Just In
- 1 hr ago
ಕಾರುಗಳ ರಫ್ತಿನಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಮಾರುತಿ ಸುಜುಕಿ
- 3 hrs ago
ವಾರದ ಪ್ರಮುಖ ಸುದ್ದಿ: ಹೊಸ ಸಫಾರಿ ಬಿಡುಗಡೆ, ಟೋಲ್ ಸಂಗ್ರಹ ಹೆಚ್ಚಳ, ಇಳಿಕೆಯಾಗುತ್ತಾ ಪೆಟ್ರೋಲ್ ದರ?
- 13 hrs ago
ಬಿಡುಗಡೆಯಾಗಲಿರುವ ಓಲಾ ಮೊದಲ ಎಲೆಕ್ಟ್ರಿಕ್ ಸ್ಕೂಟರ್ ವಿಶೇಷತೆಗಳೇನು?
- 15 hrs ago
ಪರಿಸರ ಸ್ನೇಹಿ ವಾಹನಗಳ ವಿಭಾಗದಲ್ಲಿ ಟಾಟಾ ನೆಕ್ಸಾನ್ ಇವಿ ಕಾರಿಗೆ ಪ್ರತಿಷ್ಠಿತ ಪ್ರಶಸ್ತಿ
Don't Miss!
- News
ಅಮೆಜೊನಿಯಾ -1 ಹಾಗೂ 18 ಉಪಗ್ರಹಗಳು ಯಶಸ್ವಿ ಉಡಾವಣೆ
- Movies
ವಿಶೇಷ ಭಾನುವಾರ: ಮನೋರಂಜನಾ ಲೋಕದಲ್ಲಿ 'ಮದ-ಗಜ'ಗಳ ಕಾದಾಟ
- Sports
ಸ್ಪಿನ್ ಆಗಲು ಆರಂಭವಾದರೆ ಜಗತ್ತು ಅಳಲು ಆರಂಭಿಸುತ್ತದೆ: ಪಿಚ್ ಬಗ್ಗೆ ಟೀಕೆಗೆ ಆಸಿಸ್ ಸ್ಪಿನ್ನರ್ ತಿರುಗೇಟು
- Finance
ಭಾರತದಲ್ಲಿ ನೋಕಿಯಾ ಪವರ್ ಈಯರ್ಬಡ್ಸ್ ಲೈಟ್ಸ್ ಮಾರಾಟ
- Lifestyle
ವಾರ ಭವಿಷ್ಯ: ಈ ವಾರ 12 ರಾಶಿಗಳ ರಾಶಿಫಲ ಹೇಗಿದೆ?
- Education
MCL Recruitment 2021: 8 ಸಾಮಾನ್ಯ ವೈದ್ಯಕೀಯ ಸಲಹೆಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಶೀಘ್ರದಲ್ಲಿಯೇ ಬಿಡುಗಡೆಯಾಗಲಿದೆ ಹೀರೋ ಮೋಟೊಕಾರ್ಪ್ ಕಂಪನಿಯ ಎಲೆಕ್ಟ್ರಿಕ್ ಸ್ಕೂಟರ್
ಹೀರೋ ಮೋಟೊಕಾರ್ಪ್ ಕಂಪನಿಯು ತನ್ನ ಮುಂದಿನ ಯೋಜನೆಯಡಿ ಎಲೆಕ್ಟ್ರಿಕ್ ವಾಹನಗಳನ್ನು ಬಿಡುಗಡೆಗೊಳಿಸಲು ತಯಾರಿ ನಡೆಸುತ್ತಿದೆ. ಇದಕ್ಕಾಗಿ ಕಂಪನಿಯು ಮೂರು ಯೋಜನೆಗಳಲ್ಲಿ ಕಾರ್ಯನಿರತವಾಗಿದೆ.

ಮೊದಲ ಯೋಜನೆಯಲ್ಲಿ ತನ್ನ ಸಂಶೋಧನೆ ಹಾಗೂ ಅಭಿವೃದ್ಧಿ ಕೇಂದ್ರದ ಸಹಾಯದಿಂದ ಎಲೆಕ್ಟ್ರಿಕ್ ವಾಹನಗಳ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸುತ್ತಿದೆ. ಎರಡನೇ ಯೋಜನೆಯಲ್ಲಿ ಕಂಪನಿಯು ಎಲೆಕ್ಟ್ರಿಕ್ ತ್ರಿಚಕ್ರ ವಾಹನದ ಮೂಲಮಾದರಿಯ ಮೇಲೆ ಕಾರ್ಯನಿರ್ವಹಿಸುತ್ತಿದ್ದರೆ, ಮೂರನೇ ಯೋಜನೆಯಲ್ಲಿ ಕಂಪನಿಯು ಹೂಡಿಕೆಯ ಮೂಲಕ ತನ್ನ ವ್ಯವಹಾರವನ್ನು ವಿಸ್ತರಿಸುತ್ತಿದೆ.

ಸದ್ಯಕ್ಕೆ ಹೀರೋ ಮೋಟೊಕಾರ್ಪ್ ಕಂಪನಿಯು ಯಾವುದೇ ಎಲೆಕ್ಟ್ರಿಕ್ ವಾಹನಗಳನ್ನು ಬಿಡುಗಡೆಗೊಳಿಸಿಲ್ಲ. ಹೀರೋ ಮೋಟೊಕಾರ್ಪ್ ಕಂಪನಿಯ ಎರಡು ಪ್ರತಿಸ್ಪರ್ಧಿ ಕಂಪನಿಗಳಾದ ಬಜಾಜ್ ಹಾಗೂ ಟಿವಿಎಸ್ ಈಗಾಗಲೇ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಬಿಡುಗಡೆಗೊಳಿಸಿವೆ. ಶೀಘ್ರದಲ್ಲಿಯೇ ಹೀರೋ ಮೋಟೊಕಾರ್ಪ್ ಕೂಡ ಎಲೆಕ್ಟ್ರಿಕ್ ವಾಹನ ಕ್ಷೇತ್ರಕ್ಕೆ ಕಾಲಿಡಲು ಸಜ್ಜಾಗಿದೆ.
MOST READ:ರಿಕ್ಷಾ ಕಳೆದುಕೊಂಡವನಿಗೆ ಹೊಸ ರಿಕ್ಷಾ ಕೊಡಿಸಿದ ಆಪದ್ಭಾಂಧವ

ಕಂಪನಿಯು ಕಳೆದ ವರ್ಷ ಹೀರೋ ಮೆಸ್ಟ್ರೋ ಎಡ್ಜ್ ಆಧಾರಿತ ಎಲೆಕ್ಟ್ರಿಕ್ ಸ್ಕೂಟರ್‌ನ ಮೂಲಮಾದರಿಯನ್ನು ಅನಾವರಣಗೊಳಿಸಿತ್ತು. ಒಂದು ವರ್ಷದ ನಂತರವೂ ಕಂಪನಿಯು ಈ ಸ್ಕೂಟರ್ ಅನ್ನು ಬಿಡುಗಡೆಗೊಳಿಸಿಲ್ಲ.

ಈ ಬಗ್ಗೆ ಮಾತನಾಡಿರುವ ಹೀರೋ ಮೋಟೊಕಾರ್ಪ್ ಅಧ್ಯಕ್ಷ ಪವನ್ ಮುಂಜಾಲ್, ಕಂಪನಿಯು ತನ್ನ ಕಾರ್ಯತಂತ್ರಕ್ಕೆ ಅನುಗುಣವಾಗಿ ಕಾರ್ಯನಿರ್ವಹಿಸುತ್ತಿದೆ. ಶೀಘ್ರದಲ್ಲೇ ಎಲೆಕ್ಟ್ರಿಕ್ ವಾಹನ ಮಾರುಕಟ್ಟೆಗೆ ಕಾಲಿಡಲಿದೆ ಎಂದು ಹೇಳಿದರು. ಆದರೆ ಕಂಪನಿಯ ಮೊದಲ ಎಲೆಕ್ಟ್ರಿಕ್ ವಾಹನ ಯಾವುದು ಎಂಬುದು ಇನ್ನೂ ಬಹಿರಂಗಗೊಂಡಿಲ್ಲ.
MOST READ:ಶೋಚನೀಯ ಸ್ಥಿತಿಯಲ್ಲಿವೆ ದುಬಾರಿ ಬೆಲೆಯ ಐಷಾರಾಮಿ ರೋಲ್ಸ್ ರಾಯ್ಸ್ ಕಾರುಗಳು

ಕಂಪನಿಯ ಮೊದಲ ಎಲೆಕ್ಟ್ರಿಕ್ ಸ್ಕೂಟರ್ ಹೀರೋ ಮೆಸ್ಟ್ರೋ ಎಡ್ಜ್ ವಿನ್ಯಾಸದ ಆಧಾರದ ಮೇಲೆ ತಯಾರಾಗಲಿದೆ. ಈ ಸ್ಕೂಟರ್ ಪ್ರೀಮಿಯಂ ಎಲೆಕ್ಟ್ರಿಕ್ ಸ್ಕೂಟರ್‌ಗಳಿಗಿಂತ ಅಗ್ಗವಾಗಲಿದ್ದು, ಬಜಾಜ್ ಚೇತಕ್, ಟಿವಿಎಸ್ ಐಕ್ಯೂಬ್ ಹಾಗೂ ಎಥೆರ್ ಸ್ಕೂಟರ್‌ಗಳಿಗೆ ಪೈಪೋಟಿ ನೀಡಲಿದೆ.

ದ್ವಿಚಕ್ರ ವಾಹನ ಮಾರುಕಟ್ಟೆಯಲ್ಲಿ ಕಂಪನಿಯು ಈಗಾಗಲೇ ಜನಪ್ರಿಯವಾಗಿರುವುದರಿಂದ ಹೀರೋ ಮೋಟೊಕಾರ್ಪ್ ಕಂಪನಿಯ ಎಲೆಕ್ಟ್ರಿಕ್ ಸ್ಕೂಟರ್‌ಗಳು ಹೆಚ್ಚು ಜನಪ್ರಿಯವಾಗಲಿವೆ ಎಂಬುದು ಕಂಪನಿಯ ಅಭಿಪ್ರಾಯವಾಗಿದೆ.
MOSTREAD: ಇನ್ನು ಮುಂದೆ ಈ ನಗರಗಳಲ್ಲಿ ಡೀಸೆಲ್ ವಾಹನಗಳನ್ನು ಮಾರಾಟ ಮಾಡುವಂತಿಲ್ಲ

ಕಂಪನಿಯು ಎಲೆಕ್ಟ್ರಿಕ್ ರಿಕ್ಷಾಗಳನ್ನು ಸಹ ಬಿಡುಗಡೆಗೊಳಿಸುವ ಸಾಧ್ಯತೆಗಳಿವೆ. ಕಳೆದ ವರ್ಷ ನಡೆದ ಆಟೋ ಎಕ್ಸ್ ಪೋದಲ್ಲಿ ಕಂಪನಿಯು ಎಲೆಕ್ಟ್ರಿಕ್ ರಿಕ್ಷಾದ ಮೂಲಮಾದರಿಯನ್ನು ಪ್ರದರ್ಶಿಸಿತ್ತು. ಈ ವಾಹನವು ತನ್ನ ಆಧುನಿಕ ವಿನ್ಯಾಸ ಹಾಗೂ ನೋಟದಿಂದ ಮೆಚ್ಚುಗೆಯನ್ನು ಪಡೆದಿತ್ತು. ಕಂಪನಿಯು ಈ ರಿಕ್ಷಾ ಬಿಡುಗಡೆಯ ಬಗ್ಗೆ ಯಾವುದೇ ಮಾಹಿತಿಯನ್ನು ಬಿಡುಗಡೆಗೊಳಿಸಿಲ್ಲ.

ಹೀರೋ ಮೋಟೊಕಾರ್ಪ್ ಬೆಂಗಳೂರು ಮೂಲದ ಎಥೆರ್ ಎನರ್ಜಿ ಸ್ಕೂಟರ್‌ನೊಂದಿಗೆ ಪಾಲುದಾರಿಕೆಯನ್ನು ಮಾಡಿಕೊಂಡಿದೆ. ಹೀರೋ ಹೂಡಿಕೆಯ ನಂತರ ಎಥೆರ್ ಎನರ್ಜಿಯು ತನ್ನ ಉತ್ಪಾದನಾ ಸಾಮರ್ಥ್ಯವನ್ನು ವಿಸ್ತರಿಸಿದೆ. ಈ ಹಿಂದೆ ಕೆಲವು ನಗರಗಳಲ್ಲಿ ಮಾತ್ರ ಬಿಡುಗಡೆಯಾಗಿದ್ದ ಎಥೆರ್ ಸ್ಕೂಟರ್ ಈಗ ಭಾರತದಾದ್ಯಂತ ತನ್ನ ಮಾರಾಟ ಜಾಲವನ್ನು ವಿಸ್ತರಿಸುತ್ತಿದೆ.