ಜುಲೈ ತಿಂಗಳಿನಲ್ಲಿ 4.5 ಲಕ್ಷ ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿದ ಹೀರೋ ಮೋಟೊಕಾರ್ಪ್

ದೇಶದ ಅತಿದೊಡ್ಡ ದ್ವಿಚಕ್ರ ವಾಹನ ತಯಾರಕ ಕಂಪನಿಯಾದ ಹೀರೋ ಮೋಟೊಕಾರ್ಪ್ 2021ರ ಜುಲೈ ತಿಂಗಳಿನ ತನ್ನ ಮಾರಾಟ ವರದಿಯನ್ನು ಬಹಿರಂಗಪಡಿಸಿದೆ. ಈ ವರದಿಯ ಪ್ರಕಾರ, ಕಳೆದ ತಿಂಗಳು ಹೀರೋ ಮೋಟೊಕಾರ್ಪ್ ಕಂಪನಿಯು 4,54,398 ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿದೆ.

ಜುಲೈ ತಿಂಗಳಿನಲ್ಲಿ 4.5 ಲಕ್ಷ ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿದ ಹೀರೋ ಮೋಟೊಕಾರ್ಪ್

ಕಳೆದ ವರ್ಷದ ಜುಲೈ ತಿಂಗಳಿನಲ್ಲಿ ಹೀರೋ ಮೋಟೊಕಾರ್ಪ್ ಕಂಪನಿಯು 5,20,104 ಯುನಿಟ್‌ಗಳನ್ನು ಮಾರಾಟ ಗೊಳಿಸಿತ್ತು. ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಶೇ.12.6 ಕುಸಿತ ಕಂಡಿದೆ. ಕಂಪನಿಯ ಹೆಚ್ಚಿನ ರಿಟೇಲ್ ಟಚ್ ಪಾಯಿಂಟ್‌ಗಳು ಕಾರ್ಯನಿರ್ವಹಿಸುತ್ತಿವೆ ಎಂದು ಕಂಪನಿಯು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.ಕೆ ಲವು ರಾಜ್ಯಗಳಿಂದ ಸ್ಥಳೀಯ ಲಾಕ್‌ಡೌನ್‌ಗಳನ್ನು ಹೇರಲಾಗಿದ್ದು, ಅದೇನೇ ಇದ್ದರೂ, ಹೀರೋ ಮೋಟೋಕಾರ್ಪ್ ಸಾಕಷ್ಟು ಆಶಾವಾದಿಯಾಗಿದ್ದು, ಭಾರತದ ಗ್ರಾಮೀಣ ಭಾಗದಲ್ಲಿ ಮತ್ತು ಸಣ್ಣ ನಗರಗಳ ಮಾರುಕಟ್ಟೆಯಲ್ಲಿ ಉತ್ತಮ ಆದ್ಯತೆಯ ಮೇಲೆ ಪುಟಿದೇಳುವ ನಿರೀಕ್ಷೆಯಿದೆ ಎಂದು ಹೀರೋ ಕಂಪನಿ ಹೇಳಿದೆ.

ಜುಲೈ ತಿಂಗಳಿನಲ್ಲಿ 4.5 ಲಕ್ಷ ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿದ ಹೀರೋ ಮೋಟೊಕಾರ್ಪ್

ಕಳೆದ ತಿಂಗಳಿನಲ್ಲಿ ಕಂಪನಿಯು 4,29,208 ಯೂನಿಟ್‌ಗಳನ್ನು ಮಾರಾಟ ಮಾಡಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 5,12,541 ಯುನಿಟ್‌ಗಳನ್ನು ಇಲ್ಲಿ ಮಾರಾಟ ಮಾಡಲಾಗಿತ್ತು. ಮಾರಾಟದಲ್ಲಿ ಕುಸಿತವನ್ನು ಕಂಡಿದರೆ ರಫ್ತಿನಲ್ಲಿ ಗಮನಾರ್ಹ ಬದಲಾವಣೆಗಳನ್ನು ಕಂಡಿದೆ.

ಜುಲೈ ತಿಂಗಳಿನಲ್ಲಿ 4.5 ಲಕ್ಷ ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿದ ಹೀರೋ ಮೋಟೊಕಾರ್ಪ್

ಕಳೆದ ತಿಂಗಳು ಹೀರೋ ಮೋಟೊಕಾರ್ಪ್ ಕಂಪನಿಯು 25,190 ಯುನಿಟ್‌ಗಳನ್ನು ರಫ್ತು ಮಾಡಿದೆ. ಇನ್ನು ಕಳೆದ ವರ್ಷದ ಜುಲೈ ತಿಂಗಳಿನಲ್ಲಿ ಕೇವಲ 7,563 ಯುನಿಟ್‌ಗಳನ್ನು ಮಾಡಲಾಗಿತ್ತು. ಇದಕ್ಕೆ ಹೋಲಿಸಿದರೆ ಕಳೆದ ತಿಂಗಳು ರಫ್ತಿನಲ್ಲಿ ಭಾರೀ ಬೆಳವಣೆಗೆಯನ್ನು ಸಾಧಿಸಿದೆ,

ಜುಲೈ ತಿಂಗಳಿನಲ್ಲಿ 4.5 ಲಕ್ಷ ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿದ ಹೀರೋ ಮೋಟೊಕಾರ್ಪ್

ಕರೋನಾ ವೈರಸ್‌ ಎರಡನೇ ಅಲೆ ಭಾರತದಲ್ಲಿ ಅಪಾರ ಪ್ರಮಾಣದ ಹಾನಿಯನ್ನುಂಟು ಮಾಡಿತು. ಈಗ ಕೋವಿಡ್ 19 ಎರಡನೇ ಅಲೆ ತೀವ್ರತೆ ಕಡಿಮೆಯಾಗಿದ್ದರೂ ಮೂರನೇ ಅಲೆ ಭಾರತಕ್ಕೆ ಅಪ್ಪಳಿಸಲಿದೆ ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ.

ಜುಲೈ ತಿಂಗಳಿನಲ್ಲಿ 4.5 ಲಕ್ಷ ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿದ ಹೀರೋ ಮೋಟೊಕಾರ್ಪ್

ಹೀರೋ ಮೋಟೊಕಾರ್ಪ್ ರಾಷ್ಟ್ರ ರಾಜಧಾನಿ ದೆಹಲಿಯ ಜನತೆಗೆ ನೆರವು ನೀಡಿರುವ ಬಗ್ಗೆ ವರದಿಯಾಗಿದೆ. ದೆಹಲಿಯು ಕರೋನಾ ವೈರಸ್ ಎರಡನೇ ಅಲೆಯಿಂದ ತೀವ್ರವಾಗಿ ತತ್ತರಿಸಿತ್ತು. ಹೀರೋ ಮೋಟೊಕಾರ್ಪ್ ಕಂಪನಿಯು ದೆಹಲಿಯ ಜನಕಪುರಿ ಪ್ರದೇಶದಲ್ಲಿ 50 ಹಾಸಿಗೆಗಳ ಕೋವಿಡ್ 19 ಆಸ್ಪತ್ರೆಯನ್ನು ತೆರೆದಿದೆ. ಇದು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಆಗಿದೆ,

ಜುಲೈ ತಿಂಗಳಿನಲ್ಲಿ 4.5 ಲಕ್ಷ ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿದ ಹೀರೋ ಮೋಟೊಕಾರ್ಪ್

ಹೀರೋ ಮೋಟೊಕಾರ್ಪ್ ಕಂಪನಿಯು ಪೀಪಲ್ ಟು ಪೀಪಲ್ ಹೆಲ್ತ್ ಫೌಂಡೇಶನ್ ಸಹಭಾಗಿತ್ವದಲ್ಲಿ ಈ ಆಸ್ಪತ್ರೆಯನ್ನು ನಿರ್ವಹಿಸಲಿದೆ. ಮುಂಬರುವ ಮೂರನೇ ಅಲೆಯ ಸಂದರ್ಭದಲ್ಲಿ ಈ ಪರಿಸ್ಥಿತಿ ಎದುರಾಗದಂತೆ ತಡೆಯಲು ಮುನ್ನೆಚ್ಚರಿಕಾ ಕ್ರಮವಾಗಿ ರಾಜಧಾನಿ ದೆಹಲಿಯಲ್ಲಿ 50 ಹಾಸಿಗೆಗಳ ಕೋವಿಡ್ 19 ಆಸ್ಪತ್ರೆಯನ್ನು ತೆರೆಯಲಾಗಿದೆ.

ಜುಲೈ ತಿಂಗಳಿನಲ್ಲಿ 4.5 ಲಕ್ಷ ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿದ ಹೀರೋ ಮೋಟೊಕಾರ್ಪ್

ಹೀರೋ ಕಂಪನಿಯು ತನ್ನ ದ್ವಿಚಕ್ರ ವಾಹನಗಳನ್ನು ಆಸ್ಪತ್ರೆಗಳಿಗೆ ಮಾತ್ರವಲ್ಲದೇ ಆರೋಗ್ಯ ಕಾರ್ಯಕರ್ತರಿಗೂ ಕೊಡುಗೆಯಾಗಿ ನೀಡಿದೆ. ಹರಿಯಾಣದ ಏಳು ಆಸ್ಪತ್ರೆ, ಉತ್ತರಾಖಂಡದ ನಾಲ್ಕು ಆಸ್ಪತ್ರೆ, ಗುರುಗ್ರಾಮದ ನಾಲ್ಕು ಆಸ್ಪತ್ರೆಗಳಿಗೆ ದ್ವಿಚಕ್ರ ವಾಹನಗಳನ್ನು ಉಚಿತವಾಗಿ ನೀಡಿದೆ.

ಜುಲೈ ತಿಂಗಳಿನಲ್ಲಿ 4.5 ಲಕ್ಷ ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿದ ಹೀರೋ ಮೋಟೊಕಾರ್ಪ್

ಇದರ ಜೊತೆಗೆ ಜೈಪುರ, ರಾಜಸ್ಥಾನ, ಹಲೋಲ್ ಹಾಗೂ ಗುಜರಾತ್ ಆಸ್ಪತ್ರೆಗಳಲ್ಲಿ ಕಾರ್ಯ ನಿರ್ವಹಿಸುವ ಆರೋಗ್ಯ ಕಾರ್ಯಕರ್ತರಿಗೂ ದ್ವಿಚಕ್ರ ವಾಹನಗಳನ್ನು ಉಚಿತವಾಗಿ ನೀಡಿದೆ. ಹೀರೋ ಮೋಟೊಕಾರ್ಪ್ ಕಂಪನಿಯು ಆಕ್ಸಿಜನ್ ಸಿಲಿಂಡರ್ ಹಾಗೂ ಪಿಪಿಇ ಕಿಟ್ ಸೇರಿದಂತೆ ಹಲವು ವೈದ್ಯಕೀಯ ಉಪಕರಣಗಳನ್ನು ಕೂಡ ಒದಗಿಸಿದೆ.

ಜುಲೈ ತಿಂಗಳಿನಲ್ಲಿ 4.5 ಲಕ್ಷ ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿದ ಹೀರೋ ಮೋಟೊಕಾರ್ಪ್

ಹೀರೋ ಮೋಟೊಕಾರ್ಪ್ ತನ್ನ ಪೋರ್ಟ್ಫೋಲಿಯೊದಲ್ಲಿರುವ ಹಲವಾರು ಜನಪ್ರಿಯ ಮಾದರಿಗಳನ್ನು ಹೊಸ ನವೀಕರಣಗಳೊಂದಿಗೆ ಬಿಡುಗಡೆಗೊಳಿಸುತ್ತಿದೆ. ಇದೀಗ ಹೀರೋ ಕಂಪನಿಯು ಜನಪ್ರಿಯ ಗ್ಲ್ಯಾಮರ್ ನವೀಕರಿಸಿ ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಇದರ ಮೂಲಕ ಹೀರೋ ಕಂಪನಿಯು ದ್ವಿಚಕ್ರ ವಿಭಾಗದಲ್ಲಿ ತನ್ನ ಪಾರುಪತ್ಯ ಮುಂದುವರೆಸಲಿದೆ.

Most Read Articles

Kannada
English summary
Hero MotoCorp July 2021 Sales Decline. Read In Kannada.
Story first published: Tuesday, August 3, 2021, 10:20 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X