ಗ್ರಾಜಿಯಾ 125 ಸ್ಕೂಟರ್ ಬೆಲೆಯನ್ನು ಹೆಚ್ಚಿಸಿದ ಹೋಂಡಾ ಮೋಟಾರ್‌ಸೈಕಲ್

ಹೋಂಡಾ ಮೋಟಾರ್‌ಸೈಕಲ್ ಮತ್ತು ಸ್ಕೂಟರ್ ಇಂಡಿಯಾ ಕಂಪನಿಯು ತನ್ನ ಸರಣಿಯಲ್ಲಿರುವ ದ್ವಿಚಕ್ರ ವಾಹನಗಳ ಬೆಲೆಗಳನ್ನು ಭಾರತೀಯ ಮಾರುಕಟ್ಟೆಯಲ್ಲಿ ಪರಿಷ್ಕರಿಸಿದೆ. ಇದರ ಪರಿಣಾಮವಾಗಿ ಜನಪ್ರಿಯ ಗ್ರಾಜಿಯಾ 125 ಮಾದರಿಯು ದುಬಾರಿಯಾಗಿದೆ.

ಗ್ರಾಜಿಯಾ 125 ಸ್ಕೂಟರ್ ಬೆಲೆಯನ್ನು ಹೆಚ್ಚಿಸಿದ ಹೋಂಡಾ ಮೋಟಾರ್‌ಸೈಕಲ್

ಹೋಂಡಾ ಗ್ರಾಜಿಯಾ 125 ಸ್ಕೂಟರ್ ಅನ್ನು ಸ್ಟ್ಯಾಂಡರ್ಡ್ ಮತ್ತು ಡಿಲಕ್ಸ್ ಎಂಬ ಎರಡು ರೂಪಾಂತರಗಳಲ್ಲಿ ಮಾರಾಟ ಮಾಡಲಾಗುತ್ತಿದೆ. ಇದೀಗ ಹೋಂಡಾ ಗ್ರಾಜಿಯಾ 125 ಸ್ಕೂಟರ್ ಡ್ರಮ್ ರೂಪಾಂತರದ ಬೆಲೆಯನ್ನು ರೂ.903 ಗಳವರೆಗೆ ಹೆಚ್ಚಿಸಲಾಗಿದ್ದು, ಇದೀಗ ಇದರ ಬೆಲೆಯು ರೂ.74,815 ಗಳಾಗಿದೆ. ಇನ್ನು ಸ್ಕೂಟರ್‌ನ ಡಿಸ್ಕ್ ರೂಪಾಂತರದ ಬೆಲೆಯು ರೂ.1,162 ಗಳವರೆಗೆ ಹೆಚ್ಚಿಸಲಾಗಿದೆ. ಇದೀಗ ಡಿಸ್ಕ್ ರೂಪಾಂತರದ ಬೆಲೆ ರೂ.82,140 ಗಳಾಗಿದೆ. ಈ ಎಲ್ಲಾ ಬೆಲೆಗಳು ಎಕ್ಸ್ ಶೋರೂಂ ಪ್ರಕಾರವಾಗಿದೆ.

ಗ್ರಾಜಿಯಾ 125 ಸ್ಕೂಟರ್ ಬೆಲೆಯನ್ನು ಹೆಚ್ಚಿಸಿದ ಹೋಂಡಾ ಮೋಟಾರ್‌ಸೈಕಲ್

ಹೋಂಡಾ ತನ್ನ ಬಿಎಸ್-6 ಗ್ರಾಜಿಯಾ 125 ಸ್ಕೂಟರ್ ಅನ್ನು ದೇಶಿಯ ಮಾರುಕಟ್ಟೆಯಲ್ಲಿ ಜುಲೈ ತಿಂಗಳಲ್ಲಿ ಬಿಡುಗಡೆಗೊಳಿಸಿತ್ತು. ಈ ಹೋಂಡಾ ಗ್ರಾಜಿಯಾ 125 ಸ್ಕೂಟರ್ ಮ್ಯಾಟ್ ಸೈಬರ್ ಯೆಲ್ಲೊ, ಪರ್ಲ್ ಸ್ಪಾರ್ಟನ್ ರೆಡ್, ಪರ್ಲ್ ಸೈರನ್ ಬ್ಲೂ ಮತ್ತು ಮ್ಯಾಟ್ ಆಕ್ಸಿಸ್ ಗ್ರೇ ಎಂಬ ನಾಲ್ಕು ಬಣ್ಣಗಳ ಆಯ್ಕೆಯಲ್ಲಿ ಲಭ್ಯವಿದೆ.

MOST READ: ಯೂನಿಕಾರ್ನ್ ಬೈಕಿನ ಬೆಲೆ ಹೆಚ್ಚಿಸಿದ ಹೋಂಡಾ ಮೋಟಾರ್‌ಸೈಕಲ್

ಗ್ರಾಜಿಯಾ 125 ಸ್ಕೂಟರ್ ಬೆಲೆಯನ್ನು ಹೆಚ್ಚಿಸಿದ ಹೋಂಡಾ ಮೋಟಾರ್‌ಸೈಕಲ್

ಬಿಎಸ್-6 ಗ್ರಾಜಿಯಾ 125 ಸ್ಕೂಟರ್‌ನಲ್ಲಿ 125 ಸಿಸಿ ಹೆಚ್‌ಇಟಿ(ಹೋಂಡಾ ಇಕೋ ಟೆಕ್ನಾಲಜಿ) ಬಿಎಸ್‌ವಿಐ ಪಿಜಿಎಂ-ಎಫ್‌ಐ ಎಂಜಿನ್ ಅನ್ನು ಹೊಂದಿದೆ. ಇದರಲ್ಲಿ ಪೇಟೆಂಟ್ ಪಡೆದ ಎಸಿಜಿ ಸ್ಟಾರ್ಟರ್ ಮೋಟರ್ ಇದೆ. ಇದು ಪ್ರತಿ ಬಾರಿಯೂ ತ್ವರಿತ, ಮತ್ತು ಜೋಲ್ಟ್-ಫ್ರೀ ಸ್ಟಾರ್ಟ್ ಆಗುತ್ತದೆ.

ಗ್ರಾಜಿಯಾ 125 ಸ್ಕೂಟರ್ ಬೆಲೆಯನ್ನು ಹೆಚ್ಚಿಸಿದ ಹೋಂಡಾ ಮೋಟಾರ್‌ಸೈಕಲ್

ಬಿಎಸ್ 6 ಹೋಂಡಾ ಗ್ರಾಜಿಯಾ 125 ಸ್ಕೂಟರ್‌ನಲ್ಲಿ ಪಾಸ್-ಸ್ವಿಚ್, ಹೊಸ ಎಂಜಿನ್ ಸ್ಟಾರ್ಟ್/ ಸ್ಟಾಪ್ ಸ್ವಿಚ್, ಸೀಟ್‌ಗಾಗಿ ಮಲ್ಟಿ-ಫಂಕ್ಷನಲ್ ಸ್ವಿಚ್ ಮತ್ತು ಫ್ಯೂಯಲ್ ಲಿಡ್ ಅನ್ನು ಒಳಗೊಂಡಿದೆ.

MOST READ: ದುಬಾರಿಯಾಯ್ತು ಜನಪ್ರಿಯ ಬಿಎಸ್-6 ಯಮಹಾ ಎಂಟಿ-15 ಬೈಕ್

ಗ್ರಾಜಿಯಾ 125 ಸ್ಕೂಟರ್ ಬೆಲೆಯನ್ನು ಹೆಚ್ಚಿಸಿದ ಹೋಂಡಾ ಮೋಟಾರ್‌ಸೈಕಲ್

ಬಿಎಸ್ 6 ಹೋಂಡಾ ಗ್ರಾಜಿಯಾ 125 ಸ್ಕೂಟರ್‌ನಲ್ಲಿ 124 ಸಿಸಿ ಸಿಂಗಲ್ ಸಿಲಿಂಡರ್ ಏರ್-ಕೂಲ್ಡ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 6000 ಆರ್‍ಪಿಎಂನಲ್ಲಿ 8 ಬಿಹೆಚ್‍ಪಿ ಪವರ್ ಮತ್ತು 5000 ಆರ್‍ಪಿಎಂನಲ್ಲಿ 10.3 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಈ ಎಂಜಿನ್ ಅನ್ನು ವಿ-ಟೈಪ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ಗೆ ಜೋಡಿಸಲಾಗಿದೆ.

ಗ್ರಾಜಿಯಾ 125 ಸ್ಕೂಟರ್ ಬೆಲೆಯನ್ನು ಹೆಚ್ಚಿಸಿದ ಹೋಂಡಾ ಮೋಟಾರ್‌ಸೈಕಲ್

ಬಿಎಸ್ 6 ಹೋಂಡಾ ಗ್ರಾಜಿಯಾ 125 ಸ್ಕೂಟರ್‌ನಲ್ಲಿ ಸಸ್ಪೆಂಕ್ಷನ್ ಗಾಗಿ ಟೆಲಿಸ್ಕೋಪಿಕ್ ಫ್ರಂಟ್ ಫೋರ್ಕ್ಸ್ ಮತ್ತು ಹಿಂಭಾಗದಲ್ಲಿ ಮೂರು-ರೀತಿಯಲ್ಲಿ ಹೊಂದಾಣಿಕೆ ಮಾಡಬಹುದಾದ ಸ್ಪ್ರಿಂಗ್-ಲೋಡೆಡ್ ಸಸ್ಪೆಂಕ್ಷನ್ ಸೆಟಪ್ ಅನ್ನು ಅಳವಡಿಸಿದ್ದಾರೆ.

MOST READ: ದುಬಾರಿಯಾಯ್ತು ಬಿಎಸ್-6 ಟಿವಿಎಸ್ ಎನ್‌ಟಾರ್ಕ್ 125 ಸ್ಕೂಟರ್

ಗ್ರಾಜಿಯಾ 125 ಸ್ಕೂಟರ್ ಬೆಲೆಯನ್ನು ಹೆಚ್ಚಿಸಿದ ಹೋಂಡಾ ಮೋಟಾರ್‌ಸೈಕಲ್

ಇನ್ನು ಈ ಸ್ಕೂಟರ್‌ನಲ್ಲಿ ಬ್ರೇಕಿಂಗ್ ಗಾಗಿ ಮುಂಭಾಗದಲ್ಲಿ 190 ಎಂಎಂ ಡ್ರಮ್ ಬ್ರೇಕ್ ಮತ್ತು ಹಿಂಭಾಗದಲ್ಲಿ 130 ಎಂಎಂ ಡ್ರಮ್ ಬ್ರೇಕ್ ಅನ್ನು ಅಳವಡಿಸಲಾಗಿದೆ. ಹೋಂಡಾ ಗ್ರಾಜಿಯಾ 125 ಸ್ಕೂಟರ್ ಬ್ರ್ಯಾಂಡ್‌ನ ಪ್ರೀಮಿಯಂ 125 ಸಿಸಿ ವಿಭಾಗದಲ್ಲಿ ಜನಪ್ರಿಯ ಸ್ಕೂಟರ್ ಆಗಿದೆ.

ಗ್ರಾಜಿಯಾ 125 ಸ್ಕೂಟರ್ ಬೆಲೆಯನ್ನು ಹೆಚ್ಚಿಸಿದ ಹೋಂಡಾ ಮೋಟಾರ್‌ಸೈಕಲ್

ಈ ಹೊಸ ಹೋಂಡಾ ಗ್ರಾಜಿಯಾ 125 ದೇಶಿಯ ಮಾರುಕಟ್ಟೆಯಲ್ಲಿ ಯಮಹಾ ಫ್ಯಾಸಿನೊ 125, ಟಿವಿಎಸ್ ಎನ್‍ಟಾರ್ಕ್ 125 ಮತ್ತು ಸುಜುಕಿ ಬರ್ಗ್‌ಮ್ಯಾನ್‌ ಸ್ಟ್ರೀಟ್ 125 ಸ್ಕೂಟರ್ ಗಳಿಗೆ ಪೈಪೋಟಿ ನೀಡುತ್ತದೆ.

Most Read Articles

Kannada
English summary
Honda Grazia 125 BS6 Prices Hiked. Read In Kananda.
Story first published: Monday, January 18, 2021, 9:22 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X