ಭಾರತದಲ್ಲಿ ಬಿಡುಗಡೆಯಾಗಲಿದೆ ಹೊಸ Hero Xtreme 160R Stealth ಎಡಿಷನ್
ಭಾರತದ ಅತಿದೊಡ್ಡ ದ್ವಿಚಕ್ರ ವಾಹನ ತಯಾರಕರಾದ ಹೀರೋ ಮೋಟೋಕಾರ್ಪ್ ಹೊಸ ಬೈಕ್ ಅನ್ನು ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಇದೀಗ ಹೀರೋ ಮೋಟೋಕಾರ್ಪ್ ಈ ಹೊಸ ಬೈಕಿನ ಟೀಸರ್ ಬಿಡುಗಡೆಗೊಳಿಸಿದೆ. ಟೀಸರ್ ನಲ್ಲಿ ಇದು ಹೆಡ್ ಲ್ಯಾಂಪ್ ಮತ್ತು ಫ್ರಂಟ್ ಪ್ರೊಫೈಲ್ ಅನ್ನು ಬಹಿರಂಗಪಡಿಸುತ್ತದೆ.

ಟೀಸರ್ ಹೇಳುವಂತೆ "ಸ್ಟೆಲ್ತ್ ಮೋಡ್ ಶೀಘ್ರದಲ್ಲೇ ಬರಲಿದೆ" ಮತ್ತು "ಗೋ ಬೂಮ್ ಇನ್ ಸ್ಟೆಲ್ತ್ ಮೋಡ್. ಇದು ಇತ್ತೀಚೆಗಷ್ಟೇ ಅಂತರ್ಜಾಲದಲ್ಲಿ ಸೋರಿಕೆಯಾದ ಹೊಸ ಹೀರೋ ಎಕ್ಸ್‌ಟ್ರಿಮ್ 160ಆರ್ ಸ್ಟೆಲ್ತ್ ಎಡಿಷನ್ ಆಗಿದೆ, ಟೀಸರ್ ಈ ಬೈಕಿನ ಮುಂಭಾಗವು ಬಿಳಿ ಬಣ್ಣದಲ್ಲಿದೆ. ಇನ್ನು ಈ ಬೈಕ್ ಮೈನ್ ಹೆಡ್‌ಲೈಟ್‌ನಲ್ಲಿ ಎರಡು ಎಲ್‌ಇಡಿ ಪೈಲಟ್ ಲ್ಯಾಂಪ್ ಗಳಾಗಿ ಬದಲಾಗುತ್ತದೆ. ಎಲ್‌ಇಡಿ ಹೆಡ್‌ಲ್ಯಾಂಪ್ ಮತ್ತು ಮುಂಭಾಗದ ವಿನ್ಯಾಸವು ಎಕ್ಸ್‌ಟ್ರಿಮ್ 16ಆರ್ ಮಾದರಿಗೆ ಹೋಲುತ್ತದೆ.

ಈ ಬೈಕ್ ಡಾರ್ಕ್ ಮ್ಯಾಟ್ ಕಲರ್ ಆಯ್ಕೆಯನ್ನು ಹೊಂದಿದ್ದು, ಇದು ಇಂಧನ ಟ್ಯಾಂಕ್‌ನ ಮೇಲೆ ಗೋಚರಿಸುತ್ತದೆ. ಈ ಹೊಸ ಹೀರೋ ಎಕ್ಸ್‌ಟ್ರಿಮ್ 160ಆರ್ ಸ್ಟೆಲ್ತ್ ಎಡಿಷನ್ ಹೊಸ ಫೀಚರ್ ಅಪ್‌ಡೇಟ್‌ಗಳೊಂದಿಗೆ ಅಪ್‌ಡೇಟ್ ಮಾಡಿದ ಬ್ಯಾಡ್ಜಿಂಗ್ ಅನ್ನು ಪಡೆಯುವ ಸಾಧ್ಯತೆಯಿದೆ.

ಇದು ಬ್ಲೂಟೂತ್ ಕನೆಕ್ಟಿವಿಟಿ ಪಡೆಯುವ ನಿರೀಕ್ಷೆಯಿದೆ, ಇದು ಎಸ್‌ಎಂಎಸ್ ಅಲರ್ಟ್‌ಗಳಂತಹ ವೈಶಿಷ್ಟ್ಯಗಳನ್ನು ಟರ್ನ್-ಬೈ-ಟರ್ನ್ ನ್ಯಾವಿಗೇಷನ್ ನೀಡುತ್ತದೆ. ಹೀರೋ ಮೋಟೋಕಾರ್ಪ್ ಈ ಹಬ್ಬದ ಸೀಸನ್ ನಲ್ಲಿ ಬಂಡವಾಳ ಹೂಡುವ ಗುರಿಯನ್ನು ಹೊಂದಿದೆ, ಇದು ಸಾಂಪ್ರದಾಯಿಕವಾಗಿ ಕಾರುಗಳು ಮತ್ತು ದ್ವಿಚಕ್ರ ವಾಹನಗಳ ಹೆಚ್ಚಿನ ಮಾರಾಟದ ಅವಧಿಯಾಗಿದೆ.

ಇದರಿಂದ ಈ ಹೊಸ ಹೀರೋ ಎಕ್ಸ್‌ಟ್ರಿಮ್ 160ಆರ್ ಸ್ಟೆಲ್ತ್ ಎಡಿಷನ್ ಮಾದರಿಯು ಶೀಘ್ರದಲ್ಲೇ ಬಿಡುಗಡೆಯಾಗುವ ಸಾಧ್ಯತೆಗಳಿದೆ. ಈ ಹೊಸ ಕ್ಸ್‌ಟ್ರಿಮ್ 160ಆರ್ ಸ್ಟೆಲ್ತ್ ಎಡಿಷನ್ ಯಾವುದೇ ಮಹತ್ವದ ಯಾಂತ್ರಿಕ ಬದಲಾವಣೆಗಳನ್ನು ಪಡೆಯುವ ಸಾಧ್ಯತೆಯಿಲ್ಲ. ಇದರಲ್ಲಿ ಅದೇ 163 ಸಿಸಿ ಸಿಂಗಲ್ ಸಿಲಿಂಡರ್ ಏರ್-ಕೂಲ್ಡ್ ಎಂಜಿನ್ ಅನ್ನು ಅಳವಡಿಸಲಾಗಿದೆ,

ಈ ಎಂಜಿನ್ 8500 ಆರ್‌ಪಿಎಂನಲ್ಲಿ 15 ಬಿಹೆಚ್‌ಪಿ ಪವರ್ ಮತ್ತು 6500 ಆರ್‌ಪಿಎಂನಲ್ಲಿ 14 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಈ ಎಂಜಿನ್ ಅನ್ನು 5-ಸ್ಪೀಡ್ ಗೇರ್‌ಬಾಕ್ಸ್‌ನೊಂದಿಗೆ ಜೋಡಿಸಲಾಗಿದೆ. ಎಂಜಿನ್ ನಲ್ಲಿ ಹೀರೋನ ಪ್ರೋಗ್ರಾಮ್ ಮಾಡಲಾದ ಫ್ಯೂಯಲ್-ಇಂಜೆಕ್ಷನ್ ಸಿಸ್ಟಂ ಅನ್ನು ಸಹ ಹೊಂದಿದೆ. ಇದು ಅತ್ಯುತ್ತಮ ಕಾರ್ಯಕ್ಷಮತೆ ಮತ್ತು ಹೆಚ್ಚಿನ ದಕ್ಷತೆಯನ್ನು ಒದಗಿಸುತ್ತದೆ.

ಪ್ರಸ್ತುತ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ಸ್ಟ್ಯಾಂಡರ್ಡ್ ಹೀರೋ ಎಕ್ಸ್‌ಟ್ರಿಮ್ 160ಆರ್ ಬೈಕ್ ಕೇವಲ 7 ಸೆಕೆಂಡುಗಳಲ್ಲಿ 0 ದಿಂದ 60 ಕಿ.ಮೀ ವೇಗವನ್ನು ಪಡೆದುಕೊಳ್ಳುತ್ತದೆ ಎಂದು ಹೀರೋ ಹೇಳಿಕೊಂಡಿದೆ. ಹೊಸ ಹೀರೋ ಎಕ್ಸ್‌ಟ್ರಿಮ್ 160ಆರ್ ಬೈಕಿನ ಬೇಸ್ ಸ್ಪೆಕ್ ಮಾದರಿಯು 138.5 ಕೆಜಿ ತೂಕವನ್ನು ಹೊಂದಿದೆ.
ಈ ಬಿಎಸ್ 6 ಹೀರೋ ಎಕ್ಸ್‌ಟ್ರಿಮ್ 160ಆರ್ ಬೈಕ್ ಸ್ಪೋರ್ಟಿ ಲುಕ್ ಅನ್ನು ಹೊಂದಿದೆ. ಈ ಬೈಕ್ ಹಲವಾರು ಹೊಸ ಪ್ರೀಮಿಯಂ ಫೀಚರುಗಳನ್ನು ಹೊಂದಿದೆ. ಈ ಬೈಕಿನಲ್ಲಿ ಎಲ್‌ಇಡಿ ಹೆಡ್ ಲ್ಯಾಂಪ್, ಡಿಆರ್‌ಎಲ್ ಇಂಡೀಕೆಟರ್ ಮತ್ತು ಟೇಲ್ ಲೈಟ್ ಮತ್ತು ಎಲ್‌ಸಿಡಿ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಅನ್ನು ಹೊಂದಿದೆ.

ಹೀರೋ ಎಕ್ಸ್‌ಟ್ರಿಮ್ 160ಆರ್ ಬೈಕಿನ ಸಸ್ಪೆಂಕ್ಷನ್ ಬಗ್ಗೆ ಹೇಳುವುದಾದರೆ, ಇದರ ಮುಂಭಾಗದಲ್ಲಿ 37 ಎಂಎಂ ಟೆಲಿಸ್ಕೋಪಿಕ್ ಫೋರ್ಕ್‌ಗಳ ಸೆಟಪ್ ಮತ್ತು ಹಿಂಭಾಗದಲ್ಲಿ ಏಳು-ಹಂತದ ರೈಡರ್-ಹೊಂದಾಣಿಕೆ ಮಾಡಬಹುದಾದ ಮೊನೊಶಾಕ್ ಸಸ್ಪೆಂಕ್ಷನ್ ಸೆಟಪ್ ಅನ್ನು ಒಳಗೊಂಡಿದೆ.

ಇನ್ನು ಈ ಬೈಕಿನ ಬ್ರೇಕಿಂಗ್ ಸಿಸ್ಟಂ ಬಗ್ಗೆ ಹೇಳುವುದಾದರೆ, ಇದರ ಮುಂಭಾಗದಲ್ಲಿ 276 ಎಂಎಂ ಪೆಟಲ್ ಡಿಸ್ಕ್ ಮತ್ತು ಹಿಂಭಾಗದಲ್ಲಿ 220 ಎಂಎಂ ಡಿಸ್ಕ್ ಅಥವಾ 130 ಎಂಎಂ ಡ್ರಮ್ ಬ್ರೇಕ್ ಗಳೊಂದಿಗೆ ಎಬಿಎಸ್ ಅನ್ನು ನೀಡಿದೆ.

ಇನ್ನು ಹೀರೋ ಮೋಟೊಕಾರ್ಪ್ ಇತ್ತೀಚೆಗೆ 100 ಮಿಲಿಯನ್(10 ಕೋಟಿ) ಉತ್ಪಾದನಾ ಮೈಲಿಗಲ್ಲನ್ನು ಸಾಧಿಸಿತು. ಬೈಕ್ ಉತ್ಪಾದನೆಯ ಆರಂಭಿಸಿದ 36 ವರ್ಷಗಳ ಅವಧಿಯಲ್ಲಿ ಬರೋಬ್ಬರಿ 10 ಕೋಟಿ ಯುಮಿಟ್ ಗಳನ್ನು ಉತ್ಪಾದನೆ ಮಾಡಿ ಹೊಸ ದಾಖಲೆಯನ್ನು ನಿರ್ಮಿಸಿದೆ. ಈ 100 ಮಿಲಿಯನ್ ಉತ್ಪಾದನಾ ಮೈಲಿಗಲ್ಲಿನ ಸಂಭ್ರಮಕ್ಕಾಗಿ ಈ ಹೊಸ ಎಕ್ಸ್‌ಟ್ರಿಮ್ 160ಆರ್ 100 ಮಿಲಿಯನ್ ಎಡಿಷನ್ ಅನ್ನು ಕೂಡ ಬಿಡುಗಡೆಗೊಳಿಸಲಾಯಿತು.

ಈ 100 ಮಿಲಿಯನ್ ಎಡಿಷನ್ ಬಣ್ಣದಲ್ಲಿ ಇತರ 5 ಮಾದರಿಗಳನ್ನು ಕೂಡ ಹೀರೋ ಮೋಟೊಕಾರ್ಪ್ ಬಿಡುಗಡೆಗೊಳಿಸಿದ್ದರು. ಇನ್ನು ಬಿಡುಗಡೆಗೊಂಡ ಸ್ಪೆಷಲ್ ಎಢಿಷನ್ ಎಕ್ಸ್‌ಟ್ರಿಮ್ 160ಆರ್ ಬೈಕಿನಲ್ಲಿ ಹೊಸ ಬಣ್ಣದ ಆಯ್ಕೆಯನ್ನು ಹೊರತುಪಡಿಸಿ ಉಳಿದಂತೆ ಯಾವುದೇ ಬದಲಾವಣೆಗಳನ್ನು ಮಾಡಿಲ್ಲ. ಹೀರೋ ಎಕ್ಸ್‌ಟ್ರಿಮ್ 160ಆರ್ 100 ಮಿಲಿಯನ್ ಎಡಿಷನ್ ಬೈಕ್ ಕೆಂಪು ಮತ್ತು ಬಿಳಿ ಬಣ್ಣದ ಡ್ಯುಯಲ್-ಟೋನ್ ಬಣ್ಣವನ್ನು ಹೊಂದಿದೆ. ಈ ಬೈಕಿನ ಹೆಡ್ ಲೈಟ್ ಮಾಸ್ಕ್, ಫ್ಯೂಯಲ್ ಟ್ಯಾಂಕ್ ಮತ್ತು ಹಿಂಭಾಗದ ಬಾಡಿ ಪ್ಯಾನೆಲ್‌ಗಳಲ್ಲಿ ಕೆಂಪು ಬಣ್ಣವನ್ನು ಹೊಂದಿರುವ 100 ಮಿಲಿಯನ್ ಎಡಿಷನ್ ಮಾದರಿಗಳಲ್ಲಿ ಮಾತ್ರ ಈ ವಿಶೇಷ ಬಣ್ಣವನ್ನು ಹೊಂದಿದೆ.

ಹೀರೋ ಎಕ್ಸ್‌ಟ್ರಿಮ್ 160ಆರ್ ಭಾರತೀಯ ಮಾರುಕಟ್ಟೆಯಲ್ಲಿ ಮಾರುಕಟ್ಟೆಯಲ್ಲಿ ಟಿವಿಎಸ್ ಅಪಾಚೆ ಆರ್‍ಟಿಆರ್ 160 4ವಿ, ಬಜಾಜ್ ಪಲ್ಸರ್ ಎನ್ಎಸ್ 160 ಮತ್ತು ಸುಜುಕಿ ಜಿಕ್ಸರ್ 150 ಬೈಕ್ ಗಳಿಗೆ ಪೈಪೋಟಿ ನೀಡುತ್ತಿದೆ. ಅಲ್ಲದೇ ಈ ಹೀರೋ ಎಕ್ಸ್‌ಟ್ರಿಮ್ 160ಆರ್ ಭಾರತೀಯ ಮಾರುಕಟ್ಟೆಯಲ್ಲಿ ಭರ್ಜರಿಯಾಗಿ ಮಾರಾಟವಾಗುತ್ತಿದೆ. ಇದರಿಂದ ಹೀರೋ ಕಂಪನಿಯು ಎಕ್ಸ್‌ಟ್ರಿಮ್ 160ಆರ್ ಸ್ಟೆಲ್ತ್ ಎಡಿಷನ್ ಅನ್ನು ಬಿಡುಗಡೆಗೊಳಿಸಲು ಮುಂದಾಗಿರಬಹುದು. ಈ ಮಾದರಿಯು ಶೀಘ್ರದಲ್ಲೇ ಬಿಡುಗಡೆಯಾಗಬಹುದು ಎಂದು ನಿರೀಕ್ಷಿಸುತ್ತೆವೆ.


Click it and Unblock the Notifications