Just In
- 28 min ago
ಮಿನಿ ಎಂಪಿವಿ ಕಾರು ಮಾರಾಟದಲ್ಲಿ ರೆನಾಲ್ಟ್ ಟ್ರೈಬರ್ ಹೊಸ ಮೈಲಿಗಲ್ಲು
- 2 hrs ago
ಎಕ್ಸ್ಯುವಿ700 ಬಿಡುಗಡೆಯ ನಂತರ ತಾತ್ಕಾಲಿಕವಾಗಿ ಮಾರಾಟದಿಂದ ಸ್ಥಗಿತವಾಗಲಿದೆ ಎಕ್ಸ್ಯುವಿ500
- 2 hrs ago
ಭಾರತದಲ್ಲಿ ಬಿಡುಗಡೆಗೆ ಸಜ್ಜಾಗುತ್ತಿದೆ ಬಹುನಿರೀಕ್ಷಿತ ರಾಯಲ್ ಎನ್ಫೀಲ್ಡ್ ಹಂಟರ್ ಬೈಕ್
- 3 hrs ago
ಎಲೆಕ್ಟ್ರಿಕ್ ವಾಹನ ಉತ್ಪಾದನೆ ಮೇಲೆ ಒಟ್ಟು ರೂ.12 ಸಾವಿರ ಕೋಟಿ ಹೂಡಿಕೆ ಮಾಡಿದ ಮಹೀಂದ್ರಾ
Don't Miss!
- Sports
ಐಪಿಎಲ್ : ಈ ದಾಖಲೆ ಮಾಡಿದ್ದು ಕೊಹ್ಲಿ ಬಿಟ್ರೆ ಸಂಜು ಸ್ಯಾಮ್ಸನ್
- Lifestyle
ಅಧ್ಯಯನ: ಸ್ಥೂಲಕಾಯದವರ ಸ್ಮರಣಾ ಶಕ್ತಿ ಕಾಪಾಡುತ್ತೆ ಬೆಣ್ಣೆಹಣ್ಣು
- Finance
ಏಪ್ರಿಲ್ 13ರ ಬಿಟ್ಕಾಯಿನ್ ರೇಟ್ ಎಷ್ಟಿದೆ?
- News
ಹೆಲಿ ಟೂರಿಸಂ; 'ಸೇವ್ ಮೈಸೂರು' ಅಭಿಯಾನಕ್ಕೆ ಭಾರೀ ಬೆಂಬಲ
- Movies
ಸಾಮಾಜಿಕ ಜಾಲತಾಣಕ್ಕೆ ಅದ್ಧೂರಿಯಾಗಿ ಎಂಟ್ರಿ ಕೊಟ್ಟ ಕನಸುಗಾರ
- Education
WCL Recruitment 2021: 44 ಮೆಡಿಕಲ್ ಸ್ಪೆಷಲಿಸ್ಟ್ ಮತ್ತು ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ದುಬಾರಿಯಾಯ್ತು ಹೀರೋ ಎಕ್ಸ್‌ಪಲ್ಸ್ 200, ಎಕ್ಸ್‌ಪಲ್ಸ್ 200ಟಿ ಮತ್ತು ಎಕ್ಸ್‌ಟ್ರಿಮ್ 200ಎಸ್ ಬೈಕ್‌ಗಳು
ಕಳೆದ ತಿಂಗಳು ದೇಶದ ಭಾರತದ ಅತಿದೊಡ್ಡ ದ್ವಿಚಕ್ರ ವಾಹನ ತಯಾರಕ ಕಂಪನಿಯಾದ ಹೀರೋ ಮೋಟೊಕಾರ್ಪ್ ತನ್ನ ಸರಣಿಯಲ್ಲಿರುವ ಬೈಕ್‌ಗಳ ಬೆಲೆಯನ್ನು ಹೆಚ್ಚಿಸುವುದಾಗಿ ಘೋಷಿಸಿತು. ಹೊಸ ಹಣಕಾಸು ವರ್ಷ ಪ್ರಾರಂಭವಾಗುವುದರೊಂದಿಗೆ ಹೊಸ ಬೆಲೆ ದರ ಪಟ್ಟಿಯು ಜಾರಿಗೆ ಬಂದಿವೆ.

ಅದರಂತೆ ಹೀರೋನ 200ಸಿಸಿ ಸರಣಿಯ ಬೈಕ್‌ಗಳಲ್ಲಿ ಎಕ್ಸ್‌ಪಲ್ಸ್ 200, ಎಕ್ಸ್‌ಪಲ್ಸ್ 200ಟಿ ಮತ್ತು ಎಎಕ್ಸ್‌ಟ್ರಿಮ್ 200ಎಸ್ ಬೆಲೆಗಳನ್ನು ಹೆಚ್ಚಿಸಿದೆ. ಈ ಮೂರು ಬೈಕ್‌ಗಳ ಬೆಲೆಯನ್ನು ರೂ.3,000 ವರೆಗೆ ಹೆಚ್ಚಿಸಲಾಗಿದೆ. ಹೆಚ್ಚಿದ ಸರಕು ವೆಚ್ಚಗಳ ಪರಿಣಾಮವನ್ನು ಸರಿದೂಗಿಸಲು ಬೆಲೆ ಏರಿಕೆ ಅಗತ್ಯ ಎಂದು ಕಂಪನಿ ಹೇಳಿದೆ. ಗ್ರಾಹಕರ ಮೇಲೆ ಹೆಚ್ಚಿನ ಪರಿಣಾಮವನ್ನು ಬೀರದಿರಲು ತನ್ನ ವೆಚ್ಚ ಉಳಿತಾಯ ಕಾರ್ಯಕ್ರಮವನ್ನು ನೀಡುವುದಾಗಿ ಎಂದು ಕಂಪನಿ ಘೋಷಿಸಿತು.

ಇದೀಗ , ಹೀರೋ ಎಕ್ಸ್‌ಪಲ್ಸ್ 200 ಬೆಲೆಯು ರೂ.1,18,230 ಆಗಿದ್ದರೆ, ಹೀರೋ ಎಕ್ಸ್‌ಪಲ್ಸ್ 200ಟಿ ಬೈಕಿನ ಬೆಲೆಯು ರೂ.1,15,800 ಗಳಾಗಿದೆ. ಇನ್ನು ಎಕ್ಸ್‌ಟ್ರಿಮ್ 200ಎಸ್ ಬೈಕಿನ ಬೆಲೆಯು ರೂ.120,214 ಗಳಾಗಿದೆ. ಈ ಎಲ್ಲಾ ಬೆಲೆಗಳು ದೆಹಲಿ ಎಕ್ಸ್ ಶೋರೂಂ ಪ್ರಕಾರವಾಗಿದೆ.
MOST READ: ಯೂನಿಕಾರ್ನ್ ಬೈಕಿನ ಬೆಲೆ ಹೆಚ್ಚಿಸಿದ ಹೋಂಡಾ ಮೋಟಾರ್‌ಸೈಕಲ್

ಹೀರೋ ಮೋಟೊಕಾರ್ಪ್ ಕಂಪನಿಯು ತನ್ನ ಬಿಎಸ್-6 ಎಕ್ಸ್‌ಪಲ್ಸ್ 200 ಬೈಕನ್ನು ಭಾರತೀಯ ಮಾರುಕಟ್ಟೆಯಲ್ಲಿ ಕಳೆದ ವರ್ಷದ ಜುಲೈ ತಿಂಗಳಲ್ಲಿ ಬಿಡುಗಡೆಗೊಳಿಸಿತ್ತು. ಹೀರೋ ಎಕ್ಸ್‌ಪಲ್ಸ್ 200 ಬೈಕಿನ 199.6 ಸಿಸಿ ಎಂಜಿನ್ ಅನ್ನು ಹೊಂದಿದೆ.

ಈ ಎಂಜಿನ್ 8,500 ಆರ್‌ಪಿಎಂನಲ್ಲಿ 17.8 ಬಿಹೆಚ್‌ಪಿ ಪವರ್ ಮತ್ತು 6,400 ಆರ್‌ಪಿಎಂನಲ್ಲಿ 16.4 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ ಐದು-ಸ್ಪೀಡ್ ಗೇರ್‌ಬಾಕ್ಸ್ ಅನ್ನು ಜೋಡಿಸಲಾಗಿದೆ.
MOST READ: ಹೊಸ ಹೀರೋ ಎಕ್ಸ್‌ಟ್ರಿಮ್ 160ಆರ್ 100 ಮಿಲಿಯನ್ ಎಡಿಷನ್ ಬಿಡುಗಡೆ

ಈ ಬೈಕಿನಲ್ಲಿ ಏರ್/ಆಯಿಲ್-ಕೂಲಿಂಗ್ ಮತ್ತು ಫ್ಯೂಯಲ್ ಇಂಜೆಕ್ಷನ್ ಅನ್ನು ಸ್ಟ್ಯಾಂಡರ್ಡ್ ಆಗಿ ಅಳವಡಿಸಲಾಗಿದೆ. ಹೀರೋ ಎಕ್ಸ್‌ಪಲ್ಸ್ 200 ಬೈಕನ್ನು ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸಿದ ಬಳಿಕ ಹಿಂದಿನ ಮಾದರಿಗಿಂತ ತೂಕ ಹೆಚ್ಚಾಗಿದೆ. ಹೊಸ ಹೀರೋ ಎಕ್ಸ್‌ಪಲ್ಸ್ 200 ಬೈಕ್ 157 ಕೆಜೆ ತೂಕವನ್ನು ಹೊಂದಿದೆ.

ಇನ್ನು ಎಕ್ಸ್‌ಪಲ್ಸ್ 200ಟಿ ಬೈಕಿನ ಬಗ್ಗೆ ಹೇಳುವುದಾದರೆ, ಇದರಲ್ಲಿ ಏರ್-ಕೂಲ್ಡ್, ಸಿಂಗಲ್-ಸಿಲಿಂಡರ್ 200ಸಿಸಿ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ 200ಸಿಸಿ ಎಂಜಿನ್ 18.4 ಬಿಹೆಚ್‍ಪಿ ಪವರ್ ಮತ್ತು 16.45 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿರುತ್ತದೆ. ಈ ಎಂಜಿನ್ ನೊಂದಿಗೆ 5-ಸ್ಪೀಡ್ ಗೇರ್‌ಬಾಕ್ಸ್ ಅನ್ನು ಜೋಡಿಸಲಾಗಿದೆ.
MOST READ: ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್‍ಮಾಸ್ಟರ್ ಬೈಕ್

ಎಕ್ಸ್‌ಪಲ್ಸ್ 200ಟಿ ಬೈಕಿನಲ್ಲಿ ಟರ್ನ್-ಬೈ-ಟರ್ನ್ ನ್ಯಾವಿಗೇಷನ್ ಫೀಚರ್ ಅನ್ನು ಒಳಗೊಂಡಿರಬಹುದು. ಅದೇ ರೀತಿ ಈ ಬೈಕಿನಲ್ಲಿ ಸೆಮಿ-ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಅನ್ನು ಕೂಡ ನೀಡಲಾಗುತ್ತದೆ. ಇದು ಸವಾರಿಗೆ ಸುಲಭವಾಗಿ ಓದುವ ರೀತಿ ಇರುತ್ತದೆ.

ಇನ್ನು ಎಕ್ಸ್‌ಟ್ರಿಮ್ 200ಎಸ್ ಬೈಕಿನಲ್ಲಿ ಅದೇ 199 ಸಿಸಿ ಸಿಂಗಲ್-ಸಿಲಿಂಡರ್ ಆಯಿಲ್-ಕೂಲ್ಡ್ ಫ್ಯೂಯಲ್ -ಇಂಜೆಕ್ಟ್ ಎಂಜಿನ್ ಅನ್ನು ನವೀಕರಿಸಿ ಅಳವಡಿಸಲಾಗಿದೆ. ಈ ಎಂಜಿನ್ 8500 ಆರ್‌ಪಿಎಂನಲ್ಲಿ 17.8 ಬಿಹೆಚ್‌ಪಿ ಪವರ್ ಮತ್ತು 6500 ಆರ್‌ಪಿಎಂನಲ್ಲಿ 16.4 ಎನ್ಎಂ ಪೀಕ್ ಟಾರ್ಕ್ ಅನ್ನು ಉತ್ಪಾದಿಸುತ್ತದೆ, ಈ ಎಂಜಿನ್ ಅನ್ನು ಐದು-ಸ್ಪೀಡ್ ಗೇರ್‌ಬಾಕ್ಸ್‌ನೊಂದಿಗೆ ಜೋಡಿಸಲಾಗಿದೆ.

ಹೊಸ ಎಕ್ಸ್‌ಟ್ರಿಮ್ 200ಎಸ್ ಬೈಕ್ ಬ್ಲೂಟೂತ್ ಕನೆಕ್ಟಿವಿಟಿಯೊಂದಿಗೆ ಸಂಪೂರ್ಣ ಡಿಜಿಟಲ್ ಎಲ್ಸಿಡಿ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಅನ್ನು ಹೊಂದಿದೆ. ಇದರಲ್ಲಿ ಟರ್ನ್-ಬೈ-ಟರ್ನ್ ನ್ಯಾವಿಗೇಷನ್, ಗೇರ್ ಇಂಡಿಕೇಟರ್, ಟ್ರಿಪ್ ಮೀಟರ್ ಮತ್ತು ಸರ್ವಿಸ್ ರಿಮೈಂಡರ್ ಮತ್ತು ಇತರ ಮಾಹಿತಿಗಳನ್ನು ನೀಡುತ್ತದೆ.