ಬಿಡುಗಡೆಯ ನಂತರ ಮೊದಲ ಬಾರಿಗೆ ಬೆಲೆ ಏರಿಕೆ ಪಡೆದುಕೊಂಡ ಹೋಂಡಾ ಹೈನೆಸ್ ಸಿಬಿ 350
ಹೋಂಡಾ ನಿರ್ಮಾಣದ ಹೊಸ ಹೈನೆಸ್ ಸಿಬಿ 350 ಕ್ಲಾಸಿಕ್ ಬೈಕ್ ಮಾದರಿಯು ಬಿಡುಗಡೆಯಾದ ಕೆಲವೇ ತಿಂಗಳಿನಲ್ಲಿ ಉತ್ತಮ ಬೇಡಿಕೆ ಪಡೆದುಕೊಂಡಿದ್ದು, ಹೊಸ ಬೈಕಿಗೆ ಬೇಡಿಕೆ ಹೆಚ್ಚುತ್ತಿರುವ ಬೆನ್ನಲ್ಲೇ ಕಂಪನಿಯು ಹೈನೆಸ್ ಸಿಬಿ 350 ಬೆಲೆ ಹೆಚ್ಚಳ ಮಾಡಲಾಗಿದೆ.

ಹೈನೆಸ್ ಸಿಬಿ 350 ಬೈಕ್ ಮಾರಾಟ ಆರಂಭಿಸಿದ ನಂತರ ಇದುವರೆಗೆ ಸುಮಾರು 5 ಸಾವಿರ ಯುನಿಟ್ ಮಾರಾಟ ಮಾಡಲಾಗಿದ್ದು, ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಹೊಸ ಬೈಕ್ ಡಿಲಕ್ಸ್ ಮತ್ತು ಡಿಲಕ್ಸ್ ಪ್ರೋ ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದೆ. ಈ ಹಿಂದೆ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಡಿಲಕ್ಸ್ ಮಾದರಿಗೆ ರೂ. 1.85 ಲಕ್ಷ ಮತ್ತು ಡಿಲಕ್ಸ್ ಪ್ರೋ ಮಾದರಿಗೆ ರೂ. 1.90 ಲಕ್ಷ ಬೆಲೆ ಹೊಂದಿದ್ದ ಹೊಸ ಬೈಕ್ ಇದೀಗ ಕ್ರಮವಾಗಿ ರೂ. 1,86,500 ಮತ್ತು ರೂ. 1,92,500 ಬೆಲೆ ಪಡೆದುಕೊಂಡಿದೆ.

ಹೊಸ ದರ ಪಟ್ಟಿಯಲ್ಲಿ ಹೈನೆಸ್ ಸಿಬಿ350 ಡಿಲಕ್ಸ್ ಮಾದರಿಯು ರೂ. 1,500 ಮತ್ತು ಡಿಲಕ್ಸ್ ಪ್ರೋ ಮಾದರಿಯು ರೂ.2,500 ಬೆಲೆ ಹೆಚ್ಚಳ ಪಡೆದುಕೊಂಡಿದ್ದು, ತಾಂತ್ರಿಕ ಅಂಶಗಳಲ್ಲಿ ಯಾವುದೇ ಬದಲಾವಣೆಗಳನ್ನು ಪರಿಚಯಿಸಿಲ್ಲ.

ಬೆಲೆ ಹೆಚ್ಚಳದ ಜೊತೆಗೆ ಹೊಸ ಬೈಕ್ ಅನ್ನು ಸಂಕ್ರಾಂತಿ ಹೊತ್ತಿಗೆ ಭರ್ಜರಿಯಾಗಿ ಮಾರಾಟ ಮಾಡುವ ಗುರಿಹೊಂದಿರುವ ಹೋಂಡಾ ಕಂಪನಿಯು ಹೊಸ ಬೈಕ್ ಖರೀದಿ ಮೇಲೆ ಹಲವಾರು ಆಕರ್ಷಕ ಆಫರ್‌ಗಳನ್ನು ಘೋಷಣೆ ಮಾಡಿದ್ದು, ಕ್ಲಾಸಿಕ್ ಬೈಕ್ ಖರೀದಿದಾರರನ್ನು ಸೆಳೆಯುವಲ್ಲಿ ಯಶಸ್ವಿಯಾಗುತ್ತಿದೆ.

ಕ್ಲಾಸಿಕ್ ಬೈಕ್ ಮಾದರಿಗಳ ಮಾರಾಟದಲ್ಲಿ ಮುಂಚೂಣಿಯಲ್ಲಿರುವ ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 350, ಜಾವಾ ಮೋಟಾರ್‌ಸೈಕಲ್ ಮತ್ತು ಬೆನೆಲ್ಲಿ ಇಂಪೀರಿಯಲ್ 400 ಬೈಕ್ ಮಾದರಿಗಳಿಗೆ ಭರ್ಜರಿ ಪೈಪೋಟಿ ನೀಡುತ್ತಿರುವ ಹೊಸ ಹೈನೆಸ್ ಸಿಬಿ350 ಬೈಕ್ ಮಾದರಿಯು ನಿಧಾನವಾಗಿ ಕ್ಲಾಸಿಕ್ ಬೈಕ್ ಮಾರಾಟದಲ್ಲಿ ಮುಂಚೂಣಿ ಸಾಧಿಸುತ್ತಿದ್ದು, ಆಕರ್ಷಕ ಬೆಲೆ ಮತ್ತು ಪ್ರೀಮಿಯಂ ಫೀಚರ್ಸ್ ಗ್ರಾಹಕರನ್ನು ಸೆಳೆಯುವಲ್ಲಿ ಯಶಸ್ವಿಯಾಗುತ್ತಿದೆ.

ಹೈನೆಸ್ ಸಿಬಿ 350 ಬೈಕಿನ ವಿನ್ಯಾಸವು ಹಳೆಯ ಕ್ಲಾಸಿಕ್ ಸಿಬಿ ಬೈಕ್ ಸರಣಿಯನ್ನು ನೆನಪಿಸಲಿದ್ದು, ಈ ಬೈಕಿನ ಮುಂಭಾಗದಲ್ಲಿ ರೌಂಡ್ ಎಲ್ಇಡಿ ಹೆಡ್‌ಲ್ಯಾಂಪ್ ಕ್ರೋಮ್ ಫ್ರಂಟ್ ಫೆಂಡರ್ ಹಾಗೂ ಫೋರ್ಕ್‌ಗಳನ್ನು ಪಡೆದುಕೊಂಡಿದೆ. ಈ ಬೈಕಿನಲ್ಲಿ ದೊಡ್ಡದಾದ 15-ಲೀಟರಿನ ಫ್ಯೂಯಲ್ ಟ್ಯಾಂಕ್ ಜೋಡಿಸಲಾಗಿದ್ದು, ಈ ಬೈಕಿನ ಸೈಡ್ ಗಳಲ್ಲಿ ಹೊಂಡಾ ಬ್ಯಾಡ್ಜಿಂಗ್ ಅಳವಡಿಸಲಾಗಿದೆ.

ಎಂಜಿನ್ ಕವರ್, ಎಕ್ಸಾಸ್ಟ್ ಸೇರಿದಂತೆ ಈ ಬೈಕಿನ ಹಲವು ಭಾಗಗಳಲ್ಲಿ ಕ್ರೋಮ್ ಬಣ್ಣವನ್ನು ನೀಡಲಾಗಿದ್ದು, ಎಕ್ಸಾಸ್ಟ್ ಕ್ಲಾಸಿಕ್ ಲೋ-ಪಿಚ್ ಥಂಪಿ ನೋಟ್ ಹೊಂದಿದೆ. ಬೈಕ್ ವಿನ್ಯಾಸವನ್ನು ಸರಳಗೊಳಿಸಲು ಹಿಂಭಾಗವನ್ನು ಚಿಕ್ಕದು ಮಾಡಲಾಗಿದ್ದು, ಈ ಸೆಗ್ ಮೆಂಟಿನಲ್ಲಿ ಮೊದಲ ಬಾರಿಗೆ ಈ ಬೈಕಿನಲ್ಲಿ ರಿಂಗ್-ಟೈಪ್ ವಿಂಕರ್ ಗಳನ್ನು ನೀಡಲಾಗಿದೆ.
MOST READ: ಅತಿ ಕಡಿಮೆ ಬೆಲೆಯಲ್ಲಿ ಬಿಎಸ್ಐ ಸರ್ಟಿಫೈಡ್ ಟ್ರೆಡ್ ಹೆಲ್ಮೆಟ್ ಬಿಡುಗಡೆ

ಹೋಂಡಾ ಹೈನೆಸ್ ಸಿಬಿ 350 ಬೈಕಿನಲ್ಲಿ ಅಸಿಸ್ಟ್ ಸ್ಲಿಪ್ಪರ್-ಕ್ಲಚ್, ಎಂಜಿನ್ ಸ್ಟಾರ್ಟ್/ಸ್ಟಾಪ್ ಸ್ವಿಚ್, ಯುಎಸ್‌ಬಿ ಟೈಪ್-ಸಿ ಚಾರ್ಜಿಂಗ್ ಪೋರ್ಟ್, ಹೋಂಡಾ ಸೆಲೆಕ್ಟಬಲ್ ಟಾರ್ಕ್ ಕಂಟ್ರೋಲ್ ಸಿಸ್ಟಂ ಸೇರಿದಂತೆ ಹಲವಾರು ಫೀಚರ್ ಗಳಿದ್ದು, ಬೇಸ್ ಮಾದರಿಯನ್ನು ಪ್ರೆಷಿಯಸ್ ರೆಡ್ ಮೆಟಾಲಿಕ್, ಮ್ಯಾಟ್ ಮಾರ್ಷಲ್ ಗ್ರೀನ್ ಮೆಟಾಲಿಕ್ ಹಾಗೂ ಪರ್ಲ್ ನೈಟ್ ಸ್ಟಾರ್ ಬ್ಲ್ಯಾಕ್ ಎಂಬ ಮೂರು ಸಿಂಗಲ್-ಟೋನ್ ಬಣ್ಣಗಳಲ್ಲಿ ಮಾರಾಟ ಮಾಡಲಾಗುವುದು.

ಟಾಪ್-ಎಂಡ್ ಡಿಎಲ್ಎಕ್ಸ್ ಪ್ರೊ ಮಾದರಿಯನ್ನು ಮ್ಯಾಟ್ ಗ್ರೇ ಮೆಟಾಲಿಕ್, ಮ್ಯಾಟ್ ಸ್ಟೀಲ್ ಬ್ಲ್ಯಾಕ್ ಮೆಟಾಲಿಕ್, ವರ್ಚುವಸ್ ವೈಟ್ ಅಥ್ಲೆಟಿಕ್ ಬ್ಲೂ ಮೆಟಾಲಿಕ್ ಹಾಗೂ ಸ್ಪಿಯರ್ ಸಿಲ್ವರ್ ಮೆಟಾಲಿಕ್ ಪರ್ಲ್ ನೈಟ್ ಸ್ಟಾರ್ ಮೆಟಾಲಿಕ್ ಎಂಬ ಮೂರು ಡ್ಯುಯಲ್-ಟೋನ್ ಬಣ್ಣಗಳಲ್ಲಿ ಮಾರಾಟ ಮಾಡಲಾಗುತ್ತದೆ.
MOST READ: ಅತಿ ಹೆಚ್ಚು ಮೈಲೇಜ್ ನೀಡುವ ಟಾಪ್ 10 ಬಜೆಟ್ ಬೆಲೆಯ ಬೈಕುಗಳಿವು..!

ಈ ಬೈಕ್ ಅನಲಾಗ್-ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಹೋಂಡಾ ಸ್ಮಾರ್ಟ್‌ಫೋನ್ ವಾಯ್ಸ್ ಕಂಟ್ರೋಲ್ ಸಿಸ್ಟಂಗಳನ್ನು ಹೊಂದಿದ್ದು, 5-ಸ್ಪೀಡ್ ಗೇರ್‌ಬಾಕ್ಸ್ ಪ್ರೇರಣೆಯ 348.36 ಸಿಸಿ ಏರ್-ಕೂಲ್ಡ್ ಸಿಂಗಲ್ ಸಿಲಿಂಡರ್ ಎಂಜಿನ್‌ನೊಂದಿಗೆ 20.8-ಬಿಎಚ್‌ಪಿ ಮತ್ತು 30-ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ.


Click it and Unblock the Notifications








