ಭಾರತದಲ್ಲಿ ಹೊಸ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆಗೊಳಿಸಲಿದೆ ಹೀರೋ ಮೋಟೊಕಾರ್ಪ್

ಭಾರತೀಯ ಮಾರುಕಟ್ಟೆಯಲ್ಲಿ ಎಲೆಕ್ಟ್ರಿಕ್ ವಾಹನಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ. ಇತ್ತೀಚೆಗೆ ಪೆಟ್ರೋಲ್, ಡೀಸೆಲ್ ಬೆಲೆ ದಿನದಿಂದ ದಿನಕ್ಕೆ ಗಗನಕ್ಕೇರುತ್ತಿದೆ. ಇದರಿಂದ ಹೆಚ್ಚಿನ ಗ್ರಾಹಕರು ಎಲೆಕ್ಟ್ರಿಕ್ ವಾಹಗಳ ಕಡೆ ಮುಖ ಮಾಡುತ್ತಿದ್ದಾರೆ. ಭಾರತದಲ್ಲಿ ಹಲವು ಜನಪ್ರಿಯ ವಾಹನ ಉತ್ಪದನಾ ಕಂಪನಿಗಳು ಎಲೆಕ್ಟ್ರಿಕ್ ವಾಹನಗಳನ್ನು ಅಭಿವೃದ್ಧಿಪಡಿಸುವುದರಲ್ಲಿ ನಿರತರಾಗಿದ್ದಾರೆ.

ಭಾರತದಲ್ಲಿ ಹೊಸ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆಗೊಳಿಸಲಿದೆ ಹೀರೋ ಮೋಟೊಕಾರ್ಪ್

ಜನಪ್ರಿಯ ದ್ವಿಚಕ್ರ ವಾಹನ ತಯಾರಕ ಕಂಪನಿಗಳಾದ ಬಜಾಜ್ ಮತ್ತು ಟಿವಿಎಸ್ ಮೋಟಾರ್ ಈಗಾಗಲೇ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಭಾರತದಲ್ಲಿ ಪರಿಚಯಿಸಿದೆ. ಇದೀಗ ವಿಶ್ವದ ಅತಿದೊಡ್ಡ ದ್ವಿಚಕ್ರ ವಾಹನ ತಯಾರಕ ಕಂಪನಿಯಾದ ಹೀರೋ ಮೋಟೊಕಾರ್ಪ್ ಎಲೆಕ್ಟ್ರಿಕ್ ಸ್ಕೂಟರ್ ಅಭಿವೃದ್ದಿ ಪಡಿಸಲು ಮುಂದಾಗಿದೆ. ಹೀರೋ ಮೋಟೊಕಾರ್ಪ್ ಕಂಪನಿಯು ಈ ಹೊಸ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಮುಂದಿನ ವರ್ಷದ ಅರಂಭದಲ್ಲಿ ಬಿಡುಗಡೆಗೊಳಿಸಲಾಗುತ್ತದೆ.

ಭಾರತದಲ್ಲಿ ಹೊಸ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆಗೊಳಿಸಲಿದೆ ಹೀರೋ ಮೋಟೊಕಾರ್ಪ್

ಇನ್ನು ಹೊಂಡಾ ಮತ್ತು ರಾಯಲ್ ಎನ್‌ಫೀಲ್ಡ್ ಕಂಪನಿಗಳು ಕೂಡ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳನ್ನು ಉತ್ಪಾದಿಸಲಿದೆ.. ಹೀರೋ ಮೋಟೊಕಾರ್ಪ್ ಕಂಪನಿಯು ಮುಂದಿನ ವರ್ಷದ ಜನವರಿ-ಮಾರ್ಚ್ ತಿಂಗಳುಗಳ ಅವಧಿಯ ನಡುವೆ ತನ್ನ ಹೊಸ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಬಿಡುಗಡೆ ಮಾಡಲಿದೆ ಎಂದು ವರದಿಯಾಗಿದೆ.

MOST READ: ಭಾರತದಲ್ಲಿ ಕೈಗೆಟುಕುವ ದರದಲ್ಲಿ ಸಿಗುವ ಸ್ಕೂಟರ್‌ಗಳಿವು

ಭಾರತದಲ್ಲಿ ಹೊಸ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆಗೊಳಿಸಲಿದೆ ಹೀರೋ ಮೋಟೊಕಾರ್ಪ್

ಹೀರೋ ಮೋಟೊಕಾರ್ಪ್ ಕಂಪನಿಯು ಇತ್ತೀಚೆಗೆ ತೈವಾನ್‌ನ ಗೊಗೊರೊ ಜೊತೆ ಕೈಜೋಡಿಸಿದೆ, ಇದು ಬ್ಯಾಟರಿ ವಿನಿಮಯ ನೆಟವರ್ಕ್ ಮತ್ತು ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳನ್ನು ತಯಾರಿಸುವ ಜನಪ್ರಿಯ ಸಂಸ್ಥೆಯಾಗಿದೆ.

ಭಾರತದಲ್ಲಿ ಹೊಸ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆಗೊಳಿಸಲಿದೆ ಹೀರೋ ಮೋಟೊಕಾರ್ಪ್

ಹೀರೋ ಮೋಟೊಕಾರ್ಪ್ ತನ್ನದೇ ಆದ ಫಿಕ್ಸಡ್-ಬ್ಯಾಟರಿ ಎಲೆಕ್ಟ್ರಿಕ್ ಮಾದರಿಗಳ ಜೊತೆಗೆ ತನ್ನ ತೈವಾನೀಸ್ ಪಾಲುದಾರ ಗೊಗೊರೊ ಅವರೊಂದಿಗೆ ಬದಲಾಯಿಸಬಹುದಾದ ಬ್ಯಾಟರಿ ಮಾದರಿಗಳನ್ನು ಕೂಡ ತಯಾರಿಸಲಾಗಿದೆ ಎಂದು ವರದಿಗಳಾಗಿದೆ.

MOST READ: ಹೊಸ ಹೀರೋ ಎಕ್ಸ್‌ಟ್ರಿಮ್ 160ಆರ್ 100 ಮಿಲಿಯನ್ ಎಡಿಷನ್ ಬಿಡುಗಡೆ

ಭಾರತದಲ್ಲಿ ಹೊಸ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆಗೊಳಿಸಲಿದೆ ಹೀರೋ ಮೋಟೊಕಾರ್ಪ್

ಹೀರೋ ಮೋಟೊಕಾರ್ಪ್ ಕೆಲವು ವರ್ಷಗಳ ಹಿಂದೆ ಡ್ಯುಯೆಟ್ ಮತ್ತು ಮೆಸ್ಟ್ರೋ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಪ್ರದರ್ಶಿಸಿತ್ತು. ಆದ್ದರಿಂದ ಮುಂದಿನ ವರ್ಷ ಈ ಸ್ಕೂಟರ್‌ಗಳಲ್ಲಿ ಯಾವುದಾದರೂ ಒಂದು ಸ್ಕೂಟರ್ ಅನ್ನು ಪರಿಚಯಿಸುವ ಸಾಧ್ಯತೆಗಳಿದೆ.

ಭಾರತದಲ್ಲಿ ಹೊಸ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆಗೊಳಿಸಲಿದೆ ಹೀರೋ ಮೋಟೊಕಾರ್ಪ್

ಆದರೆ ಕಂಪನಿಯು ಮುಂದಿನ ವರ್ಷ ಹೊಚ್ಚ ಹೊಸ ವಿನ್ಯಾಸದಲ್ಲಿ ಪರಿಚಯಿಸಬಹುದು. ದೇಶದ ಅತಿ ದೊಡ್ಡ ದ್ವಿಚಕ್ರ ತಯಾರಕ ಕಂಪನಿಯ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆಗೊಂಡಾಗ ಹೊಸ ಸಂಚಲವನ್ನು ಮೂಡಿಸಬಹುದು.

MOST READ: ಬಿಡುಗಡೆಯಾಯ್ತು ಹೊಸ ಕವಾಸಕಿ ವಲ್ಕನ್ ಎಸ್ ಬೈಕ್

ಭಾರತದಲ್ಲಿ ಹೊಸ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆಗೊಳಿಸಲಿದೆ ಹೀರೋ ಮೋಟೊಕಾರ್ಪ್

ಕೊರೋನಾ ಸೋಂಕಿನ ಹೆಚ್ಚಳವನ್ನು ಮನದಲ್ಲಿಟ್ಟುಕೊಂಡು ಹೀರೋ ಮೋಟೊಕಾರ್ಪ್ ತನ್ನ ಉತ್ಪಾದನ ಕೇಂದ್ರವನ್ನು ಏಪ್ರಿಲ್ 22ರ ನಡುವೆ ನಾಲ್ಕು ದಿನಗಳವರೆಗೆ ಸ್ಥಗಿತಗೊಳಿಸಿತ್ತು. ನಂತರ ಮೇ 9ರವರೆಗೆ ವಿಸ್ತರಿಸಲಾಯಿತು. ಇದೀಗ ಮತ್ತೆ ಮೇ 16ರವರೆಗೆ ಉತ್ಪಾದನ ಕೇಂದ್ರದ ಸ್ಥಗಿತವನ್ನು ವಿಸ್ತರಿಸಿದೆ.

ಭಾರತದಲ್ಲಿ ಹೊಸ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆಗೊಳಿಸಲಿದೆ ಹೀರೋ ಮೋಟೊಕಾರ್ಪ್

ಹೀರೋ ಮೋಟೊಕಾರ್ಪ್ ಕಂಪನಿಯು ದೆಹಲಿ ಮತ್ತು ಎನ್‍ಸಿಆರ್, ಹರಿಯಾಣ, ಉತ್ತರಾಖಂಡ್, ರಾಜಸ್ತಾನ ಮತ್ತು ಗುಜರಾತ್ ಸೇರಿದಂತೆ ವಿವಿಧ ರಾಜ್ಯಗಳ ಆರೋಗ್ಯ ಕಾರ್ಯಕರ್ತರು ಮತ್ತು ವೈದ್ಯಕೀಯ ಸಿಬ್ಬಂದಿಯ ಸುರಕ್ಷತೆಗಾಗಿ ವೈಯಕ್ತಿಕ ಪ್ರಯಾಣಕ್ಕಾಗಿ ಕಂಪನಿಯು ತನ್ನ ಬೈಕ್ ಗಳ ಜೊತೆ ಬೈಕ್ ಆ್ಯಂಬುಲೆನ್ಸ್ ಸಹ ಒದಗಿಸುತ್ತಿದೆ. ಹೀಗೆ ಹಲವು ರೀತಿಯಲ್ಲಿ ಕೊರೋನಾ ವಿರುದ್ದದ ಹೋರಾಟದಲ್ಲಿ ಹೀರೋ ಮೋಟೊಕಾರ್ಪ್ ಭಾಗಿಯಾಗಿದೆ.

Most Read Articles

Kannada
English summary
Hero MotoCorp’s First Electric Scooter Likely To Be Launched Next Year. Read In Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X