Just In
- 2 hrs ago
ಅನಾವರಣವಾಯ್ತು ಫೋಕ್ಸ್ವ್ಯಾಗನ್ ಗಾಲ್ಫ್ ಜಿಟಿಐ ಕ್ಲಬ್ಸ್ಪೋರ್ಟ್ 45 ಕಾರು
- 4 hrs ago
35 ಸಾವಿರಕ್ಕೂ ಹೆಚ್ಚು ಸಿಬ್ಬಂದಿಗಳಿಗೆ ಉಚಿತ ಲಸಿಕೆ ನೀಡಲು ಮುಂದಾದ ಟಿವಿಎಸ್ ಕಂಪನಿ
- 6 hrs ago
ವಾರದ ಪ್ರಮುಖ ಸುದ್ದಿ: ಏರ್ಬ್ಯಾಗ್ ಕಡ್ಡಾಯ, ಬಿಡುಗಡೆಗೆ ಸಜ್ಜಾದ ಸಿಟ್ರನ್, ಟೊಯೊಟಾ ನೌಕರರ ಮುಷ್ಕರ ಅಂತ್ಯ!
- 16 hrs ago
ವೆಂಟೊ ಟ್ರೆಂಡ್ಲೈನ್ ವೆರಿಯೆಂಟ್ ಬುಕ್ಕಿಂಗ್ ಪ್ರಕ್ರಿಯೆಗೆ ಸ್ಥಗಿತಗೊಳಿಸಿದ ಫೋಕ್ಸ್ವ್ಯಾಗನ್
Don't Miss!
- News
ಉತ್ತರಾಖಂಡ್: ದಿಢೀರ್ ಕೋರ್ ಕಮಿಟಿ ಸಭೆ ನಡೆಸಿದ ಬಿಜೆಪಿ
- Sports
ಐಪಿಎಲ್ 2021: ಈ ಬಾರಿಯ ಆವೃತ್ತಿಯ ಕೆಲ ಗಮನಾರ್ಹ ಬದಲಾವಣೆಗಳು
- Movies
ದೀದಿ ಸಾಮ್ರಾಜ್ಯದಲ್ಲಿ ಕಮಲದ ಕೈ ಹಿಡಿದ ಬಾಲಿವುಡ್ ನಟ ಮಿಥುನ್ ಚಕ್ರವರ್ತಿ
- Finance
ದಕ್ಷಿಣ ಭಾರತದ ಅತಿದೊಡ್ಡ ಆಭರಣ ರೀಟೈಲರ್ ಮೇಲೆ ಐಟಿ ದಾಳಿ
- Lifestyle
"ವಾರ ಭವಿಷ್ಯ: ಈ ವಾರ 12 ರಾಶಿಗಳ ರಾಶಿಫಲ ಹೇಗಿದೆ?"
- Education
Mandya District Court Recruitment 2021: 10 ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಆಕರ್ಷಕ ವಿನ್ಯಾಸದಲ್ಲಿ ಹೋಂಡಾ ಗ್ರಾಜಿಯಾ 125 ಸ್ಪೋರ್ಟ್ಸ್ ಎಡಿಷನ್ ಬಿಡುಗಡೆ
ಹೋಂಡಾ ಮೋಟಾರ್‌ಸೈಕಲ್ & ಸ್ಕೂಟರ್ಸ್ ಇಂಡಿಯಾ (ಎಚ್‌ಎಂಎಸ್‌ಐ) ತನ್ನ ಜನಪ್ರಿಯ ಗ್ರಾಜಿಯಾ 125 ಸ್ಕೂಟರ್‌ನ ಹೊಸ ಸ್ಪೋರ್ಟ್ಸ್ ಎಡಿಷನ್ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದೆ, ಈ ಹೊಸ ಹೋಂಡಾ ಗ್ರಾಜಿಯಾ 125 ಸ್ಪೋರ್ಟ್ಸ್ ಎಡಿಷನ್ ಬೆಲೆಯು ಗುರುಗ್ರಾಮ್ ಎಕ್ಸ್ ಶೋರೂಂ ಪ್ರಕಾರ ರೂ.82,564 ಗಳಾಗಿದೆ.

ಹೊಸ ಹೋಂಡಾ ಗ್ರಾಜಿಯಾ 125 ಸ್ಪೋರ್ಟ್ಸ್ ಎಡಿಷನ್ ನಲ್ಲಿ ಹೊಸ ಬಾಡಿ ಗ್ರಾಫಿಕ್ಸ್‌ನೊಂದಿಗೆ ಎರಡು ಹೊಸ ಬಣ್ಣಗಳ ಆಯ್ಕೆಯಲ್ಲಿ ಲಭ್ಯವಿದೆ. ಇದರಲ್ಲಿ ಪರ್ಲ್ ನೈಟ್‌ಸ್ಟಾರ್ ಬ್ಲಾಕ್ ಮತ್ತು ಸ್ಪೋರ್ಟ್ಸ್ ರೆಡ್ ಸೇರಿವೆ. ಹೊಸ ಕಾಸ್ಮೆಟಿಕ್ ಅಪ್‌ಡೇಟ್‌ನ ಹೊರತಾಗಿ, ಸ್ಕೂಟರ್ ಇತರ ಎಲ್ಲ ಅಂಶಗಳು ಸ್ಟ್ಯಾಂಡರ್ಡ್ ಮಾದರಿಗೆ ಹೋಲುತ್ತದೆ. ಈ ಗ್ರಾಜಿಯಾ 125 ಸ್ಪೋರ್ಟ್ಸ್ ಎಡಿಷನ್ ತಾಜಾ ಗ್ರಾಫಿಕ್ಸ್ ನೊಂದಿಗೆ ಆಕರ್ಷಕ ಲುಕ್ ಅನ್ನು ಹೊಂದಿದೆ.

ಈ ಸ್ಕೂಟರ್‌ನಲ್ಲಿ ಅದೇ 125 ಸಿಸಿ ಹೆಚ್‌ಇಟಿ(ಹೋಂಡಾ ಇಕೋ ಟೆಕ್ನಾಲಜಿ) ಬಿಎಸ್‌ವಿಐ ಪಿಜಿಎಂ-ಎಫ್‌ಐ ಎಂಜಿನ್ ಅನ್ನು ಹೊಂದಿದೆ. ಇದರಲ್ಲಿ ಪೇಟೆಂಟ್ ಪಡೆದ ಎಸಿಜಿ ಸ್ಟಾರ್ಟರ್ ಮೋಟರ್ ಇದೆ. ಇದು ಪ್ರತಿ ಬಾರಿಯೂ ತ್ವರಿತ, ಮತ್ತು ಜೋಲ್ಟ್-ಫ್ರೀ ಸ್ಟಾರ್ಟ್ ಆಗುತ್ತದೆ.
MOST READ: ಯೂನಿಕಾರ್ನ್ ಬೈಕಿನ ಬೆಲೆ ಹೆಚ್ಚಿಸಿದ ಹೋಂಡಾ ಮೋಟಾರ್‌ಸೈಕಲ್

ಹೋಂಡಾ ಗ್ರಾಜಿಯಾ 125 ಸ್ಪೋರ್ಟ್ಸ್ ಎಡಿಷನ್ ನಲ್ಲಿ ಪಾಸ್-ಸ್ವಿಚ್, ಹೊಸ ಎಂಜಿನ್ ಸ್ಟಾರ್ಟ್/ ಸ್ಟಾಪ್ ಸ್ವಿಚ್, ಸೀಟ್‌ಗಾಗಿ ಮಲ್ಟಿ-ಫಂಕ್ಷನಲ್ ಸ್ವಿಚ್ ಮತ್ತು ಫ್ಯೂಯಲ್ ಲಿಡ್ ಅನ್ನು ಒಳಗೊಂಡಿದೆ.

ಇನ್ನು ಈ ಸ್ಕೂಟರ್‌ನಲ್ಲಿ 124 ಸಿಸಿ ಸಿಂಗಲ್ ಸಿಲಿಂಡರ್ ಏರ್-ಕೂಲ್ಡ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 6000 ಆರ್‍ಪಿಎಂನಲ್ಲಿ 8 ಬಿಹೆಚ್‍ಪಿ ಪವರ್ ಮತ್ತು 5000 ಆರ್‍ಪಿಎಂನಲ್ಲಿ 10.3 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಈ ಎಂಜಿನ್ ಅನ್ನು ವಿ-ಟೈಪ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ಗೆ ಜೋಡಿಸಲಾಗಿದೆ.
MOST READ: ಹೊಸ ಬಣ್ಣದ ಆಯ್ಕೆಯನ್ನು ಪಡೆದುಕೊಂಡ 2021ರ ಕವಾಸಕಿ ನಿಂಜಾ 1000 ಎಸ್‌ಎಕ್ಸ್ ಬೈಕ್

ಸ್ಕೂಟರ್‌ನಲ್ಲಿ ಸಸ್ಪೆಂಕ್ಷನ್ ಸೆಟಪ್ ಗಾಗಿ, ಮುಂಭಾಗದಲ್ಲಿ ಟೆಲಿಸ್ಕೋಪಿಕ್ ಫ್ರಂಟ್ ಫೋರ್ಕ್ಸ್ ಮತ್ತು ಹಿಂಭಾಗದಲ್ಲಿ ಮೂರು-ರೀತಿಯಲ್ಲಿ ಹೊಂದಾಣಿಕೆ ಮಾಡಬಹುದಾದ ಸ್ಪ್ರಿಂಗ್-ಲೋಡೆಡ್ ಸಸ್ಪೆಂಕ್ಷನ್ ಸೆಟಪ್ ಅನ್ನು ಅಳವಡಿಸಿದ್ದಾರೆ.

ಹೋಂಡಾ ಗ್ರಾಜಿಯಾ 125 ಸ್ಪೋರ್ಟ್ಸ್ ಎಡಿಷನ್ ಬ್ರೇಕಿಂಗ್ ಸಿಸ್ಟಂ ಬಗ್ಗೆ ಹೇಳುವುದಾದರೆ, ಮುಂಭಾಗದಲ್ಲಿ 190 ಎಂಎಂ ಡ್ರಮ್ ಬ್ರೇಕ್ ಮತ್ತು ಹಿಂಭಾಗದಲ್ಲಿ 130 ಎಂಎಂ ಡ್ರಮ್ ಬ್ರೇಕ್ ಅನ್ನು ಅಳವಡಿಸಲಾಗಿದೆ. ಹೋಂಡಾ ಗ್ರಾಜಿಯಾ 125 ಸ್ಕೂಟರ್ ಬ್ರ್ಯಾಂಡ್‌ನ ಪ್ರೀಮಿಯಂ 125 ಸಿಸಿ ವಿಭಾಗದಲ್ಲಿ ಜನಪ್ರಿಯ ಸ್ಕೂಟರ್ ಆಗಿದೆ.
MOST READ: ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್‍ಮಾಸ್ಟರ್ ಬೈಕ್

ಹೋಂಡಾ ಮೋಟಾರ್‌ಸೈಕಲ್ & ಸ್ಕೂಟರ್ಸ್ ಇಂಡಿಯಾ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಅಟ್ಸುಶಿ ಒಗಾಟಾ ಅವರು ಮಾತನಾಡಿ, ಪ್ರೀಮಿಯಂ ಸ್ಕೂಟರ್ ವಿಭಾಗಕ್ಕೆ ಹೊಸ ಮಾದರಿಯನ್ನು ಸೇರಿಸಿದ್ದೇವೆ. ಗ್ರಾಜಿಯಾದ ಹೊಸ ಸ್ಪೋರ್ಟ್ಸ್ ಎಡಿಷನ್ ಅನ್ನು ಬಿಡುಗಡೆಗೊಳಿಸಲು ನಮಗೆ ಸಂತಸವಾಗುತ್ತದೆ ಎಂದು ಹೇಳಿದರು.

ಹೋಂಡಾ ಗ್ರಾಜಿಯಾ 125 ಭಾರತೀಯ ಮಾರುಕಟ್ಟೆಯಲ್ಲಿ ಯಮಹಾ ಫ್ಯಾಸಿನೊ 125, ಟಿವಿಎಸ್ ಎನ್‍ಟಾರ್ಕ್ 125 ಮತ್ತು ಸುಜುಕಿ ಬರ್ಗ್‌ಮ್ಯಾನ್ ಸ್ಟ್ರೀಟ್ 125 ಸ್ಕೂಟರ್ ಗಳಿಗೆ ಪೈಪೋಟಿ ನೀಡುತ್ತದೆ. ಇನ್ನು ಮಾರುಕಟ್ಟೆಯಲ್ಲಿ ಹೆಚ್ಚಿನ ಗ್ರಾಹಕರನ್ನು ಸೆಳೆಯಲು ಹೋಂಡಾ ಗ್ರಾಜಿಯಾ 125 ಸ್ಪೋರ್ಟ್ಸ್ ಎಡಿಷನ್ ಸಹಕಾರಿಯಾಗುತ್ತದೆ.