Just In
- 53 min ago
ಕಾರುಗಳ ರಫ್ತಿನಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಮಾರುತಿ ಸುಜುಕಿ
- 3 hrs ago
ವಾರದ ಪ್ರಮುಖ ಸುದ್ದಿ: ಹೊಸ ಸಫಾರಿ ಬಿಡುಗಡೆ, ಟೋಲ್ ಸಂಗ್ರಹ ಹೆಚ್ಚಳ, ಇಳಿಕೆಯಾಗುತ್ತಾ ಪೆಟ್ರೋಲ್ ದರ?
- 12 hrs ago
ಬಿಡುಗಡೆಯಾಗಲಿರುವ ಓಲಾ ಮೊದಲ ಎಲೆಕ್ಟ್ರಿಕ್ ಸ್ಕೂಟರ್ ವಿಶೇಷತೆಗಳೇನು?
- 14 hrs ago
ಪರಿಸರ ಸ್ನೇಹಿ ವಾಹನಗಳ ವಿಭಾಗದಲ್ಲಿ ಟಾಟಾ ನೆಕ್ಸಾನ್ ಇವಿ ಕಾರಿಗೆ ಪ್ರತಿಷ್ಠಿತ ಪ್ರಶಸ್ತಿ
Don't Miss!
- News
ಎಬಿಪಿ ಸಮೀಕ್ಷೆ: ಬೆಂಗಾಳದಲ್ಲಿ ಬಿಜೆಪಿ ಏಳಿಗೆ ನಡುವೆ ಟಿಎಂಸಿಗೆ ಗೆಲುವು
- Sports
ಸ್ಪಿನ್ ಆಗಲು ಆರಂಭವಾದರೆ ಜಗತ್ತು ಅಳಲು ಆರಂಭಿಸುತ್ತದೆ: ಪಿಚ್ ಬಗ್ಗೆ ಟೀಕೆಗೆ ಆಸಿಸ್ ಸ್ಪಿನ್ನರ್ ತಿರುಗೇಟು
- Movies
ಶಸ್ತ್ರ ಚಿಕಿತ್ಸೆಗೆ ಒಳಗಾಗುತ್ತಿರುವ ಮೆಗಾಸ್ಟಾರ್ ಅಮಿತಾಭ್ ಬಚ್ಚನ್
- Finance
ಭಾರತದಲ್ಲಿ ನೋಕಿಯಾ ಪವರ್ ಈಯರ್ಬಡ್ಸ್ ಲೈಟ್ಸ್ ಮಾರಾಟ
- Lifestyle
ವಾರ ಭವಿಷ್ಯ: ಈ ವಾರ 12 ರಾಶಿಗಳ ರಾಶಿಫಲ ಹೇಗಿದೆ?
- Education
MCL Recruitment 2021: 8 ಸಾಮಾನ್ಯ ವೈದ್ಯಕೀಯ ಸಲಹೆಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಹೋಂಡಾ ಆಕ್ಟಿವಾ 6ಜಿ ಸ್ಕೂಟರ್ ಖರೀದಿ ಮೇಲೆ ಭರ್ಜರಿ ಆಫರ್ ಘೋಷಣೆ
ಹೋಂಡಾ ಮೋಟಾರ್‌ಸೈಕಲ್ ಕಂಪನಿಯು ತನ್ನ ಜನಪ್ರಿಯ ಸ್ಕೂಟರ್ ಮಾದರಿಯಾದ ಆಕ್ಟಿವಾ 6ಜಿ ಆವೃತ್ತಿಯ ಮೇಲೆ ವಿಶೇಷ ಆಫರ್‌ಗಳನ್ನು ಘೋಷಣೆ ಮಾಡಿದ್ದು, ಫೆಬ್ರುವರಿ ಅವಧಿಯಲ್ಲಿ ಆಕ್ಟಿವಾ 6ಜಿ ಖರೀದಿಸುವ ಗ್ರಾಹಕರು ಗರಿಷ್ಠ ಉಳಿತಾಯ ಮಾಡಬಹುದಾಗಿದೆ.

ಆಕ್ಟಿವಾ 6ಜಿ ಸ್ಕೂಟರ್ ಆವೃತ್ತಿಯ ಖರೀದಿ ಮೇಲೆ ಹೋಂಡಾ ಕಂಪನಿಯು ಆಕರ್ಷಕ ಬಡ್ಡಿದರದಲ್ಲಿ ಗರಿಷ್ಠ ಸಾಲಸೌಲಭ್ಯ, ಕ್ಯಾಶ್‌ಬ್ಯಾಕ್ ಆಫರ್ ಮತ್ತು ಅತಿ ಕಡಿಮೆ ಡೌನ್‌ಪೇಮೆಂಟ್ ಆಯ್ಕೆಗಳನ್ನು ನೀಡುತ್ತಿದ್ದು, ಹೊಸ ಆಕ್ಟಿವಾ ಖರೀದಿ ಯೋಜನೆಯಲ್ಲಿರುವ ಗ್ರಾಹಕರಿಗೆ ಇದು ಅತ್ಯುತ್ತಮ ಅವಕಾಶವಾಗಿದೆ. ಹೊಸ ಆಫರ್‌ಗಳು ಈ ತಿಂಗಳಾಂತ್ಯದ ತನಕ ಲಭ್ಯವಿರಲಿದ್ದು, ಆಯ್ದ ಡೀಲರ್ಸ್‌ಗಳಲ್ಲಿ ಹೊಸ ಸ್ಕೂಟರ್ ಮೇಲೆ ಹಲವಾರು ಆಫರ್‌ಗಳನ್ನು ಪಡೆದುಕೊಳ್ಳಬಹುದಾಗಿದೆ.

ಹೋಂಡಾ ಕಂಪನಿಯ ಹೊಸ ಆಫರ್‌ನಲ್ಲಿ ಆಕ್ಟಿವಾ ಸ್ಕೂಟರ್ ಖರೀದಿ ಮೇಲೆ ಶೇ. 6.5 ಬಡ್ಡಿದರದಲ್ಲಿ ಶೇ. 100ರಷ್ಟು ಸಾಲಸೌಲಭ್ಯ ನೀಡುತ್ತಿದ್ದು, ಡೆಬಿಟ್ ಕಾರ್ಡ್ ಅಥವಾ ಕ್ರೆಡಿಕ್ ಕಾರ್ಡ್ ಬಳಕೆ ಮಾಡುವ ಗ್ರಾಹಕರಿಗೆ ರೂ.5 ಸಾವಿರ ಕ್ಯಾಶ್‌ಬ್ಯಾಕ್ ಕೂಡಾ ಲಭ್ಯವಿದೆ.

ಹಾಗೆಯೇ ಹೊಸ ಸ್ಕೂಟರ್ ಖರೀದಿಗಾಗಿ ಅತಿ ಕಡಿಮೆ ಡೌನ್‌ಪೇಮೆಂಟ್ ಆಯ್ಕೆ ನೀಡಿರುವ ಹೋಂಡಾ ಕಂಪನಿಯು ರೂ. 2,499 ನಿಗದಿಪಡಿಸಿದ್ದು, ಮೊದಲ ಬಾರಿಗೆ ಆಕ್ಟಿವ್ 6ಜಿ ಮಾದರಿಯ ಮೇಲೆ ಅತಿಹೆಚ್ಚು ಆಫರ್ ನೀಡಲಾಗುತ್ತಿದೆ.

ಇನ್ನು ದೇಶಿಯ ಮಾರುಕಟ್ಟೆಯಲ್ಲಿನ ಸ್ಕೂಟರ್ ಮಾರಾಟದಲ್ಲಿ ಸದ್ಯ ಅಗ್ರಸ್ಥಾನ ಕಾಯ್ದುಕೊಂಡಿರುವ ಆಕ್ಟಿವಾ ಆವೃತ್ತಿಯು ಕಳೆದ 20 ವರ್ಷಗಳಲ್ಲಿ ಹಲವಾರು ದಾಖಲೆಗಳನ್ನು ತನ್ನದಾಗಿಸಿಕೊಂಡಿದ್ದು, ಗ್ರಾಹಕರ ಬೇಡಿಕೆಯೆಂತೆ ನಿರಂತರವಾಗಿ ಬದಲಾವಣೆಗೊಳ್ಳುತ್ತಲೇ ಬೇಡಿಕೆಯಲ್ಲಿ ಸ್ಥಿರತೆ ಕಾಯ್ದುಕೊಂಡಿದೆ. ಬಿಎಸ್-6 ಎಮಿಷನ್ ಜಾರಿ ನಂತರ ಆಕ್ಟಿವಾ 6ಜಿ ಆವೃತ್ತಿಯಾಗಿ ಮಾರಾಟಗೊಳ್ಳುತ್ತಿದ್ದು, ಹೊಸ ಸ್ಕೂಟರ್ ಮಾದರಿಯು ಹೊಸ ಎಂಜಿನ್ ಆಯ್ಕೆಯೊಂದಿಗೆ ವಿವಿಧ ಮಾದರಿಯ ಬಣ್ಣಗಳ ಆಯ್ಕೆಗಳನ್ನು ಹೊಂದಿರುವುದು ಮತ್ತಷ್ಟು ಬೇಡಿಕೆಗೆ ಕಾರಣವಾಗಿದೆ.

ಬೆಲೆ, ತಾಂತ್ರಿಕ ಅಂಶಗಳಲ್ಲಿ ಪ್ರತಿ ಸ್ಪರ್ಧಿ ಸ್ಕೂಟರ್ ಮಾದರಿಗಳಿಂತಲೂ ಅತ್ಯುತ್ತಮ ಫೀಚರ್ಸ್ ಹೊಂದಿರುವ ಆಕ್ಟಿವಾ ಸ್ಕೂಟರ್ ಮಾದರಿಯು ದೇಶದ ಜನಪ್ರಿಯ ಸ್ಕೂಟರ್ ಮಾದರಿಯಾಗಿ ಹೊರಹೊಮ್ಮಿದ್ದು, ಇತ್ತೀಚೆಗೆ 20ನೇ ವರ್ಷದ ಸ್ಪೆಷಲ್ ಎಡಿಷನ್ ಕೂಡಾ ಪಡೆದುಕೊಂಡಿತ್ತು.

ಸ್ಟ್ಯಾಂಡರ್ಡ್ ಮತ್ತು ಡಿಲಕ್ಸ್ ಮಾದರಿಗಳ ಜೊತೆಗೆ ಸ್ಪೆಷಲ್ ಎಡಿಷನ್‌ನಲ್ಲೂ ಮಾರಾಟಗೊಳ್ಳುತ್ತಿರುವ ಆಕ್ಟಿವಾ 6ಜಿ ಸ್ಕೂಟರ್ ಮಾದರಿಯು ಬೆಂಗಳೂರಿನಲ್ಲಿ ಆನ್‌ರೋಡ್ ಪ್ರಕಾರ ಆರಂಭಿಕವಾಗಿ ರೂ. 84,414ಕ್ಕೆ ಮತ್ತು ಡಿಲಕ್ಸ್ ಮಾದರಿಯು ರೂ. 87,421 ಬೆಲೆ ಹೊಂದಿದೆ.

20ನೇ ವರ್ಷದ ಸಂಭ್ರಮಕ್ಕಾಗಿ ಬಿಡುಗಡೆಯಾಗಿರುವ ಸ್ಪೆಷಲ್ ಎಡಿಷನ್ ಮಾದರಿಯು ಆರಂಭಿಕವಾಗಿ ರೂ. 87,138ಕ್ಕೆ ಮತ್ತು ಟಾಪ್ ಎಂಡ್ ಮಾದರಿಯು ರೂ. 89,144 ಬೆಲೆ ಹೊಂದಿದ್ದು, ಹೊಸ ಸ್ಕೂಟರ್‌ನಲ್ಲಿ ಕಂಪನಿಯು ಗ್ರಾಹಕರ ಬೇಡಿಕೆಯೆಂತೆ ಒಟ್ಟು 8 ಬಣ್ಣಗಳ ಆಯ್ಕೆ ನೀಡಿದೆ.

ಸ್ಪೆಷಲ್ ಎಡಿಷನ್ ಸೇರಿದಂತೆ ಆಕ್ಟಿವಾ 6ಜಿ ಮಾದರಿಯಲ್ಲಿ ಗ್ಲಿಟೆರ್ ಬ್ಲ್ಯೂ ಮೆಟಾಲಿಕ್, ಪರ್ಲ್ ಸ್ಪಾರ್ಟನ್ ರೆಡ್, ಡ್ಯಾಜೆಲ್ ಯೆಲ್ಲೊ ಮೆಟಾಲಿಕ್, ಬ್ಲ್ಯಾಕ್, ಪರ್ಲ್ ಪ್ರಿಸಿಯಸ್ ವೈಟ್, ಮ್ಯಾಟೆ ಆಕ್ಸಿಸ್ ಗ್ರೇ ಮೆಟಾಲಿಕ್, ಬ್ರೌನ್ ಮೆಟಾಲಿಕ್ ಮತ್ತು ಪರ್ಲ್ ನೈಟ್ ಸ್ಟಾರ್ ಬ್ಲ್ಯಾಕ್ ಬಣ್ಣಗಳ ಆಯ್ಕೆ ಹೊಂದಿದೆ. ಸ್ಪೆಷಲ್ ಎಡಿಷನ್ ಮಾದರಿಯು ಮುಂದಿನ ಕೆಲ ದಿನಗಳವರೆ ಮಾತ್ರ ಖರೀದಿಗೆ ಲಭ್ಯವಿರಲಿದ್ದು, ಸಾಮಾನ್ಯ ಮಾದರಿಗಳ ಮಾರಾಟದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.
MOST READ: ಪ್ರತಿ ಚಾರ್ಜ್‌ಗೆ ಬರೋಬ್ಬರಿ 240ಕಿ.ಮೀ ಮೈಲೇಜ್ ನೀಡುವ ಇವಿ ಸ್ಕೂಟರ್ ಬಿಡುಗಡೆ ಮಾಡಲಿದೆ ಓಲಾ

ಬಿಎಸ್-6 ಎಂಜಿನ್ ಜೋಡಣೆ ನಂತರ ಗ್ರಾಹಕರ ಆಯ್ಕೆಯಲ್ಲಿ ಮತ್ತಷ್ಟು ಮುಂಚೂಣಿ ಸಾಧಿಸುತ್ತಿರುವ ಆಕ್ಟಿವಾ 6ಜಿ ಸ್ಕೂಟರ್ ಮಾದರಿಯು 109 ಸಿಸಿ ಸಿಂಗಲ್-ಸಿಲಿಂಡರ್, ಏರ್-ಕೂಲ್ಡ್ ಎಂಜಿನ್ ಪಡೆದುಕೊಂಡಿದ್ದು, 7.79-ಬಿಹೆಚ್‍ಪಿ ಮತ್ತು 8.79-ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಹೊಸ ಎಮಿಷನ್ ನಿಯಮದಿಂದಾಗಿ ಹೊಸ ಎಂಜಿನ್ ಕಾರ್ಯಕ್ಷಮತೆಯು ಹೆಚ್ಚಳವಾಗುವುದರ ಜೊತೆಗೆ ಇಂಧನ ದಕ್ಷತೆಯಲ್ಲೂ ಗಮನಸೆಳೆಯುತ್ತಿದ್ದು, ಆಕ್ಟಿವಾ 6ಜಿ ಮಾದರಿಯು ಪ್ರತಿ ಲೀಟರ್‌ಗೆ ಸರಾಸರಿಯಾಗಿ 60 ಕಿ.ಮೀ ಮೈಲೇಜ್ ಹಿಂದಿರುಗಿಸುತ್ತದೆ.
MOST READ: ಅತಿ ಹೆಚ್ಚು ಮೈಲೇಜ್ ನೀಡುವ ಟಾಪ್ 10 ಬಜೆಟ್ ಬೆಲೆಯ ಬೈಕುಗಳಿವು..!

ಇದೇ ಕಾರಣಕ್ಕಾಗಿ ಗ್ರಾಹಕರ ಬೇಡಿಕೆಯಲ್ಲಿ ಸ್ಥಿರತೆ ಕಾಯ್ದುಕೊಂಡಿರುವ ಆಕ್ಟಿವಾ ಸ್ಕೂಟರ್ ಮಾದರಿಯು ಕಳೆದ 20 ವರ್ಷಗಳಿಂದ ಸ್ಕೂಟರ್ ಮಾರಾಟದಲ್ಲಿ ಅಗ್ರಸ್ಥಾನದಲ್ಲೇ ಮುಂದುವರಿದ್ದು, ಇದುವರೆಗೆ ಆಕ್ಟಿವಾ ಸ್ಕೂಟರ್ ಮಾದರಿಯು ಬರೋಬ್ಬರಿ 2.5 ಕೋಟಿ ಯುನಿಟ್ ಮಾರಾಟ ಗುರಿಸಾಧನೆ ಹೊಂದಿದೆ.