ಕೇರಳದಲ್ಲಿ 10 ಸಾವಿರಕ್ಕೂ ಹೆಚ್ಚು ಮಾರಾಟವಾಗಿ ಹೊಸ ಮೈಲಿಗಲ್ಲು ಸಾಧಿಸಿದ ಹೀರೋ ಎಕ್ಸ್‌ಪಲ್ಸ್ 200

ಹೀರೋ ಮೋಟೊಕಾರ್ಪ್ ಕಂಪನಿಯು ತನ್ನ ಬಿಎಸ್-6 ಎಕ್ಸ್‌ಪಲ್ಸ್ 200 ಬೈಕನ್ನು ಭಾರತೀಯ ಮಾರುಕಟ್ಟೆಯಲ್ಲಿ ಕಳೆದ ವರ್ಷದಲ್ಲಿ ಬಿಡುಗಡೆಗೊಳಿಸಿತ್ತು. ಕೇರಳದಲ್ಲಿ ಈ ಹೀರೋ ಎಕ್ಸ್‌ಪಲ್ಸ್ 200 ಮಾದರಿಯು ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದೆ.

ಕೇರಳದಲ್ಲಿ 10 ಸಾವಿರಕ್ಕೂ ಹೆಚ್ಚು ಮಾರಾಟವಾಗಿ ಹೊಸ ಮೈಲಿಗಲ್ಲು ಸಾಧಿಸಿದ ಹೀರೋ ಎಕ್ಸ್‌ಪಲ್ಸ್ 200

ಹೀರೋ ಎಕ್ಸ್‌ಪಲ್ಸ್ 200 ಮಾದರಿಯು ಕೇರಳದಲ್ಲಿ 10 ಸಾವಿರಕ್ಕೂ ಹೆಚ್ಚು ಮಾರಾಟವಾಗಿ ಹೊಸ ಮೈಲಿಗಲ್ಲನ್ನು ದಾಖಲಿಸಿದೆ. ಈ ಹೀರೋ ಎಕ್ಸ್‌ಪಲ್ಸ್ 200 ಬೈಕಿನ ಬೆಲೆಯು ದೆಹಲಿ ಎಕ್ಸ್ ಶೋರೂಂ ಪ್ರಕಾರ ರೂ.1.15 ಲಕ್ಷಗಳಾಗಿದೆ. ಹೀರೋ ಮೋಟೊಕಾರ್ಪ್ ಕಂಪನಿಯು ಇತ್ತೀಚೆಗೆ ತನ್ನ ಬಿಎಸ್-6 ಎಕ್ಸ್‌ಪಲ್ಸ್ 200 ಬೈಕಿನ ಮೇಲೆ ಒಟ್ಟು ರೂ,16 ಸಾವಿರಗಳವರೆಗೂ ಆಫರ್ ಅನ್ನು ನೀಡಿದ್ದಾರೆ.

ಕೇರಳದಲ್ಲಿ 10 ಸಾವಿರಕ್ಕೂ ಹೆಚ್ಚು ಮಾರಾಟವಾಗಿ ಹೊಸ ಮೈಲಿಗಲ್ಲು ಸಾಧಿಸಿದ ಹೀರೋ ಎಕ್ಸ್‌ಪಲ್ಸ್ 200

ಇದರಲ್ಲಿ ರೂ.4000 ವರೆಗೂ ವಿನಿಮಯ/ಲಾಯಲ್ಟಿ ಬೋನಸ್ ಅನ್ನು ನೀಡಿದ್ದಾರೆ. ಇನ್ನು ರೂ.12,000 ವರೆಗೂ ಕ್ಯಾಶ್‌ಬ್ಯಾಕ್ ಕೊಡುಗೆಯನ್ನು ಘೋಷಿಸಿದ್ದಾರೆ. ಇದು ಇಎಂಐ, ಡೆಬಿಟ್ ಕಾರ್ಡ್ ಮತ್ತು ಆಯ್ದ ಬ್ಯಾಂಕುಗಳ ಕ್ರೆಡಿಟ್ ಕಾರ್ಡ್ ವಹಿವಾಟುಗಳಲ್ಲಿ ಮಾತ್ರ ಅನ್ವಯಿಸುತ್ತದೆ ಎಂಬುದನ್ನು ಗಮನಿಸಬೇಕು.

MOST READ: ಯೂನಿಕಾರ್ನ್ ಬೈಕಿನ ಬೆಲೆ ಹೆಚ್ಚಿಸಿದ ಹೋಂಡಾ ಮೋಟಾರ್‌ಸೈಕಲ್

ಕೇರಳದಲ್ಲಿ 10 ಸಾವಿರಕ್ಕೂ ಹೆಚ್ಚು ಮಾರಾಟವಾಗಿ ಹೊಸ ಮೈಲಿಗಲ್ಲು ಸಾಧಿಸಿದ ಹೀರೋ ಎಕ್ಸ್‌ಪಲ್ಸ್ 200

ಈ ಆಫರ್ ಗಳಿಗೆ ನಿಯಮಗಳು ಮತ್ತು ಕೆಲವು ಷರತ್ತುಗಳನ್ನು ಒಳಗೊಂಡಿದೆ. ಈ ಆಫರ್ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿಯಲು ನಿಮ್ಮ ಹತ್ತಿರದ ಹೀರೋ ಡೀಲರ್ ಅನ್ನು ಸಂಪರ್ಕಿಸಬಹುದು. ಈ ಆಫರ್ ಗಳು ಈ ತಿಂಗಳ ಅಂತ್ಯದವರೆಗೂ ಲಭ್ಯವಿರುತ್ತದೆ.

ಕೇರಳದಲ್ಲಿ 10 ಸಾವಿರಕ್ಕೂ ಹೆಚ್ಚು ಮಾರಾಟವಾಗಿ ಹೊಸ ಮೈಲಿಗಲ್ಲು ಸಾಧಿಸಿದ ಹೀರೋ ಎಕ್ಸ್‌ಪಲ್ಸ್ 200

ಈ ಹೀರೋ ಎಕ್ಸ್‌ಪಲ್ಸ್ 200 ಬೈಕಿನ 199.6 ಸಿಸಿ ಎಂಜಿನ್‌ ಅನ್ನು ಹೊಂದಿದೆ. ಈ ಎಂಜಿನ್ 8,500 ಆರ್‌ಪಿಎಂನಲ್ಲಿ 17.8 ಬಿಹೆಚ್‌ಪಿ ಪವರ್ ಮತ್ತು 6,400 ಆರ್‌ಪಿಎಂನಲ್ಲಿ 16.4 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ ಐದು-ಸ್ಪೀಡ್ ಗೇರ್‌ಬಾಕ್ಸ್‌ ಅನ್ನು ಜೋಡಿಸಲಾಗಿದೆ.

MOST READ: ಹೊಸ ಬಣ್ಣದ ಆಯ್ಕೆಯನ್ನು ಪಡೆದುಕೊಂಡ 2021ರ ಕವಾಸಕಿ ನಿಂಜಾ 1000 ಎಸ್‌ಎಕ್ಸ್ ಬೈಕ್

ಕೇರಳದಲ್ಲಿ 10 ಸಾವಿರಕ್ಕೂ ಹೆಚ್ಚು ಮಾರಾಟವಾಗಿ ಹೊಸ ಮೈಲಿಗಲ್ಲು ಸಾಧಿಸಿದ ಹೀರೋ ಎಕ್ಸ್‌ಪಲ್ಸ್ 200

ಈ ಬೈಕಿನಲ್ಲಿ ಏರ್/ಆಯಿಲ್-ಕೂಲಿಂಗ್ ಮತ್ತು ಫ್ಯೂಯಲ್ ಇಂಜೆಕ್ಷನ್ ಅನ್ನು ಸ್ಟ್ಯಾಂಡರ್ಡ್ ಆಗಿ ಅಳವಡಿಸಲಾಗಿದೆ. ಹೀರೋ ಎಕ್ಸ್‌ಪಲ್ಸ್ 200 ಬೈಕನ್ನು ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸಿದ ಬಳಿಕ ಹಿಂದಿನ ಮಾದರಿಗಿಂತ ತೂಕ ಹೆಚ್ಚಾಗಿದೆ. ಹೊಸ ಹೀರೋ ಎಕ್ಸ್‌ಪಲ್ಸ್ 200 ಬೈಕ್ 157 ಕೆಜೆ ತೂಕವನ್ನು ಹೊಂದಿದೆ.

ಕೇರಳದಲ್ಲಿ 10 ಸಾವಿರಕ್ಕೂ ಹೆಚ್ಚು ಮಾರಾಟವಾಗಿ ಹೊಸ ಮೈಲಿಗಲ್ಲು ಸಾಧಿಸಿದ ಹೀರೋ ಎಕ್ಸ್‌ಪಲ್ಸ್ 200

ಬಿಎಸ್-6 ಎಕ್ಸ್‌ಪಲ್ಸ್ ಬೈಕಿನಲ್ಲಿ ಎಕ್ಸಾಸ್ಟ್ ಪೈಪಿನ ಸ್ಥಾನವನ್ನು ಬದಲಾಯಿಸಲಾಗಿದೆ. ಈ ಬೈಕಿನ ಎಂಜಿನ್ ಬೆಲ್ಲಿ-ಪ್ಯಾನ್ ಅನ್ನು ಮರುವಿನ್ಯಾಸಗೊಳಿಸಲಾಗಿದೆ. ಬಿಎಸ್-6 ಎಕ್ಸ್‌ಪಲ್ಸ್ ಮೊದಲಿನಂತೆಯೇ 220 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಅನ್ನು ಹೊಂದಿದೆ.

MOST READ: ಬಿಡುಗಡೆಯಾಯ್ತು ಹೊಸ ಕವಾಸಕಿ ವಲ್ಕನ್ ಎಸ್ ಬೈಕ್

ಕೇರಳದಲ್ಲಿ 10 ಸಾವಿರಕ್ಕೂ ಹೆಚ್ಚು ಮಾರಾಟವಾಗಿ ಹೊಸ ಮೈಲಿಗಲ್ಲು ಸಾಧಿಸಿದ ಹೀರೋ ಎಕ್ಸ್‌ಪಲ್ಸ್ 200

ಹೊಸ ಎಕ್ಸ್‌ಪಲ್ಸ್ 200 ಬೈಕಿನ ಸಸ್ಪೆಂಕ್ಷನ್ ಗಾಗಿ ಮುಂಭಾಗದಲ್ಲಿ 37 ಎಂಎಂ ಲಾಂಗ್-ಟ್ರಾವೆಲ್ ಟೆಲಿಸ್ಕೋಪಿಕ್ ಫೋರ್ಕ್‌ಗಳನ್ನು ಮತ್ತು ಹಿಂಭಾಗದಲ್ಲಿ 10-ಹಂತದ ಹೊಂದಾಣಿಕೆ ಮಾಡಬಹುದಾದ ಮೊನೊ-ಶಾಕ್ ಸೆಟಪ್ ಅನ್ನು ಹೊಂದಿರುತ್ತದೆ. ಬ್ರೇಕಿಂಗ್ ಸಿಸ್ಟಂಗಾಗಿ ಮುಂಭಾಗದಲ್ಲಿ 276 ಎಂಎಂ ಪೆಟಲ್ ಡಿಸ್ಕ್ ಮತ್ತು ಹಿಂಭಾಗದಲ್ಲಿ 220 ಎಂಎಂ ಪೆಟಲ್ ಡಿಸ್ಕ್ ಬ್ರೇಕ್ ಅನ್ನು ಅಳವಡಿಸಲಾಗಿದೆ.

ಕೇರಳದಲ್ಲಿ 10 ಸಾವಿರಕ್ಕೂ ಹೆಚ್ಚು ಮಾರಾಟವಾಗಿ ಹೊಸ ಮೈಲಿಗಲ್ಲು ಸಾಧಿಸಿದ ಹೀರೋ ಎಕ್ಸ್‌ಪಲ್ಸ್ 200

ಇದರೊಂದಿಗೆ ಸಿಂಗಲ್-ಚಾನೆಲ್ ಎಬಿಎಸ್ ಅನ್ನು ಕೂಡ ಅಳವಡಿಸಲಾಗಿದೆ. ಬಿಎಸ್-6 ಹೀರೋ ಎಕ್ಸ್‌ಪಲ್ಸ್ 200 ಬೈಕಿನಲ್ಲಿ ಎಲ್‌ಇಡಿ ಹೆಡ್‌ಲೈಟ್, ಎಲ್‌ಇಡಿ ಟೈಲ್‌ಲೈಟ್, ಬ್ಲೂಟೂತ್ ಕನೆಕ್ಟ್ ಆಗಿರುವ ಇನ್ಸ್ ಟ್ರೂಮೆಂಟ್ ಕನ್ಸೋಲ್ ಮತ್ತು ಮತ್ತು ಟರ್ನ್-ಬೈ-ಟರ್ನ್ ನ್ಯಾವಿಗೇಷನ್ ಅನ್ನು ಒಳಗೊಂಡಿದೆ.

ಕೇರಳದಲ್ಲಿ 10 ಸಾವಿರಕ್ಕೂ ಹೆಚ್ಚು ಮಾರಾಟವಾಗಿ ಹೊಸ ಮೈಲಿಗಲ್ಲು ಸಾಧಿಸಿದ ಹೀರೋ ಎಕ್ಸ್‌ಪಲ್ಸ್ 200

ಹೀರೋ ಎಕ್ಸ್‌ಪಲ್ಸ್ 200 ಕೇರಳದಲ್ಲಿ 10,000 ಮಾರಾಟದ ಮೈಲಿಗಲ್ಲು ದಾಟಿದೆ. ಮೇ 2019 ರಲ್ಲಿ ಭಾರತದಲ್ಲಿ ಪ್ರಾರಂಭವಾದ ಹೀರೋ ಎಕ್ಸ್‌ಪಲ್ಸ್ 200 ಪ್ರತಿಷ್ಠಿತ ಭಾರತೀಯ ಮೋಟಾರ್‌ಸೈಕಲ್ ಆಫ್ ದಿ ಇಯರ್ 2020 ಪ್ರಶಸ್ತಿಯನ್ನು ಗೆದ್ದುಕೊಂಡಿತು.

ಕೇರಳದಲ್ಲಿ 10 ಸಾವಿರಕ್ಕೂ ಹೆಚ್ಚು ಮಾರಾಟವಾಗಿ ಹೊಸ ಮೈಲಿಗಲ್ಲು ಸಾಧಿಸಿದ ಹೀರೋ ಎಕ್ಸ್‌ಪಲ್ಸ್ 200

ಎಕ್ಸ್‌ಪಲ್ಸ್ 200 ಬೈಕ್ ವೈಟ್, ಮ್ಯಾಟ್ ಗ್ರೀನ್, ಮ್ಯಾಟ್ ಗ್ರೇ, ಸ್ಪೋರ್ಟ್ಸ್ ರೆಡ್ ಮತ್ತು ಪ್ಯಾಂಥರ್ ಬ್ಲ್ಯಾಕ್ ಎಂಬ ಐದು ಬಣ್ಣಗಳ ಆಯ್ಕೆಯಲ್ಲಿ ಲಭ್ಯವಿದೆ. ಈ ಹೀರೋ ಎಕ್ಸ್‌ಪಲ್ಸ್ 200 ಪ್ರತಿಷ್ಠಿತ ಭಾರತೀಯ ಮೋಟಾರ್‌ಸೈಕಲ್ ಆಫ್ ದಿ ಇಯರ್ 2020 ಪ್ರಶಸ್ತಿಯನ್ನು ಗೆದ್ದುಕೊಂಡಿತು.

Article Published On: Friday, February 26, 2021, 18:00 [IST]
English summary
Hero Xpulse 200 Goes Past 10,000 Sales Milestone. Read In Kananda.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+