ಸೆಪ್ಟೆಂಬರ್ ತಿಂಗಳಿನಲ್ಲಿ ದಾಖಲೆ ಮಟ್ಟದ ಮಾರಾಟ ಕಂಡ Hero Xpulse 200 ಬೈಕ್

ಭಾರತೀಯ ಮಾರುಕಟ್ಟೆಯಲ್ಲಿ ಹೀರೋ ಎಕ್ಸ್‌ಪಲ್ಸ್ 200(Hero Xpulse 200) ಬೈಕ್ ಉತ್ತಮ ಬೇಡಿಕೆಯೊಂದಿಗೆ ಮಾರಾಟವಾಗುತ್ತಿದೆ. ಕಳೆದ ತಿಂಗಳು ಭಾರತೀಯ ಮಾರುಕಟ್ಟೆಯಲ್ಲಿ ಹೀರೋ ಮೋಟೋಕಾರ್ಪ್ ಕಂಪನಿಯು ಎಕ್ಸ್‌ಪಲ್ಸ್ 200 ಮಾದರಿಯ 3,375 ಯುನಿಟ್‌ಗಳನ್ನು ಮಾರಾಟ ಮಾಡಲು ಯಶಸ್ವಿಯಾಗಿದೆ.

ಸೆಪ್ಟೆಂಬರ್ ತಿಂಗಳಿನಲ್ಲಿ ದಾಖಲೆ ಮಟ್ಟದ ಮಾರಾಟ ಕಂಡ Hero Xpulse 200

ಹೀರೋ ಎಕ್ಸ್‌ಪಲ್ಸ್ 200 ಬೈಕ್ ಮಾರಾಟವು ವರ್ಷದಿಂದ ವರ್ಷಕ್ಕೆ ಶೇ.141 ರಷ್ಟು ಬೆಳವಣಿಗೆಯನ್ನು ಸಾಧಿಸಿದೆ. ಕಳೆದ ವರ್ಷದ ಸೆಪ್ಟೆಂಬರ್ ತಿಂಗಳಿನಲ್ಲಿ ಹೀರೋ ಎಕ್ಸ್‌ಪಲ್ಸ್ 200 ಮಾದರಿಯ 1,398 ಯುನಿಟ್‌ಗಳನ್ನು ಮಾತ್ರ ಮಾರಾಟ ಮಾಡಲು ಸಾಧ್ಯವಾಗಿತ್ತು.ಆದರೆ ಈ ವರ್ಷದ ಅದೇ ತಿಂಗಳಲ್ಲಿ ದೇಶದಲ್ಲಿ ಅತಿ ಹೆಚ್ಚು ಮಾರಾಟವಾದ ಅಡ್ವೆಂಚರ್ ಟೂರಿಂಗ್ ಬೈಕ್ ಆಗಿದೆ. ಹೀರೋ ಎಕ್ಸ್‌ಪಲ್ಸ್ 200 ಬೈಕ್ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ.1.23 ಲಕ್ಷಗಳಾಗಿದೆ.

ಸೆಪ್ಟೆಂಬರ್ ತಿಂಗಳಿನಲ್ಲಿ ದಾಖಲೆ ಮಟ್ಟದ ಮಾರಾಟ ಕಂಡ Hero Xpulse 200

ಈ ಹೀರೋ ಎಕ್ಸ್‌ಪಲ್ಸ್ 200 ಬೈಕ್ ಬಗ್ಗೆ ಹೇಳುವುದಾದರೆ, ಇದರಲ್ಲಿ 199.6 ಸಿಸಿ ಎಂಜಿನ್‌ ಅನ್ನು ಹೊಂದಿದೆ. ಈ ಎಂಜಿನ್ 8,500 ಆರ್‌ಪಿಎಂನಲ್ಲಿ 17.8 ಬಿಹೆಚ್‌ಪಿ ಪವರ್ ಮತ್ತು 6,400 ಆರ್‌ಪಿಎಂನಲ್ಲಿ 16.4 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ ಐದು-ಸ್ಪೀಡ್ ಗೇರ್‌ಬಾಕ್ಸ್‌ ಅನ್ನು ಜೋಡಿಸಲಾಗಿದೆ.

ಸೆಪ್ಟೆಂಬರ್ ತಿಂಗಳಿನಲ್ಲಿ ದಾಖಲೆ ಮಟ್ಟದ ಮಾರಾಟ ಕಂಡ Hero Xpulse 200

ಈ ಬೈಕಿನಲ್ಲಿ ಏರ್/ಆಯಿಲ್-ಕೂಲಿಂಗ್ ಮತ್ತು ಫ್ಯೂಯಲ್ ಇಂಜೆಕ್ಷನ್ ಅನ್ನು ಸ್ಟ್ಯಾಂಡರ್ಡ್ ಆಗಿ ಅಳವಡಿಸಲಾಗಿದೆ. ಹೀರೋ ಎಕ್ಸ್‌ಪಲ್ಸ್ 200 ಬೈಕ್ ಅನ್ನು ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸಿದ ಬಳಿಕ ಹಿಂದಿನ ಮಾದರಿಗಿಂತ ತೂಕ ಹೆಚ್ಚಾಗಿದೆ. ಈ ಹೊಸ ಹೀರೋ ಎಕ್ಸ್‌ಪಲ್ಸ್ 200 ಬೈಕ್ 157 ಕೆಜೆ ತೂಕವನ್ನು ಹೊಂದಿದೆ.

ಸೆಪ್ಟೆಂಬರ್ ತಿಂಗಳಿನಲ್ಲಿ ದಾಖಲೆ ಮಟ್ಟದ ಮಾರಾಟ ಕಂಡ Hero Xpulse 200

ಹೀರೋ ಎಕ್ಸ್‌ಪಲ್ಸ್ 200 ಬೈಕಿನಲ್ಲಿ ಎಕ್ಸಾಸ್ಟ್ ಪೈಪಿನ ಸ್ಥಾನವನ್ನು ಬದಲಾಯಿಸಲಾಗಿದೆ. ಈ ಬೈಕಿನ ಎಂಜಿನ್ ಬೆಲ್ಲಿ-ಪ್ಯಾನ್ ಅನ್ನು ಮರುವಿನ್ಯಾಸಗೊಳಿಸಲಾಗಿದೆ. ಬಿಎಸ್-6 ಎಕ್ಸ್‌ಪಲ್ಸ್ ಮೊದಲಿನಂತೆಯೇ 220 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಅನ್ನು ಹೊಂದಿದೆ. ಇನ್ನು ಈ ಬೈಕಿನ ಸಸ್ಪೆಂಕ್ಷನ್ ಗಾಗಿ ಮುಂಭಾಗದಲ್ಲಿ 37 ಎಂಎಂ ಲಾಂಗ್-ಟ್ರಾವೆಲ್ ಟೆಲಿಸ್ಕೋಪಿಕ್ ಫೋರ್ಕ್‌ಗಳನ್ನು ಮತ್ತು ಹಿಂಭಾಗದಲ್ಲಿ 10-ಹಂತದ ಹೊಂದಾಣಿಕೆ ಮಾಡಬಹುದಾದ ಮೊನೊ-ಶಾಕ್ ಸೆಟಪ್ ಅನ್ನು ಹೊಂದಿರುತ್ತದೆ.

ಸೆಪ್ಟೆಂಬರ್ ತಿಂಗಳಿನಲ್ಲಿ ದಾಖಲೆ ಮಟ್ಟದ ಮಾರಾಟ ಕಂಡ Hero Xpulse 200

ಇನ್ನು ಪ್ರಮುಖವಾಗಿ ಈ ಬೈಕಿನ ಬ್ರೇಕಿಂಗ್ ಸಿಸ್ಟಂಗಾಗಿ ಮುಂಭಾಗದಲ್ಲಿ 276 ಎಂಎಂ ಪೆಟಲ್ ಡಿಸ್ಕ್ ಮತ್ತು ಹಿಂಭಾಗದಲ್ಲಿ 220 ಎಂಎಂ ಪೆಟಲ್ ಡಿಸ್ಕ್ ಬ್ರೇಕ್ ಅನ್ನು ಅಳವಡಿಸಲಾಗಿದೆ. ಇದರೊಂದಿಗೆ ಸಿಂಗಲ್-ಚಾನೆಲ್ ಎಬಿಎಸ್ ಅನ್ನು ಕೂಡ ಅಳವಡಿಸಲಾಗಿದೆ.

ಸೆಪ್ಟೆಂಬರ್ ತಿಂಗಳಿನಲ್ಲಿ ದಾಖಲೆ ಮಟ್ಟದ ಮಾರಾಟ ಕಂಡ Hero Xpulse 200

ಈ ಹೀರೋ ಎಕ್ಸ್‌ಪಲ್ಸ್ 200 ಬೈಕಿನಲ್ಲಿ ಎಲ್‌ಇಡಿ ಹೆಡ್‌ಲೈಟ್, ಎಲ್‌ಇಡಿ ಟೈಲ್‌ಲೈಟ್, ಬ್ಲೂಟೂತ್ ಕನೆಕ್ಟ್ ಆಗಿರುವ ಇನ್ಸ್ ಟ್ರೂಮೆಂಟ್ ಕನ್ಸೋಲ್ ಮತ್ತು ಮತ್ತು ಟರ್ನ್-ಬೈ-ಟರ್ನ್ ನ್ಯಾವಿಗೇಷನ್ ಅನ್ನು ಒಳಗೊಂಡಿದೆ. ಎಕ್ಸ್‌ಪಲ್ಸ್ 200 ಬೈಕ್ ವೈಟ್, ಮ್ಯಾಟ್ ಗ್ರೀನ್, ಮ್ಯಾಟ್ ಗ್ರೇ, ಸ್ಪೋರ್ಟ್ಸ್ ರೆಡ್ ಮತ್ತು ಪ್ಯಾಂಥರ್ ಬ್ಲ್ಯಾಕ್ ಎಂಬ ಐದು ಬಣ್ಣಗಳ ಆಯ್ಕೆಯಲ್ಲಿ ಲಭ್ಯವಿದೆ.

ಸೆಪ್ಟೆಂಬರ್ ತಿಂಗಳಿನಲ್ಲಿ ದಾಖಲೆ ಮಟ್ಟದ ಮಾರಾಟ ಕಂಡ Hero Xpulse 200

ಇನ್ನು ಹೀರೋ ಮೋಟೋಕಾರ್ಪ್ ಕಳೆದ ವರ್ಷ ಫೆಬ್ರವರಿಯಲ್ಲಿ ಹೀರೋ ಕನೆಕ್ಟ್ ಎಂಬ ತನ್ನ ಕನೆಕ್ಟಿವಿಟಿ ಫೀಚರ್ ಅನ್ನು ಪರಿಚಯಿಸಿತ್ತು. ಹೀರೋ ಕನೆಕ್ಟಿವಿಟಿ ಫೀಚರ್ಸ್ ದ್ವಿಚಕ್ರ ವಾಹನಗಳ ಮಾರಾಟವನ್ನು ಹೆಚ್ಚಿಸಲು ನೆರವಾಗಿದೆ. ಕನೆಕ್ಟಿವಿಟಿ ಫೀಚರ್ ಆಯ್ದ ನಗರಗಳಲ್ಲಿನ ಡೀಲರ್‌ಶಿಪ್‌ಗಳಲ್ಲಿ ಇದು ಲಭ್ಯವಿತ್ತು. ಇದೇ ರೀತಿ ಹೀರೋ ಕನೆಕ್ಟ್ ಹಲವಾರು ಕನೆಕ್ಟಿವಿಟಿ ಫೀಚರ್ಸ್ ಗಳನ್ನು ನೀಡುತ್ತದೆ. ಈಗ ಟಾಪ್ಲ್ ಅಲರ್ಟ್ ಫೀಚರ್ ಎಕ್ಸ್‌ಪಲ್ಸ್ 200 ಬೈಕ್ ನಲ್ಲಿ ಲಭ್ಯವಿದೆ.

ಸೆಪ್ಟೆಂಬರ್ ತಿಂಗಳಿನಲ್ಲಿ ದಾಖಲೆ ಮಟ್ಟದ ಮಾರಾಟ ಕಂಡ Hero Xpulse 200

ಇದು ಬೈಕಿ ಉರುಳಿದಲ್ಲಿ ಆಟೋಮ್ಯಾಟಿಕ್ ಅಪ್ಲಿಕೇಶನ್ ನೋಟಿಫಿಕೇಶನ್ ಕಳುಹಿಸಿ ಮತ್ತು ಎಸ್‌ಎಂಎಸ್ ಅನ್ನು ತುರ್ತು ಸಂಪರ್ಕಗಳಿಗೆ ಕಳುಹಿಸಲಾಗುತ್ತದೆ. ನೋಂದಾಯಿತ ಮೊಬೈಲ್ ಸಂಖ್ಯೆಗೆ ನೋಟಿಫಿಕೇಶನ್ ಅನ್ನು ಕಳುಹಿಸಲಾಗುತ್ತದೆ. ವಾಹನ ಉರುಳಿಬಿದ್ದಾಗ ಬಳಕೆದಾರರು ತಮಗೆ ನೋಟಿಫಿಕೇಶನ್ ಗಾಗಿ ತುರ್ತು ಸಂಪರ್ಕಗಳನ್ನು ಆಯ್ಕೆ ಮಾಡಬಹುದು. ಅಪಘಾತದ ಸಂದರ್ಭದಲ್ಲಿ ಸಕಾಲಿಕ ವೈದ್ಯಕೀಯ ಸಹಾಯವು ನಿರ್ಣಾಯಕವಾಗಿರುವುದರಿಂದ ಈ ವೈಶಿಷ್ಟ್ಯವು ಜೀವ ರಕ್ಷಕವಾಗಬಹುದು.

ಸೆಪ್ಟೆಂಬರ್ ತಿಂಗಳಿನಲ್ಲಿ ದಾಖಲೆ ಮಟ್ಟದ ಮಾರಾಟ ಕಂಡ Hero Xpulse 200

ವಾಹನ ಉರುಳಿ ಬಿದ್ದಾಗ ನೋಟಿಫಿಕೇಶನ್ ಸ್ವೀಕರಿಸಿದ ನಂತರ, ತುರ್ತು ಸಂಪರ್ಕಗಳು ಪರಿಸ್ಥಿತಿಗೆ ತ್ವರಿತವಾಗಿ ಪ್ರತಿಕ್ರಿಯಿಸಬಹುದು.ಪರಿಸ್ಥಿತಿ ಅಗತ್ಯವಿದ್ದಲ್ಲಿ ವೈದ್ಯಕೀಯ ಸಹಾಯವನ್ನು ಕೋರಬಹುದು. ಇನ್ನು ಹೀರೋ ಕನೆಕ್ಟ್ ಅಪ್ಲಿಕೇಶನ್ ಟಾಪಲ್ ಅಲರ್ಟ್, ಟ್ರಿಪ್ ಅನಾಲಿಸಿಸ್, ಲೈವ್ ವೆಹಿಕಲ್ ಟ್ರ್ಯಾಕಿಂಗ್, ಟೌ ಅಲರ್ಟ್, ಜಿಯೋ-ಫೆನ್ಸ್ ಅಲರ್ಟ್, ಹೀರೋ ಲೊಕೇಟ್, ಸ್ಪೀಡ್ ಅಲರ್ಟ್ ಮುಂತಾದ ಫೀಚರ್ ಗಳನ್ನು ಒಳಗೊಂಡಿದೆ.

ಸೆಪ್ಟೆಂಬರ್ ತಿಂಗಳಿನಲ್ಲಿ ದಾಖಲೆ ಮಟ್ಟದ ಮಾರಾಟ ಕಂಡ Hero Xpulse 200

ಹೀರೋ ಮೋಟೋಕಾರ್ಪ್ ತನ್ನ ಹೊಸ ಎಕ್ಸ್‌ಪಲ್ಸ್ 200 4ವಿ ಬೈಕನ್ನು ಭಾರತೀಯ ಮಾರುಕಟ್ಟೆಯಲ್ಲಿ ಇತ್ತೀಚೆಗೆ ಬಿಡುಗಡೆಗೊಳಿತು. ಈ ಹೀರೋ ಎಕ್ಸ್‌ಪಲ್ಸ್ 200 4ವಿಯಾವಾಗಲೂ ನೈಜ ಆಫ್-ರೋಡ್ ಸಾಮರ್ಥ್ಯ ಹೊಂದಿರುವ ಅತ್ಯಂತ ಸಮರ್ಥ ಎಂಟ್ರಿ ಲೆವೆಲ್ ಅಡ್ವೆಂಚರ್ ಬೈಕ್ ಆಗಿದೆ. ಈ ಹೊಸ ಬೈಕ್ ಕೈಗೆಟುಕುವ ಬೆಲೆಯನ್ನು ಹೊಂದಿದೆ. ಇನ್ನು ರಾಯಲ್ ಎನ್ ಫೀಲ್ಡ್ ಹಿಮಾಲಯನ್ ಮೇಲಿನ ವಿಭಾಗದಲ್ಲಿ ಗಣನೀಯವಾಗಿ ಹೆಚ್ಚಿನ ಬೆಲೆಯನ್ನು ಹೊಂದಿರುವುದರಿಂದ ಇದು ಯಾವುದೇ ನೇರ ಪ್ರತಿಸ್ಪರ್ಧಿ ಹೊಂದಿಲ್ಲ.

ಸೆಪ್ಟೆಂಬರ್ ತಿಂಗಳಿನಲ್ಲಿ ದಾಖಲೆ ಮಟ್ಟದ ಮಾರಾಟ ಕಂಡ Hero Xpulse 200

ಹೀರೋ ಎಕ್ಸ್‌ಪಲ್ಸ್ 200 ಕಡಿಮೆ ತೂಕ ಮತ್ತು ವೇಗದ ಆಫ್-ರೋಡ್ ಸಾಮರ್ಥ್ಯದೊಂದಿಗೆ ಸಾಕಷ್ಟು ಜನಪ್ರಿಯ ಮಾದರಿಯಾಗಿದೆ. ಹೀರೋ ಮೋಟೋಕಾರ್ಪ್ ಎಕ್ಸ್‌ಪಲ್ಸ್ 200 ಅನ್ನು ಹೆಚ್ಚಿನ ಕಾರ್ಯಕ್ಷಮತೆಯನ್ನು ನೀಡಲು ನವೀಕರಿಸಿದೆ, ಜೊತೆಗೆ ಎಕ್ಸ್‌ಪಲ್ಸ್ 200 4ವ್ಯಾಲ್ಸ್ ಹೊಸ ಮನವಿಯೊಂದಿಗೆ ಪರಿಚಯಿಸಲು ಸಣ್ಣ ನವೀಕರಣಗಳನ್ನು ನಡೆಸಿದೆ ಮತ್ತು ಉತ್ತಮ ಕಾರ್ಯಕ್ಷಮತೆಯನ್ನು ಹೊಂದಿದೆ. ಅಲ್ಲದೇ ಕೈಗೆಟುಕುವ ಬೆಲೆಯನ್ನು ಹೊಂದಿರುವುದರಿಂದ ಭಾರತದ ಹೆಚ್ಚಿನ ಆಫ್-ರೋಡ್ ಪ್ರೇಮಿಗಳನ್ನು ಈ ಬೈಕ್ ಸೆಳಯಬಹುದು.

Article Published On: Tuesday, October 26, 2021, 19:01 [IST]
English summary
Hero xpulse 200 registers 141 percent sales growth in september 2021 details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+