿ

ಹೀರೋ ಮೋಟೊಕಾರ್ಪ್ ಕಂಪನಿಯು ಎಲೆಕ್ಟ್ರಿಕ್ ವಾಹನ ಮಾರುಕಟ್ಟೆಗೆ ಪ್ರವೇಶಿಸಲು ತಯಾರಿ ನಡೆಸುತ್ತಿದೆ. ಇದಕ್ಕಾಗಿ ಕಂಪನಿಯು ಮೂರು ಯೋಜನೆಗಳಲ್ಲಿ ಕಾರ್ಯ ನಿರ್ವಹಿಸುತ್ತಿದೆ. ಮೊದಲ ಯೋಜನೆಯಲ್ಲಿ ತನ್ನ ಸಂಶೋಧನೆ ಹಾಗೂ ಅಭಿವೃದ್ಧಿ ಕೇಂದ್ರದ ಸಹಾಯದಿಂದ ಎಲೆಕ್ಟ್ರಿಕ್ ವಾಹನಗಳ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸುತ್ತಿದೆ.

ಎರಡನೇ ಯೋಜನೆಯಲ್ಲಿ ಕಂಪನಿಯು ಎಲೆಕ್ಟ್ರಿಕ್ ತ್ರಿಚಕ್ರ ವಾಹನಗಳ ಮೂಲಮಾದರಿಯ ಮೇಲೆ ಕಾರ್ಯನಿರ್ವಹಿಸುತ್ತಿದ್ದರೆ, ಮೂರನೇ ಯೋಜನೆಯಲ್ಲಿ ಕಂಪನಿಯು ಹೂಡಿಕೆಯ ಮೂಲಕ ತನ್ನ ವ್ಯವಹಾರವನ್ನು ವಿಸ್ತರಿಸುತ್ತಿದೆ.
MOSTREAD: 13 ವರ್ಷಗಳಲ್ಲಿ 10 ಲಕ್ಷ ಕಿ.ಮೀ ಸಂಚರಿಸಿದ ಟೊಯೊಟಾ ಇನೋವಾ ಕಾರು

ಸದ್ಯಕ್ಕೆ ಹೀರೋ ಮೋಟೊಕಾರ್ಪ್ ಕಂಪನಿಯು ಯಾವುದೇ ಎಲೆಕ್ಟ್ರಿಕ್ ವಾಹನಗಳನ್ನು ಬಿಡುಗಡೆಗೊಳಿಸಿಲ್ಲ. ಹೀರೋ ಮೋಟೊಕಾರ್ಪ್ ಕಂಪನಿಯ ಪ್ರತಿಸ್ಪರ್ಧಿ ಕಂಪನಿಗಳಾದ ಬಜಾಜ್ ಹಾಗೂ ಟಿವಿಎಸ್ ಕಂಪನಿಗಳು ಈಗಾಗಲೇ ತಮ್ಮ ಎಲೆಕ್ಟ್ರಿಕ್ ಸ್ಕೂಟರ್ಗಳನ್ನು ಬಿಡುಗಡೆಗೊಳಿಸಿವೆ.

ಮೊದಲೇ ಹೇಳಿದಂತೆ ಹೀರೋ ಮೊಟೊಕಾರ್ಪ್ ಭವಿಷ್ಯದಲ್ಲಿ ಎಲೆಕ್ಟ್ರಿಕ್ ವಾಹನಗಳನ್ನು ಬಿಡುಗಡೆಗೊಳಿಸಲು ಸಿದ್ದತೆ ನಡೆಸಿದೆ. ಕಳೆದ ವರ್ಷ ಕಂಪನಿಯು ಹೀರೋ ಮೆಸ್ಟ್ರೋ ಎಡ್ಜ್ ಆಧಾರಿತ ಎಲೆಕ್ಟ್ರಿಕ್ ಸ್ಕೂಟರಿನ ಮೂಲಮಾದರಿಯನ್ನು ಅನಾವರಣಗೊಳಿಸಿತ್ತು.
MOSTREAD: ಇನ್ನು ಮುಂದೆ ಈ ನಗರಗಳಲ್ಲಿ ಡೀಸೆಲ್ ವಾಹನಗಳನ್ನು ಮಾರಾಟ ಮಾಡುವಂತಿಲ್ಲ

ಆದರೆ ಒಂದು ವರ್ಷದ ನಂತರವೂ ಕಂಪನಿಯು ಈ ಸ್ಕೂಟರ್ ಅನ್ನು ಬಿಡುಗಡೆಗೊಳಿಸಿಲ್ಲ. ಕಂಪನಿಯು ಮೊದಲಿಗೆ ಹೀರೋ ಮೆಸ್ಟ್ರೋ ಎಡ್ಜ್ ಆಧಾರಿತ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆಗೊಳಿಸುವ ಸಾಧ್ಯತೆಗಳಿವೆ.

ಈ ಸ್ಕೂಟರ್ ಪ್ರೀಮಿಯಂ ಎಲೆಕ್ಟ್ರಿಕ್ ಸ್ಕೂಟರ್ಗಳಿಗಿಂತ ಕಡಿಮೆ ಬೆಲೆಯನ್ನು ಹೊಂದಿರಲಿದ್ದು, ಬಜಾಜ್ ಚೇತಕ್ ಎಲೆಕ್ಟ್ರಿಕ್, ಟಿವಿಎಸ್ ಐಕ್ಯೂಬ್ ಹಾತೂ ಎಥೆರ್ ನಂತಹ ಪ್ರೀಮಿಯಂ ಎಲೆಕ್ಟ್ರಿಕ್ ಸ್ಕೂಟರ್ಗಳಿಗೆ ಪೈಪೋಟಿ ನೀಡಲಿದೆ.