ಅಕ್ಟೋಬರ್ ತಿಂಗಳಿನಲ್ಲಿ ದಾಖಲೆ ಮಟ್ಟದ ಮಾರಾಟ ಕಂಡ Honda CB350 ಬೈಕ್‌ಗಳು

ಜನಪ್ರಿಯ ದ್ವಿಚಕ್ರ ವಾಹನ ತಯಾರಕ ಕಂಪನಿಯಾದ ಹೋಂಡಾ ಮೋಟಾರ್‌ಸೈಕಲ್ ಮತ್ತು ಸ್ಕೂಟರ್ ಇಂಡಿಯಾ ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಭಾರತದಲ್ಲಿ ಸಿಬಿ350 ಹೈನೆಸ್ ಅನ್ನು ಪರಿಚಯಿಸಿತು. ಈ ವರ್ಷದ ಫೆಬ್ರವರಿಯಲ್ಲಿ, ಬ್ರ್ಯಾಂಡ್ ತನ್ನ ಸರಣಿಗೆ ಹೊಸ ಸಿಬಿ350 ಆರ್‌‌ಎಸ್ ಅನ್ನು ಸೇರಿಸಿತು.

ಅಕ್ಟೋಬರ್ ತಿಂಗಳಿನಲ್ಲಿ ದಾಖಲೆ ಮಟ್ಟದ ಮಾರಾಟ ಕಂಡ Honda CB350 ಬೈಕ್‌ಗಳು

ಈ ಎರಡೂ ರೆಟ್ರೊ ಶೈಲಿಯ ಬೈಕ್‌ಗಳು ಆಕರ್ಷಕ ಮಾದರಿಗಳಾಗಿವೆ, ಸಿಬಿ350 ಸರಣಿಯು ಭಾರತೀಯ ಮಾರುಕಟ್ಟೆಯಲ್ಲಿ ಬಲವಾದ ಜನಪ್ರಿಯತೆಯನ್ನು ಗಳಿಸುವಲ್ಲಿ ಯಶಸ್ವಿಯಾಗಿದೆ. ಕಳೆದ ತಿಂಗಳು, ಹೋಂಡಾ ಕಂಪನಿಯು ಭಾರತದಲ್ಲಿ ಸಿಬಿ350 ಸರಣಿಯ ಒಟ್ಟು 7,152 ಯುನಿಟ್‌ಗಳನ್ನು ಮಾರಾಟಗೊಳಿಸಿವೆ. ಇನ್ನು ಕಳೆದ ವರ್ಷದ ಅಕ್ಟೋಬರ್ ತಿಂಗಳಿನಲ್ಲಿ ಹೋಂಡಾ ಕಂಪನಿಯು ಸಿಬಿ350 ಸರಣಿಯು 1,290 ಯುನಿಟ್‌ಗಳನ್ನು ಮಾರಾಟಗೊಳಿಸಿತ್ತು. ಇದನ್ನು ಕಳೆದ ವರ್ಷದ ಮಾರಾಟಕ್ಕೆ ಹೋಲಿಸಿದರೆ ಶೇ.454.42 ರಷ್ಟು ಬೆಳವಣಿಗೆಯನ್ನು ಸಾಧಿಸಿದೆ.

ಅಕ್ಟೋಬರ್ ತಿಂಗಳಿನಲ್ಲಿ ದಾಖಲೆ ಮಟ್ಟದ ಮಾರಾಟ ಕಂಡ Honda CB350 ಬೈಕ್‌ಗಳು

ಮಾರಾಟದ ಕಾರ್ಯಕ್ಷಮತೆಯು ಸಾಕಷ್ಟು ಪ್ರಭಾವಶಾಲಿಯಾಗಿದೆ, ಆದರೂ ರಾಯಲ್ ಎನ್‌ಫೀಲ್ಡ್ ತನ್ನ ಮುನ್ನಡೆಯನ್ನು ಕಾಯ್ದುಕೊಂಡಿದೆ. ಭಾರತೀಯ ಮಾರುಕಟ್ಟೆಯ 350ಸಿಸಿ ಬೈಕ್‌ಗಳ ವಿಭಾಗದಲ್ಲಿ ಕ್ಲಾಸಿಕ್ 350 ಮುನ್ನಡೆಯನ್ನು ಕಾಯ್ದುಕೊಂಡಿದೆ. ಹೋಂಡಾ ಸಿಬಿ350 ಸರಣಿಯ ಕಳೆದ ವರ್ಷದ ಮಾರಾಟಕ್ಕೆ ಹೋಲಿಸಿದರೆ ದಾಖಲೆಯ ಮಟ್ಟದ ಬೆಳವಣಿಗೆಯನ್ನು ಸಾಧಿಸಿದೆ.

ಅಕ್ಟೋಬರ್ ತಿಂಗಳಿನಲ್ಲಿ ದಾಖಲೆ ಮಟ್ಟದ ಮಾರಾಟ ಕಂಡ Honda CB350 ಬೈಕ್‌ಗಳು

ಹೋಂಡಾ ಹೈನೆಸ್ ಸಿಬಿ350 ಮತ್ತು ಸಿಬಿ350 ಆರ್‌‌ಎಸ್ ಬೈಕ್‌ಗಳಲ್ಲಿ ಅದೇ 348.6ಸಿಸಿ, ಸಿಂಗಲ್-ಸಿಲಿಂಡರ್ ಏರ್-ಕೂಲ್ಡ್ ಎಂಜಿನ್ ಅನ್ನು ಈ ಬೈಕಿನಲ್ಲಿ ಅಳವಡಿಸಲಾಗಿದೆ. ಈ ಎಂಜಿನ್ 5,500 ಆರ್‌ಪಿಎಂನಲ್ಲಿ 20.78 ಬಿಹೆಚ್‌ಪಿ ಮತ್ತು 3,000 ಆರ್‌ಪಿಎಂನಲ್ಲಿ 30 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಅಕ್ಟೋಬರ್ ತಿಂಗಳಿನಲ್ಲಿ ದಾಖಲೆ ಮಟ್ಟದ ಮಾರಾಟ ಕಂಡ Honda CB350 ಬೈಕ್‌ಗಳು

ಈ ಎಂಜಿನ್ ಅನ್ನು 5-ಸ್ಪೀಡ್ ಗೇರ್‌ಬಾಕ್ಸ್‌ಗೆ ಜೋಡಿಸಲಾಗಿದೆ. ಇದರೊಂದಿಗೆ ಸ್ಲಿಪ್ಪರ್ ಕ್ಲಚ್ ಅನ್ನು ಪಡೆಯುತ್ತದೆ, ಇದು ಕ್ಲಚ್ ಲಿವರ್ ಕಾರ್ಯಾಚರಣೆಯ ಹೊರೆ ಕಡಿಮೆಮಾಡಿ ಗೇರ್ ವರ್ಗಾವಣೆಯನ್ನು ಸುಗಮಗೊಳಿಸುತ್ತದೆ.

ಅಕ್ಟೋಬರ್ ತಿಂಗಳಿನಲ್ಲಿ ದಾಖಲೆ ಮಟ್ಟದ ಮಾರಾಟ ಕಂಡ Honda CB350 ಬೈಕ್‌ಗಳು

ಹೋಂಡಾ ಹೈನೆಸ್ ಸಿಬಿ350 ಬೈಕ್ ಬಗ್ಗೆ ಹೇಳುವುದಾದರೆ, ಇದು ಆಕರ್ಷಕ ಬೆಲೆ ಮತ್ತು ಪ್ರೀಮಿಯಂ ಫೀಚರ್ಸ್ ಗ್ರಾಹಕರನ್ನು ಸೆಳೆಯುವಲ್ಲಿ ಯಶಸ್ವಿಯಾಗುತ್ತಿದೆ. ಹೈನೆಸ್ ಸಿಬಿ 350 ಬೈಕಿನ ವಿನ್ಯಾಸವು ಹಳೆಯ ಕ್ಲಾಸಿಕ್ ಸಿಬಿ ಬೈಕ್ ಸರಣಿಯನ್ನು ನೆನಪಿಸುತ್ತದೆ. ರೌಂಡ್ ಎಲ್ಇಡಿ ಹೆಡ್‌ಲ್ಯಾಂಪ್ ಕ್ರೋಮ್ ಫ್ರಂಟ್ ಫೆಂಡರ್‌ ಹಾಗೂ ಫೋರ್ಕ್‌ಗಳನ್ನು ಪಡೆದುಕೊಂಡಿದೆ.

ಅಕ್ಟೋಬರ್ ತಿಂಗಳಿನಲ್ಲಿ ದಾಖಲೆ ಮಟ್ಟದ ಮಾರಾಟ ಕಂಡ Honda CB350 ಬೈಕ್‌ಗಳು

ಈ ಹೈನೆಸ್ ಸಿಬಿ350 ಬೈಕಿನಲ್ಲಿ 15-ಲೀಟರಿನ ಫ್ಯೂಯಲ್ ಟ್ಯಾಂಕ್ ಜೋಡಣೆಯೊಂದಿಗೆ ಹೊಂಡಾ ಬ್ಯಾಡ್ಜಿಂಗ್ ಅಳವಡಿಸಲಾಗಿದೆ. ಇನ್ನು ಇದರಲ್ಲಿ ಎಂಜಿನ್ ಕವರ್, ಎಕ್ಸಾಸ್ಟ್ ಸೇರಿದಂತೆ ಈ ಬೈಕಿನ ಹಲವು ಭಾಗಗಳಲ್ಲಿ ಕ್ರೋಮ್ ಬಣ್ಣವನ್ನು ನೀಡಲಾಗಿದೆ. ಎಕ್ಸಾಸ್ಟ್ ಕ್ಲಾಸಿಕ್ ಲೋ-ಪಿಚ್ ಥಂಪಿ ನೋಟ್ ಹೊಂದಿದೆ. ಈ ಬೈಕ್ ವಿನ್ಯಾಸವನ್ನು ಸರಳಗೊಳಿಸಲು ಹಿಂಭಾಗವನ್ನು ಚಿಕ್ಕದು ಮಾಡಲಾಗಿದೆ.

ಅಕ್ಟೋಬರ್ ತಿಂಗಳಿನಲ್ಲಿ ದಾಖಲೆ ಮಟ್ಟದ ಮಾರಾಟ ಕಂಡ Honda CB350 ಬೈಕ್‌ಗಳು

ಹೈನೆಸ್ ಸಿಬಿ350 ಬೈಕಿನಲ್ಲಿ 350ಸಿಸಿ ಸೆಗ್ಮೆಂಟಿನಲ್ಲಿ ಮೊದಲ ಬಾರಿಗೆ ರಿಂಗ್-ಟೈಪ್ ವಿಂಕರ್ ಗಳನ್ನು ನೀಡಲಾಗಿದ್ದು, ಅಸಿಸ್ಟ್ ಸ್ಲಿಪ್ಪರ್-ಕ್ಲಚ್, ಎಂಜಿನ್ ಸ್ಟಾರ್ಟ್/ಸ್ಟಾಪ್ ಸ್ವಿಚ್, ಯುಎಸ್‌ಬಿ ಟೈಪ್-ಸಿ ಚಾರ್ಜಿಂಗ್ ಪೋರ್ಟ್‌, ಹೋಂಡಾ ಸೆಲೆಕ್ಟಬಲ್ ಟಾರ್ಕ್ ಕಂಟ್ರೋಲ್ ಸಿಸ್ಟಂ ಸೇರಿದಂತೆ ಹಲವಾರು ಫೀಚರ್ಸ್‌ಗಳಿವೆ.

ಅಕ್ಟೋಬರ್ ತಿಂಗಳಿನಲ್ಲಿ ದಾಖಲೆ ಮಟ್ಟದ ಮಾರಾಟ ಕಂಡ Honda CB350 ಬೈಕ್‌ಗಳು

ಹೋಂಡಾ ಹೈನೆಸ್ ಸಿಬಿ350 ಬೈಕ್ ಬೇಸ್ ಮಾದರಿಯನ್ನು ಪ್ರೆಷಿಯಸ್ ರೆಡ್ ಮೆಟಾಲಿಕ್, ಮ್ಯಾಟ್ ಮಾರ್ಷಲ್ ಗ್ರೀನ್ ಮೆಟಾಲಿಕ್ ಹಾಗೂ ಪರ್ಲ್ ನೈಟ್ ಸ್ಟಾರ್ ಬ್ಲ್ಯಾಕ್ ಎಂಬ ಮೂರು ಸಿಂಗಲ್-ಟೋನ್ ಬಣ್ಣಗಳಲ್ಲಿ ಮಾರಾಟ ಮಾಡಲಾಗುವುತ್ತಿದ್ದರೆ, ಟಾಪ್-ಎಂಡ್ ಡಿಎಲ್ಎಕ್ಸ್ ಪ್ರೊ ಮಾದರಿಯನ್ನು ಮ್ಯಾಟ್ ಗ್ರೇ ಮೆಟಾಲಿಕ್, ಮ್ಯಾಟ್ ಸ್ಟೀಲ್ ಬ್ಲ್ಯಾಕ್ ಮೆಟಾಲಿಕ್, ವರ್ಚುವಸ್ ವೈಟ್ ಅಥ್ಲೆಟಿಕ್ ಬ್ಲೂ ಮೆಟಾಲಿಕ್ ಹಾಗೂ ಸ್ಪಿಯರ್ ಸಿಲ್ವರ್ ಮೆಟಾಲಿಕ್ ಪರ್ಲ್ ನೈಟ್ ಸ್ಟಾರ್ ಮೆಟಾಲಿಕ್ ಎಂಬ ಮೂರು ಡ್ಯುಯಲ್-ಟೋನ್ ಬಣ್ಣಗಳಲ್ಲಿ ಮಾರಾಟ ಮಾಡಲಾಗುತ್ತದೆ.

ಅಕ್ಟೋಬರ್ ತಿಂಗಳಿನಲ್ಲಿ ದಾಖಲೆ ಮಟ್ಟದ ಮಾರಾಟ ಕಂಡ Honda CB350 ಬೈಕ್‌ಗಳು

ಇನ್ನು ಹೋಂಡಾ ಸಿಬಿ350 ಆರ್‌ಎಸ್ ಬೈಕಿನ ಬಗ್ಗೆ ಹೇಳುವುದಾದರೆ, ಈ ಬೈಕಿನಲ್ಲಿ ಬೃಹತ್ ಫ್ಯೂಯಲ್ ಟ್ಯಾಂಕ್ 7-ವೈ ಆಕಾರದ ಅಲಾಯ್ ವ್ಹೀಲ್ ಗಳ ಮೇಲೆ ಹೋಂಡಾ ಬ್ಯಾಡ್ಜ್ ಅನ್ನು ಹೊಂದಿದೆ, ಇದರೊಂದಿಗೆ ದುಂಡಗಿನ ಆಕಾರದ ಎಲ್‌ಇಡಿ ಹೆಡ್‌ಲ್ಯಾಂಪ್, ಎಲ್‌ಇಡಿ ವಿಂಕರ್‌ಗಳು ಮತ್ತು ಅಂಡರ್ ಸೀಟ್ ನಯವಾದ ಎಲ್‌ಇಡಿ ಟೈಲ್ ಲ್ಯಾಂಪ್ ಅನ್ನು ಹೊಂದಿದೆ.

ಅಕ್ಟೋಬರ್ ತಿಂಗಳಿನಲ್ಲಿ ದಾಖಲೆ ಮಟ್ಟದ ಮಾರಾಟ ಕಂಡ Honda CB350 ಬೈಕ್‌ಗಳು

ಈ ಬೈಕಿನ ಮುಂಭಾಗ ಮತ್ತು ಹಿಂಭಾಗದಲ್ಲಿ ಹಗುರವಾದ ಬ್ಲ್ಯಾಕ್ ಫೆಂಡರ್ ಅನ್ನು ಸಹ ಪಡೆಯುತ್ತದೆ, ಇದು ಒಟ್ಟಾರೆ ತೂಕವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇನ್ನು ಸ್ಪೋರ್ಟಿ ಲುಕಿಂಗ್ ಗ್ರಾಬ್ ರೈಲ್ ಅನ್ನು ಹೊಂದಿದೆ.

ಅಕ್ಟೋಬರ್ ತಿಂಗಳಿನಲ್ಲಿ ದಾಖಲೆ ಮಟ್ಟದ ಮಾರಾಟ ಕಂಡ Honda CB350 ಬೈಕ್‌ಗಳು

ಹೋಂಡಾ ಸಿಬಿ350 ಆರ್‌ಎಸ್ ಬೈಕಿನಲ್ಲಿ ಸಿಂಗಲ್-ಪಾಡ್ ಇನ್ಸ್ ಟ್ರೂಮೆಂಟ್ ಕನ್ಸೋಲ್ ಅನ್ನು ಅನಲಾಗ್ ಕೌಂಟರ್ ಮತ್ತು ಸಣ್ಣ ಡಿಜಿಟಲ್ ಡಿಸ್ ಪ್ಲೇಯನ್ನು ಅಳವಡಿಸಲಾಗಿದೆ. ಇದು ಕನ್ಸೋಲ್ ಎಚ್‌ಎಸ್‌ಟಿಸಿ, ಎಬಿಎಸ್, ಸೈಡ್ ಸ್ಟ್ಯಾಂಡ್ ಇಂಡಿಕೇಟರ್, ಇಕೋ ಇಂಡಿಕೇಟರ್, ರಿಯಲ್-ಟೈಮ್ ಮೈಲೇಜ್, ಸರಾಸರಿ ಮೈಲೇಜ್ ಮತ್ತು ಗೇರ್ ಪೋಷಿಸನ್ ವಿವರಗಳನ್ನು ನೀಡುತ್ತದೆ. ಇದು ಎಚ್‌ಎಸ್‌ವಿಸಿಎಸ್ ಸಿಸ್ಸಂ ಅನ್ನು ಒಳಗೊಂಡಿದೆ.

ಅಕ್ಟೋಬರ್ ತಿಂಗಳಿನಲ್ಲಿ ದಾಖಲೆ ಮಟ್ಟದ ಮಾರಾಟ ಕಂಡ Honda CB350 ಬೈಕ್‌ಗಳು

ಹೊಸ ಹೋಂಡಾ ಸಿಬಿ350 ಆರ್‌ಎಸ್ ಬೈಕ್ ಹಾಫ್ ಡ್ಯುಪ್ಲೆಕ್ಸ್ ಕ್ರೆಡಲ್ ಚಾಸಿಸ್ ಅನ್ನು ಆಧರಿಸಿದೆ. ಇನ್ನು ಇದರ ಸಸ್ಪೆಂಕ್ಷನ್ ಸೆಟಪ್ ಗಾಗಿ, ಮುಂಭಾಗದಲ್ಲಿ ಟೆಲಿಸ್ಕೋಪಿಕ್ ಫೋರ್ಕ್ಸ್ ಮತ್ತು ಹಿಂಭಾಗದಲ್ಲಿ ಟ್ವಿನ್--ಹೈಡ್ರಾಲಿಕ್ ಅನ್ನು ಪಡೆಯುತ್ತದೆ. ಈ ಬೈಕಿನ ಬ್ರೇಕಿಂಗ್ ಸಿಸ್ಟಂ ಬಗ್ಗೆ ಹೇಳುವುದಾದರೆ, ಇದರ ಮುಂಭಾಗದಲ್ಲಿ 310ಎಂಎಂ ಡಿಸ್ಕ್ ಬ್ರೇಕ್ ಅನ್ನು ನೀಡಿದರೆ, ಹಿಂಭಾಗದಲ್ಲಿ 240ಎಂಎಂ ಡಿಸ್ಕ್ ಬ್ರೇಕ್ ಅನ್ನು ನೀಡಿದೆ. ಇದರೊಂದಿಗೆ ಹೆಚ್ಚಿನ ಸುರಕ್ಷತೆಗಾಗಿ ಎಬಿಎಸ್(ಆಂಟಿ-ಲಾಕ್ ಬ್ರೇಕಿಂಗ್ ಸಿಸ್ಟಂ) ಸ್ಟ್ಯಾಂಡರ್ಡ್ ಆಗಿ ನೀಡಲಾಗಿದೆ.

Most Read Articles

Kannada
English summary
Honda cb350 sales growth over 454 percent in october 2021 details
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X