ದುಬಾರಿಯಾಯ್ತು ಹೊಸ ಹೀರೋ ಎಕ್ಸ್‌ಟ್ರಿಮ್ 160ಆರ್ ಮತ್ತು ಎಕ್ಸ್‌ಟ್ರಿಮ್ 200ಎಸ್ ಬೈಕುಗಳು

ಭಾರತದ ಅತಿದೊಡ್ಡ ದ್ವಿಚಕ್ರ ವಾಹನ ತಯಾರಕ ಕಂಪನಿಯಾದ ಹೀರೋ ಮೋಟೊಕಾರ್ಪ್ ತನ್ನ ಸರಣಿಯಲ್ಲಿರುವ ಬೈಕುಗಳ ಮತ್ತು ಸ್ಕೂಟರ್‌ಗಳ ಬೆಲೆಗಳನ್ನು ಭಾರತೀಯ ಮಾರುಕಟ್ಟೆಯಲ್ಲಿ ಪರಿಷ್ಕರಿಸಿದೆ. ಇದರ ಪರಿಣಾಮವಾಗಿ ಹೀರೋ ಸರಣಿಯಲ್ಲಿರುವ ಎಕ್ಸ್‌ಟ್ರಿಮ್ 160ಆರ್ ಮತ್ತು ಎಕ್ಸ್‌ಟ್ರಿಮ್ 200ಎಸ್ ಬೈಕುಗಳು ದುಬಾರಿಯಾಗಿವೆ.

ದುಬಾರಿಯಾಯ್ತು ಹೊಸ ಹೀರೋ ಎಕ್ಸ್‌ಟ್ರಿಮ್ 160ಆರ್ ಮತ್ತು ಎಕ್ಸ್‌ಟ್ರಿಮ್ 200ಎಸ್ ಬೈಕುಗಳು

ಬೆಲೆ ಏರಿಕೆಯಾದ ಬಳಿಕ, ಪ್ರಸ್ತುತ ಹೀರೋ ಎಕ್ಸ್‌ಟ್ರಿಮ್ 160ಆರ್ ಬೈಕಿನಲ್ಲಿ ಡ್ರಮ್ ವೆರಿಯೆಂಟ್ ಬೆಲೆಯು ರೂ.1,03,900 ಗಳಾಗಿದ್ದರೆ, ಡಿಸ್ಕ್ ವೆರಿಯೆಂಟ್ ಬೆಲೆಯು ರೂ.1,06,950 ಗಳಾಗಿದೆ. ಹೀರೋ ಸರಣಿಯಲ್ಲಿರುವ ಮತ್ತೊಂದು ಜನಪ್ರಿಯ ಎಕ್ಸ್‌ಟ್ರಿಮ್ 200ಎಸ್ ಬೈಕಿನ ಬೆಲೆಯು ರೂ.1,17,214ಗಳಾಗಿದೆ. ಈ ಎಲ್ಲಾ ಬೆಲೆಗಳು ಎಕ್ಸ್ ಶೋರೂಂ ಪ್ರಕಾರವಾಗಿದೆ.

ದುಬಾರಿಯಾಯ್ತು ಹೊಸ ಹೀರೋ ಎಕ್ಸ್‌ಟ್ರಿಮ್ 160ಆರ್ ಮತ್ತು ಎಕ್ಸ್‌ಟ್ರಿಮ್ 200ಎಸ್ ಬೈಕುಗಳು

ಇನ್ನು ಹೀರೋ ಎಕ್ಸ್‌ಟ್ರಿಮ್ 160ಆರ್ ಬೈಕಿನ ಬಗ್ಗೆ ಹೇಳುವುದಾದರೆ, ಎಕ್ಸ್‌ಟ್ರಿಮ್ 160ಆರ್ ಬೈಕಿನಲ್ಲಿ 163 ಸಿಸಿ ಸಿಂಗಲ್ ಸಿಲಿಂಡರ್ ಏರ್-ಕೂಲ್ಡ್ ಎಂಜಿನ್ ಅನ್ನು ಆಳವಡಿಸಿಸಲಾಗಿದೆ. ಈ ಎಂಜಿನ್ 8500 ಆರ್‌ಪಿಎಂನಲ್ಲಿ 15 ಬಿಹೆಚ್‌ಪಿ ಪವರ್ ಮತ್ತು 6500 ಆರ್‌ಪಿಎಂನಲ್ಲಿ 14 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ.

MOST READ: ದುಬಾರಿಯಾಯ್ತು ಜನಪ್ರಿಯ ಬಿಎಸ್-6 ಯಮಹಾ ಎಂಟಿ-15 ಬೈಕ್

ದುಬಾರಿಯಾಯ್ತು ಹೊಸ ಹೀರೋ ಎಕ್ಸ್‌ಟ್ರಿಮ್ 160ಆರ್ ಮತ್ತು ಎಕ್ಸ್‌ಟ್ರಿಮ್ 200ಎಸ್ ಬೈಕುಗಳು

ಈ ಎಂಜಿನ್ ಅನ್ನು ಐದು-ಸ್ಪೀಡ್ ಗೇರ್‌ಬಾಕ್ಸ್‌ನೊಂದಿಗೆ ಜೋಡಿಸಲಾಗಿದೆ. ಎಂಜಿನ್ ನಲ್ಲಿ ಹೀರೋನ ಪ್ರೋಗ್ರಾಮ್ ಮಾಡಲಾದ ಫ್ಯೂಯಲ್-ಇಂಜೆಕ್ಷನ್ ಸಿಸ್ಟಂ ಅನ್ನು ಸಹ ಹೊಂದಿದೆ. ಇದು ಅತ್ಯುತ್ತಮ ಕಾರ್ಯಕ್ಷಮತೆ ಮತ್ತು ಹೆಚ್ಚಿನ ದಕ್ಷತೆಯನ್ನು ಒದಗಿಸುತ್ತದೆ.

ದುಬಾರಿಯಾಯ್ತು ಹೊಸ ಹೀರೋ ಎಕ್ಸ್‌ಟ್ರಿಮ್ 160ಆರ್ ಮತ್ತು ಎಕ್ಸ್‌ಟ್ರಿಮ್ 200ಎಸ್ ಬೈಕುಗಳು

ಹೀರೋ ಎಕ್ಸ್‌ಟ್ರಿಮ್ 160ಆರ್ ಬೈಕ್ ಕೇವಲ 7 ಸೆಕೆಂಡುಗಳಲ್ಲಿ 0 ದಿಂದ 60 ಕಿ.ಮೀ ಕ್ರಮಿಸುತ್ತದ ಎಂದು ಹೀರೋ ಹೇಳಿಕೊಂಡಿದೆ. ಹೊಸ ಹೀರೋ ಎಕ್ಸ್‌ಟ್ರಿಮ್ 160ಆರ್ ಬೈಕಿನ ಬೇಸ್ ಸ್ಪೆಕ್ ಮಾದರಿಯು 138.5 ಕೆಜಿ ತೂಕವನ್ನು ಹೊಂದಿದೆ.

MOST READ: ಬಿಡುಗಡೆಯಾಯ್ತು ಹೊಸ ಕವಾಸಕಿ ವಲ್ಕನ್ ಎಸ್ ಬೈಕ್

ದುಬಾರಿಯಾಯ್ತು ಹೊಸ ಹೀರೋ ಎಕ್ಸ್‌ಟ್ರಿಮ್ 160ಆರ್ ಮತ್ತು ಎಕ್ಸ್‌ಟ್ರಿಮ್ 200ಎಸ್ ಬೈಕುಗಳು

ಬಿಎಸ್ 6 ಹೀರೋ ಎಕ್ಸ್‌ಟ್ರಿಮ್ 160ಆರ್ ಬೈಕ್ ಸ್ಪೋರ್ಟಿ ಲುಕ್ ಅನ್ನು ಹೊಂದಿದೆ. ಈ ಬೈಕ್ ಹಲವಾರು ಹೊಸ ಪ್ರೀಮಿಯಂ ಫೀಚರುಗಳನ್ನು ಹೊಂದಿದೆ. ಈ ಬೈಕಿನಲ್ಲಿ ಎಲ್‌ಇಡಿ ಹೆಡ್ ಲ್ಯಾಂಪ್, ಡಿಆರ್‌ಎಲ್‌ ಇಂಡೀಕೆಟರ್ ಮತ್ತು ಟೇಲ್ ಲೈಟ್ ಮತ್ತು ಎಲ್‌ಸಿಡಿ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಅನ್ನು ಹೊಂದಿದೆ.

ದುಬಾರಿಯಾಯ್ತು ಹೊಸ ಹೀರೋ ಎಕ್ಸ್‌ಟ್ರಿಮ್ 160ಆರ್ ಮತ್ತು ಎಕ್ಸ್‌ಟ್ರಿಮ್ 200ಎಸ್ ಬೈಕುಗಳು

ಈ ಬೈಕಿನಲ್ಲಿ ಮುಂಭಾಗದಲ್ಲಿ 276 ಎಂಎಂ ಪೆಟಲ್ ಡಿಸ್ಕ್ ಮತ್ತು ಹಿಂಭಾಗದಲ್ಲಿ 220 ಎಂಎಂ ಡಿಸ್ಕ್ ಅಥವಾ 130 ಎಂಎಂ ಡ್ರಮ್ ಬ್ರೇಕ್ ಗಳೊಂದಿಗೆ ಎಬಿಎಸ್ ಅನ್ನು ನೀಡಿದೆ. ಹೀರೋ ಎಕ್ಸ್‌ಟ್ರಿಮ್ 160ಆರ್ ಭಾರತೀಯ ಮಾರುಕಟ್ಟೆಯಲ್ಲಿ ಮಾರುಕಟ್ಟೆಯಲ್ಲಿ ಟಿವಿಎಸ್ ಅಪಾಚೆ ಆರ್‍‍ಟಿ‍ಆರ್ 160 4ವಿ, ಬಜಾಜ್ ಪಲ್ಸರ್ ಎನ್ಎಸ್ 160 ಮತ್ತು ಸುಜುಕಿ ಜಿಕ್ಸರ್ 150 ಬೈಕುಗಳಿಗೆ ಪೈಪೋಟಿ ನೀಡುತ್ತದೆ.

MOST READ: ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್‍‍ಮಾಸ್ಟರ್ ಬೈಕ್

ದುಬಾರಿಯಾಯ್ತು ಹೊಸ ಹೀರೋ ಎಕ್ಸ್‌ಟ್ರಿಮ್ 160ಆರ್ ಮತ್ತು ಎಕ್ಸ್‌ಟ್ರಿಮ್ 200ಎಸ್ ಬೈಕುಗಳು

ಇನ್ನು ಹೊಸ ಹೀರೋ ಎಕ್ಸ್‌ಟ್ರಿಮ್ 200ಎಸ್ ಬೈಕಿನಲ್ಲಿ ಹಲವಾರು ಹೊಸ ಫೀಚರ್ ಗಳು, ಹೆಚ್ಚುವರಿ ಉಪಕರಣಗಳು ಮತ್ತು ವಿನ್ಯಾಸದಲ್ಲಿ ಸ್ವಲ್ಪ ನವೀಕರಣಗಳನ್ನು ನಡೆಸಲಾಗಿದೆ. ಹೊಸ ಎಕ್ಸ್‌ಟ್ರಿಮ್ 200ಎಸ್ ಬೈಕ್ ಟ್ವಿನ್ ಎಲ್ಇಡಿ ಹೆಡ್ ಲ್ಯಾಂಪ್ ಗಳು, ಎಲ್ಇಡಿ ಟೈಲ್ ಲೈಟ್ ಗಳು, ಹಿಂಭಾಗದ ಕೌಲ್ ವಿನ್ಯಾಸ, ಆಂಟಿ-ಸ್ಲಿಪ್ ಸೀಟುಗಳು ಮತ್ತು ಇತರ ನವೀಕರಣಗಳೊಂದಿಗೆ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ.

ದುಬಾರಿಯಾಯ್ತು ಹೊಸ ಹೀರೋ ಎಕ್ಸ್‌ಟ್ರಿಮ್ 160ಆರ್ ಮತ್ತು ಎಕ್ಸ್‌ಟ್ರಿಮ್ 200ಎಸ್ ಬೈಕುಗಳು

ಹೊಸ ಎಕ್ಸ್‌ಟ್ರಿಮ್ 200ಎಸ್ ಬೈಕಿನಲ್ಲಿ ಅದೇ 199 ಸಿಸಿ ಸಿಂಗಲ್-ಸಿಲಿಂಡರ್ ಆಯಿಲ್-ಕೂಲ್ಡ್ ಫ್ಯೂಯಲ್ -ಇಂಜೆಕ್ಟ್ ಎಂಜಿನ್‌ ಅನ್ನು ನವೀಕರಿಸಿ ಅದನ್ನು ಅಳವಡಿಸಲಾಗಿದೆ. ಈ ಎಂಜಿನ್ 8500 ಆರ್‌ಪಿಎಂನಲ್ಲಿ 17.8 ಬಿಹೆಚ್‌ಪಿ ಪವರ್ ಮತ್ತು 6500 ಆರ್‌ಪಿಎಂನಲ್ಲಿ 16.4 ಎನ್ಎಂ ಪೀಕ್ ಟಾರ್ಕ್ ಅನ್ನು ಉತ್ಪಾದಿಸುತ್ತದೆ, ಈ ಎಂಜಿನ್ ಅನ್ನು ಐದು-ಸ್ಪೀಡ್ ಗೇರ್‌ಬಾಕ್ಸ್‌ನೊಂದಿಗೆ ಜೋಡಿಸಲಾಗಿದೆ.

ದುಬಾರಿಯಾಯ್ತು ಹೊಸ ಹೀರೋ ಎಕ್ಸ್‌ಟ್ರಿಮ್ 160ಆರ್ ಮತ್ತು ಎಕ್ಸ್‌ಟ್ರಿಮ್ 200ಎಸ್ ಬೈಕುಗಳು

ಹೊಸ ಎಕ್ಸ್‌ಟ್ರಿಮ್ 200ಎಸ್ ಬೈಕ್ ಬ್ಲೂಟೂತ್ ಕನೆಕ್ಟಿವಿಟಿಯೊಂದಿಗೆ ಸಂಪೂರ್ಣ ಡಿಜಿಟಲ್ ಎಲ್ಸಿಡಿ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಅನ್ನು ಹೊಂದಿದೆ. ಇದರಲ್ಲಿ ಟರ್ನ್-ಬೈ-ಟರ್ನ್ ನ್ಯಾವಿಗೇಷನ್, ಗೇರ್ ಇಂಡಿಕೇಟರ್, ಟ್ರಿಪ್ ಮೀಟರ್ ಮತ್ತು ಸರ್ವಿಸ್ ರಿಮೈಂಡರ್ ಮತ್ತು ಇತರ ಮಾಹಿತಿಗಳನ್ನು ನೀಡುತ್ತದೆ. ಈ ಹೊಸ ಹೀರೋ ಎಕ್ಸ್‌ಟ್ರಿಮ್ 200ಎಸ್ ಭಾರತೀಯ ಮಾರುಕಟ್ಟೆಯಲ್ಲಿ ಬಜಾಜ್ ಪಲ್ಸರ್ ಆರ್‍ಎಸ್ 200 ಮತ್ತು ಕೆಟಿಎಂ ಆರ್‍‍ಸಿ 200 ಬೈಕುಗಳಿಗೆ ಪೈಪೋಟಿ ನೀಡುತ್ತದೆ.

Most Read Articles

Kannada
English summary
Hero Xtreme 160R, Xtreme 200S Get Expensive. Read In Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X