ಮೇ ತಿಂಗಳಿನಲ್ಲಿ 1,83 ಲಕ್ಷ ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿದ ಹೀರೋ ಮೋಟೊಕಾರ್ಪ್

ದೇಶದ ಅತಿದೊಡ್ಡ ದ್ವಿಚಕ್ರ ವಾಹನ ತಯಾರಕ ಕಂಪನಿಯಾದ ಹೀರೋ ಮೋಟೊಕಾರ್ಪ್ 2021ರ ಮೇ ತಿಂಗಳಿನ ತನ್ನ ಮಾರಾಟ ವರದಿಯನ್ನು ಬಹಿರಂಗಪಡಿಸಿದೆ. ಕಳೆದ ತಿಂಗಳು ಹೀರೋ ಮೋಟೊಕಾರ್ಪ್ ಕಂಪನಿಯು 183,044 ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿದೆ.

ಮೇ ತಿಂಗಳಿನಲ್ಲಿ 1,83 ಲಕ್ಷ ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿದ ಹೀರೋ ಮೋಟೊಕಾರ್ಪ್

ದೇಶದಲ್ಲಿ ಕರೋನಾ ಮಹಾಮಾರಿ ಆರ್ಭಟ ಇಳಿಕೆಯಾಗುತ್ತಿದೆ. ಆದರೆ ಕಳೆದ ತಿಂಗಳಿನಲ್ಲಿ ಕರೋನಾ ದಾಖಲೆಯ ಮಟ್ಟದಲ್ಲಿ ಕರೋನಾ ಪ್ರಕರಣಗಳು ದಾಖಲಾಗುತ್ತಿತ್ತು. ಇಂತಹ ಸಂದರ್ಭದಲ್ಲಿ ದೇಶದ ಅತಿದೊಡ್ಡ ದ್ವಿಚಕ್ರ ವಾಹನ ತಯಾರಕ ಕಂಪನಿಯು ಹೀರೋ ಮೊಟೊಕಾರ್ಪ್ 183,044 ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡುವಲ್ಲಿ ಯಶಸ್ವಿಯಾಗಿದೆ. ಇನ್ನು ಕಳೆದ ವರ್ಷದ ಮೇ ತಿಂಗಳಿನಲ್ಲಿ ಹೀರೋ 112,682 ಯುನಿಟ್‌ಗಳ ಮಾರಾಟಗೊಳಿಸಿತ್ತು.

ಮೇ ತಿಂಗಳಿನಲ್ಲಿ 1,83 ಲಕ್ಷ ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿದ ಹೀರೋ ಮೋಟೊಕಾರ್ಪ್

ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಶೇ.62.44 ರಷ್ಟು ಬೆಳವಣಿಗೆಯನ್ನು ಸಾಧಿಸಿದೆ. ಇನ್ನು ಇದೇ ವರ್ಷದ ಏಪ್ರಿಲ್ ತಿಂಗಳಿನಲ್ಲಿ ಹೀರೋ ಕಂಪನಿಯು 72,285 ಯುನಿಟ್‌ಗಳನ್ನು ಮಾರಾಟಗೊಳಿಸಲಾಗಿತ್ತು.

MOST READ: ಹೊಸ ಹೀರೋ ಎಕ್ಸ್‌ಟ್ರಿಮ್ 160ಆರ್ 100 ಮಿಲಿಯನ್ ಎಡಿಷನ್ ಬಿಡುಗಡೆ

ಮೇ ತಿಂಗಳಿನಲ್ಲಿ 1,83 ಲಕ್ಷ ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿದ ಹೀರೋ ಮೋಟೊಕಾರ್ಪ್

ಇದನ್ನು ಈ ವರ್ಷದ ಮೇ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಶೇ.50.83 ಕುಸಿತವಾಗಿದೆ. ಕರೋನಾ ಮಹಾಮಾರಿ ಆರ್ಭಟವು ಹೀರೋ ಮೋಟೊಕಾರ್ಪ್ ದ್ವಿಚಕ್ರ ವಾಹನಗಳ ಮಾರಾಟದ ಮೇಲೆ ಪರಿಣಾಮ ಬೀರಿದೆ.

ಮೇ ತಿಂಗಳಿನಲ್ಲಿ 1,83 ಲಕ್ಷ ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿದ ಹೀರೋ ಮೋಟೊಕಾರ್ಪ್

ಕಂಪನಿಯು ಏಪ್ರಿಲ್ 22 ರಂದು ದೇಶಾದ್ಯಂತ ತನ್ನ ಎಲ್ಲಾ ಉತ್ಪಾದನಾ ಸೌಲಭ್ಯಗಳಲ್ಲಿ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಿತು. ಗುರುಗ್ರಾಮ್, ಹರಿದ್ವಾರ ಮತ್ತು ಧರುಹೆದಲ್ಲಿರುವ ಮೂರು ಸ್ಥಾವರಗಳು ಮೇ 17 ರಂದು ಸಿಂಗಲ್-ಶಿಫ್ಟ್ ಆಗಿ ಕಾರ್ಯಾಚರಣೆಯನ್ನು ಪುನರಾರಂಭಿಸಿದ್ದರು. ಮತ್ತು ಇತರ ಮೂರು ಘಟಕಗಳು ಮೇ 24 ರಂದು ಪುನರಾರಂಭಿಸಿದ್ದರು.

MOST READ: ಬಿಡುಗಡೆಯಾಯ್ತು ಹೊಸ ಕವಾಸಕಿ ವಲ್ಕನ್ ಎಸ್ ಬೈಕ್

ಮೇ ತಿಂಗಳಿನಲ್ಲಿ 1,83 ಲಕ್ಷ ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿದ ಹೀರೋ ಮೋಟೊಕಾರ್ಪ್

ಇನ್ನು ಲಾಕ್‌ಡೌನ್ ಅವಧಿಯಲ್ಲಿ ಹಲವಾರು ಗ್ರಾಹಕರು ತಮ್ಮ ವಾಹನಗಳ ಫ್ರೀ ಸರ್ವೀಸ್ ಅವಧಿ ಮುಕ್ತಾಯವಾಗುತ್ತದೆ ಎಂಬ ಆತಂಕದಲ್ಲಿದ್ದರು. ಗ್ರಾಹಕರ ಆತಂಕವನ್ನು ದೂರ ಮಾಡಲು ಹಲವು ವಾಹನ ತಯಾರಕ ಕಂಪನಿಗಳು ಫ್ರೀ ಸರ್ವೀಸ್ ಅವಧಿಯನ್ನು ವಿಸ್ತರಿಸಿವೆ.

ಮೇ ತಿಂಗಳಿನಲ್ಲಿ 1,83 ಲಕ್ಷ ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿದ ಹೀರೋ ಮೋಟೊಕಾರ್ಪ್

ಭಾರತದ ಅತಿ ದೊಡ್ಡ ದ್ವಿಚಕ್ರ ವಾಹನ ತಯಾರಕ ಕಂಪನಿಯಾದ ಹೀರೋ ಮೋಟೊಕಾರ್ಪ್ ಸಹ ತನ್ನ ವಾಹನಗಳ ಫ್ರೀ ಸರ್ವೀಸ್ ಹಾಗೂ ವಾರಂಟಿ ಅವಧಿಯನ್ನು ಜುಲೈ 31ರವರೆಗೆ ವಿಸ್ತರಿಸಲಾಗಿದೆ ಎಂದು ಕಂಪನಿ ತಿಳಿಸಿದೆ.

MOST READ: ಹೊಸ ಹೀರೋ ಎಕ್ಸ್‌ಟ್ರಿಮ್ 160ಆರ್ 100 ಮಿಲಿಯನ್ ಎಡಿಷನ್ ಬಿಡುಗಡೆ

ಮೇ ತಿಂಗಳಿನಲ್ಲಿ 1,83 ಲಕ್ಷ ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿದ ಹೀರೋ ಮೋಟೊಕಾರ್ಪ್

ಇನ್ನು ಹೀರೋ ಮೋಟೊಕಾರ್ಪ್ ಸಹಭಾಗಿತ್ವ ಯೋಜನೆಯಲ್ಲಿ ಬ್ಯಾಟರಿ ವಿನಿಮಯ ಕೇಂದ್ರಗಳನ್ನು ಮತ್ತು ಸ್ಥಿರ ಚಾರ್ಜಿಂಗ್ ನಿಲ್ದಾಣಗಳನ್ನು ನಿರ್ಮಾಣ ಮಾಡಲು ಮುಂದಾಗಿದೆ. ತೈವಾನ್ ಮೂಲದ ಗೊಗೊರೊ ಕಂಪನಿಯ ಜೊತೆಗೆ ಹೊಸ ಒಪ್ಪಂದಕ್ಕೆ ಸಹಿಹಾಕಿರುವ ಹೀರೋ ಮೋಟಾಕಾರ್ಪ್ ಕಂಪನಿಯು ಭಾರತದಲ್ಲಿ ಇವಿ ವಾಹನ ಮಾರಾಟದ ಮೇಲೆ ಭಾರೀ ಪ್ರಮಾಣದ ಹೂಡಿಕೆಗೆ ಸಿದ್ದವಾಗಿದೆ.

ಮೇ ತಿಂಗಳಿನಲ್ಲಿ 1,83 ಲಕ್ಷ ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿದ ಹೀರೋ ಮೋಟೊಕಾರ್ಪ್

ಕೊನೆಯ ಮೈಲಿಯ ವರೆಗೂ ಚಾರ್ಜಿಂಗ್ ನಿಲ್ದಾಣಗಳನ್ನು ಸ್ಥಾಪಿಸುವ ಗುರಿಯೊಂದಿಗೆ ಗೊಗೊರೊ ನಿರ್ಮಾಣದ ಪ್ರಮುಖ ಇವಿ ಮಾದರಿಗಳನ್ನು ಭಾರತದಲ್ಲೂ ಬಿಡುಗಡೆ ಮಾಡಲಿದೆ. ಇನ್ನು ದೇಶದಲ್ಲಿ ಕೊರೊನಾ ಪ್ರಕರಣಗಳು ಕಡಿಮೆಯಾಗುತ್ತಿರುವುದರಿಂದ ಮುಂದಿನ ದಿನಗಳಲ್ಲಿ ಹೀರೋ ದ್ವಿಚಕ್ರ ವಾಹನಗಳ ಮಾರಾಟವು ಏರಿಕೆ ಕಾಣಬಹುದು.

Most Read Articles

Kannada
English summary
Two-Wheeler Sales May 2021: Hero MotoCorp Sells 1.83 Lakh Two-Wheelers. Read In Kannada.
Story first published: Wednesday, June 2, 2021, 17:39 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X