ಶೀಘ್ರದಲ್ಲೇ ಬೈಕ್ ಉತ್ಪಾದನೆಯನ್ನು ಪುನಾರಂಭಿಸಲು ನಿರ್ಧರಿಸಿದ ಹೀರೋ ಮೋಟೊಕಾರ್ಪ್

ದೇಶಾದ್ಯಂತ ಕೋವಿಡ್ 2ನೇ ಅಲೆ ತೀವ್ರವಾಗಿ ಹೆಚ್ಚುತ್ತಿರುವುದರಿಂದ ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಹಲವು ಕಠಿಣ ಕ್ರಮಗಳೊಂದಿಗೆ ಭಾಗಶಃ ಲಾಕ್ಡೌನ್, ಕರ್ಫ್ಯೂ ಕೈಗೊಳ್ಳಲಾಗಿದ್ದು, ಹೊಸ ಸುರಕ್ಷಾ ಕ್ರಮಗಳ ಪರಿಣಾಮ ಆಟೋ ಉದ್ಯಮವು ಸಹ ಸ್ತಬ್ಧವಾಗಿದೆ.

ಶೀಘ್ರದಲ್ಲೇ ಬೈಕ್ ಉತ್ಪಾದನೆಯನ್ನು ಪುನಾರಂಭಿಸಲು ನಿರ್ಧರಿಸಿದ ಹೀರೋ ಮೋಟೊಕಾರ್ಪ್

ಕಳೆದ ವರ್ಷದ ಲಾಕ್‌ಡೌನ್‌ ಹೊಡೆತಕ್ಕೆ ಸಿಲುಕಿ ಸುಧಾರಿಸಿಕೊಳ್ಳುತ್ತಿದ್ದ ಆಟೋ ಉದ್ಯಮಕ್ಕೆ ಇದೀಗ ಮತ್ತೊಮ್ಮೆ ಲಾಕ್‌ಡೌನ್ ಪರಿಣಾಮ ಭಾರೀ ನಷ್ಟ ಅನುಭವಿಸುತ್ತಿದ್ದು, ಹೊಸ ವಾಹನಗಳಿಗೆ ಬೇಡಿಕೆ ಹೆಚ್ಚುತ್ತಿರುವ ಸಂದರ್ಭದಲ್ಲೇ ವಾಹನ ಉತ್ಪಾದನೆಯು ಸಂಪೂರ್ಣವಾಗಿ ನೆಲ ಕಚ್ಚಿದೆ. ಕೋವಿಡ್ ಹೆಚ್ಚಳ ನಡುವೆಯೂ ದೇಶದ ಪ್ರಮುಖ ಆಟೋ ಕಂಪನಿಗಳು ಶೇ.50ಕ್ಕಿಂತಲೂ ಕಡಿಮೆ ಪ್ರಮಾಣದ ಉದ್ಯೋಗಿಗಳೊಂದಿಗೆ ಕಾರ್ಯನಿರ್ವಹಣೆ ನಡೆಸುತ್ತಿದ್ದರೆ ಇನ್ನು ಕೆಲವು ವಾಹನ ಉತ್ಪಾದನಾ ಕಂಪನಿಗಳು ಸಂಪೂರ್ಣವಾಗಿ ವಾಹನ ಉತ್ಪಾದನೆಯನ್ನು ಬಂದ್ ಮಾಡಿವೆ.

ಶೀಘ್ರದಲ್ಲೇ ಬೈಕ್ ಉತ್ಪಾದನೆಯನ್ನು ಪುನಾರಂಭಿಸಲು ನಿರ್ಧರಿಸಿದ ಹೀರೋ ಮೋಟೊಕಾರ್ಪ್

ದೇಶದ ಅತಿದೊಡ್ಡ ಬೈಕ್ ಉತ್ಪಾದನಾ ಕಂಪನಿಯಾಗಿರುವ ಹೀರೋ ಮೋಟೊಕಾರ್ಪ್ ಕಂಪನಿಯು ಕೂಡಾ ಕಳೆದ ತಿಂಗಳು 22ರಿಂದಲೇ ವಾಹನ ಉತ್ಪಾದನೆಯನ್ನು ಬಂದ್ ಮಾಡಿದ್ದು, ಈ ತಿಂಗಳು 17ರಿಂದ ವಾಹನ ಉತ್ಪಾದನೆಯನ್ನು ಪುನಾರಂಭಿಸುವ ನಿರ್ಧಾರಕ್ಕೆ ಬಂದಿದೆ.

ಶೀಘ್ರದಲ್ಲೇ ಬೈಕ್ ಉತ್ಪಾದನೆಯನ್ನು ಪುನಾರಂಭಿಸಲು ನಿರ್ಧರಿಸಿದ ಹೀರೋ ಮೋಟೊಕಾರ್ಪ್

ಕೋವಿಡ್ ತೀವ್ರ ಹೆಚ್ಚದ ಹಿನ್ನಲೆ ವಾಹನ ಉತ್ಪಾದನೆಯನ್ನು ಬಂದ್ ಮಾಡಿದ್ದ ಕಂಪನಿಯು ಇದೀಗ ಉತ್ಪಾದನೆಯನ್ನು ಹೊಸ ಸುರಕ್ಷಾ ಮಾರ್ಗಸೂಚಿಯೊಂದಿಗೆ ಕಾರ್ಯನಿರ್ವಹಿಸಲು ನಿರ್ಧರಿಸಿದ್ದು, ನಿರಂತರ ವಾಹನ ಉತ್ಪಾದನೆಯ ಸ್ಥಗಿತದಿಂದ ಭಾರೀ ಪ್ರಮಾಣದ ಆರ್ಥಿಕ ನಷ್ಟ ಭೀತಿ ವ್ಯಕ್ತಪಡಿಸಿವೆ.

ಶೀಘ್ರದಲ್ಲೇ ಬೈಕ್ ಉತ್ಪಾದನೆಯನ್ನು ಪುನಾರಂಭಿಸಲು ನಿರ್ಧರಿಸಿದ ಹೀರೋ ಮೋಟೊಕಾರ್ಪ್

ಜೀವದ ಜೊತೆಗೆ ಜೀವನ ನಿರ್ವಹಣೆಯನ್ನು ಸಮರ್ಥವಾಗಿ ಎದುರಿಸಲು ಉದ್ಯೋಗ ಭದ್ರತೆಯು ಸಹ ಪ್ರಮುಖವಾಗಿದ್ದು, ಪರಿಸ್ಥಿತಿಗೆ ಅನುಗುಣವಾಗಿ ಎಲ್ಲಾ ಹಂತದಲ್ಲೂ ಸುರಕ್ಷಾ ಮಾರ್ಗಸೂಚಿ ಪಾಲನೆಯೊಂದಿಗೆ ಉತ್ಪಾದನೆ ಕೈಗೊಳ್ಳಲು ವಿವಿಧ ಆಟೋ ಕಂಪನಿಗಳು ಸಜ್ಜುಗೊಳ್ಳುತ್ತಿವೆ. ದೇಶದ ಪ್ರಮುಖ ರಾಜ್ಯಗಳಲ್ಲಿ ಕೋವಿಡ್ 2ನೇ ಅಲೆಯ ಕಳೆದ ವಾರಕ್ಕಿಂತಲೂ ಈ ವಾರ ತುಸು ತಗ್ಗಿದ್ದು, ಮುಂದಿನ ವಾರ ವಿವಿಧ ರಾಜ್ಯ ಸರ್ಕಾರಗಳು ವಾಣಿಜ್ಯ ಚಟುವಟಿಕೆಗಳಿಗೆ ಷರತ್ತುಬದ್ದ ಅನುಮತಿ ನೀಡುವ ನೀರಿಕ್ಷೆಗಳಿವೆ.

ಶೀಘ್ರದಲ್ಲೇ ಬೈಕ್ ಉತ್ಪಾದನೆಯನ್ನು ಪುನಾರಂಭಿಸಲು ನಿರ್ಧರಿಸಿದ ಹೀರೋ ಮೋಟೊಕಾರ್ಪ್

ಹೀಗಾಗಿ 17ರಿಂದ ಹೊಸ ವಾಹನ ಉತ್ಪಾದನೆಯನ್ನು ಪುನಾರಂಭ ಮಾಡಲು ನಿರ್ಧಿಸಿರುವ ಹೀರೋ ಮೋಟೊಕಾರ್ಪ್ ಕಂಪನಿಯು ಸಂಕಷ್ಟದಲ್ಲೂ ಸರ್ಕಾರದ ಜೊತೆ ಕೈಜೋಡಿಸಿದ್ದು, ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ(ಸಿಎಸ್‍ಆರ್) ನೀತಿ ಅಡಿ ವಿವಿಧ ಸಾಮಾಜಿಕ ಕಾರ್ಯಕ್ರಮಗಳನ್ನು ಕೈಗೊಂಡಿರುವುದು ಸಾರ್ವಜನಿಕ ವಲಯದಲ್ಲಿ ಪ್ರಶಂಸೆ ವ್ಯಕ್ತವಾಗಿದೆ.

MOST READ: ಕೋವಿಡ್ ಭೀತಿ: ಕಾರು ಉತ್ಪಾದನೆಯನ್ನು ತಾತ್ಕಾಲಿಕವಾಗಿ ಬಂದ್ ಮಾಡಿದ ಎಂಜಿ ಮೋಟಾರ್

ಶೀಘ್ರದಲ್ಲೇ ಬೈಕ್ ಉತ್ಪಾದನೆಯನ್ನು ಪುನಾರಂಭಿಸಲು ನಿರ್ಧರಿಸಿದ ಹೀರೋ ಮೋಟೊಕಾರ್ಪ್

ಕೋವಿಡ್ ಸೋಂಕಿತರಿಗೆ ಸರಿಯಾದ ಸಮಯಕ್ಕೆ ವೈದ್ಯಕೀಯ ಸೇವೆ ಒದಗಿಸಲು ಕೋವಿಡ್ ಕೇರ್ ತೆರೆದಿರುವ ಹೀರೋ ಮೋಟೊಕಾರ್ಪ್ ಹರಿದ್ವಾರದಲ್ಲಿರುವ ರಾಮಕೃಷ್ಣ ಮಿಷನ್ ಸೇವಾಶ್ರಮದಲ್ಲಿ ಕೋವಿಡ್ ಕೇರ್ ಆರಂಭಿಸಿದ್ದು, 122 ಹಾಸಿಗೆಗಳ ಸೌಲಭ್ಯದ ಕೋವಿಡ್ ಕೇರ್ ಕೇಂದ್ರದಲ್ಲಿ ಕೋವಿಡ್ ಸೋಂಕಿತರಿಗೆ ವೈದ್ಯಕೀಯ ಸೇವೆಗಳನ್ನು ನೀಡಲಾಗುತ್ತಿದೆ.

ಶೀಘ್ರದಲ್ಲೇ ಬೈಕ್ ಉತ್ಪಾದನೆಯನ್ನು ಪುನಾರಂಭಿಸಲು ನಿರ್ಧರಿಸಿದ ಹೀರೋ ಮೋಟೊಕಾರ್ಪ್

ಹೀರೋ ಮೋಟೊಕಾರ್ಪ್ ಕಂಪನಿಯು 'ಹೀರೋ ವಿ ಕೇರ್' ಸಾಮಾಜಿಕ ಕಾರ್ಯಕ್ರಮದಡಿಯಲ್ಲಿ ಅಗತ್ಯವಿರುವ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಒದಗಿಸಿದ್ದು, ಹರಿದ್ವಾರ ಜಿಲ್ಲಾಡಳಿತವು ವೈದ್ಯಕೀಯ ಸೇವೆಗಳನ್ನು ನಿರ್ವಹಣೆ ಮಾಡುತ್ತಿದೆ.

MOST READ: ಪ್ರತಿ ಚಾರ್ಜ್‌ಗೆ ಬರೋಬ್ಬರಿ 240ಕಿ.ಮೀ ಮೈಲೇಜ್ ನೀಡುವ ಇವಿ ಸ್ಕೂಟರ್ ಬಿಡುಗಡೆ ಮಾಡಲಿದೆ ಓಲಾ

ಶೀಘ್ರದಲ್ಲೇ ಬೈಕ್ ಉತ್ಪಾದನೆಯನ್ನು ಪುನಾರಂಭಿಸಲು ನಿರ್ಧರಿಸಿದ ಹೀರೋ ಮೋಟೊಕಾರ್ಪ್

ಕೋವಿಕ್ ಕೇರ್ ಜೊತೆಗೆ ಹೀರೋ ಮೋಟೊಕಾರ್ಪ್ ಕಂಪನಿಯು ದೆಹಲಿ ಮತ್ತು ಎನ್‍ಸಿಆರ್, ಹರಿಯಾಣ, ಉತ್ತರಾಖಂಡ್, ರಾಜಸ್ತಾನ ಮತ್ತು ಗುಜರಾತ್ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಆರೋಗ್ಯ ಕಾರ್ಯಕರ್ತರು ಮತ್ತು ವೈದ್ಯಕೀಯ ಸಿಬ್ಬಂದಿಯ ಸುರಕ್ಷತೆಗಾಗಿ ವೈಯಕ್ತಿಕ ಪ್ರಯಾಣಕ್ಕಾಗಿ ಕಂಪನಿಯು ತನ್ನ ಮೋಟಾರ್‌ಸೈಕಲ್‌ಗಳ ಜೊತೆ ಬೈಕ್ ಆ್ಯಂಬುಲೆನ್ಸ್ ಸಹ ಒದಗಿಸುತ್ತಿದೆ.

Article Published On: Saturday, May 15, 2021, 23:44 [IST]
English summary
Hero MotoCorp To Resume Operations From May 17. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+