ಹೊಸ ಹೋಂಡಾ ಗ್ರಾಜಿಯಾ 125 ಸ್ಪೋರ್ಟ್ಸ್ ಎಡಿಷನ್ ಖರೀದಿ ಮೇಲೆ ಭರ್ಜರಿ ಕ್ಯಾಶ್‌ಬ್ಯಾಕ್ ಆಫರ್

ಹೋಂಡಾ ಮೋಟಾರ್‌ಸೈಕಲ್ ಮತ್ತು ಸ್ಕೂಟರ್ ಇಂಡಿಯಾ ಕಂಪನಿಯು ತನ್ನ ಗ್ರಾಜಿಯಾ 125 ಸ್ಕೂಟರ್ ಮೇಲೆ ಭರ್ಜರಿ ಕ್ಯಾಶ್‌ಬ್ಯಾಕ್ ಆಫರ್ ಅನ್ನು ಇತ್ತೀಚೆಗೆ ಘೋಷಿಸುತ್ತಿತು. ಇದೀಗ ಹೋಂಡಾ ಕಂಪನಿಯು ಗ್ರಾಜಿಯಾ 125 ಸ್ಪೋರ್ಟ್ಸ್ ಎಡಿಷನ್ ಸ್ಕೂಟರ್ ಮೇಲೆ ಕ್ಯಾಶ್‌ಬ್ಯಾಕ್ ಆಫರ್ ಅನ್ನು ನೀಡುತ್ತಿದೆ.

ಹೊಸ ಹೋಂಡಾ ಗ್ರಾಜಿಯಾ 125 ಸ್ಪೋರ್ಟ್ಸ್ ಎಡಿಷನ್ ಖರೀದಿ ಮೇಲೆ ಭರ್ಜರಿ ಕ್ಯಾಶ್‌ಬ್ಯಾಕ್ ಆಫರ್

ಗ್ರಾಹಕರು ಹೊಸ ಹೋಂಡಾ ಗ್ರಾಜಿಯಾ 125 ಸ್ಪೋರ್ಟ್ಸ್ ಎಡಿಷನ್ ಖರೀದಿಸುವಾಗ ರೂ.3500 ವರೆಗೆ ಶೇ.5 ರಷ್ಟು ಕ್ಯಾಶ್‌ಬ್ಯಾಕ್ ಆಫರ್ ಲಭಿಸುತ್ತದೆ. ಆದರೆ ಇದಕ್ಕೆ ನಿಯಮಗಳು ಮತ್ತು ಕೆಲವು ಷರತ್ತುಗಳಿವೆ. ಈ ಕೊಡುಗೆ ಎಸ್‌ಬಿಐ ಕ್ರೆಡಿಟ್ ಕಾರ್ಡ್ ಮೂಲಕ ಇಎಂಐ ವಹಿವಾಟಿನಲ್ಲಿ ಮಾತ್ರ ಮಾನ್ಯವಾಗಿರುತ್ತದೆ ಮತ್ತು ಕನಿಷ್ಠ ವಹಿವಾಟು ಮೌಲ್ಯವು ರೂ.40,000 ಗಳಾಗಿರಬೇಕು ಎಂದು ಹೋಂಡಾ ಕಂಪನಿ ಹೇಳಿದೆ.

ಹೊಸ ಹೋಂಡಾ ಗ್ರಾಜಿಯಾ 125 ಸ್ಪೋರ್ಟ್ಸ್ ಎಡಿಷನ್ ಖರೀದಿ ಮೇಲೆ ಭರ್ಜರಿ ಕ್ಯಾಶ್‌ಬ್ಯಾಕ್ ಆಫರ್

ಈ ಕ್ಯಾಶ್‌ಬ್ಯಾಕ್ ಆಫರ್ ಈ ತಿಂಗಳ ಅಂತ್ಯದವರೆಗೂ ಲಭ್ಯವಿರುತ್ತದೆ. ಈ ಹೋಂಡಾ ಗ್ರಾಜಿಯಾ 125 ಸ್ಕೂಟರ್ ಮೇಲೆ ನೀಡಿರುವ ಕ್ಯಾಶ್‌ಬ್ಯಾಕ್ ಆಫರ್ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿಯಲು ಹತ್ತಿರದ ಹೋಂಡಾ ಮೋಟಾರ್‌ಸೈಕಲ್ ಮತ್ತು ಸ್ಕೂಟರ್ ಇಂಡಿಯಾ ಕಂಪನಿಯ ಡೀಲರ್‌ಶಿಪ್‌ಗೆ ಭೇಟಿ ನೀಡಿ.

ಹೊಸ ಹೋಂಡಾ ಗ್ರಾಜಿಯಾ 125 ಸ್ಪೋರ್ಟ್ಸ್ ಎಡಿಷನ್ ಖರೀದಿ ಮೇಲೆ ಭರ್ಜರಿ ಕ್ಯಾಶ್‌ಬ್ಯಾಕ್ ಆಫರ್

ಹೊಸ ಹೋಂಡಾ ಗ್ರಾಜಿಯಾ 125 ಸ್ಪೋರ್ಟ್ಸ್ ಎಡಿಷನ್ ನಲ್ಲಿ ಹೊಸ ಬಾಡಿ ಗ್ರಾಫಿಕ್ಸ್‌ನೊಂದಿಗೆ ಎರಡು ಹೊಸ ಬಣ್ಣಗಳ ಆಯ್ಕೆಯಲ್ಲಿ ಲಭ್ಯವಿದೆ. ಇದರಲ್ಲಿ ಪರ್ಲ್ ನೈಟ್‌ಸ್ಟಾರ್ ಬ್ಲಾಕ್ ಮತ್ತು ಸ್ಪೋರ್ಟ್ಸ್ ರೆಡ್ ಸೇರಿವೆ.

ಹೊಸ ಹೋಂಡಾ ಗ್ರಾಜಿಯಾ 125 ಸ್ಪೋರ್ಟ್ಸ್ ಎಡಿಷನ್ ಖರೀದಿ ಮೇಲೆ ಭರ್ಜರಿ ಕ್ಯಾಶ್‌ಬ್ಯಾಕ್ ಆಫರ್

ಈ ಹೊಸ ಕಾಸ್ಮೆಟಿಕ್ ಅಪ್‌ಡೇಟ್‌ನ ಹೊರತಾಗಿ, ಸ್ಕೂಟರ್ ಇತರ ಎಲ್ಲ ಅಂಶಗಳು ಸ್ಟ್ಯಾಂಡರ್ಡ್ ಮಾದರಿಗೆ ಹೋಲುತ್ತದೆ. ಈ ಹೋಂಡಾ ಗ್ರಾಜಿಯಾ 125 ಸ್ಪೋರ್ಟ್ಸ್ ಎಡಿಷನ್ ತಾಜಾ ಗ್ರಾಫಿಕ್ಸ್ ನೊಂದಿಗೆ ಆಕರ್ಷಕ ಲುಕ್ ಅನ್ನು ಹೊಂದಿದೆ.

ಹೊಸ ಹೋಂಡಾ ಗ್ರಾಜಿಯಾ 125 ಸ್ಪೋರ್ಟ್ಸ್ ಎಡಿಷನ್ ಖರೀದಿ ಮೇಲೆ ಭರ್ಜರಿ ಕ್ಯಾಶ್‌ಬ್ಯಾಕ್ ಆಫರ್

ಈ ಸ್ಕೂಟರ್‌ನಲ್ಲಿ ಅದೇ 125 ಸಿಸಿ ಹೆಚ್‌ಇಟಿ(ಹೋಂಡಾ ಇಕೋ ಟೆಕ್ನಾಲಜಿ) ಬಿಎಸ್‌ವಿಐ ಪಿಜಿಎಂ-ಎಫ್‌ಐ ಎಂಜಿನ್ ಹೊಂದಿದೆ. ಇದರಲ್ಲಿ ಪೇಟೆಂಟ್ ಪಡೆದ ಎಸಿಜಿ ಸ್ಟಾರ್ಟರ್ ಮೋಟರ್ ಇದೆ. ಇದು ಪ್ರತಿ ಬಾರಿಯೂ ತ್ವರಿತ, ಮತ್ತು ಜೋಲ್ಟ್-ಫ್ರೀ ಸ್ಟಾರ್ಟ್ ಆಗುತ್ತದೆ.

ಹೊಸ ಹೋಂಡಾ ಗ್ರಾಜಿಯಾ 125 ಸ್ಪೋರ್ಟ್ಸ್ ಎಡಿಷನ್ ಖರೀದಿ ಮೇಲೆ ಭರ್ಜರಿ ಕ್ಯಾಶ್‌ಬ್ಯಾಕ್ ಆಫರ್

ಈ ಹೋಂಡಾ ಗ್ರಾಜಿಯಾ 125 ಸ್ಪೋರ್ಟ್ಸ್ ಎಡಿಷನ್ ನಲ್ಲಿ ಪಾಸ್-ಸ್ವಿಚ್, ಹೊಸ ಎಂಜಿನ್ ಸ್ಟಾರ್ಟ್/ ಸ್ಟಾಪ್ ಸ್ವಿಚ್, ಸೀಟ್‌ಗಾಗಿ ಮಲ್ಟಿ-ಫಂಕ್ಷನಲ್ ಸ್ವಿಚ್ ಮತ್ತು ಫ್ಯೂಯಲ್ ಲಿಡ್ ಅನ್ನು ಒಳಗೊಂಡಿದೆ.

ಹೊಸ ಹೋಂಡಾ ಗ್ರಾಜಿಯಾ 125 ಸ್ಪೋರ್ಟ್ಸ್ ಎಡಿಷನ್ ಖರೀದಿ ಮೇಲೆ ಭರ್ಜರಿ ಕ್ಯಾಶ್‌ಬ್ಯಾಕ್ ಆಫರ್

ಇನ್ನು ಈ ಸ್ಕೂಟರ್‌ನಲ್ಲಿ 124 ಸಿಸಿ ಸಿಂಗಲ್ ಸಿಲಿಂಡರ್ ಏರ್-ಕೂಲ್ಡ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 6000 ಆರ್‍ಪಿಎಂನಲ್ಲಿ 8 ಬಿಹೆಚ್‍ಪಿ ಪವರ್ ಮತ್ತು 5000 ಆರ್‍ಪಿಎಂನಲ್ಲಿ 10.3 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ಅನ್ನು ವಿ-ಟೈಪ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ಗೆ ಜೋಡಿಸಲಾಗಿದೆ.

ಹೊಸ ಹೋಂಡಾ ಗ್ರಾಜಿಯಾ 125 ಸ್ಪೋರ್ಟ್ಸ್ ಎಡಿಷನ್ ಖರೀದಿ ಮೇಲೆ ಭರ್ಜರಿ ಕ್ಯಾಶ್‌ಬ್ಯಾಕ್ ಆಫರ್

ಗ್ರಾಜಿಯಾ 125 ಸ್ಪೋರ್ಟ್ಸ್ ಎಡಿಷನ್ ಸ್ಕೂಟರ್‌ನಲ್ಲಿ ಸಸ್ಪೆಂಕ್ಷನ್ ಸೆಟಪ್ ಗಾಗಿ, ಮುಂಭಾಗದಲ್ಲಿ ಟೆಲಿಸ್ಕೋಪಿಕ್ ಫ್ರಂಟ್ ಫೋರ್ಕ್ಸ್ ಮತ್ತು ಹಿಂಭಾಗದಲ್ಲಿ ಮೂರು-ರೀತಿಯಲ್ಲಿ ಹೊಂದಾಣಿಕೆ ಮಾಡಬಹುದಾದ ಸ್ಪ್ರಿಂಗ್-ಲೋಡೆಡ್ ಸಸ್ಪೆಂಕ್ಷನ್ ಸೆಟಪ್ ಅನ್ನು ಅಳವಡಿಸಿದ್ದಾರೆ. ಇನ್ನು ಇದರ ಬ್ರೇಕಿಂಗ್ ಸಿಸ್ಟಂ ಬಗ್ಗೆ ಹೇಳುವುದಾದರೆ, ಮುಂಭಾಗದಲ್ಲಿ 190 ಎಂಎಂ ಡ್ರಮ್ ಬ್ರೇಕ್ ಮತ್ತು ಹಿಂಭಾಗದಲ್ಲಿ 130 ಎಂಎಂ ಡ್ರಮ್ ಬ್ರೇಕ್ ಅನ್ನು ಅಳವಡಿಸಲಾಗಿದೆ.

More from DriveSpark

Article Published On: Friday, June 4, 2021, 9:54 [IST]
English summary
Honda Grazia 125 Sports Edition Cashback Offer Announced. Read In Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+