ದ್ವಿಚಕ್ರ ವಾಹನಗಳ ಖರೀದಿ ಮೇಲೆ ಆಕರ್ಷಕ ಆಫರ್ ಘೋಷಿಸಿದ ಹೋಂಡಾ ಮೋಟಾರ್‌ಸೈಕಲ್

ಹೋಂಡಾ ಮೋಟಾರ್‌ಸೈಕಲ್ ಕಂಪನಿಯು ತನ್ನ ಜನಪ್ರಿಯ ದ್ವಿಚಕ್ರ ವಾಹನಗಳ ಖರೀದಿ ಮೇಲೆ ವಿಶೇಷ ಆಫರ್‌ಗಳನ್ನು ಘೋಷಣೆ ಮಾಡಿದ್ದು, ಹೊಸ ವಾಹನ ಖರೀದಿಸುವ ಗ್ರಾಹಕರು ಗರಿಷ್ಠ ಉಳಿತಾಯ ಮಾಡಬಹುದಾಗಿದೆ.

ದ್ವಿಚಕ್ರ ವಾಹನಗಳ ಖರೀದಿ ಮೇಲೆ ಆಕರ್ಷಕ ಆಫರ್ ಘೋಷಿಸಿದ ಹೋಂಡಾ ಮೋಟಾರ್‌ಸೈಕಲ್

ದ್ವಿಚಕ್ರ ವಾಹನಗಳ ಖರೀದಿ ಮೇಲೆ ಹೋಂಡಾ ಕಂಪನಿಯು ಆಕರ್ಷಕ ಬಡ್ಡಿದರದಲ್ಲಿ ಗರಿಷ್ಠ ಸಾಲಸೌಲಭ್ಯ ಮತ್ತು ಅತಿ ಕಡಿಮೆ ಡೌನ್‌ಪೇಮೆಂಟ್ ಆಯ್ಕೆಗಳನ್ನು ನೀಡುತ್ತಿದ್ದು, ಹೋಂಡಾ ಬೈಕ್‌ಗಳ ಖರೀದಿ ಯೋಜನೆಯಲ್ಲಿರುವ ಗ್ರಾಹಕರಿಗೆ ಇದು ಅತ್ಯುತ್ತಮ ಅವಕಾಶವಾಗಿದೆ. ಹೊಸ ಆಫರ್‌ಗಳು ಈ ತಿಂಗಳಾಂತ್ಯದ ತನಕ ಲಭ್ಯವಿರಲಿದ್ದು, ಆಯ್ದ ಡೀಲರ್ಸ್‌ಗಳಲ್ಲಿ ಹೊಸ ಸ್ಕೂಟರ್ ಮೇಲೆ ಹಲವಾರು ಆಫರ್‌ಗಳನ್ನು ಪಡೆದುಕೊಳ್ಳಬಹುದಾಗಿದೆ.

ದ್ವಿಚಕ್ರ ವಾಹನಗಳ ಖರೀದಿ ಮೇಲೆ ಆಕರ್ಷಕ ಆಫರ್ ಘೋಷಿಸಿದ ಹೋಂಡಾ ಮೋಟಾರ್‌ಸೈಕಲ್

ಹೋಂಡಾ ಕಂಪನಿಯ ಹೊಸ ಆಫರ್‌ನಲ್ಲಿ ಶೇ. 6.5ರಷ್ಟು ಬಡ್ಡಿದರದಲ್ಲಿ ಶೇ. 100ರಷ್ಟು ಸಾಲ ಸೌಲಭ್ಯ, ಡೆಬಿಟ್ ಕಾರ್ಡ್ ಅಥವಾ ಕ್ರೆಡಿಕ್ ಕಾರ್ಡ್ ಬಳಕೆ ಮಾಡುವ ಗ್ರಾಹಕರಿಗೆ ಕ್ಯಾಶ್‌ಬ್ಯಾಕ್ ಆಫರ್ ಮತ್ತು ರೂ. 1,100 ಮೊತ್ತದ ಅತಿ ಕಡಿಮೆ ಡೌನ್ ಪೇಮೆಂಟ್ ಆಯ್ಕೆ ನೀಡುತ್ತಿದೆ.

ದ್ವಿಚಕ್ರ ವಾಹನಗಳ ಖರೀದಿ ಮೇಲೆ ಆಕರ್ಷಕ ಆಫರ್ ಘೋಷಿಸಿದ ಹೋಂಡಾ ಮೋಟಾರ್‌ಸೈಕಲ್

ಹಾಗೆಯೇ ಹೊಸ ದ್ವಿಚಕ್ರ ವಾಹನಗಳ ಖರೀದಿಗಾಗಿ ಹೋಂಡಾ ಕಂಪನಿಯು ಕ್ಯಾಶ್‌ಬ್ಯಾಕ್ ಪಡೆದುಕೊಳ್ಳುವ ಗ್ರಾಹಕರಿಗೆ ಕಡ್ಡಾಯವಾಗಿ ಇಂಡಸ್ಇಂಡ್ ಬ್ಯಾಂಕ್, ಬ್ಯಾಂಕ್ ಆಫ್ ಬರೋಡಾ, ಯೆಸ್ ಬ್ಯಾಂಕ್, ಸ್ಟ್ಯಾಂಡರ್ಡ್ ಚಾರ್ಟಟೆಡ್ ಅಥವಾ ಫೆಡರಲ್ ಬ್ಯಾಂಕ್ ಕಾರ್ಡ್‌ಗಳನ್ನೇ ಬಳಕೆಗೆ ಸೂಚಿಸಿದ್ದು, ಕಡಿಮೆ ಮೊತ್ತದ ಡೌನ್‌ಪೆಮೆಂಟ್ ಆಯ್ಕೆಯಿಂದಾಗಿ ಗ್ರಾಹಕರಿಗೆ ಸಾಕಷ್ಟು ಅನುಕೂಲಕರವಾಗಿದೆ.

ದ್ವಿಚಕ್ರ ವಾಹನಗಳ ಖರೀದಿ ಮೇಲೆ ಆಕರ್ಷಕ ಆಫರ್ ಘೋಷಿಸಿದ ಹೋಂಡಾ ಮೋಟಾರ್‌ಸೈಕಲ್

ಇನ್ನು ದೇಶಿಯ ಮಾರುಕಟ್ಟೆಯಲ್ಲಿನ ಸ್ಕೂಟರ್ ಮಾರಾಟದಲ್ಲಿ ಸದ್ಯ ಅಗ್ರಸ್ಥಾನ ಕಾಯ್ದುಕೊಂಡಿರುವ ಹೋಂಡಾ ಮೋಟಾರ್‌ಸೈಕಲ್ ವಿಭಾಗವು ಹಲವಾರು ದಾಖಲೆಗಳನ್ನು ತನ್ನದಾಗಿಸಿಕೊಂಡಿದ್ದು, ಗ್ರಾಹಕರ ಬೇಡಿಕೆಯೆಂತೆ ನಿರಂತರವಾಗಿ ಬದಲಾವಣೆಗೊಳ್ಳುತ್ತಲೇ ಬೇಡಿಕೆಯಲ್ಲಿ ಸ್ಥಿರತೆ ಕಾಯ್ದುಕೊಂಡಿದೆ.

ದ್ವಿಚಕ್ರ ವಾಹನಗಳ ಖರೀದಿ ಮೇಲೆ ಆಕರ್ಷಕ ಆಫರ್ ಘೋಷಿಸಿದ ಹೋಂಡಾ ಮೋಟಾರ್‌ಸೈಕಲ್

ಬೆಲೆ, ತಾಂತ್ರಿಕ ಅಂಶಗಳಲ್ಲಿ ಪ್ರತಿ ಸ್ಪರ್ಧಿ ಸ್ಕೂಟರ್ ಮಾದರಿಗಳಿಂತಲೂ ಅತ್ಯುತ್ತಮ ಫೀಚರ್ಸ್ ಹೊಂದಿರುವ ಆಕ್ಟಿವಾ ಸ್ಕೂಟರ್ ಮಾದರಿಗಳು ಕೋವಿಡ್ ನಂತರ ಹೆಚ್ಚಿನ ಮಟ್ಟದ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಮುಂಬರುವ ದಿನಗಳಲ್ಲಿ ಮತ್ತಷ್ಟು ಮಾರಾಟ ಪ್ರಮಾಣವನ್ನು ಹೆಚ್ಚಿಸುವ ಸಿದ್ದತೆಯಲ್ಲಿದೆ.

MOST READ: ಅತಿ ಹೆಚ್ಚು ಮೈಲೇಜ್ ನೀಡುವ ಟಾಪ್ 10 ಬಜೆಟ್ ಬೆಲೆಯ ಬೈಕುಗಳಿವು..!

ದ್ವಿಚಕ್ರ ವಾಹನಗಳ ಖರೀದಿ ಮೇಲೆ ಆಕರ್ಷಕ ಆಫರ್ ಘೋಷಿಸಿದ ಹೋಂಡಾ ಮೋಟಾರ್‌ಸೈಕಲ್

ಹೋಂಡಾ ಮೋಟಾರ್‌ಸೈಕಲ್ ಮತ್ತು ಸ್ಕೂಟರ್ ಇಂಡಿಯಾ ಕಂಪನಿಯು 2021ರ ಮಾರ್ಚ್ ತಿಂಗಳಿನಲ್ಲಿ ಭಾರೀ ಪ್ರಮಾಣದ ಬೇಡಿಕೆ ಪಡೆದುಕೊಂಡಿದ್ದು, ಕಳೆದ ವರ್ಷದ ಮಾರ್ಚ್ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಶೇ.60.77 ರಷ್ಟು ಹೆಚ್ಚು ಬೆಳವಣಿಗೆ ಕಂಡಿದೆ.

ದ್ವಿಚಕ್ರ ವಾಹನಗಳ ಖರೀದಿ ಮೇಲೆ ಆಕರ್ಷಕ ಆಫರ್ ಘೋಷಿಸಿದ ಹೋಂಡಾ ಮೋಟಾರ್‌ಸೈಕಲ್

ಕಳೆದ ತಿಂಗಳು ದೇಶೀಯ ಮಾರುಕಟ್ಟೆಯಲ್ಲಿ ಹೋಂಡಾ ಮೋಟಾರ್‌ಸೈಕಲ್ ಕಂಪನಿಯು 395,037 ಯುನಿಟ್‌ಗಳನ್ನು ಮಾರಾಟ ಮಾಡಿದೆ. ಇನ್ನು ಕಳೆದ ವರ್ಷದ ಇದೇ ತಿಂಗಳಿನಲ್ಲಿ ದೇಶಿಯ ಮಾರುಕಟ್ಟೆಯಲ್ಲಿ ಹೋಂಡಾ ಕಂಪನಿಯು 245,716 ಯುನಿಟ್‌ಗಳನ್ನು ಮಾರಾಟಗೊಳಿಸಿತ್ತು.

MOST READ: ಪ್ರತಿ ಚಾರ್ಜ್‌ಗೆ ಬರೋಬ್ಬರಿ 240ಕಿ.ಮೀ ಮೈಲೇಜ್ ನೀಡುವ ಇವಿ ಸ್ಕೂಟರ್ ಬಿಡುಗಡೆ ಮಾಡಲಿದೆ ಓಲಾ

ದ್ವಿಚಕ್ರ ವಾಹನಗಳ ಖರೀದಿ ಮೇಲೆ ಆಕರ್ಷಕ ಆಫರ್ ಘೋಷಿಸಿದ ಹೋಂಡಾ ಮೋಟಾರ್‌ಸೈಕಲ್

ಹೋಂಡಾ ಕಂಪನಿಯು ಕಳೆದ ತಿಂಗಳಿನಲ್ಲಿ 16,000 ಯುನಿಟ್‌ಗಳನ್ನು ವಿದೇಶಿ ಮಾರುಕಟ್ಟೆಗಳಿಗೆ ರಫ್ತುಗೊಳಿಸಿದ್ದು, ಹೊಸ ಉತ್ಪನ್ನಗಳೊಂದಿಗೆ ಮುಂಬರುವ ದಿನಗಳಲ್ಲಿ ಮತ್ತಷ್ಟು ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.

Article Published On: Friday, April 16, 2021, 13:22 [IST]
English summary
Honda Announces Low Cost Down Payment & Lowest Interest Rate Finance Schemes In India.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+