Just In
Don't Miss!
- Sports
ಯುಎಇ ಆಟಗಾರರಿಂದ ಮ್ಯಾಚ್ ಫಿಕ್ಸಿಂಗ್; ಅಮಾನತು ಮಾಡಿದ ಐಸಿಸಿ
- Movies
'ಬೆಲ್ ಬಾಟಂ-2' ಟೈಟಲ್ ಪೋಸ್ಟರ್ ಅನಾವರಣ: ಡಿಟೆಕ್ಟಿವ್ ದಿವಾಕರ್ ಈಸ್ ಬ್ಯಾಕ್
- Lifestyle
ಗರ್ಭಾವಸ್ಥೆಯಲ್ಲಿ ಥೈರಾಯ್ಡ್ ಸಮಸ್ಯೆ: ಇದರ ಅಪಾಯಗಳೇನು, ತಡೆಗಟ್ಟುವುದು ಹೇಗೆ?
- News
ಶಶಿಕಲಾ ಈಗ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸಾಮಾನ್ಯ ರೋಗಿ
- Finance
ಹೊಸ ಸಾರ್ವಕಾಲಿಕ ದಾಖಲೆ ಬರೆದ ಪೆಟ್ರೋಲ್- ಡೀಸೆಲ್ ದರ; ಯಾವ ನಗರದಲ್ಲಿ ಎಷ್ಟು?
- Education
ECIL Recruitment 2021: 3 ಟೆಕ್ನಿಕಲ್ ಅಧಿಕಾರಿ ಹುದ್ದೆಗಳಿಗೆ ನೇರ ಸಂದರ್ಶನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಡಿಸೆಂಬರ್ ತಿಂಗಳ ಮಾರಾಟದಲ್ಲಿ ಏರಿಕೆ ದಾಖಲಿಸಿದ ಹೀರೋ ಮೋಟೊಕಾರ್ಪ್
ದೇಶದ ಅತಿದೊಡ್ಡ ಬೈಕ್ ತಯಾರಕ ಕಂಪನಿಯಾದ ಹೀರೋ ಮೋಟೊಕಾರ್ಪ್ ತನ್ನ 2020ರ ಡಿಸೆಂಬರ್ ತಿಂಗಳ ಮಾರಾಟ ವರದಿಯನ್ನು ಜನವರಿ 1ರಂದು ಬಿಡುಗಡೆಗೊಳಿಸಿದೆ. ಈ ವರದಿಯ ಪ್ರಕಾರ 2020ರ ಡಿಸೆಂಬರ್‌ನಲ್ಲಿ ಹೀರೋ ಮೋಟೊಕಾರ್ಪ್ ಕಂಪನಿಯು ಒಟ್ಟು 4,47,335 ಯೂನಿಟ್ ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿದೆ.

ಕಂಪನಿಯು 2019ರ ಡಿಸೆಂಬರ್ ತಿಂಗಳಿನಲ್ಲಿ 4,24,845 ಯುನಿಟ್ ವಾಹನಗಳನ್ನು ಮಾರಾಟ ಮಾಡಿತ್ತು. 2019ರ ಡಿಸೆಂಬರ್ ತಿಂಗಳಿಗೆ ಹೋಲಿಸಿದರೆ 2020ರ ಡಿಸೆಂಬರ್ ತಿಂಗಳಿನಲ್ಲಿ ಮಾರಾಟ ಪ್ರಮಾಣವು 5.02%ನಷ್ಟು ಹೆಚ್ಚಳವಾಗಿದೆ. ಕಂಪನಿಯು ಡಿಸೆಂಬರ್ ತಿಂಗಳಿನಲ್ಲಿ 4,15,099 ಯೂನಿಟ್ ಬೈಕ್‌ಗಳನ್ನು ಮಾರಾಟ ಮಾಡಿದೆ.

ಬೈಕ್ ಮಾರಾಟ ಪ್ರಮಾಣವು ಕಳೆದ ವರ್ಷಕ್ಕಿಂತ ಈ ವರ್ಷ 2.84%ನಷ್ಟು ಹೆಚ್ಚಾಗಿದೆ. ಇನ್ನು 2020ರ ಡಿಸೆಂಬರ್ ತಿಂಗಳಿನಲ್ಲಿ 32,236 ಯುನಿಟ್ ಸ್ಕೂಟರ್‌ಗಳನ್ನು ಮಾರಾಟ ಮಾಡಲಾಗಿದೆ. 2019ರ ಡಿಸೆಂಬರ್ ನಲ್ಲಿ 21,220 ಯುನಿಟ್ ಸ್ಕೂಟರ್ ಗಳು ಮಾರಾಟವಾಗಿದ್ದವು.
MOSTREAD: ಟ್ರ್ಯಾಕ್ಟರ್‌ಗಳ ಹಿಂಭಾಗದಲ್ಲಿ ದೊಡ್ಡ ಗಾತ್ರದ ಟಯರ್‌ಗಳಿರಲು ಕಾರಣಗಳಿವು

2020-21ರ ಹಣಕಾಸು ವರ್ಷದ ಮೂರನೇ ತ್ರೈಮಾಸಿಕದಲ್ಲಿ (ಅಕ್ಟೋಬರ್-ಡಿಸೆಂಬರ್) 18.45 ಲಕ್ಷ ವಾಹನಗಳನ್ನು ಮಾರಾಟ ಮಾಡಿರುವುದಾಗಿ ಹೀರೋ ಮೋಟೊಕಾರ್ಪ್ ಹೇಳಿದೆ. ಹೀರೋ ಮೊಟೊಕಾರ್ಪ್'ನ ದೇಶಿಯ ಮಾರಾಟವು 2020ರ ಡಿಸೆಂಬರ್ ತಿಂಗಳಿನಲ್ಲಿ 3.16%ನಷ್ಟು ಏರಿಕೆ ಕಂಡು 4,25,033 ಯೂನಿಟ್'ಗಳಿಗೆ ತಲುಪಿದೆ.

ಹೀರೋ ಮೋಟೊಕಾರ್ಪ್ ಕಂಪನಿಯು 2019-20ರ ಹಣಕಾಸು ವರ್ಷದ ಇದೇ ತ್ರೈಮಾಸಿಕದಲ್ಲಿ 15.41 ಲಕ್ಷ ವಾಹನಗಳನ್ನು ಮಾರಾಟ ಮಾಡಿತ್ತು. ಅಂಕಿಅಂಶಗಳ ಪ್ರಕಾರ, ಕಳೆದ ತ್ರೈಮಾಸಿಕದಲ್ಲಿ ಮಾರಾಟವು 19.7%ನಷ್ಟು ಹೆಚ್ಚಾಗಿದೆ.
MOSTREAD: ಚಿಕ್ಕ ಜಾಗದಲ್ಲಿ ದೊಡ್ಡ ಕಾರನ್ನು ಪಾರ್ಕ್ ಮಾಡಿದ ಅಪ್ರತಿಮ ಚಾಲಕನನ್ನು ಸನ್ಮಾನಿಸಿದ ಟೊಯೊಟಾ ಡೀಲರ್

2020ರ ನವೆಂಬರ್ ತಿಂಗಳಿಗೆ ಹೋಲಿಸಿದರೆ ಡಿಸೆಂಬರ್‌ನಲ್ಲಿ ಮಾರಾಟವು ಹೆಚ್ಚಾಗಿದೆ. ಕಂಪನಿಯು 2020ರ ನವೆಂಬರ್‌ನಲ್ಲಿ ಒಟ್ಟಾರೆಯಾಗಿ 5,41,437 ಯುನಿಟ್ ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿತ್ತು.

ಹೊಸ ವರ್ಷದಿಂದ ಎಲ್ಲಾ ದ್ವಿಚಕ್ರ ವಾಹನಗಳ ಬೆಲೆಯನ್ನು ಹೆಚ್ಚಿಸುವುದಾಗಿ ಹೀರೋ ಮೋಟೊಕಾರ್ಪ್ ತಿಳಿಸಿದೆ. ಕಂಪನಿಯು ಮಾದರಿಗಳಿಗೆ ಅನುಸಾರವಾಗಿ ಬೆಲೆಯನ್ನು ಹೆಚ್ಚಿಸಲಿದೆ. ಬೆಲೆ ಏರಿಕೆಯು ಜನವರಿ 1ರಿಂದ ಜಾರಿಗೆ ಬಂದಿದೆ.
MOSTREAD: ಲಾಕ್‌ಡೌನ್ ನಿಂದ ಕೆಲಸ ಕಳೆದುಕೊಂಡವ ಇಂದು ವಿಶ್ವ ವಿಖ್ಯಾತ ವ್ಯಕ್ತಿ

ಬೈಕ್ ತಯಾರಿಕೆಯಲ್ಲಿ ಬಳಸುವ ಸ್ಟೀಲ್, ಅಲ್ಯೂಮಿನಿಯಂ, ಪ್ಲಾಸ್ಟಿಕ್ ಸೇರಿದಂತೆ ಇತರ ಹಲವು ಸಲಕರಣೆಗಳ ಬೆಲೆ ಹೆಚ್ಚಾಗಿ ಉತ್ಪಾದನಾ ವೆಚ್ಚ ಹೆಚ್ಚಾದ ಕಾರಣಕ್ಕೆ ಬೆಲೆ ಏರಿಕೆ ಮಾಡಲಾಗಿದೆ ಎಂದು ಹೀರೋ ಮೋಟೊಕಾರ್ಪ್ ತಿಳಿಸಿದೆ.

ಬೆಲೆ ಏರಿಕೆ ಬಗ್ಗೆ ಡೀಲರ್'ಗಳಿಗೆ ಮಾಹಿತಿ ನೀಡಲಾಗಿದೆ ಎಂದು ಕಂಪನಿ ತಿಳಿಸಿದೆ. ದ್ವಿಚಕ್ರ ವಾಹನಗಳ ಬೆಲೆಯನ್ನು ರೂ.1,500ಗಳವರೆಗೆ ಹೆಚ್ಚಿಸಲಾಗಿದೆ. ಕಂಪನಿಯ ಮಾರಾಟವು ಕೋವಿಡ್ ಮುನ್ನ ಇದ್ದ ಸ್ಥಿತಿಯನ್ನು ತಲುಪಿದೆ ಎಂದು ಹೇಳಲಾಗಿದೆ.
MOSTREAD: 13 ವರ್ಷಗಳಲ್ಲಿ 10 ಲಕ್ಷ ಕಿ.ಮೀ ಸಂಚರಿಸಿದ ಟೊಯೊಟಾ ಇನೋವಾ ಕಾರು

ಲಾಕ್‌ಡೌನ್ ತೆರವುಗೊಂಡ ನಂತರ ಕಂಪನಿಯ ಮಾರಾಟವು ಸ್ಥಿರವಾಗಿ ಏರಿಕೆಯಾಗುತ್ತಿದೆ. ಹಬ್ಬದ ಸಂದರ್ಭದಲ್ಲಿಯೂ ಕಂಪನಿಯ ಮಾರಾಟವು ಹೆಚ್ಚಳವಾಗಿತ್ತು. ಕಂಪನಿಯು ನವೆಂಬರ್ ತಿಂಗಳಿನಲ್ಲಿ ಹೆಚ್ಚಿನ ಸಂಖೆಯಲ್ಲಿ ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿತ್ತು.

ಕಂಪನಿಯು ರೂ.350ಗಳ ವಾರ್ಷಿಕ ಚಂದಾದಾರಿಕೆಯಲ್ಲಿ ರೋಡ್ ಸೈಡ್ ಅಸಿಸ್ಟೆನ್ಸ್ ಯೋಜನೆಯನ್ನು ಆರಂಭಿಸಿದೆ. ಈ ಯೋಜನೆಯಡಿಯಲ್ಲಿ ಗ್ರಾಹಕರಿಗೆ 24x7 ಸೇವೆ ನೀಡಲಾಗುವುದು.