ಅಕ್ಟೋಬರ್ ತಿಂಗಳಿನಲ್ಲಿ 5.47 ಲಕ್ಷ ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿದ Hero Motocorp

ದೇಶದ ಅತಿದೊಡ್ಡ ದ್ವಿಚಕ್ರ ವಾಹನ ತಯಾರಕ ಕಂಪನಿಯಾದ ಹೀರೋ ಮೋಟೊಕಾರ್ಪ್ 2021ರ ಅಕ್ಟೋಬರ್ ತಿಂಗಳಿನ ತನ್ನ ಮಾರಾಟ ವರದಿಯನ್ನು ಬಹಿರಂಗಪಡಿಸಿದೆ. ಈ ವರದಿಯ ಪ್ರಕಾರ, ಕಳೆದ ತಿಂಗಳು ಹೀರೋ ಮೋಟೊಕಾರ್ಪ್ ಕಂಪನಿಯು 5,47,970 ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿದೆ.

ಅಕ್ಟೋಬರ್ ತಿಂಗಳಿನಲ್ಲಿ 5.47 ಲಕ್ಷ ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿದ Hero Motocorp

ಕಳೆದ ವರ್ಷದ ಅಕ್ಟೋಬರ್ ತಿಂಗಳ ಅವಧಿಯಲ್ಲಿ ಹೀರೋ ಮೋಟೊಕಾರ್ಪ್ ಕಂಪನಿಯು 8,06,848 ದ್ವಿಚಕ್ರ ವಾಹನಗಳನ್ನು ಮಾರಾಟಗೊಳಿಸಲಾಗಿತ್ತು. ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ವರ್ಷದಿಂದ ವರ್ಷಕ್ಕೆ ಹೀರೋ ಮೋಟೊಕಾರ್ಪ್ ಕಂಪನಿಯು ಮಾರಾಟದಲ್ಲಿ ಶೇ.32 ರಷ್ಟು ಕುಸಿದಿದೆ. ಇನ್ನು ಈ ವರ್ಷದ ಸೆಪ್ಟೆಂಬರ್ ತಿಂಗಳಿನಲ್ಲಿ ಹೀರೋ ಕಂಪನಿಯು 530,346 ಯೂನಿಟ್ ದ್ವಿಚಕ್ರ ವಾಹನಗಳನ್ನು ಮಾರಾಟಗೊಳಿಸಲಾಗಿತ್ತು. ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ತಿಂಗಳಿಂದ ತಿಂಗಳಿಗೆ ಮಾರಾಟದಲ್ಲಿ ಬೆಳವಣಿಗೆಯನ್ನು ಸಾಧಿಸಿದೆ.

ಅಕ್ಟೋಬರ್ ತಿಂಗಳಿನಲ್ಲಿ 5.47 ಲಕ್ಷ ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿದ Hero Motocorp

2021ರ ಅಕ್ಟೋಬರ್ ತಿಂಗಳಿನಲ್ಲಿ ಹೀರೋ ಮೋಟೊಕಾರ್ಪ್ 20,191 ಯುನಿಟ್‌ಗಳನ್ನು ರಫ್ತು ಮಾಡಿದ. ಕಳೆದ ವರ್ಷದ ಅಕ್ಟೋಬರ್ ತಿಂಗಳಿನಲ್ಲಿ ಹೀರೋ ಮೋಟೊಕಾರ್ಪ್ ಕಂಪನಿಯು 15,711 ಯುನಿಟ್‌ಗಳನ್ನು ರಫ್ಟು ಮಾಡಲಾಗಿತ್ತು. ಹೀರೋ ಮೋಟೊಕಾರ್ಪ್ ಕಂಪನಿಯು ರಫ್ಟಿನಲ್ಲಿ ಶೇ.28 ರಷ್ಟು ಬೆಳವಣಿಗೆಯನ್ನು ಸಾಧಿಸಿದೆ.

ಅಕ್ಟೋಬರ್ ತಿಂಗಳಿನಲ್ಲಿ 5.47 ಲಕ್ಷ ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿದ Hero Motocorp

ಕಂಪನಿಯ ಪ್ರಕಾರ, ಹಬ್ಬದ ಸೀಸನ್ ನಲ್ಲಿ ಬೇಡಿಕೆ ಹೆಚ್ಚುತ್ತಿದೆ ಮತ್ತು ಮುಂಬರುವ ವಾರಗಳಲ್ಲಿ ಕಂಪನಿಯು ಆರೋಗ್ಯಕರ ಮಾರಾಟವನ್ನು ನಿರೀಕ್ಷಿಸುತ್ತದೆ, ಧನ್ತೇರಸ್ ಮತ್ತು ದೀಪಾವಳಿ ಹಬ್ಬ ಬರಲಿದೆ. ಆರ್ಥಿಕತೆಯು ಕ್ರಮೇಣ ತೆರೆದುಕೊಳ್ಳುವುದರೊಂದಿಗೆ, ಪ್ರೋತ್ಸಾಹದಾಯಕ ಕೃಷಿ ಚಟುವಟಿಕೆ ಮತ್ತು ವೈಯಕ್ತಿಕ ಚಲನಶೀಲತೆಗೆ ಆದ್ಯತೆಯ ಉಲ್ಬಣದೊಂದಿಗೆ, ಮುಂಬರುವ ತಿಂಗಳುಗಳಲ್ಲಿ ಮಾರಾಟದಲ್ಲಿ ಪುನರುಜ್ಜೀವನವನ್ನು ಹೀರೋ ಕಂಪನಿ ನಿರೀಕ್ಷಿಸುತ್ತದೆ.

ಅಕ್ಟೋಬರ್ ತಿಂಗಳಿನಲ್ಲಿ 5.47 ಲಕ್ಷ ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿದ Hero Motocorp

ಹೀರೋ ಮೋಟೋಕಾರ್ಪ್ ತನ್ನ ಹೊಸ ಎಕ್ಸ್‌ಪಲ್ಸ್ 200 4ವಿ ಬೈಕನ್ನು ಭಾರತೀಯ ಮಾರುಕಟ್ಟೆಯಲ್ಲಿ ಇತ್ತೀಚೆಗೆ ಬಿಡುಗಡೆಗೊಳಿತು. ಈ ಹೀರೋ ಎಕ್ಸ್‌ಪಲ್ಸ್ 200 4ವಿಯಾವಾಗಲೂ ನೈಜ ಆಫ್-ರೋಡ್ ಸಾಮರ್ಥ್ಯ ಹೊಂದಿರುವ ಅತ್ಯಂತ ಸಮರ್ಥ ಎಂಟ್ರಿ ಲೆವೆಲ್ ಅಡ್ವೆಂಚರ್ ಬೈಕ್ ಆಗಿದೆ. ಈ ಹೊಸ ಬೈಕ್ ಕೈಗೆಟುಕುವ ಬೆಲೆಯನ್ನು ಹೊಂದಿದೆ.

ಅಕ್ಟೋಬರ್ ತಿಂಗಳಿನಲ್ಲಿ 5.47 ಲಕ್ಷ ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿದ Hero Motocorp

ಇನ್ನು ರಾಯಲ್ ಎನ್ ಫೀಲ್ಡ್ ಹಿಮಾಲಯನ್ ಮೇಲಿನ ವಿಭಾಗದಲ್ಲಿ ಗಣನೀಯವಾಗಿ ಹೆಚ್ಚಿನ ಬೆಲೆಯನ್ನು ಹೊಂದಿರುವುದರಿಂದ ಇದು ಯಾವುದೇ ನೇರ ಪ್ರತಿಸ್ಪರ್ಧಿ ಹೊಂದಿಲ್ಲ. ಹೀರೋ ಎಕ್ಸ್‌ಪಲ್ಸ್ 200 ಕಡಿಮೆ ತೂಕ ಮತ್ತು ವೇಗದ ಆಫ್-ರೋಡ್ ಸಾಮರ್ಥ್ಯದೊಂದಿಗೆ ಸಾಕಷ್ಟು ಜನಪ್ರಿಯ ಮಾದರಿಯಾಗಿದೆ. ಹೀರೋ ಮೋಟೋಕಾರ್ಪ್ ಎಕ್ಸ್‌ಪಲ್ಸ್ 200 ಅನ್ನು ಹೆಚ್ಚಿನ ಕಾರ್ಯಕ್ಷಮತೆಯನ್ನು ನೀಡಲು ನವೀಕರಿಸಿದೆ, ಜೊತೆಗೆ ಎಕ್ಸ್‌ಪಲ್ಸ್ 200 4ವ್ಯಾಲ್ಸ್ ಹೊಸ ಮನವಿಯೊಂದಿಗೆ ಪರಿಚಯಿಸಲು ಸಣ್ಣ ನವೀಕರಣಗಳನ್ನು ನಡೆಸಿದೆ.

ಅಕ್ಟೋಬರ್ ತಿಂಗಳಿನಲ್ಲಿ 5.47 ಲಕ್ಷ ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿದ Hero Motocorp

ಇನ್ನು ಹೀರೋ ಮೋಟೋಕಾರ್ಪ್ ಕಳೆದ ವರ್ಷ ಫೆಬ್ರವರಿಯಲ್ಲಿ ಹೀರೋ ಕನೆಕ್ಟ್ ಎಂಬ ತನ್ನ ಕನೆಕ್ಟಿವಿಟಿ ಫೀಚರ್ ಅನ್ನು ಪರಿಚಯಿಸಿತ್ತು. ಈ ಹೀರೋ ಕನೆಕ್ಟಿವಿಟಿ ಫೀಚರ್ಸ್ ದ್ವಿಚಕ್ರ ವಾಹನಗಳ ಮಾರಾಟವನ್ನು ಹೆಚ್ಚಿಸಲು ನೆರವಾಗಿದೆ. ಕನೆಕ್ಟಿವಿಟಿ ಫೀಚರ್ ಆಯ್ದ ನಗರಗಳಲ್ಲಿನ ಡೀಲರ್‌ಶಿಪ್‌ಗಳಲ್ಲಿ ಇದು ಲಭ್ಯವಿತ್ತು. ಇದೇ ರೀತಿ ಹೀರೋ ಕನೆಕ್ಟ್ ಹಲವಾರು ಕನೆಕ್ಟಿವಿಟಿ ಫೀಚರ್ಸ್ ಗಳನ್ನು ನೀಡುತ್ತದೆ. ಈಗ ಟಾಪ್ಲ್ ಅಲರ್ಟ್ ಫೀಚರ್ ಎಕ್ಸ್‌ಪಲ್ಸ್ 200 ಬೈಕ್ ನಲ್ಲಿ ಲಭ್ಯವಿದೆ.

ಅಕ್ಟೋಬರ್ ತಿಂಗಳಿನಲ್ಲಿ 5.47 ಲಕ್ಷ ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿದ Hero Motocorp

ಇದು ಬೈಕ್ ಉರುಳಿದಲ್ಲಿ ಆಟೋಮ್ಯಾಟಿಕ್ ಅಪ್ಲಿಕೇಶನ್ ನೋಟಿಫಿಕೇಶನ್ ಕಳುಹಿಸಿ ಮತ್ತು ಎಸ್‌ಎಂಎಸ್ ಅನ್ನು ತುರ್ತು ಸಂಪರ್ಕಗಳಿಗೆ ಕಳುಹಿಸಲಾಗುತ್ತದೆ. ನೋಂದಾಯಿತ ಮೊಬೈಲ್ ಸಂಖ್ಯೆಗೆ ನೋಟಿಫಿಕೇಶನ್ ಅನ್ನು ಕಳುಹಿಸಲಾಗುತ್ತದೆ. ವಾಹನ ಉರುಳಿಬಿದ್ದಾಗ ಬಳಕೆದಾರರು ತಮಗೆ ನೋಟಿಫಿಕೇಶನ್ ಗಾಗಿ ತುರ್ತು ಸಂಪರ್ಕಗಳನ್ನು ಆಯ್ಕೆ ಮಾಡಬಹುದು. ಅಪಘಾತದ ಸಂದರ್ಭದಲ್ಲಿ ಸಕಾಲಿಕ ವೈದ್ಯಕೀಯ ಸಹಾಯವು ನಿರ್ಣಾಯಕವಾಗಿರುವುದರಿಂದ ಈ ಫೀಚರ್ ಜೀವ ರಕ್ಷಕವಾಗಬಹುದು.

ಅಕ್ಟೋಬರ್ ತಿಂಗಳಿನಲ್ಲಿ 5.47 ಲಕ್ಷ ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿದ Hero Motocorp

ವಾಹನ ಉರುಳಿ ಬಿದ್ದಾಗ ನೋಟಿಫಿಕೇಶನ್ ಸ್ವೀಕರಿಸಿದ ನಂತರ, ತುರ್ತು ಸಂಪರ್ಕಗಳು ಪರಿಸ್ಥಿತಿಗೆ ತ್ವರಿತವಾಗಿ ಪ್ರತಿಕ್ರಿಯಿಸಬಹುದು.ಪರಿಸ್ಥಿತಿ ಅಗತ್ಯವಿದ್ದಲ್ಲಿ ವೈದ್ಯಕೀಯ ಸಹಾಯವನ್ನು ಕೋರಬಹುದು. ಇನ್ನು ಹೀರೋ ಕನೆಕ್ಟ್ ಅಪ್ಲಿಕೇಶನ್ ಟಾಪಲ್ ಅಲರ್ಟ್, ಟ್ರಿಪ್ ಅನಾಲಿಸಿಸ್, ಲೈವ್ ವೆಹಿಕಲ್ ಟ್ರ್ಯಾಕಿಂಗ್, ಟೌ ಅಲರ್ಟ್, ಜಿಯೋ-ಫೆನ್ಸ್ ಅಲರ್ಟ್, ಹೀರೋ ಲೊಕೇಟ್, ಸ್ಪೀಡ್ ಅಲರ್ಟ್ ಮುಂತಾದ ಫೀಚರ್ ಗಳನ್ನು ಒಳಗೊಂಡಿದೆ.

ಅಕ್ಟೋಬರ್ ತಿಂಗಳಿನಲ್ಲಿ 5.47 ಲಕ್ಷ ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿದ Hero Motocorp

ಜನಪ್ರಿಯ ದ್ವಿಚಕ್ರ ವಾಹನ ತಯಾರಕರಾದ ಹೀರೋ ಮೋಟೋಕಾರ್ಪ್ ಕಂಪನಿಯು ದುಬೈನಲ್ಲಿ ಹೊಸ ವಿಶೇಷ ಡೀಲರ್‌ಶಿಪ್ ಅನ್ನು ಉದ್ಘಾಟಿಸುವ ಮೂಲಕ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ನಲ್ಲಿ ತನ್ನ ಅಸ್ತಿತ್ವವನ್ನು ಬಲಪಡಿಸಿದೆ. ಹೊಸ ಅತ್ಯಾಧುನಿಕ ಡೀಲರ್‌ಶಿಪ್ 625 ಚದರ ಅಡಿಗಳಿಂದ ಕೂಡಿದೆ. ಈ ಹೊಸ ಹೀರೋ ಡೀಲರ್‌ಶಿಪ್ ನಲ್ಲಿ ಸೇಲ್ಸ್, ಸರ್ವಿಸ್ ಮತ್ತು ಅಕ್ಸೆಸರೀಸ್ ಗಳು ಲಭ್ಯವಿರುತ್ತದೆ. ಹೀರೋ ಮೋಟೋಕಾರ್ಪ್ ಬೈಕ್‌ಗಳು ಮತ್ತು ಸ್ಕೂಟರ್‌ಗಳ ಸಂಪೂರ್ಣ ಸರಣಿಯನ್ನು ಸಹ ಪ್ರದರ್ಶಿಸುತ್ತದೆ.

ಅಕ್ಟೋಬರ್ ತಿಂಗಳಿನಲ್ಲಿ 5.47 ಲಕ್ಷ ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿದ Hero Motocorp

ಕಾರ್ಯಾಗಾರವು ಎರಡು ಸೇವಾ ವಿಭಾಗವನ್ನು ಹೊಂದಿದ್ದು, ಗ್ರಾಹಕರಿಗೆ ಉತ್ತಮ-ದರ್ಜೆಯ ಮಾರಾಟದ ನಂತರದ ಸೇವಾ ಅನುಭವ ಮತ್ತು ಬಿಡಿಭಾಗಗಳನ್ನು ಒದಗಿಸುತ್ತದೆ. ಹೊಸ ದುಬೈ ಡೀಲರ್‌ಶಿಪ್‌ನೊಂದಿಗೆ ಹೀರೋ ಮೋಟೋಕಾರ್ಪ್ಈಗ ಗಲ್ಫ್ ಮಾರುಕಟ್ಟೆಯಲ್ಲಿ 5 ದೇಶಗಳಲ್ಲಿ 10 ಗ್ರಾಹಕ ಟಚ್‌ಪಾಯಿಂಟ್‌ಗಳನ್ನು ಹೊಂದಿದೆ.ಉದ್ಘಾಟನೆಯ ಸಮಯದಲ್ಲಿ, 100 ಹೀರೋ ಮೋಟೋಕಾರ್ಪ್ ಬೈಕ್ ಗಳನ್ನ್ ಎಸ್‌ಎಸ್ ಡೆಲಿವರಿ ಸರ್ವಿಸಸ್ ಎಲ್‌ಎಲ್‌ಸಿಗೆ ಹಸ್ತಾಂತರಿಸಲಾಯಿತು, ಇದು ಪ್ರದೇಶದ ಪ್ರಮುಖ ಆಹಾರ ವಿತರಣಾ ಅಗ್ರಿಗೇಟರ್‌ಗಳಿಗೆ ಆದ್ಯತೆಯ ಪಾಲುದಾರ.

ಅಕ್ಟೋಬರ್ ತಿಂಗಳಿನಲ್ಲಿ 5.47 ಲಕ್ಷ ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿದ Hero Motocorp

ಹೀರೋ ಮೋಟೋಕಾರ್ಪ್ 2018 ರಲ್ಲಿ ಈ ಪ್ರದೇಶದಲ್ಲಿ ಕಾರ್ಯಾಚರಣೆಯನ್ನು ಪ್ರಾರಂಭಿಸಿತು.ಮಧ್ಯಪ್ರಾಚ್ಯ ಮಾರುಕಟ್ಟೆಯಲ್ಲಿ ಕಂಪನಿಯ ವಿಶೇಷ ವಿತರಕರಾದ Afriventures FZE ಸಹಯೋಗದೊಂದಿಗೆ. ಗಲ್ಫ್ ರಾಷ್ಟ್ರಗಳಲ್ಲಿ ತನ್ನ ಕಾರ್ಯಾಚರಣೆಯನ್ನು ಮತ್ತಷ್ಟು ವಿಸ್ತರಿಸುವ ಗುರಿಯನ್ನು ಹೀರೋ ಮೋಟೋಕಾರ್ಪ್ ಕಂಪನಿಯು ಹೊಂದಿದೆ. ಒಟ್ಟಿನಲ್ಲಿ ಜನಪ್ರಿಯ ಹೀರೋ ಮೋಟೋಕಾರ್ಪ್ ಕಂಪನಿಯು ಜಾಗತಿಕವಾಗಿ ಮಾರುಕಟ್ಟೆಯನ್ನು ವಿಸ್ತರಿಸಲು ಯೋಜಿಸುತ್ತಿದೆ.

Most Read Articles

Kannada
English summary
Hero motocorp sells 5 47 lakh units in october 2021 details
Story first published: Tuesday, November 2, 2021, 12:44 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X