Just In
Don't Miss!
- Movies
ಜನವರಿ 22ರಂದು ಐದು ಕನ್ನಡ ಸಿನಿಮಾ ಬಿಡುಗಡೆ
- News
ಲಿಂಗಾಂಬೂದಿಪಾಳ್ಯ ಕೆರೆಗೆ ಹರಿಯಲಿದೆ ಕೆಆರ್ಎಸ್ ನೀರು
- Lifestyle
ಈ 3 ವಸ್ತುಗಳನ್ನು ಹಾಕಿ ಮಾಡಿದ ಜ್ಯೂಸ್ ಕುಡಿದರೆ ಬೊಜ್ಜು ಕರುಗುತ್ತೆ, ಸೌಂದರ್ಯ ಹೆಚ್ಚುತ್ತೆ
- Finance
1986ರಿಂದ 2021 ಸೆನ್ಸೆಕ್ಸ್ ಪ್ರಮುಖ ಮೈಲುಗಲ್ಲುಗಳು: 50,000 ಪಾಯಿಂಟ್ ದಾಖಲೆ ಹಾದಿ
- Sports
ತವರಿಗೆ ಮರಳಿದ ಟೀಮ್ ಇಂಡಿಯಾ: ಮುಂಬೈನಲ್ಲಿ ರಹಾನೆಗೆ ಅದ್ದೂರಿ ಸ್ವಾಗತ
- Education
BMRCL Recruitment 2021: ಸೀನಿಯರ್ ಅರ್ಬನ್ ಮತ್ತು ಟ್ರಾನ್ಸ್ ಪೋರ್ಟ್ ಪ್ಲಾನರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ತೀವ್ರ ನಿಗಾ ಘಟಕದಲ್ಲಿ ಹೆಮ್ಮೆಯ ಕನ್ನಡಿಗ ಸಿ ಎಸ್ ಸಂತೋಷ್
ನಿನ್ನೆ ಡಕಾರ್ ರ‍್ಯಾಲಿಯ ನಾಲ್ಕನೇ ಹಂತದಲ್ಲಿ ಅಪಘಾತಕ್ಕೀಡಾಗಿದ್ದ ಭಾರತೀಯ ರೈಡರ್ ಕನ್ನಡಿಗ ಸಿ.ಎಸ್.ಸಂತೋಷ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರು ಅಪಘಾತಕ್ಕೀಡಾದಾಗ ಹಸ್ಕ್ ವರ್ನಾ ತಂಡದ ರೈಡರ್ ಅವರಿಗೆ ಪ್ರಥಮ ಚಿಕಿತ್ಸೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

2021ರ ಡಕಾರ್ ರ‍್ಯಾಲಿ ಕಳೆದ ಭಾನುವಾರದಿಂದ ಆರಂಭವಾಗಿದೆ. ಈ ವರ್ಷದ ರ‍್ಯಾಲಿಯಲ್ಲಿ ಭಾರತದ ಸವಾರರು ಅದ್ಭುತ ಪ್ರದರ್ಶನ ನೀಡಿದ್ದಾರೆ. ನಿನ್ನೆ ಈ ರ‍್ಯಾಲಿಯ ನಾಲ್ಕನೇ ಹಂತದ ಸ್ಪರ್ಧೆಗಳು ನಡೆಯುತ್ತಿದ್ದವು. ಈ ಸ್ಪರ್ಧೆಯಲ್ಲಿ ಹೀರೋ ಮೋಟೋಸ್ಪೋರ್ಟ್ ತಂಡವನ್ನು ಸಿಎಸ್ ಸಂತೋಷ್ ಪ್ರತಿನಿಧಿಸುತ್ತಿದ್ದರು.

ಸ್ಪರ್ಧೆಯಲ್ಲಿ ಭಾಗವಹಿಸಿದ್ದ ವೇಳೆ ಅನಿರೀಕ್ಷಿತವಾಗಿ ಅಪಘಾತಕ್ಕೀಡಾದರು. ಈ ಅಪಘಾತದಲ್ಲಿ ಅವರ ತಲೆಗೆ ಗಾಯ ಪೆಟ್ಟಾಗಿದೆ. ಅವರನ್ನು ಚಿಕಿತ್ಸೆಗೆ ರಿಯಾದ್‌ನ ಆಸ್ಪತ್ರೆಗೆ ದಾಖಲಿಸಿ ತೀವ್ರ ನಿಗಾ ಘಟಕದಲ್ಲಿಡಲಾಗಿದೆ.
MOSTREAD: ಟ್ರ್ಯಾಕ್ಟರ್‌ಗಳ ಹಿಂಭಾಗದಲ್ಲಿ ದೊಡ್ಡ ಗಾತ್ರದ ಟಯರ್‌ಗಳಿರಲು ಕಾರಣಗಳಿವು

ಅಪಘಾತಕ್ಕೀಡಾದಾಗ ಸಂತೋಷ್ ರವರಿಗೆ ಪ್ರಥಮ ಚಿಕಿತ್ಸೆ ನೀಡಿದ ಹಸ್ಕ್ ವರ್ನಾ ತಂಡದ ಪಾಲ್ ಸ್ಪ್ರಿಂಗ್ಸ್, ಅಪಘಾತ ನಡೆದ ಬಗ್ಗೆ ರ‍್ಯಾಲಿಮ್ಯಾನಿಯಾಕ್ ಪತ್ರಿಕೆಗೆ ಮಾಹಿತಿ ನೀಡಿದ್ದಾರೆ.

ಸಂತೋಷ್ ಹಾಗೂ ಹಸ್ಕ್ ವರ್ನಾ ತಂಡದ ಮತ್ತೊಬ್ಬ ಸದಸ್ಯ ಮಾರುಷಿಯೊ ಗೆರಿನಿ ನಡುವೆ ರ‍್ಯಾಲಿ ಆರಂಭವಾದ 135 ಕಿ.ಮೀ ದೂರದಲ್ಲಿ ಸ್ಥಳೀಯ ಸಮಯ ಬೆಳಿಗ್ಗೆ 11.45ರ ವೇಳೆಗೆ ಅಪಘಾತ ಸಂಭವಿಸಿದೆ ಎಂದು ಈ ಮಾಹಿತಿಯಲ್ಲಿ ಹೇಳಲಾಗಿದೆ.
MOSTREAD: ಚಿಕ್ಕ ಜಾಗದಲ್ಲಿ ದೊಡ್ಡ ಕಾರನ್ನು ಪಾರ್ಕ್ ಮಾಡಿದ ಅಪ್ರತಿಮ ಚಾಲಕನನ್ನು ಸನ್ಮಾನಿಸಿದ ಟೊಯೊಟಾ ಡೀಲರ್

ಅಪಘಾತದ ನಂತರ ಮಾರುಷಿಯೊ ಗೆರಿನಿ ತಕ್ಷಣವೇ ಮೇಲೆ ಎದ್ದಿದ್ದಾರೆ. ಆದರೆ ಸಂತೋಷ್ ಮೇಲೆಳಲಿಲ್ಲ. ತಕ್ಷಣವೇ ರಕ್ಷಣಾ ದಳಕ್ಕೆ ಮಾಹಿತಿ ನೀಡಲಾಗಿದೆ. ನಂತರ ಸಂತೋಷ್ ಅವರ ಹೃದಯ ಬಡಿತವನ್ನು ಚೇತರಿಸಿಕೊಳ್ಳಲು ಪ್ರಥಮ ಚಿಕಿತ್ಸೆ ನೀಡಲಾಗಿದೆ.

ಮುಂದಿನ 15 ನಿಮಿಷಗಳಲ್ಲಿ 3 ಹೆಲಿಕಾಪ್ಟರ್‌ಗಳಲ್ಲಿ ರಕ್ಷಣಾ ತಂಡವು ಅಲ್ಲಿಗೆ ಆಗಮಿಸಿದೆ. ಅವರು ಸಂತೋಷ್ ರವರನ್ನು ಪರೀಕ್ಷಿಸಿದಾಗ ಸಂತೋಷ್ ರವರ ಹೃದಯ ಬಡಿತವಿತ್ತು ಎಂದು ಪಾಲ್ ಸ್ಪ್ರಿಂಗ್ಸ್ ಮಾಹಿತಿ ನೀಡಿದ್ದಾರೆ.
MOSTREAD: ಲಾಕ್‌ಡೌನ್ ನಿಂದ ಕೆಲಸ ಕಳೆದುಕೊಂಡವ ಇಂದು ವಿಶ್ವ ವಿಖ್ಯಾತ ವ್ಯಕ್ತಿ

ನಂತರ ಸಂತೋಷ್ ರವರನ್ನು ಅಲ್-ದುವಾತಿಮಿಯ ವೈದ್ಯಕೀಯ ಶಿಬಿರಕ್ಕೆ ಕರೆದೊಯ್ಯಲಾಯಿತು. ತಲೆಗೆ ಪೆಟ್ಟು ಬಿದ್ದಿದ್ದ ಕಾರಣ ಅವರನ್ನು ರಿಯಾದ್‌ನ ಸೌದಿ ಜರ್ಮನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಂತೋಷ್ ರವರಿಗೆ ಅರಿವಳಿಕೆ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯಕ್ಕೆ ಅವರನ್ನು ಕೃತಕ ಕೋಮಾದಲ್ಲಿ ಇರಿಸಲಾಗಿದೆ. ಇಂದು ಸ್ಕ್ಯಾನಿಂಗ್'ಗಳನ್ನು ನಡೆಸಲಾಗುವುದು ಎಂದು ತಿಳಿದು ಬಂದಿದೆ.
MOSTREAD: 13 ವರ್ಷಗಳಲ್ಲಿ 10 ಲಕ್ಷ ಕಿ.ಮೀ ಸಂಚರಿಸಿದ ಟೊಯೊಟಾ ಇನೋವಾ ಕಾರು

ಗಾಯದ ಸ್ವರೂಪ ತಿಳಿದ ನಂತರ ಚಿಕಿತ್ಸೆ ನೀಡಲಾಗುವುದು ಎಂದು ವರದಿಗಳು ತಿಳಿಸಿವೆ. ಮೋಟಾರ್ ರೇಸಿಂಗ್ ಅಭಿಮಾನಿಗಳು ಹಾಗೂ ಕ್ರೀಡಾಭಿಮಾನಿಗಳು ಸಿ ಎಸ್ ಸಂತೋಷ್ ಶೀಘ್ರವಾಗಿ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತಿದ್ದಾರೆ.