ಮೆಕ್ಸಿಕೋ ಮಾರುಕಟ್ಟೆಗೆ ಕಾಲಿಡಲಿದೆ ಹೀರೋ ಮೋಟೊಕಾರ್ಪ್

ಭಾರತದ ಅತಿದೊಡ್ಡ ದ್ವಿಚಕ್ರ ವಾಹನ ತಯಾರಕ ಕಂಪನಿಯಾದ ಹೀರೋ ಮೋಟೊಕಾರ್ಪ್ ಮೆಕ್ಸಿಕೋ ಮಾರುಕಟ್ಟೆಗೆ ಕಾಲಿಡಲು ಗ್ರೂಪೋ ಸಲಿನಾಸ್ ಜೊತೆ ಪಾಲುಗಾರಿಕೆಯನ್ನು ಮಾಡಿಕೊಂಡಿದೆ. ಶೀಘ್ರದಲ್ಲೇ ಮೆಕ್ಸಿಕೋ ಮಾರುಕಟ್ಟೆಯಲ್ಲಿ ಹೀರೋ ಮೋಟೊಕಾರ್ಪ್ ತನ್ನ ಕಾರ್ಯಾಚರಣೆಯನ್ನು ಪ್ರಾರಂಭಿಸಲಿದೆ.

ಮೆಕ್ಸಿಕೋ ಮಾರುಕಟ್ಟೆಗೆ ಕಾಲಿಡಲಿದೆ ಹೀರೋ ಮೋಟೊಕಾರ್ಪ್

ಹೀರೋ ಮೊಟೊಕಾರ್ಪ್ ತನ್ನ ಮಾದರಿಗಳನ್ನು ಮಧ್ಯ ಅಮೆರಿಕದ ದೇಶದಲ್ಲಿ ಮಾರಾಟ ಮಾಡಲು ಗ್ರೂಪೋ ಸಲಿನಾಸ್ ಜೊತೆ ಪಾಲುಗಾರಿಕೆ ಮಾಡಿ ವಿಶ್ವದ ಅತಿದೊಡ್ಡ ವಿತರಣಾ ಜಾಲಗಳಲ್ಲಿ ಒಂದಾಗಲಿದೆ. "ಹೀರೋನ ಜಾಗತಿಕ ಪರಿಣತಿ ಮತ್ತು ನೂತನ ತಂತ್ರಜ್ಞಾನದ ಜೊತೆ ಗ್ರೂಪೋ ಸಲಿನಾಸ್‌ನ ಸ್ಥಳೀಯ ಮಾರುಕಟ್ಟೆ ಜ್ಞಾನದಿಂದ, ಮುಂದಿನ ಮೂರು ವರ್ಷಗಳಲ್ಲಿ ಹೀರೋ ಬ್ರ್ಯಾಂಡ್ ಅನ್ನು ವಿಸ್ತರಿಸುವ ಗುರಿ ಹೊಂದಿದ್ದೇವೆ" ಎಂದು ಹೀರೋ ಮೊಟೊಕಾರ್ಪ್‌ನ ಅಧ್ಯಕ್ಷ ಮತ್ತು ಸಿಇಒ ಪವನ್ ಮುಂಜಾಲ್ ಹೇಳಿದ್ದಾರೆ.

ಮೆಕ್ಸಿಕೋ ಮಾರುಕಟ್ಟೆಗೆ ಕಾಲಿಡಲಿದೆ ಹೀರೋ ಮೋಟೊಕಾರ್ಪ್

ತಮ್ಮ ಮಾತನ್ನು ಮುಂದುವರೆಸಿ, ಮೆಕ್ಸಿಕೋ ಮಾರುಕಟ್ಟೆಯಲ್ಲಿ ಎಲ್ಲಾ ವಿಭಾಗಗಳ ಮಾದರಿಗಳನ್ನು ಬಿಡುಗಡೆಗೊಳಿಸುತ್ತೇವೆ. ಇದರಿಂದಾಗಿ ಮೆಕ್ಸಿಕೋದಲ್ಲಿನ ಗ್ರಾಹಕರಿಗೆ ಹೆಚ್ಚಿನ ಆಯ್ಕೆಗಳು ಲಭ್ಯವಿರುತ್ತದೆ.

MOST READ: ಯೂನಿಕಾರ್ನ್ ಬೈಕಿನ ಬೆಲೆ ಹೆಚ್ಚಿಸಿದ ಹೋಂಡಾ ಮೋಟಾರ್‌ಸೈಕಲ್

ಮೆಕ್ಸಿಕೋ ಮಾರುಕಟ್ಟೆಗೆ ಕಾಲಿಡಲಿದೆ ಹೀರೋ ಮೋಟೊಕಾರ್ಪ್

ವರದಿಗಳ ಪ್ರಕಾರ, ಮೊದಲ ಹಂತದ ಕಾರ್ಯಾಚರಣೆಯಲ್ಲಿ, ಹೀರೋ ಮೊಟೊಕಾರ್ಪ್ ಬೈಕುಗಳನ್ನು ಒಳಗೊಂಡಂತೆ ಒಂಬತ್ತು ಮಾದರಿಗಳನ್ನು ಬಿಡುಗಡೆಗೊಳಿಸಲಿದೆ. ಇದು ಹೀರೋ ಮೊಟೊಕಾರ್ಪ್ 100ಸಿಸಿ ಯಿಂದ 160ಸಿಸಿ ವರೆಗಿನ ಎಂಜಿನ್ ಸಾಮರ್ಥ್ಯ ಹೊಂದಿರುವ ಮಾದರಿಗಳಾಗಿರುತ್ತದೆ.

ಮೆಕ್ಸಿಕೋ ಮಾರುಕಟ್ಟೆಗೆ ಕಾಲಿಡಲಿದೆ ಹೀರೋ ಮೋಟೊಕಾರ್ಪ್

ಮೊದಲ ಹಂತದಲ್ಲಿ ಸ್ಕೂಟರ್ ಮತ್ತು ಡ್ಯುಯಲ್ ಪರ್ಪಸ್ ಬೈಕ್‌ಗಳನ್ನು ಸಹ ಬಿಡುಗಡೆಗೊಳಿಸಲು ಯೋಜಿಸಿದೆ. ಇತ್ತೀಚಿನ ಬೆಳವಣಿಗೆ ಕಂಪನಿಯ ಜಾಗತಿಕ ವಿಸ್ತರಣಾ ಕಾರ್ಯತಂತ್ರದ ಒಂದು ಭಾಗವಾಗಿದೆ ಎಂದು ಹೇಳಬಹುದು.

MOST READ: ಹೊಸ ಬಣ್ಣದ ಆಯ್ಕೆಯನ್ನು ಪಡೆದುಕೊಂಡ 2021ರ ಕವಾಸಕಿ ನಿಂಜಾ 1000 ಎಸ್‌ಎಕ್ಸ್ ಬೈಕ್

ಮೆಕ್ಸಿಕೋ ಮಾರುಕಟ್ಟೆಗೆ ಕಾಲಿಡಲಿದೆ ಹೀರೋ ಮೋಟೊಕಾರ್ಪ್

ಹೊಸ ಮಾದರಿಗಳನ್ನು ಭಾರತ ಮತ್ತು ಜರ್ಮನಿಯ ಹೀರೋನ ಅತ್ಯಾಧುನಿಕ ಆರ್&ಡಿ ಹಬ್‌ಗಳಲ್ಲಿ ವಿನ್ಯಾಸಗೊಳಿಸಲಾಗುತ್ತದೆ ಮತ್ತು ಅಭಿವೃದ್ಧಿಪಡಿಸಲಾಗುತ್ತದೆ ಎಂದು ಹೇಳಲಾಗುತ್ತಿದೆ.

ಮೆಕ್ಸಿಕೋ ಮಾರುಕಟ್ಟೆಗೆ ಕಾಲಿಡಲಿದೆ ಹೀರೋ ಮೋಟೊಕಾರ್ಪ್

ಹೀರೋ ಮೊಟೊಕಾರ್ಪ್ ಈಗ ಏಷ್ಯಾ, ಆಫ್ರಿಕಾ, ದಕ್ಷಿಣ ಮತ್ತು ಮಧ್ಯ ಅಮೆರಿಕ ಮತ್ತು ಮಧ್ಯಪ್ರಾಚ್ಯದಾದ್ಯಂತ ತನ್ನ ಅಸ್ತಿತ್ವವನ್ನು ಹೊಂದಿದೆ. ಪಸ್ತುತ, ಕಂಪನಿಯು ಎಂಟು ವಿಶ್ವ ದರ್ಜೆಯ ಉತ್ಪಾದನಾ ಸೌಲಭ್ಯಗಳನ್ನು ಹೊಂದಿದೆ, ಇದರಲ್ಲಿ ಭಾರತದಲ್ಲಿ ಆರು ಮತ್ತು ಬಾಂಗ್ಲಾದೇಶ ಮತ್ತು ಕೊಲಂಬಿಯಾದಲ್ಲಿ ತಲಾ ಒಂದು ಆಗಿದೆ.

MOST READ: ಭಾರತದಲ್ಲಿ ಕೈಗೆಟುಕುವ ದರದಲ್ಲಿ ಸಿಗುವ ಸ್ಕೂಟರ್‌ಗಳಿವು

ಮೆಕ್ಸಿಕೋ ಮಾರುಕಟ್ಟೆಗೆ ಕಾಲಿಡಲಿದೆ ಹೀರೋ ಮೋಟೊಕಾರ್ಪ್

ಇನ್ನು ಇತ್ತೀಚೆಗೆ ಹೀರೋ ಮೋಟೊಕಾರ್ಪ್ ಕಂಪನಿಯು ಬೈಕ್ ಉತ್ಪಾದನೆಯಲ್ಲಿ ಹೊಸ ಮೈಲಿಗಲ್ಲು ಸಾಧಿಸಿದೆ. ಬೈಕ್ ಉತ್ಪಾದನೆಯ ಆರಂಭಿಸಿದ 36 ವರ್ಷಗಳ ಅವಧಿಯಲ್ಲಿ ಬರೋಬ್ಬರಿ 10 ಕೋಟಿ ಬೈಕ್ ಉತ್ಪಾದನೆ ಮಾಡುವ ಮೂಲಕ ಹೊಸ ದಾಖಲೆಯನ್ನು ನಿರ್ಮಿಸಿದೆ.

ಮೆಕ್ಸಿಕೋ ಮಾರುಕಟ್ಟೆಗೆ ಕಾಲಿಡಲಿದೆ ಹೀರೋ ಮೋಟೊಕಾರ್ಪ್

ಭಾರತೀಯ ಮಾರುಕಟ್ಟೆಯಲ್ಲಿ ಹೀರೋ ಮೋಟೊಕಾರ್ಪ್ ತನ್ನ ಪ್ರಬಲ್ಯವನ್ನು ಮುಂದುರಿಸಿದೆ. ಅದೇ ರೀತಿ ಹೀರೋ ಮೋಟೊಕಾರ್ಪ್ ಜಾಗತಿಕವಾಗಿ ವಿಸ್ತರಿಸಲು ಪ್ರಯತ್ನಸುತ್ತಿದೆ. ಹೀರೋ ತನ್ನ ಸರಣಿಯಲ್ಲಿ ಜನಪ್ರಿಯ ಸ್ಕೂಟರ್ ಗಳು ಮತ್ತು ಬೈಕುಗಳನ್ನು ಒಳಗೊಂಡಿದೆ.

Most Read Articles

Kannada
English summary
Hero MotoCorp To Begin Mexico Operations. Read In Kananda.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X