ರಾಮಕೃಷ್ಣ ಮಿಷನ್ ಸೇವಾಶ್ರಮ ಜೊತೆಗೂಡಿ ಕೋವಿಡ್ ಕೇರ್ ಸೆಂಟರ್ ತೆರೆದ ಹೀರೋ ಮೋಟೊಕಾರ್ಪ್

ದೇಶಾದ್ಯಂತ ಕೋವಿಡ್ 2ನೇ ಅಲೆ ತೀವ್ರ ಹೆಚ್ಚಿರುವುದರಿಂದ ವೈರಸ್ ನಿಯಂತ್ರಣಕ್ಕಾಗಿ ಸರ್ಕಾರವು ಹರಸಾಹಸ ಪಡುತ್ತಿದ್ದು, ಸರ್ಕಾರದ ಜೊತೆ ಕೈಜೋಡಿಸಿರುವ ವಿವಿಧ ಆಟೋ ಕಂಪನಿಗಳು ಕೂಡಾ ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ(ಸಿಎಸ್‍ಆರ್) ನೀತಿ ಅಡಿ ವಿವಿಧ ಸಾಮಾಜಿಕ ಕಾರ್ಯಕ್ರಮಗಳನ್ನು ಕೈಗೊಂಡಿರುವುದು ಸಾರ್ವಜನಿಕ ವಲಯದಲ್ಲಿ ಪ್ರಶಂಸೆ ವ್ಯಕ್ತವಾಗಿದೆ.

ರಾಮಕೃಷ್ಣ ಮಿಷನ್ ಸೇವಾಶ್ರಮ ಜೊತೆಗೂಡಿ ಕೋವಿಡ್ ಕೇರ್ ಸೆಂಟರ್ ತೆರೆದ ಹೀರೋ ಮೋಟೊಕಾರ್ಪ್

ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ವಿವಿಧ ರಾಜ್ಯಗಳು ಸೋಂಕು ಹರಡುವಿಕೆಯನ್ನು ತಗ್ಗಿಸಲು ಹಲವು ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಸೋಂಕು ಹೆಚ್ಚಿರುವ ನಗರಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಹೆಚ್ಚುತ್ತಿರುವ ಕರೋನಾ ವೈರಸ್ ತಡೆಗಾಗಿ ಕೇಂದ್ರ ಸರ್ಕಾರದ ಸಲಹೆ ಮೇರೆಗೆ ವಿವಿಧ ರಾಜ್ಯ ಸರ್ಕಾರಗಳು ಹಲವು ಮುನ್ನೆಚ್ಚರಿಕೆ ಕ್ರಮಗಳನ್ನು ಜಾರಿಗೆ ತಂದಿದ್ದು, ಕೊರೋನಾ ನಿಯಂತ್ರಣಕ್ಕೆ ಟಫ್ ರೂಲ್ಸ್ ಅನುಸರಿಸಲಾಗುತ್ತಿದೆ.

ರಾಮಕೃಷ್ಣ ಮಿಷನ್ ಸೇವಾಶ್ರಮ ಜೊತೆಗೂಡಿ ಕೋವಿಡ್ ಕೇರ್ ಸೆಂಟರ್ ತೆರೆದ ಹೀರೋ ಮೋಟೊಕಾರ್ಪ್

ವೈರಸ್ ಹರಡುವಿಕೆಯನ್ನು ತಡೆಯಲು ಮಾಸ್ಕ್, ಹ್ಯಾಂಡ್ ಸ್ಯಾನಿಟೈಜ್ ಮತ್ತು ಫೇಸ್-ಶೀಲ್ಡ್‌ಗಳ ಬಳಕೆಯು ಹೆಚ್ಚಿಸಲಾಗುತ್ತಿದ್ದರೂ ಸೋಂಕಿತರಿಗೆ ಸರಿಯಾದ ಸಮಯಕ್ಕೆ ಚಿಕಿತ್ಸೆ ನೀಡಲು ವೈದ್ಯಕೀಯ ಸೇವೆಗಳಲ್ಲಿ ವ್ಯತ್ಯಯ ಉಂಟಾಗಿದೆ.

ರಾಮಕೃಷ್ಣ ಮಿಷನ್ ಸೇವಾಶ್ರಮ ಜೊತೆಗೂಡಿ ಕೋವಿಡ್ ಕೇರ್ ಸೆಂಟರ್ ತೆರೆದ ಹೀರೋ ಮೋಟೊಕಾರ್ಪ್

ಹೀಗಾಗಿ ಸರ್ಕಾರದ ಜೊತೆ ಕೈಜೋಡಿಸಿರುವ ವಿವಿಧ ಆಟೋ ಕಂಪನಿಯು ಸಾಧ್ಯವಿರುವ ಕಡೆಗಳಲ್ಲಿ ಸಾರ್ವಜನಿಕರಿಗೆ ವಿವಿಧ ಮಾದರಿಯಲ್ಲಿ ಸಹಾಯಹಸ್ತ ಚಾಚುತ್ತಿದ್ದು, ದೇಶದ ಅತಿ ದೊಡ್ದ ಬೈಕ್ ಉತ್ಪಾದನಾ ಕಂಪನಿಯಾಗಿರುವ ಹೀರೋ ಮೋಟೊಕಾರ್ಪ್ ಕೂಡಾ ಕೋವಿಡ್ ಸೋಂಕಿತರಿಗೆ ಸರಿಯಾದ ಸಮಯಕ್ಕೆ ವೈದ್ಯಕೀಯ ಸೇವೆ ಒದಗಿಸಲು ಕೋವಿಡ್ ಕೇರ್ ತೆರದಿದೆ.

ರಾಮಕೃಷ್ಣ ಮಿಷನ್ ಸೇವಾಶ್ರಮ ಜೊತೆಗೂಡಿ ಕೋವಿಡ್ ಕೇರ್ ಸೆಂಟರ್ ತೆರೆದ ಹೀರೋ ಮೋಟೊಕಾರ್ಪ್

ಉತ್ತರಾಖಂಡನಲ್ಲಿರುವ ಹರಿದ್ವಾರದ ರಾಮಕೃಷ್ಣ ಮಿಷನ್ ಸೇವಾಶ್ರಮ ಮತ್ತು ಹರಿದ್ವಾರ ಜಿಲ್ಲಾಡಳಿತ ಜೊತೆಗೂಡಿ ಕೋವಿಡ್ ಕೇರ್ ಆರಂಭಿಸಿದ್ದು,122 ಹಾಸಿಗೆಗಳ ಸೌಲಭ್ಯದ ಕೋವಿಡ್ ಕೇರ್ ಕೇಂದ್ರದಲ್ಲಿ ಹಲವಾರು ಅಗತ್ಯ ಮೂಲಭೂತ ಸೌಕರ್ಯಗಳನ್ನು ಹೊಂದಿದೆ. ಹೀರೋ ಮೋಟೊಕಾರ್ಪ್ ಕಂಪನಿಯು 'ಹೀರೋ ವಿ ಕೇರ್' ಸಾಮಾಜಿಕ ಕಾರ್ಯಕ್ರಮದಡಿಯಲ್ಲಿ ಅಗತ್ಯವಿರುವ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಒದಗಿಸಿದ್ದು, ಹರಿದ್ವಾರ ಜಿಲ್ಲಾಡಳಿತವು ವೈದ್ಯಕೀಯ ಸೇವೆಗಳನ್ನು ನಿರ್ವಹಣೆ ಮಾಡುತ್ತಿದೆ.

ರಾಮಕೃಷ್ಣ ಮಿಷನ್ ಸೇವಾಶ್ರಮ ಜೊತೆಗೂಡಿ ಕೋವಿಡ್ ಕೇರ್ ಸೆಂಟರ್ ತೆರೆದ ಹೀರೋ ಮೋಟೊಕಾರ್ಪ್

ರಾಮಕೃಷ್ಣ ಮಿಷನ್ ಸೇವಾಶ್ರಮದಲ್ಲಿ ಸಿದ್ದಗೊಂಡಿರುವ 122 ಹಾಸಿಗೆಗಳ ಸೌಲಭ್ಯದ ಕೋವಿಡ್ ಕೇರ್ ಸೆಂಟರ್‌ನಲ್ಲಿ ಆಕ್ಸಿಜನ್ ಸಹಿತ 90 ಹಾಸಿಗೆಗಳಿವೆ. ಹಾಗೆಯೇ ಎಮರ್ಜನ್ಸಿ ವಾರ್ಡ್‍ನಲ್ಲಿ ಆಕ್ಸಿಜನ್ ಮತ್ತು ಪೋರ್ಟಬಲ್ ವೆಂಟಿಲೇಟರ್ ಸೌಲಭ್ಯವಿರುವ 16 ಹಾಸಿಗೆಗಳಿವೆ.

ರಾಮಕೃಷ್ಣ ಮಿಷನ್ ಸೇವಾಶ್ರಮ ಜೊತೆಗೂಡಿ ಕೋವಿಡ್ ಕೇರ್ ಸೆಂಟರ್ ತೆರೆದ ಹೀರೋ ಮೋಟೊಕಾರ್ಪ್

ಕೋವಿಡ್ ಐಸಿಯು ವಿಭಾಗದಲ್ಲಿ ಆಕ್ಸಿಜನ್ ಮತ್ತು ಬಿಐಪಿಎಪಿ ಯಂತ್ರದ ಸಹಿತ 08 ಹಾಸಿಗೆಗಳು ಲಭ್ಯವಿದ್ದು, 24x7 ಲ್ಯಾಬ್, ಸಿಟಿ ಸ್ಕ್ಯಾನ್ ಮತ್ತು 05 ಆಪರೇಷನ್ ಥಿಯೇಟರ್‌ಗಳನ್ನು ತೆರೆಯುವ ಮೂಲಕ ಸಮುದಾಯದ ರಕ್ಷಣೆಗೆ ಗರಿಷ್ಠ ಸಹಕಾರ ನೀಡಲಾಗುತ್ತಿದೆ.

MOST READ: 14 ದಿನಗಳ ಕಾಲ ಟೈಟ್ ಕರ್ಫ್ಯೂ: ವಾಹನಗಳ ಸಂಚಾರಕ್ಕೆ ಏನೆಲ್ಲಾ ರೂಲ್ಸ್?

ರಾಮಕೃಷ್ಣ ಮಿಷನ್ ಸೇವಾಶ್ರಮ ಜೊತೆಗೂಡಿ ಕೋವಿಡ್ ಕೇರ್ ಸೆಂಟರ್ ತೆರೆದ ಹೀರೋ ಮೋಟೊಕಾರ್ಪ್

ಕೋವಿಕ್ ಕೇರ್ ಜೊತೆಗೆ ಹೀರೋ ಮೋಟೊಕಾರ್ಪ್ ಕಂಪನಿಯು ದೆಹಲಿ ಮತ್ತು ಎನ್‍ಸಿಆರ್, ಹರಿಯಾಣ, ಉತ್ತರಾಖಂಡ್, ರಾಜಸ್ತಾನ ಮತ್ತು ಗುಜರಾತ್ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಆರೋಗ್ಯ ಕಾರ್ಯಕರ್ತರು ಮತ್ತು ವೈದ್ಯಕೀಯ ಸಿಬ್ಬಂದಿಯ ಸುರಕ್ಷತೆಗಾಗಿ ವೈಯಕ್ತಿಕ ಪ್ರಯಾಣಕ್ಕಾಗಿ ಕಂಪನಿಯು ತನ್ನ ಮೋಟಾರ್‌ಸೈಕಲ್‌ಗಳ ಜೊತೆ ಬೈಕ್ ಆ್ಯಂಬುಲೆನ್ಸ್ ಸಹ ಒದಗಿಸುತ್ತಿದೆ.

ರಾಮಕೃಷ್ಣ ಮಿಷನ್ ಸೇವಾಶ್ರಮ ಜೊತೆಗೂಡಿ ಕೋವಿಡ್ ಕೇರ್ ಸೆಂಟರ್ ತೆರೆದ ಹೀರೋ ಮೋಟೊಕಾರ್ಪ್

ದೆಹಲಿ ಮತ್ತು ಹರಿಯಾಣದ ಕೆಲವು ಸರ್ಕಾರಿ ಆಸ್ಪತ್ರೆಗಳಿಗೆ ತುರ್ತು ವೈದ್ಯಕೀಯ ಬಳಕೆಗಾಗಿ ಮೆಡಿಕಲ್ ಆಕ್ಸಿಜನ್ ಸಿಲಿಂಡರ್‍‌ ಮತ್ತು ಆರೋಗ್ಯ ಕಾರ್ಯಕರ್ತರ ಬಳಕೆಗಾಗಿ ಪಿಪಿಇ ಕಿಟ್‍ಗಳನ್ನು ವಿವಿಧ ರಾಜ್ಯಗಳ ಆರೋಗ್ಯ ಅಧಿಕಾರಿಗಳಿಗೆ ಒದಗಿಸುತ್ತಿದ್ದು, ಸಾಂಕ್ರಾಮಿಕ ರೋಗದಿಂದ ಉಂಟಾಗುತ್ತಿರುವ ಸವಾಲುಗಳನ್ನು ಎದುರಿಸಲು ಹೀರೋ ಮೋಟೊಕಾರ್ಪ್ ಮತ್ತು ರಾಮಕೃಷ್ಣ ಮಿಷನ್ ಸಾಮಾಜಿಕ ಕಳಕಳಿಗೆ ಸಾರ್ವಜನಿಕ ವಲಯದಲ್ಲಿ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

MOST READ: ಕೋವಿಡ್ ಭೀತಿ: ಕಾರು ಉತ್ಪಾದನೆಯನ್ನು ತಾತ್ಕಾಲಿಕವಾಗಿ ಬಂದ್ ಮಾಡಿದ ಎಂಜಿ ಮೋಟಾರ್

ರಾಮಕೃಷ್ಣ ಮಿಷನ್ ಸೇವಾಶ್ರಮ ಜೊತೆಗೂಡಿ ಕೋವಿಡ್ ಕೇರ್ ಸೆಂಟರ್ ತೆರೆದ ಹೀರೋ ಮೋಟೊಕಾರ್ಪ್

ಇನ್ನು ಹೀರೋ ಮೋಟೊಕಾರ್ಪ್ ಕಂಪನಿಯು ಕಳೆದ ವರ್ಷವು ಕೂಡಾ ಕೋವಿಡ್ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರಕ್ಕೆ ಹೀರೋ ವಿ ಕೇರ್' ಸಾಮಾಜಿಕ ಕಾರ್ಯಕ್ರಮದಡಿಯಲ್ಲಿ ಸುಮಾರು ರೂ. 100 ಕೋಟಿ ಹಣಕಾಸು ನೆರವು ಘೋಷಣೆ ಮಾಡಿತ್ತು. ಇದೀಗ ದೇಶಾದ್ಯಂತ ಕೋವಿಡ್ 2ನೇ ಅಲೆಯಿಂದ ಇಡೀ ದೇಶವೇ ಸಂಕಷ್ಟ ಪರಿಸ್ಥಿತಿಯಲ್ಲಿರುವಾಗ ಮತ್ತೊಮ್ಮೆ ಸರ್ಕಾರದ ಜೊತೆ ಕೈಜೋಡಿಸುವ ಮೂಲಕ ಸಾಮಾಜಿಕ ಜವಾಬ್ದಾರಿಯನ್ನು ಪ್ರದರ್ಶಸಿದೆ.

Most Read Articles

Kannada
English summary
Hero Motocorp partners with Ramkrishna Mission Sevashram for Covid-19 relief efforts. Read in Kannada.
Story first published: Thursday, April 29, 2021, 13:03 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X