ಜೂನ್ ತಿಂಗಳಿನಲ್ಲಿ 4.6 ಲಕ್ಷ ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿದ ಹೀರೋ ಮೋಟೊಕಾರ್ಪ್

ದೇಶದ ಅತಿದೊಡ್ಡ ದ್ವಿಚಕ್ರ ವಾಹನ ತಯಾರಕ ಕಂಪನಿಯಾದ ಹೀರೋ ಮೋಟೊಕಾರ್ಪ್ 2021ರ ಜೂನ್ ತಿಂಗಳಿನ ತನ್ನ ಮಾರಾಟ ವರದಿಯನ್ನು ಬಹಿರಂಗಪಡಿಸಿದೆ. ಈ ವರದಿಯ ಪ್ರಕಾರ, ಕಳೆದ ತಿಂಗಳು ಹೀರೋ ಮೋಟೊಕಾರ್ಪ್ ಕಂಪನಿಯು 4.6 ಲಕ್ಷ ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿದೆ.

ಜೂನ್ ತಿಂಗಳಿನಲ್ಲಿ 4.6 ಲಕ್ಷ ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿದ ಹೀರೋ ಮೋಟೊಕಾರ್ಪ್

ಹೀರೋ ಮೋಟೊಕಾರ್ಪ್ ಕಂಪನಿಯು ಪ್ರಸಕ್ತ ಹಣಕಾಸು ವರ್ಷದ ಮೊದಲ ಮೂರು ತಿಂಗಳಲ್ಲಿ 10,24,507 ದ್ವಿಚಕ್ರ ವಾಹನ ಯುನಿಟ್ ಗಳನ್ನು ಮಾರಾಟ ಮಾಡಿದೆ. ದೇಶಾದ್ಯಂತ ಲಾಕ್‌ಡೌನ್ ನಿರ್ಬಂಧಗಳನ್ನು ಕ್ರಮೇಣ ಸಡಿಲಗೊಳಿಸುತ್ತಿದೆ. ಕಳೆದ ತಿಂಗಳಿನಲ್ಲಿ ದೇಶದಲ್ಲಿ ಹಲವು ಕಡೆ ಲಾಕ್‌ಡೌನ್ ನಿರ್ಬಂಧಗಳನ್ನು ಸಡಿಲಗೊಳಿಸಿದ ಕಾರಣ ಬರೊಬ್ಬರಿ 4,69,160 ಹೀರೋ ದ್ವಿಚಕ್ರ ವಾಹನಗಳು ಮಾರಾಟವಾಗಿವೆ.

ಜೂನ್ ತಿಂಗಳಿನಲ್ಲಿ 4.6 ಲಕ್ಷ ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿದ ಹೀರೋ ಮೋಟೊಕಾರ್ಪ್

ಹೀರೋ ಮೋಟೊಕಾರ್ಪ್ ಜೂನ್ ತಿಂಗಳ ಮಾರಾಟದಲ್ಲಿ ಮೇಲುಗೈ ಸಾಧಿಸಿದೆ, 2021ರ ಜೂನ್ ತಿಂಗಳಿನಲ್ಲಿ 4,41,536 ಯುನಿಟ್ ಗಳನ್ನು ರವಾನಿಸಲಾಗಿದ್ದು, 2020ರ ಜೂನ್ ತಿಂಗಳಿನಲ್ಲಿ 4,18,141 ಯುನಿಟ್‌ಗಳಿಂದ ಶೇ.5.6 ರಷ್ಟು ಬೆಳವಣಿಗೆಯನ್ನು ದಾಖಲಿಸಿದೆ.

ಜೂನ್ ತಿಂಗಳಿನಲ್ಲಿ 4.6 ಲಕ್ಷ ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿದ ಹೀರೋ ಮೋಟೊಕಾರ್ಪ್

ಒಟ್ಟಾರೆ 2021ರ ಜೂನ್‌ ತಿಂಗಳಿನಲ್ಲಿ ದೇಶೀಯ ಮಾರುಕಟ್ಟೆಯಲ್ಲಿ 4,69,160 ಯುನಿಟ್ ಗಳನ್ನು ಮಾರಾಟಗೊಳಿಸಿವೆ. ಹೀರೋನ ಒಟ್ಟಾರೆ ದ್ವಿಚಕ್ರ ವಾಹನ ಮಾರಾಟ (ಬೈಕ್ ಗಳು ಮತ್ತು ಸ್ಕೂಟರ್‌ಗಳು ಸೇರಿದಂತೆ) ದೇಶೀಯ ಮಾರುಕಟ್ಟೆಯಲ್ಲಿ ಶೇ.74 ರಷ್ಟು ಏರಿಕೆಯಾಗಿದೆ.

ಜೂನ್ ತಿಂಗಳಿನಲ್ಲಿ 4.6 ಲಕ್ಷ ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿದ ಹೀರೋ ಮೋಟೊಕಾರ್ಪ್

ಹೀರೋ ಮೊಟೊಕಾರ್ಪ್‌ನ ಹೇಳಿಕೆಯ ಪ್ರಕಾರ, ಕಂಪನಿಯ ಬಹುತೇಕ ಎಲ್ಲಾ ಗ್ರಾಹಕ ಟಚ್‌ಪಾಯಿಂಟ್‌ಗಳು ಈಗ ಕಾರ್ಯನಿರ್ವಹಿಸುತ್ತಿದ್ದು, ರಾಜ್ಯ ಮತ್ತು ಸ್ಥಳೀಯ ಮಾರ್ಗಸೂಚಿಗಳಿಗೆ ಅನುಸಾರವಾಗಿ ಕಟ್ಟುನಿಟ್ಟಾದ ಸುರಕ್ಷತಾ ಕ್ರಮಗಳನ್ನು ಕೈಗೊಂಡಿದೆ.

ಜೂನ್ ತಿಂಗಳಿನಲ್ಲಿ 4.6 ಲಕ್ಷ ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿದ ಹೀರೋ ಮೋಟೊಕಾರ್ಪ್

ಮುಂಬರು ಹಬ್ಬದ ಸೀಸನ್ ನಲ್ಲಿ ಹೀರೋ ದ್ವಿಚಕ್ರ ವಾಹನಗಳಿಗೆ ಬೇಡಿಕೆಯ ಹೆಚ್ಚಾಗುತ್ತದೆ. ದೇಶದ ಹಲವಾರು ಭಾಗಗಳಲ್ಲಿ, ಅದರಲ್ಲಿ ಗ್ರಾಮಿಣ ಭಾಗದಲ್ಲಿಯು ಮುಂದಿನ ದಿನಗಳಲ್ಲಿ ಮಾರಾಟದಲ್ಲಿ ಏರಿಕೆ ಕಾಣಬಹುದು,

ಜೂನ್ ತಿಂಗಳಿನಲ್ಲಿ 4.6 ಲಕ್ಷ ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿದ ಹೀರೋ ಮೋಟೊಕಾರ್ಪ್

ಇನ್ನು ಹೀರೋ ಮೋಟೊಕಾರ್ಪ್ ತನ್ನ ಬೈಕ್ ಹಾಗೂ ಸ್ಕೂಟರ್‌ಗಳ ಬೆಲೆಯನ್ನು ಜುಲೈ 1 ರಿಂದ ಹೆಚ್ಚಿಸಿದೆ. ವೆಚ್ಚ ಹೆಚ್ಚಳದಿಂದಾಗಿ ವಾಹನ ತಯಾರಿಕೆ ವೆಚ್ಚವು ಹೆಚ್ಚಾಗಿದೆ ಎಂದು ಕಂಪನಿ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಜೂನ್ ತಿಂಗಳಿನಲ್ಲಿ 4.6 ಲಕ್ಷ ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿದ ಹೀರೋ ಮೋಟೊಕಾರ್ಪ್

ಈ ಪರಿಸ್ಥಿತಿಯಲ್ಲಿ ಕಂಪನಿಯು ವಾಹನಗಳ ಬೆಲೆಯನ್ನು ಹೆಚ್ಚಿಸುವ ಮೂಲಕ ಉತ್ಪಾದನಾ ವೆಚ್ಚದ ಹೊರೆಯನ್ನು ಕಡಿಮೆ ಮಾಡಿಕೊಳ್ಳಲಿದೆ. ಬೆಲೆ ಏರಿಕೆಯಿಂದಾಗಿ ಗ್ರಾಹಕರಿಗೆ ಯಾವುದೇ ಹೊರೆಯಾಗದಂತೆ ಕಂಪನಿ ಕಾಳಜಿ ವಹಿಸಲಿದೆ ಎಂದು ಹೀರೋ ಮೋಟೊಕಾರ್ಪ್ ತಿಳಿಸಿದೆ.

ಜೂನ್ ತಿಂಗಳಿನಲ್ಲಿ 4.6 ಲಕ್ಷ ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿದ ಹೀರೋ ಮೋಟೊಕಾರ್ಪ್

ಜುಲೈ 1ರಿಂದ ತನ್ನ ಎಲ್ಲಾ ದ್ವಿಚಕ್ರ ವಾಹನಗಳ ಬೆಲೆ ರೂ.3,000ಗಳಷ್ಟು ಏರಿಕೆಯಾಗಲಿದೆ ಎಂದು ಕಂಪನಿ ಹೇಳಲಾಗಿತ್ತು. ಮಾದರಿಗಳಿಗೆ ತಕ್ಕಂತೆ ವಾಹನಗಳ ಬೆಲೆ ಏರಿಕೆಯಾಗಲಿದೆ. ಹೀರೋ ಮೋಟೊಕಾರ್ಪ್ ಕಂಪನಿಯು ಈ ವರ್ಷ ಮೂರನೇ ಬಾರಿ ಬೆಲೆ ಏರಿಕೆ ಮಾಡುತ್ತಿದೆ. ಈ ವರ್ಷ ಜನವರಿ ಹಾಗೂ ಏಪ್ರಿಲ್ ತಿಂಗಳಲ್ಲಿ ಕಂಪನಿಯು ತನ್ನ ವಾಹನಗಳ ಬೆಲೆಯನ್ನು ಹೆಚ್ಚಿಸಿತ್ತು.

Most Read Articles

Kannada
English summary
Hero MotoCorp Sells 4.6 Lakh Units In June 2021. Read In Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X