ಅಕ್ಟೋಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ Hero Xpulse 200 ಬೈಕ್

ಭಾರತೀಯ ಆಟೋಮೊಬೈಲ್ ಉದ್ಯಮವು ಇದೀಗ ಮಾರಾಟದ ಕುಸಿತವನ್ನು ಎದುರಿಸುತ್ತಿದೆ. ಭಾರತದಲ್ಲಿನ ಅತಿ ದೊಡ್ಡ ದ್ವಿಚಕ್ರ ವಾಹನ ತಯಾರಕರಾದ ಕಂಪನಿಯಾದ ಹೀರೋ ಮೋಟೋಕಾರ್ಪ್ ಕಳೆದ ತಿಂಗಳು ಅದರ ಮಾರಾಟ ಸಂಖ್ಯೆಯಲ್ಲಿ ಭಾರಿ ಕುಸಿತವನ್ನು ಕಂಡಿತು.

ಅಕ್ಟೋಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ Hero Xpulse 200 ಬೈಕ್

ಹೀರೋ ಮೋಟೋಕಾರ್ಪ್ ಕಂಪನಿಯ ಕೇವಲ ಒಂದು ಮಾದರಿಯು ಮಾರಾಟದಲ್ಲಿ ಬೆಳವಣಿಗೆಯನ್ನು ದಾಖಲಿಸಿದೆ. ಇದು ಹೀರೋ ಎಕ್ಸ್‌ಪಲ್ಸ್ 200 ಆಗಿದೆ. ಭಾರತೀಯ ಮಾರುಕಟ್ಟೆಯಲ್ಲಿ ಹೀರೋ ಎಕ್ಸ್‌ಪಲ್ಸ್ 200(Hero Xpulse 200) ಬೈಕ್ ಉತ್ತಮ ಬೇಡಿಕೆಯೊಂದಿಗೆ ಮಾರಾಟವಾಗುತ್ತಿದೆ. ಕಳೆದ ತಿಂಗಳು ಭಾರತೀಯ ಮಾರುಕಟ್ಟೆಯಲ್ಲಿ ಹೀರೋ ಮೋಟೋಕಾರ್ಪ್ ಕಂಪನಿಯು ಎಕ್ಸ್‌ಪಲ್ಸ್ 200 ಮಾದರಿಯ 3,815 ಯುನಿಟ್‌ಗಳನ್ನು ಮಾರಾಟ ಮಾಡಲು ಯಶಸ್ವಿಯಾಗಿದೆ.

ಅಕ್ಟೋಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ Hero Xpulse 200 ಬೈಕ್

ಕಳೆದ ವರ್ಷದ ಸೆಪ್ಟೆಂಬರ್ ತಿಂಗಳಿನಲ್ಲಿ ಹೀರೋ ಎಕ್ಸ್‌ಪಲ್ಸ್ 200 ಮಾದರಿಯ 2,473 ಯುನಿಟ್‌ಗಳನ್ನು ಮಾರಾಟಗೊಳಿಸಿತ್ತು. ಹೀರೋ ಎಕ್ಸ್‌ಪಲ್ಸ್ 200 ಬೈಕ್ ಮಾರಾಟವು ವರ್ಷದಿಂದ ವರ್ಷಕ್ಕೆ ಶೇ.54.27 ರಷ್ಟು ಬೆಳವಣಿಗೆಯನ್ನು ಸಾಧಿಸಿದೆ.

ಅಕ್ಟೋಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ Hero Xpulse 200 ಬೈಕ್

ಹೀರೋ ಎಕ್ಸ್‌ಪಲ್ಸ್ 200 ಭಾರತದಲ್ಲಿ ಮಾರಾಟದಲ್ಲಿರುವ ಅತ್ಯಂತ ಕೈಗೆಟುಕುವ ಅಡ್ವೆಂಚರ್ ಟೂರಿಂಗ್ ಬೈಕ್ ಆಗಿದೆ. ಅದಕ್ಕಾಗಿಯೇ ಇದು ಯುವ ಉತ್ಸಾಹಿಗಳಲ್ಲಿ ಹೆಚ್ಚು ಜನಪ್ರಿಯವಾಗಿದೆ. ಇದು ಪ್ರಸ್ತುತ ಎರಡು ರೂಪಾಂತರಗಳಲ್ಲಿ ಲಭ್ಯವಿದೆ. ಇದು ಸ್ಟ್ಯಾಂಡರ್ಡ್ ಮತ್ತು 4ವಿ ಆಗಿದೆ. ಹೀರೋ ಎಕ್ಸ್‌ಪಲ್ಸ್ 200 ಬೈಕ್ ಆರಂಭಿಕ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ.1.23 ಲಕ್ಷಗಳಾಗಿದೆ.

ಅಕ್ಟೋಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ Hero Xpulse 200 ಬೈಕ್

ಈ ಹೀರೋ ಎಕ್ಸ್‌ಪಲ್ಸ್ 200 ಬೈಕಿನಲ್ಲಿ 199.6 ಸಿಸಿ ಎಂಜಿನ್‌ ಅನ್ನು ಹೊಂದಿದೆ. ಈ ಎಂಜಿನ್ 8,500 ಆರ್‌ಪಿಎಂನಲ್ಲಿ 17.8 ಬಿಹೆಚ್‌ಪಿ ಪವರ್ ಮತ್ತು 6,400 ಆರ್‌ಪಿಎಂನಲ್ಲಿ 16.4 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎಂಜಿನ್ ನೊಂದಿಗೆ ಐದು-ಸ್ಪೀಡ್ ಗೇರ್‌ಬಾಕ್ಸ್‌ ಅನ್ನು ಜೋಡಿಸಲಾಗಿದೆ.

ಅಕ್ಟೋಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ Hero Xpulse 200 ಬೈಕ್

ಈ ಬೈಕಿನಲ್ಲಿ ಏರ್/ಆಯಿಲ್-ಕೂಲಿಂಗ್ ಮತ್ತು ಫ್ಯೂಯಲ್ ಇಂಜೆಕ್ಷನ್ ಅನ್ನು ಸ್ಟ್ಯಾಂಡರ್ಡ್ ಆಗಿ ಅಳವಡಿಸಲಾಗಿದೆ. ಹೀರೋ ಎಕ್ಸ್‌ಪಲ್ಸ್ 200 ಬೈಕ್ ಅನ್ನು ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸಿದ ಬಳಿಕ ಹಿಂದಿನ ಮಾದರಿಗಿಂತ ತೂಕ ಹೆಚ್ಚಾಗಿದೆ. ಈ ಹೊಸ ಹೀರೋ ಎಕ್ಸ್‌ಪಲ್ಸ್ 200 ಬೈಕ್ 157 ಕೆಜೆ ತೂಕವನ್ನು ಹೊಂದಿದೆ.

ಅಕ್ಟೋಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ Hero Xpulse 200 ಬೈಕ್

ಈ ಹೀರೋ ಎಕ್ಸ್‌ಪಲ್ಸ್ 200 ಬೈಕಿನಲ್ಲಿ ಎಕ್ಸಾಸ್ಟ್ ಪೈಪಿನ ಸ್ಥಾನವನ್ನು ಬದಲಾಯಿಸಲಾಗಿದೆ. ಈ ಬೈಕಿನ ಎಂಜಿನ್ ಬೆಲ್ಲಿ-ಪ್ಯಾನ್ ಅನ್ನು ಮರುವಿನ್ಯಾಸಗೊಳಿಸಲಾಗಿದೆ. ಬಿಎಸ್-6 ಎಕ್ಸ್‌ಪಲ್ಸ್ ಮೊದಲಿನಂತೆಯೇ 220 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಅನ್ನು ಹೊಂದಿದೆ. ಇನ್ನು ಈ ಬೈಕಿನ ಸಸ್ಪೆಂಕ್ಷನ್ ಗಾಗಿ ಮುಂಭಾಗದಲ್ಲಿ 37 ಎಂಎಂ ಲಾಂಗ್-ಟ್ರಾವೆಲ್ ಟೆಲಿಸ್ಕೋಪಿಕ್ ಫೋರ್ಕ್‌ಗಳನ್ನು ಮತ್ತು ಹಿಂಭಾಗದಲ್ಲಿ 10-ಹಂತದ ಹೊಂದಾಣಿಕೆ ಮಾಡಬಹುದಾದ ಮೊನೊ-ಶಾಕ್ ಸೆಟಪ್ ಅನ್ನು ಒಳಗೊಂಡಿದೆ.

ಅಕ್ಟೋಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ Hero Xpulse 200 ಬೈಕ್

ಇನ್ನು ಪ್ರಮುಖವಾಗಿ ಈ ಬೈಕಿನ ಬ್ರೇಕಿಂಗ್ ಸಿಸ್ಟಂಗಾಗಿ ಮುಂಭಾಗದಲ್ಲಿ 276 ಎಂಎಂ ಪೆಟಲ್ ಡಿಸ್ಕ್ ಮತ್ತು ಹಿಂಭಾಗದಲ್ಲಿ 220 ಎಂಎಂ ಪೆಟಲ್ ಡಿಸ್ಕ್ ಬ್ರೇಕ್ ಅನ್ನು ಅಳವಡಿಸಲಾಗಿದೆ. ಇದರೊಂದಿಗೆ ಸಿಂಗಲ್-ಚಾನೆಲ್ ಎಬಿಎಸ್ ಅನ್ನು ಕೂಡ ಅಳವಡಿಸಲಾಗಿದೆ.

ಅಕ್ಟೋಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ Hero Xpulse 200 ಬೈಕ್

ಎಕ್ಸ್‌ಪಲ್ಸ್ 200 ಬೈಕಿನಲ್ಲಿ ಎಲ್‌ಇಡಿ ಹೆಡ್‌ಲೈಟ್, ಎಲ್‌ಇಡಿ ಟೈಲ್‌ಲೈಟ್, ಬ್ಲೂಟೂತ್ ಕನೆಕ್ಟ್ ಆಗಿರುವ ಇನ್ಸ್ ಟ್ರೂಮೆಂಟ್ ಕನ್ಸೋಲ್ ಮತ್ತು ಮತ್ತು ಟರ್ನ್-ಬೈ-ಟರ್ನ್ ನ್ಯಾವಿಗೇಷನ್ ಅನ್ನು ಒಳಗೊಂಡಿದೆ. ಎಕ್ಸ್‌ಪಲ್ಸ್ 200 ಬೈಕ್ ವೈಟ್, ಮ್ಯಾಟ್ ಗ್ರೀನ್, ಮ್ಯಾಟ್ ಗ್ರೇ, ಸ್ಪೋರ್ಟ್ಸ್ ರೆಡ್ ಮತ್ತು ಪ್ಯಾಂಥರ್ ಬ್ಲ್ಯಾಕ್ ಎಂಬ ಬಣ್ಣಗಳ ಆಯ್ಕೆಯಲ್ಲಿ ಲಭ್ಯವಿದೆ.

ಅಕ್ಟೋಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ Hero Xpulse 200 ಬೈಕ್

ಇನ್ನು ಹೀರೋ ಮೋಟೋಕಾರ್ಪ್ ಕಳೆದ ವರ್ಷ ಫೆಬ್ರವರಿಯಲ್ಲಿ ಹೀರೋ ಕನೆಕ್ಟ್ ಎಂಬ ತನ್ನ ಕನೆಕ್ಟಿವಿಟಿ ಫೀಚರ್ ಅನ್ನು ಪರಿಚಯಿಸಿತ್ತು. ಹೀರೋ ಕನೆಕ್ಟಿವಿಟಿ ಫೀಚರ್ಸ್ ದ್ವಿಚಕ್ರ ವಾಹನಗಳ ಮಾರಾಟವನ್ನು ಹೆಚ್ಚಿಸಲು ನೆರವಾಗಿದೆ. ಕನೆಕ್ಟಿವಿಟಿ ಫೀಚರ್ ಆಯ್ದ ನಗರಗಳಲ್ಲಿನ ಡೀಲರ್‌ಶಿಪ್‌ಗಳಲ್ಲಿ ಇದು ಲಭ್ಯವಿತ್ತು. ಇದೇ ರೀತಿ ಹೀರೋ ಕನೆಕ್ಟ್ ಹಲವಾರು ಕನೆಕ್ಟಿವಿಟಿ ಫೀಚರ್ಸ್ ಗಳನ್ನು ನೀಡುತ್ತದೆ. ಅದರಂತೆ ಎಕ್ಸ್‌ಪಲ್ಸ್ 200 ಬೈಕಿಗೆ ಟಾಪ್ಲ್ ಅಲರ್ಟ್ ಫೀಚರ್ ಅನ್ನು ನೀಡಲಾಗಿದೆ.

ಅಕ್ಟೋಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ Hero Xpulse 200 ಬೈಕ್

ಇದು ಬೈಕಿ ಉರುಳಿದಲ್ಲಿ ಆಟೋಮ್ಯಾಟಿಕ್ ಅಪ್ಲಿಕೇಶನ್ ನೋಟಿಫಿಕೇಶನ್ ಕಳುಹಿಸಿ ಮತ್ತು ಎಸ್‌ಎಂಎಸ್ ಅನ್ನು ತುರ್ತು ಸಂಪರ್ಕಗಳಿಗೆ ಕಳುಹಿಸಲಾಗುತ್ತದೆ. ನೋಂದಾಯಿತ ಮೊಬೈಲ್ ಸಂಖ್ಯೆಗೆ ನೋಟಿಫಿಕೇಶನ್ ಅನ್ನು ಕಳುಹಿಸಲಾಗುತ್ತದೆ. ವಾಹನ ಉರುಳಿಬಿದ್ದಾಗ ಬಳಕೆದಾರರು ತಮಗೆ ನೋಟಿಫಿಕೇಶನ್ ಗಾಗಿ ತುರ್ತು ಸಂಪರ್ಕಗಳನ್ನು ಆಯ್ಕೆ ಮಾಡಬಹುದು. ಅಪಘಾತದ ಸಂದರ್ಭದಲ್ಲಿ ಸಕಾಲಿಕ ವೈದ್ಯಕೀಯ ಸಹಾಯವು ನಿರ್ಣಾಯಕವಾಗಿರುವುದರಿಂದ ಈ ಫೀಚರ್ ಜೀವ ರಕ್ಷಕವಾಗಬಹುದು.

ಅಕ್ಟೋಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ Hero Xpulse 200 ಬೈಕ್

ವಾಹನ ಉರುಳಿ ಬಿದ್ದಾಗ ನೋಟಿಫಿಕೇಶನ್ ಸ್ವೀಕರಿಸಿದ ನಂತರ, ತುರ್ತು ಸಂಪರ್ಕಗಳು ಪರಿಸ್ಥಿತಿಗೆ ತ್ವರಿತವಾಗಿ ಪ್ರತಿಕ್ರಿಯಿಸಬಹುದು .ಪರಿಸ್ಥಿತಿ ಅಗತ್ಯವಿದ್ದಲ್ಲಿ ವೈದ್ಯಕೀಯ ಸಹಾಯವನ್ನು ಕೋರಬಹುದು. ಇನ್ನು ಹೀರೋ ಕನೆಕ್ಟ್ ಅಪ್ಲಿಕೇಶನ್ ಟಾಪಲ್ ಅಲರ್ಟ್, ಟ್ರಿಪ್ ಅನಾಲಿಸಿಸ್, ಲೈವ್ ವೆಹಿಕಲ್ ಟ್ರ್ಯಾಕಿಂಗ್, ಟೌ ಅಲರ್ಟ್, ಜಿಯೋ-ಫೆನ್ಸ್ ಅಲರ್ಟ್, ಹೀರೋ ಲೊಕೇಟ್, ಸ್ಪೀಡ್ ಅಲರ್ಟ್ ಮುಂತಾದ ಫೀಚರ್ ಗಳನ್ನು ಹೊಂದಿದೆ.

ಅಕ್ಟೋಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ Hero Xpulse 200 ಬೈಕ್

ಹೀರೋ ಮೋಟೋಕಾರ್ಪ್ ತನ್ನ ಹೊಸ ಎಕ್ಸ್‌ಪಲ್ಸ್ 200 ಬೈಕಿನ 4ವಿ ರೂಪಾಂತರವನ್ನು ಭಾರತೀಯ ಮಾರುಕಟ್ಟೆಯಲ್ಲಿ ಇತ್ತೀಚೆಗೆ ಬಿಡುಗಡೆಗೊಳಿತು. ಈ ಹೀರೋ ಎಕ್ಸ್‌ಪಲ್ಸ್ 200 4ವಿ ಯಾವಾಗಲೂ ನೈಜ ಆಫ್-ರೋಡ್ ಸಾಮರ್ಥ್ಯ ಹೊಂದಿರುವ ಅತ್ಯಂತ ಸಮರ್ಥ ಎಂಟ್ರಿ ಲೆವೆಲ್ ಅಡ್ವೆಂಚರ್ ಬೈಕ್ ಆಗಿದೆ. ಈ ಹೊಸ ಬೈಕ್ ಕೈಗೆಟುಕುವ ಬೆಲೆಯನ್ನು ಹೊಂದಿದೆ. ಇನ್ನು ರಾಯಲ್ ಎನ್ ಫೀಲ್ಡ್ ಹಿಮಾಲಯನ್ ಮೇಲಿನ ವಿಭಾಗದಲ್ಲಿ ಗಣನೀಯವಾಗಿ ಹೆಚ್ಚಿನ ಬೆಲೆಯನ್ನು ಹೊಂದಿರುವುದರಿಂದ ಇದು ಯಾವುದೇ ನೇರ ಪ್ರತಿಸ್ಪರ್ಧಿಯನ್ನು ಹೊಂದಿಲ್ಲ.

ಅಕ್ಟೋಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ Hero Xpulse 200 ಬೈಕ್

ಹೀರೋ ಎಕ್ಸ್‌ಪಲ್ಸ್ 200 ಕಡಿಮೆ ತೂಕ ಮತ್ತು ವೇಗದ ಆಫ್-ರೋಡ್ ಸಾಮರ್ಥ್ಯದೊಂದಿಗೆ ಸಾಕಷ್ಟು ಜನಪ್ರಿಯ ಮಾದರಿಯಾಗಿದೆ. ಹೀರೋ ಮೋಟೋಕಾರ್ಪ್ ಎಕ್ಸ್‌ಪಲ್ಸ್ 200 ಅನ್ನು ಹೆಚ್ಚಿನ ಕಾರ್ಯಕ್ಷಮತೆಯನ್ನು ನೀಡಲು ನವೀಕರಿಸಿದೆ, ಜೊತೆಗೆ ಎಕ್ಸ್‌ಪಲ್ಸ್ 200 4ವ್ಯಾಲ್ಸ್ ಹೊಸ ಮನವಿಯೊಂದಿಗೆ ಪರಿಚಯಿಸಲು ಸಣ್ಣ ನವೀಕರಣಗಳನ್ನು ನಡೆಸಿದೆ ಮತ್ತು ಉತ್ತಮ ಕಾರ್ಯಕ್ಷಮತೆಯನ್ನು ಹೊಂದಿದೆ. ಅಲ್ಲದೇ ಕೈಗೆಟುಕುವ ಬೆಲೆಯನ್ನು ಹೊಂದಿರುವುದರಿಂದ ಭಾರತದ ಹೆಚ್ಚಿನ ಆಫ್-ರೋಡ್ ಪ್ರೇಮಿಗಳನ್ನು ಈ ಬೈಕ್ ಸೆಳಯುತ್ತಿದೆ.

Most Read Articles

Kannada
English summary
Hero xpulse 200 registers over 54 percent sales growth in october 2021 details
Story first published: Friday, November 26, 2021, 10:28 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X