Just In
- 13 min ago
ಅನಾವರಣವಾಯ್ತು 2021ರ ಹ್ಯುಂಡೈ ಸೊನಾಟಾ ಎನ್ ಲೈನ್ ಪರ್ಫಾಮೆನ್ಸ್ ಕಾರು
- 2 hrs ago
ಕಾರುಗಳ ರಫ್ತಿನಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಮಾರುತಿ ಸುಜುಕಿ
- 4 hrs ago
ವಾರದ ಪ್ರಮುಖ ಸುದ್ದಿ: ಹೊಸ ಸಫಾರಿ ಬಿಡುಗಡೆ, ಟೋಲ್ ಸಂಗ್ರಹ ಹೆಚ್ಚಳ, ಇಳಿಕೆಯಾಗುತ್ತಾ ಪೆಟ್ರೋಲ್ ದರ?
- 14 hrs ago
ಬಿಡುಗಡೆಯಾಗಲಿರುವ ಓಲಾ ಮೊದಲ ಎಲೆಕ್ಟ್ರಿಕ್ ಸ್ಕೂಟರ್ ವಿಶೇಷತೆಗಳೇನು?
Don't Miss!
- News
ನೊಂದ ಮಹಿಳೆಯಿಂದ ಪೊಲೀಸ್ ಸ್ಟೇಷನ್ ನಿಂದಲೇ ಫೇಸ್ ಬುಕ್ ಲೈವ್ !
- Movies
ಉಪೇಂದ್ರ ನಟನೆಯ ಕಬ್ಜ ಚಿತ್ರಕ್ಕೆ ಎಂಟ್ರಿ ಕೊಟ್ಟ 'ಕುರುಕ್ಷೇತ್ರ'ದ ಭೀಮ
- Sports
ಆರು ನಗರಗಳಲ್ಲಿ ಐಪಿಎಲ್ ನಡೆಸಲು ಬಿಸಿಸಿಐ ಸಿದ್ಧತೆ: ಅಹ್ಮದಾಬಾದ್ನಲ್ಲಿ ಫೈನಲ್: ವರದಿ
- Finance
ಭಾರತದಲ್ಲಿ ನೋಕಿಯಾ ಪವರ್ ಈಯರ್ಬಡ್ಸ್ ಲೈಟ್ಸ್ ಮಾರಾಟ
- Lifestyle
ವಾರ ಭವಿಷ್ಯ: ಈ ವಾರ 12 ರಾಶಿಗಳ ರಾಶಿಫಲ ಹೇಗಿದೆ?
- Education
MCL Recruitment 2021: 8 ಸಾಮಾನ್ಯ ವೈದ್ಯಕೀಯ ಸಲಹೆಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಜನವರಿ ತಿಂಗಳಿನಲ್ಲಿ 4 ಲಕ್ಷಕ್ಕೂ ಹೆಚ್ಚು ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿದ ಹೀರೋ ಮೋಟೊಕಾರ್ಪ್
ವಿಶ್ವದ ಅತಿದೊಡ್ಡ ದ್ವಿಚಕ್ರ ವಾಹನ ತಯಾರಕ ಕಂಪನಿಯಾದ ಹೀರೋ ಮೊಟೊಕಾರ್ಪ್ ಕಂಪನಿಯು 2021ರ ಜನವರಿ ತಿಂಗಳ ತನ್ನ ಮಾರಾಟ ವರದಿಯನ್ನು ಬಹಿರಂಗಪಡಿಸಿದೆ. ಕಳೆದ ತಿಂಗಳು ಹೀರೋ ಮೊಟೊಕಾರ್ಪ್ ಕಂಪನಿಯು 4,85,889 ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿದೆ.

ಇನ್ನು ಕಳೆದ ವರ್ಷದ ಜನವರಿ ತಿಂಗಳಿನಲ್ಲಿ ಹೀರೋ ಮೊಟೊಕಾರ್ಪ್ ಕಂಪನಿಯು 5,01,622 ದ್ವಿಚಕ್ರ ವಾಹನಗಳನ್ನು ಮಾರಾಟಗೊಳಿಸಿತ್ತು. ಇನ್ನು ದೇಶಿಯ ಮಾರುಕಟ್ಟೆಯಲ್ಲಿ ಮಾತ್ರ ಹೀರೋ ಮೊಟೊಕಾರ್ಪ್ ಕಂಪನಿಯು ಕಳೆದ ತಿಂಗಳು 4,67,776 ಯುನಿಟ್‌ಗಳನ್ನು ಮಾರಟಗೊಳಿಸಿವೆ. ಆದರೆ ಕಳೆದ ವರ್ಷದ ಜನವರಿ ತಿಂಗಳಿನಲ್ಲಿ ದೇಶಿಯ ಮಾರುಕಟ್ಟೆಯಲ್ಲಿ 4,88,069 ಯುನಿಟ್‌ಗಳನ್ನು ಮಾರಾಟಗೊಳಿಸಲಾಗಿತ್ತು.

ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಶೇ.ರಷ್ಟು ಕುಸಿದಿದೆ. ಇನ್ನು 2020ರ ಜನವರಿಯಲ್ಲಿ ತಿಂಗಳಿನಲ್ಲಿ 13,553 ಯುನಿಟ್‌ಗಳನ್ನು ರಫ್ತು ಮಾಡಲಾಗಿತ್ತು. ಈ 2021ರ ಜನವರಿ ತಿಂಗಳಿನಲ್ಲಿ 18,113 ಯುನಿಟ್‌ಗಳನ್ನು ರಫ್ತು ಮಾಡಲಾಗಿದೆ.
MOST READ: ಯೂನಿಕಾರ್ನ್ ಬೈಕಿನ ಬೆಲೆ ಹೆಚ್ಚಿಸಿದ ಹೋಂಡಾ ಮೋಟಾರ್‌ಸೈಕಲ್

ಹೀರೋ ಮೊಟೊಕಾರ್ಪ್ ಕಂಪನಿಯು ರಫ್ತಿನಲ್ಲಿ ಶೇ.33.6 ರಷ್ಟು ಬೆಳವಣಿಗೆಯನ್ನು ಸಾಧಿಸಿದೆ. ಒಟ್ಟು ಮಾರಾಟದಲ್ಲಿ ಹೀರೋ ಮೊಟೊಕಾರ್ಪ್ ಕಂಪನಿಯು ಕುಸಿತವನ್ನು ಕಂಡಿದ್ದರು ನಂ.1 ಸ್ಥಾನದಲ್ಲಿ ಮುಂದುವರೆದಿದ್ದಾರೆ.

ಹೀರೋ ಮೋಟೊಕಾರ್ಪ್ ಕಂಪನಿಯು ಬೈಕ್ ಉತ್ಪಾದನೆಯಲ್ಲಿ ಇತ್ತೀಚೆಗೆ ಹೊಸ ಮೈಲಿಗಲ್ಲು ಸಾಧಿಸಿದೆ. ಬೈಕ್ ಉತ್ಪಾದನೆಯ ಆರಂಭಿಸಿದ 36 ವರ್ಷಗಳ ಅವಧಿಯಲ್ಲಿ ಬರೋಬ್ಬರಿ 10 ಕೋಟಿ ಬೈಕ್ ಉತ್ಪಾದನೆ ಮಾಡುವ ಮೂಲಕ ಹೊಸ ದಾಖಲೆಯನ್ನು ನಿರ್ಮಿಸಿದೆ.
MOST READ: ಭಾರತದಲ್ಲಿ ಕೈಗೆಟುಕುವ ದರದಲ್ಲಿ ಸಿಗುವ ಸ್ಕೂಟರ್‌ಗಳಿವು

ಹೀರೋ ಮೋಟೊಕಾರ್ಪ್ ಮೆಕ್ಸಿಕೋ ಮಾರುಕಟ್ಟೆಗೆ ಕಾಲಿಡಲು ಗ್ರೂಪೋ ಸಲಿನಾಸ್ ಜೊತೆ ಪಾಲುಗಾರಿಕೆಯನ್ನು ಮಾಡಿಕೊಂಡಿದೆ. ಶೀಘ್ರದಲ್ಲೇ ಮೆಕ್ಸಿಕೋ ಮಾರುಕಟ್ಟೆಯಲ್ಲಿ ಹೀರೋ ಮೋಟೊಕಾರ್ಪ್ ಕಂಪನಿ ತನ್ನ ಕಾರ್ಯಾಚರಣೆಯನ್ನು ಪ್ರಾರಂಭಿಸಲಿದೆ.

ಹೀರೋ ಮೊಟೊಕಾರ್ಪ್ ತನ್ನ ಮಾದರಿಗಳನ್ನು ಮಧ್ಯ ಅಮೆರಿಕದ ದೇಶದಲ್ಲಿ ಮಾರಾಟ ಮಾಡಲು ಗ್ರೂಪೋ ಸಲಿನಾಸ್ ಜೊತೆ ಪಾಲುಗಾರಿಕೆ ಮಾಡಿ ವಿಶ್ವದ ಅತಿದೊಡ್ಡ ವಿತರಣಾ ಜಾಲಗಳಲ್ಲಿ ಒಂದಾಗಲಿದೆ ಎಂದು ವರದಿಗಳಾಗಿದೆ.
MOST READ: ಬಿಡುಗಡೆಯಾಯ್ತು ಹೊಸ ಕವಾಸಕಿ ವಲ್ಕನ್ ಎಸ್ ಬೈಕ್

ಹೀರೋನ ಜಾಗತಿಕ ಪರಿಣತಿ ಮತ್ತು ನೂತನ ತಂತ್ರಜ್ಞಾನದ ಜೊತೆ ಗ್ರೂಪೋ ಸಲಿನಾಸ್‌ನ ಸ್ಥಳೀಯ ಮಾರುಕಟ್ಟೆ ಜ್ಞಾನದಿಂದ, ಮುಂದಿನ ಮೂರು ವರ್ಷಗಳಲ್ಲಿ ಹೀರೋ ಬ್ರ್ಯಾಂಡ್ ಅನ್ನು ವಿಸ್ತರಿಸುವ ಗುರಿ ಹೊಂದಿದ್ದೇವೆ" ಎಂದು ಹೀರೋ ಮೊಟೊಕಾರ್ಪ್‌ನ ಅಧ್ಯಕ್ಷ ಮತ್ತು ಸಿಇಒ ಪವನ್ ಮುಂಜಾಲ್ ಹೇಳಿದ್ದಾರೆ.

ವರದಿಗಳ ಪ್ರಕಾರ, ಮೊದಲ ಹಂತದ ಕಾರ್ಯಾಚರಣೆಯಲ್ಲಿ, ಹೀರೋ ಮೊಟೊಕಾರ್ಪ್ ಬೈಕುಗಳನ್ನು ಒಳಗೊಂಡಂತೆ ಒಂಬತ್ತು ಮಾದರಿಗಳನ್ನು ಬಿಡುಗಡೆಗೊಳಿಸಲಿದೆ. ಇದು 100ಸಿಸಿ ಯಿಂದ 160ಸಿಸಿ ವರೆಗಿನ ಎಂಜಿನ್ ಸಾಮರ್ಥ್ಯ ಹೊಂದಿರುವ ಮಾದರಿಗಳಾಗಿರುತ್ತದೆ.