ಶೀಘ್ರದಲ್ಲಿಯೇ ಬಿಡುಗಡೆಯಾಗಲಿದೆ ಹೀರೋ ಮೋಟೊಕಾರ್ಪ್ ಕಂಪನಿಯ ಎಲೆಕ್ಟ್ರಿಕ್ ಸ್ಕೂಟರ್

ಹೀರೋ ಮೋಟೊಕಾರ್ಪ್ ಕಂಪನಿಯು ತನ್ನ ಮುಂದಿನ ಯೋಜನೆಯಡಿ ಎಲೆಕ್ಟ್ರಿಕ್ ವಾಹನಗಳನ್ನು ಬಿಡುಗಡೆಗೊಳಿಸಲು ತಯಾರಿ ನಡೆಸುತ್ತಿದೆ. ಇದಕ್ಕಾಗಿ ಕಂಪನಿಯು ಮೂರು ಯೋಜನೆಗಳಲ್ಲಿ ಕಾರ್ಯನಿರತವಾಗಿದೆ.

ಶೀಘ್ರದಲ್ಲಿಯೇ ಬಿಡುಗಡೆಯಾಗಲಿದೆ ಹೀರೋ ಮೋಟೊಕಾರ್ಪ್ ಕಂಪನಿಯ ಎಲೆಕ್ಟ್ರಿಕ್ ಸ್ಕೂಟರ್

ಮೊದಲ ಯೋಜನೆಯಲ್ಲಿ ತನ್ನ ಸಂಶೋಧನೆ ಹಾಗೂ ಅಭಿವೃದ್ಧಿ ಕೇಂದ್ರದ ಸಹಾಯದಿಂದ ಎಲೆಕ್ಟ್ರಿಕ್ ವಾಹನಗಳ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸುತ್ತಿದೆ. ಎರಡನೇ ಯೋಜನೆಯಲ್ಲಿ ಕಂಪನಿಯು ಎಲೆಕ್ಟ್ರಿಕ್ ತ್ರಿಚಕ್ರ ವಾಹನದ ಮೂಲಮಾದರಿಯ ಮೇಲೆ ಕಾರ್ಯನಿರ್ವಹಿಸುತ್ತಿದ್ದರೆ, ಮೂರನೇ ಯೋಜನೆಯಲ್ಲಿ ಕಂಪನಿಯು ಹೂಡಿಕೆಯ ಮೂಲಕ ತನ್ನ ವ್ಯವಹಾರವನ್ನು ವಿಸ್ತರಿಸುತ್ತಿದೆ.

ಶೀಘ್ರದಲ್ಲಿಯೇ ಬಿಡುಗಡೆಯಾಗಲಿದೆ ಹೀರೋ ಮೋಟೊಕಾರ್ಪ್ ಕಂಪನಿಯ ಎಲೆಕ್ಟ್ರಿಕ್ ಸ್ಕೂಟರ್

ಸದ್ಯಕ್ಕೆ ಹೀರೋ ಮೋಟೊಕಾರ್ಪ್ ಕಂಪನಿಯು ಯಾವುದೇ ಎಲೆಕ್ಟ್ರಿಕ್ ವಾಹನಗಳನ್ನು ಬಿಡುಗಡೆಗೊಳಿಸಿಲ್ಲ. ಹೀರೋ ಮೋಟೊಕಾರ್ಪ್ ಕಂಪನಿಯ ಎರಡು ಪ್ರತಿಸ್ಪರ್ಧಿ ಕಂಪನಿಗಳಾದ ಬಜಾಜ್ ಹಾಗೂ ಟಿವಿಎಸ್ ಈಗಾಗಲೇ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಬಿಡುಗಡೆಗೊಳಿಸಿವೆ. ಶೀಘ್ರದಲ್ಲಿಯೇ ಹೀರೋ ಮೋಟೊಕಾರ್ಪ್ ಕೂಡ ಎಲೆಕ್ಟ್ರಿಕ್ ವಾಹನ ಕ್ಷೇತ್ರಕ್ಕೆ ಕಾಲಿಡಲು ಸಜ್ಜಾಗಿದೆ.

MOST READ:ರಿಕ್ಷಾ ಕಳೆದುಕೊಂಡವನಿಗೆ ಹೊಸ ರಿಕ್ಷಾ ಕೊಡಿಸಿದ ಆಪದ್ಭಾಂಧವ

ಶೀಘ್ರದಲ್ಲಿಯೇ ಬಿಡುಗಡೆಯಾಗಲಿದೆ ಹೀರೋ ಮೋಟೊಕಾರ್ಪ್ ಕಂಪನಿಯ ಎಲೆಕ್ಟ್ರಿಕ್ ಸ್ಕೂಟರ್

ಕಂಪನಿಯು ಕಳೆದ ವರ್ಷ ಹೀರೋ ಮೆಸ್ಟ್ರೋ ಎಡ್ಜ್ ಆಧಾರಿತ ಎಲೆಕ್ಟ್ರಿಕ್ ಸ್ಕೂಟರ್‌ನ ಮೂಲಮಾದರಿಯನ್ನು ಅನಾವರಣಗೊಳಿಸಿತ್ತು. ಒಂದು ವರ್ಷದ ನಂತರವೂ ಕಂಪನಿಯು ಈ ಸ್ಕೂಟರ್ ಅನ್ನು ಬಿಡುಗಡೆಗೊಳಿಸಿಲ್ಲ.

ಶೀಘ್ರದಲ್ಲಿಯೇ ಬಿಡುಗಡೆಯಾಗಲಿದೆ ಹೀರೋ ಮೋಟೊಕಾರ್ಪ್ ಕಂಪನಿಯ ಎಲೆಕ್ಟ್ರಿಕ್ ಸ್ಕೂಟರ್

ಈ ಬಗ್ಗೆ ಮಾತನಾಡಿರುವ ಹೀರೋ ಮೋಟೊಕಾರ್ಪ್ ಅಧ್ಯಕ್ಷ ಪವನ್ ಮುಂಜಾಲ್, ಕಂಪನಿಯು ತನ್ನ ಕಾರ್ಯತಂತ್ರಕ್ಕೆ ಅನುಗುಣವಾಗಿ ಕಾರ್ಯನಿರ್ವಹಿಸುತ್ತಿದೆ. ಶೀಘ್ರದಲ್ಲೇ ಎಲೆಕ್ಟ್ರಿಕ್ ವಾಹನ ಮಾರುಕಟ್ಟೆಗೆ ಕಾಲಿಡಲಿದೆ ಎಂದು ಹೇಳಿದರು. ಆದರೆ ಕಂಪನಿಯ ಮೊದಲ ಎಲೆಕ್ಟ್ರಿಕ್ ವಾಹನ ಯಾವುದು ಎಂಬುದು ಇನ್ನೂ ಬಹಿರಂಗಗೊಂಡಿಲ್ಲ.

MOST READ:ಶೋಚನೀಯ ಸ್ಥಿತಿಯಲ್ಲಿವೆ ದುಬಾರಿ ಬೆಲೆಯ ಐಷಾರಾಮಿ ರೋಲ್ಸ್ ರಾಯ್ಸ್ ಕಾರುಗಳು

ಶೀಘ್ರದಲ್ಲಿಯೇ ಬಿಡುಗಡೆಯಾಗಲಿದೆ ಹೀರೋ ಮೋಟೊಕಾರ್ಪ್ ಕಂಪನಿಯ ಎಲೆಕ್ಟ್ರಿಕ್ ಸ್ಕೂಟರ್

ಕಂಪನಿಯ ಮೊದಲ ಎಲೆಕ್ಟ್ರಿಕ್ ಸ್ಕೂಟರ್ ಹೀರೋ ಮೆಸ್ಟ್ರೋ ಎಡ್ಜ್ ವಿನ್ಯಾಸದ ಆಧಾರದ ಮೇಲೆ ತಯಾರಾಗಲಿದೆ. ಈ ಸ್ಕೂಟರ್ ಪ್ರೀಮಿಯಂ ಎಲೆಕ್ಟ್ರಿಕ್ ಸ್ಕೂಟರ್‌ಗಳಿಗಿಂತ ಅಗ್ಗವಾಗಲಿದ್ದು, ಬಜಾಜ್ ಚೇತಕ್, ಟಿವಿಎಸ್ ಐಕ್ಯೂಬ್ ಹಾಗೂ ಎಥೆರ್ ಸ್ಕೂಟರ್‌ಗಳಿಗೆ ಪೈಪೋಟಿ ನೀಡಲಿದೆ.

ಶೀಘ್ರದಲ್ಲಿಯೇ ಬಿಡುಗಡೆಯಾಗಲಿದೆ ಹೀರೋ ಮೋಟೊಕಾರ್ಪ್ ಕಂಪನಿಯ ಎಲೆಕ್ಟ್ರಿಕ್ ಸ್ಕೂಟರ್

ದ್ವಿಚಕ್ರ ವಾಹನ ಮಾರುಕಟ್ಟೆಯಲ್ಲಿ ಕಂಪನಿಯು ಈಗಾಗಲೇ ಜನಪ್ರಿಯವಾಗಿರುವುದರಿಂದ ಹೀರೋ ಮೋಟೊಕಾರ್ಪ್ ಕಂಪನಿಯ ಎಲೆಕ್ಟ್ರಿಕ್ ಸ್ಕೂಟರ್‌ಗಳು ಹೆಚ್ಚು ಜನಪ್ರಿಯವಾಗಲಿವೆ ಎಂಬುದು ಕಂಪನಿಯ ಅಭಿಪ್ರಾಯವಾಗಿದೆ.

MOSTREAD: ಇನ್ನು ಮುಂದೆ ಈ ನಗರಗಳಲ್ಲಿ ಡೀಸೆಲ್ ವಾಹನಗಳನ್ನು ಮಾರಾಟ ಮಾಡುವಂತಿಲ್ಲ

ಶೀಘ್ರದಲ್ಲಿಯೇ ಬಿಡುಗಡೆಯಾಗಲಿದೆ ಹೀರೋ ಮೋಟೊಕಾರ್ಪ್ ಕಂಪನಿಯ ಎಲೆಕ್ಟ್ರಿಕ್ ಸ್ಕೂಟರ್

ಕಂಪನಿಯು ಎಲೆಕ್ಟ್ರಿಕ್ ರಿಕ್ಷಾಗಳನ್ನು ಸಹ ಬಿಡುಗಡೆಗೊಳಿಸುವ ಸಾಧ್ಯತೆಗಳಿವೆ. ಕಳೆದ ವರ್ಷ ನಡೆದ ಆಟೋ ಎಕ್ಸ್ ಪೋದಲ್ಲಿ ಕಂಪನಿಯು ಎಲೆಕ್ಟ್ರಿಕ್ ರಿಕ್ಷಾದ ಮೂಲಮಾದರಿಯನ್ನು ಪ್ರದರ್ಶಿಸಿತ್ತು. ಈ ವಾಹನವು ತನ್ನ ಆಧುನಿಕ ವಿನ್ಯಾಸ ಹಾಗೂ ನೋಟದಿಂದ ಮೆಚ್ಚುಗೆಯನ್ನು ಪಡೆದಿತ್ತು. ಕಂಪನಿಯು ಈ ರಿಕ್ಷಾ ಬಿಡುಗಡೆಯ ಬಗ್ಗೆ ಯಾವುದೇ ಮಾಹಿತಿಯನ್ನು ಬಿಡುಗಡೆಗೊಳಿಸಿಲ್ಲ.

ಶೀಘ್ರದಲ್ಲಿಯೇ ಬಿಡುಗಡೆಯಾಗಲಿದೆ ಹೀರೋ ಮೋಟೊಕಾರ್ಪ್ ಕಂಪನಿಯ ಎಲೆಕ್ಟ್ರಿಕ್ ಸ್ಕೂಟರ್

ಹೀರೋ ಮೋಟೊಕಾರ್ಪ್ ಬೆಂಗಳೂರು ಮೂಲದ ಎಥೆರ್ ಎನರ್ಜಿ ಸ್ಕೂಟರ್‌ನೊಂದಿಗೆ ಪಾಲುದಾರಿಕೆಯನ್ನು ಮಾಡಿಕೊಂಡಿದೆ. ಹೀರೋ ಹೂಡಿಕೆಯ ನಂತರ ಎಥೆರ್ ಎನರ್ಜಿಯು ತನ್ನ ಉತ್ಪಾದನಾ ಸಾಮರ್ಥ್ಯವನ್ನು ವಿಸ್ತರಿಸಿದೆ. ಈ ಹಿಂದೆ ಕೆಲವು ನಗರಗಳಲ್ಲಿ ಮಾತ್ರ ಬಿಡುಗಡೆಯಾಗಿದ್ದ ಎಥೆರ್ ಸ್ಕೂಟರ್ ಈಗ ಭಾರತದಾದ್ಯಂತ ತನ್ನ ಮಾರಾಟ ಜಾಲವನ್ನು ವಿಸ್ತರಿಸುತ್ತಿದೆ.

Most Read Articles

Kannada
English summary
Hero Motocorp to launch its first electric scooter soon. Read in Kannada.
Story first published: Monday, January 25, 2021, 19:38 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X