ಏಪ್ರಿಲ್ ತಿಂಗಳಿನಲ್ಲಿ 3,72 ಲಕ್ಷ ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿದ ಹೀರೋ ಮೋಟೊಕಾರ್ಪ್

ದೇಶದ ಅತಿದೊಡ್ಡ ದ್ವಿಚಕ್ರ ವಾಹನ ತಯಾರಕ ಕಂಪನಿಯಾದ ಹೀರೋ ಮೋಟೊಕಾರ್ಪ್ 2021ರ ಏಪ್ರಿಲ್ ತಿಂಗಳಿನ ತನ್ನ ಮಾರಾಟ ವರದಿಯನ್ನು ಬಹಿರಂಗಪಡಿಸಿದೆ. ಕಳೆದ ತಿಂಗಳು ಹೀರೋ ಮೋಟೊಕಾರ್ಪ್ ಕಂಪನಿಯು 3,72,285 ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿದೆ.

ಏಪ್ರಿಲ್ ತಿಂಗಳಿನಲ್ಲಿ 3,72 ಲಕ್ಷ ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿದ ಹೀರೋ ಮೋಟೊಕಾರ್ಪ್

ಹೀರೋ ಮೋಟೊಕಾರ್ಪ್ ಕಂಪನಿಯು 2021ರ ಮಾರ್ಚ್ ತಿಂಗಳಿನಲ್ಲಿ 5,76,957 ಯುನಿ‍‍ಟ್‍‍ಗಳನ್ನು ಮಾರಾಟಗೊಳಿಸಿವೆ. ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಶೇ.35.47% ನಷ್ಟು ಕುಸಿತವನ್ನು ಕಂಡಿದೆ. ಹೀರೋನ 2021ರ ಏಪ್ರಿಲ್ ತಿಂಗಳ ಮಾರಾಟ ಸಂಖ್ಯೆಗಳು ಹಿಂದಿನ ವರ್ಷದ ಮಾರಾಟದೊಂದಿಗೆ ಹೋಲಿಸಲಾಗದ ಕಾರಣ, ಹೀರೋ ಕಂಪನಿಯು 2020ರ ಏಪ್ರಿಲ್‌ನಲ್ಲಿ ಯಾವುದೇ ದ್ವಿಚಕ್ರ ವಾಹನ ಯುನಿ‍‍ಟ್‍‍ಗಳನ್ನು ಮಾಡಲಿಲ್ಲ

ಏಪ್ರಿಲ್ ತಿಂಗಳಿನಲ್ಲಿ 3,72 ಲಕ್ಷ ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿದ ಹೀರೋ ಮೋಟೊಕಾರ್ಪ್

ಏಕೆಂದರೆ ಕಳೆದ ವರ್ಷದ ಏಪ್ರಿಲ್ ತಿಂಗಳಿನಲ್ಲಿ ದೇಶಾದ್ಯಂತ ಲಾಕ್ ಡೌನ್ ಜಾರಿಯಲಿತ್ತು. ಕಳೆದ ತಿಂಗಳು ಮಾರಾಟವಾದ 372,285 ಯುನಿಟ್‌ಗಳಲ್ಲಿ 339,329 ಬೈಕ್‌ಗಳು ಮತ್ತು ಉಳಿದ 32,956 ಸ್ಕೂಟರ್‌ಗಳಾಗಿವೆ.

MOST READ: ಹೊಸ ಹೀರೋ ಎಕ್ಸ್‌ಟ್ರಿಮ್ 160ಆರ್ 100 ಮಿಲಿಯನ್ ಎಡಿಷನ್ ಬಿಡುಗಡೆ

ಏಪ್ರಿಲ್ ತಿಂಗಳಿನಲ್ಲಿ 3,72 ಲಕ್ಷ ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿದ ಹೀರೋ ಮೋಟೊಕಾರ್ಪ್

ಇನ್ನು ಹೀರೋ ಮೋಟೊಕಾರ್ಪ್ 2021ರ ಏಪ್ರಿಲ್ ತಿಂಗಳಿನಲ್ಲಿ ದೇಶಿಯ ಮಾರುಕಟ್ತೆಯಲ್ಲಿ 42,614 ಯುನಿಟ್‌ಗಳನ್ನು ಮಾರಾಟಗೊಳಿಸಿವೆ. ಇನ್ನು ಉಳಿದ 29,671 ಯುನಿಟ್‌ಗಳನ್ನು ವಿದೇಶಕ್ಕೆ ರಫ್ತು ಮಾಡಲಾಗಿದೆ.

ಏಪ್ರಿಲ್ ತಿಂಗಳಿನಲ್ಲಿ 3,72 ಲಕ್ಷ ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿದ ಹೀರೋ ಮೋಟೊಕಾರ್ಪ್

ಹೀರೋ ಮೊಟೊಕಾರ್ಪ್ ಹೊಸ ಹೆಚ್‌ಎಫ್ 100 ಬೈಕನ್ನು ಕಳೆದ ತಿಂಗಳು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿತ್ತು. ಈ ಹೊಸ ಹೀರೋ ಹೆಚ್‌ಎಫ್ 100 ಬೈಕಿನ ಬೆಲೆಯು ದೆಹಲಿ ಎಕ್ಸ್ ಶೋರೂಂ ಪ್ರಕಾರ ರೂ.49,400 ಆಗಿದೆ.

MOST READ: ಭಾರತದಲ್ಲಿ ಕೈಗೆಟುಕುವ ದರದಲ್ಲಿ ಸಿಗುವ ಸ್ಕೂಟರ್‌ಗಳಿವು

ಏಪ್ರಿಲ್ ತಿಂಗಳಿನಲ್ಲಿ 3,72 ಲಕ್ಷ ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿದ ಹೀರೋ ಮೋಟೊಕಾರ್ಪ್

ಈ ಹೊಸ ಬೈಕ್ ಹೀರೋ ಪೋರ್ಟ್ಫೋಲಿಯೊದಲ್ಲಿ ಅಗ್ಗದ ಕೊಡುಗೆಯಾಗಿದೆ. ಹೊಸ ಹೀರೋ ಹೆಚ್‌ಎಫ್ 100 ಬೈಕಿನಲ್ಲಿ 97.2 ಸಿಸಿ ಸಿಂಗಲ್ ಸಿಲಿಂಡರ್ ಏರ್-ಕೂಲ್ಡ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 8000 ಆರ್‌ಪಿಎಂನಲ್ಲಿ 8.36 ಬಿಹೆಚ್‍ಪಿ ಪವರ್ ಮತ್ತು 5000 ಆರ್‌ಪಿಎಂನಲ್ಲಿ 8.05 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯ ಹೊಂದಿದೆ.

ಏಪ್ರಿಲ್ ತಿಂಗಳಿನಲ್ಲಿ 3,72 ಲಕ್ಷ ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿದ ಹೀರೋ ಮೋಟೊಕಾರ್ಪ್

ಈ ಎಂಜಿನ್ ಅನ್ನು 4-ಸ್ಪೀಡ್ ಗೇರ್ ಬಾಕ್ಸ್ ನೊಂದಿಗೆ ಜೋಡಿಸಲಾಗಿದೆ. ಸುಧಾರಿತ ಪ್ರೊಗ್ರಾಮೆಬಲ್ ಫ್ಯೂಯಲ್ ಇಂಜೆಕ್ಷನ್ ಸಿಸ್ಟಂ ಅನ್ನು ನೀಡಿರುವುದರಿಂದ ಮೈಲೇಜ್ ಹೆಚ್ಚಿಸುತ್ತದೆ ಮತ್ತು ಅತ್ಯುತ್ತಮ ಕಾರ್ಯಕ್ಷಮತೆಯನ್ನು ಕೂಡ ಒದಗಿಸುತ್ತದೆ.

MOST READ: ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್‍‍ಮಾಸ್ಟರ್ ಬೈಕ್

ಏಪ್ರಿಲ್ ತಿಂಗಳಿನಲ್ಲಿ 3,72 ಲಕ್ಷ ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿದ ಹೀರೋ ಮೋಟೊಕಾರ್ಪ್

ಹೀರೋ ಮೋಟೊಕಾರ್ಪ್ ಕೂಡಾ ಪರಿಸ್ಥಿತಿಗೆ ಅನುಗುಣವಾಗಿ ಹೊಸ ವಾಹನ ಉತ್ಪಾದನೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಬೈಕ್ ಮಾರಾಟವನ್ನು ಸರಳ ಮತ್ತು ಸುರಕ್ಷಿತವಾಗಿಸಲು ಹೀರೋ ಕಂಪನಿಯು ಪ್ರತ್ಯೇಕವಾದ ಪ್ಲ್ಯಾಟ್‌ಫಾರ್ಮ್ ತೆರೆದಿದ್ದು, ಗ್ರಾಹಕರು ಶೋರೂಂಗಳಿಗೆ ಭೇಟಿ ನೀಡದೆ ತಮ್ಮ ಮೆಚ್ಚಿನ ಹೀರೋ ವಾಹನಗಳನ್ನು ಆನ್‌ಲೈನ್ ಮೂಲಕವೇ ವಿಕ್ಷಣೆ ಮಾಡುವ ವರ್ಚುವಲ್ ಶೋರೂಂ ಆರಂಭಿಸಿದೆ.

ಏಪ್ರಿಲ್ ತಿಂಗಳಿನಲ್ಲಿ 3,72 ಲಕ್ಷ ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿದ ಹೀರೋ ಮೋಟೊಕಾರ್ಪ್

ಗ್ರಾಹಕರು ವಾಹನ ಖರೀದಿಗಾಗಿ ನೇರ ಶೋರೂಂ ಭೇಟಿ ನೀಡದೆಯೇ ಶೋರೂಂ ಭೇಟಿಯಾದ ಅನುಭವವನ್ನೇ ನೀಡಲು ವರ್ಚುವಲ್ ಶೋರೂಂ ಸಹಕಾರಿಯಾಗಿದ್ದು, ಕೋವಿಡ್ ಹರಡುವಿಕೆ ಸಂದರ್ಭದಲ್ಲಿ ಇದು ಗ್ರಾಹಕರಿಗೂ ಮತ್ತು ಶೋರೂಂ ಸಿಬ್ಬಂದಿಯ ಆರೋಗ್ಯ ದೃಷ್ಠಿಯಿಂದಲೂ ಇದು ಉತ್ತಮ ಕ್ರಮವಾಗಿದೆ.

ಏಪ್ರಿಲ್ ತಿಂಗಳಿನಲ್ಲಿ 3,72 ಲಕ್ಷ ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿದ ಹೀರೋ ಮೋಟೊಕಾರ್ಪ್

ಹೊಸ ವಾಹನ ಖರೀದಿದಾರರು ತಮ್ಮ ಇಷ್ಟದ ವಾಹನಗಳ ಬಗೆಗೆ ತಿಳಿದುಕೊಳ್ಳಲು ಶೋರೂಂಗೆ ನೇರ ಭೇಟಿ ನೀಡದೆ ಮನೆಯಲ್ಲೇ ಕುಳಿತು ಶೋರೂಂನಲ್ಲಿ ಭೇಟಿ ನೀಡಿದ ಮಾದರಿಯಲ್ಲೇ ವರ್ಚುವಲ್ ಶೋರೂಂ ಅನ್ನು ವೀಕ್ಷಿಸಿಬಹುದಾದೆ. ವಾಹನಗಳ ಮಾರಾಟವನ್ನು ಸರಳ ಮತ್ತು ಸುರಕ್ಷಿತವಾಗಿಸಲು ಆನ್‌ಲೈನ್ ಪ್ಲ್ಯಾಟ್‌ಫಾರ್ಮ್‌ಗಳು ಸಾಕಷ್ಟು ಬಳಕೆಯಾಗುತ್ತಿರುವುದು ಹೊಸ ಬೆಳವಣಿಗೆಗೆ ಕಾರಣವಾಗಿದೆ.

Most Read Articles

Kannada
English summary
Hero Motocorp's Sales Fall By 35.47% In April 2021. Read In Kannada.
Story first published: Tuesday, May 4, 2021, 20:36 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X