ಮೊದಲ ಬಾರಿಗೆ 10 ಸಾವಿರ ಯುನಿಟ್ ಮಾರಾಟ ದಾಖಲೆಗೆ ಕಾರಣವಾದ ಹೋಂಡಾ ಹೈನೆಸ್ ಸಿಬಿ350

ಹೋಂಡಾ ಮೋಟಾರ್‌ಸೈಕಲ್ ಕಂಪನಿಯು ತನ್ನ ಹೊಚ್ಟ ಹೊಸ ಹೈನೆಸ್ ಸಿಬಿ350 ಬೈಕ್ ಮಾದರಿಯನ್ನು ಭಾರತದಲ್ಲಿ ಬಿಡುಗಡೆ ಮಾಡುವ ಕ್ಲಾಸಿಕ್ ಬೈಕ್ ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿದ್ದು, ಕ್ಲಾಸಿಕ್ ಬೈಕ್ ಮಾರಾಟ ಆರಂಭಿಸಿದ ಕೆಲವೇ ತಿಂಗಳಿನಲ್ಲಿ ಅತ್ಯುತ್ತಮ ಬೇಡಿಕೆ ಪಡೆದುಕೊಂಡಿದೆ.

10 ಸಾವಿರ ಯುನಿಟ್ ಮಾರಾಟ ದಾಖಲೆಗೆ ಕಾರಣವಾದ ಹೋಂಡಾ ಹೈನೆಸ್ ಸಿಬಿ350

2020ರ ಅಕ್ಬೋಬರ್ ಮಧ್ಯಂತರದಲ್ಲಿ ಹೈನೆಸ್ ಸಿಬಿ350 ಬೈಕ್ ಮಾದರಿಯನ್ನು ಬಿಡುಗಡೆ ಮಾಡಿದ್ದ ಹೋಂಡಾ ಕಂಪನಿಯು ಇದುವರೆಗೆ 10 ಸಾವಿರ ಯುನಿಟ್ ಬೈಕ್ ವಿತರಣೆ ಮಾಡಿದ್ದು, ಕ್ಲಾಸಿಕ್ ಬೈಕ್ ಮಾರಾಟದಲ್ಲಿ ಗ್ರಾಹಕರ ಪ್ರಮುಖ ಆಕರ್ಷಣೆಯಾಗಿರುವ ಹೈನೆಸ್ ಸಿಬಿ350 ಬೈಕ್ ಮಾದರಿಯು ರಾಯಲ್ ಎನ್‌ಫೀಲ್ಡ್ ನಿರ್ಮಾಣದ ಕ್ಲಾಸಿಕ್ 350, ಬೆನೆಲ್ಲಿ ಇಂಪೀರಿಯಲ್ 400 ಮತ್ತು ಜಾವಾ ಕ್ಲಾಸಿಕ್ ಬೈಕ್‌ಗಳಿಗೆ ಉತ್ತಮ ಪೈಪೋಟಿ ನೀಡುತ್ತಿದೆ.

10 ಸಾವಿರ ಯುನಿಟ್ ಮಾರಾಟ ದಾಖಲೆಗೆ ಕಾರಣವಾದ ಹೋಂಡಾ ಹೈನೆಸ್ ಸಿಬಿ350

ಹೈನೆಸ್ ಸಿಬಿ350 ಬೈಕ್ ಮಾದರಿಯು ಗ್ರಾಹಕರ ಬೇಡಿಕೆಯೆಂತೆ ಡಿಲಕ್ಸ್ ಮತ್ತು ಡಿಲಕ್ಸ್ ಪ್ರೋ ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದ್ದು, ಡಿಲಕ್ಸ್ ಮಾದರಿಯ ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 1,86,500 ಮತ್ತು ಡಿಲಕ್ಸ್ ಪ್ರೋ ಮಾದರಿಯು ರೂ. 1,92,500 ಬೆಲೆ ಹೊಂದಿದೆ.

10 ಸಾವಿರ ಯುನಿಟ್ ಮಾರಾಟ ದಾಖಲೆಗೆ ಕಾರಣವಾದ ಹೋಂಡಾ ಹೈನೆಸ್ ಸಿಬಿ350

ಪ್ರತಿಸ್ಪರ್ಧಿ ಮಾದರಿಗಳಿಂತಲೂ ಆಕರ್ಷಕ ಬೆಲೆ ಮತ್ತು ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ಗ್ರಾಹಕರನ್ನು ಸೆಳೆಯುವಲ್ಲಿ ಯಶಸ್ವಿಯಾಗಿರುವ ಹೈನೆಸ್ ಸಿಬಿ350 ಮಾದರಿಯು ಅತಿ ಕಡಿಮೆ ಅವಧಿಯಲ್ಲಿ 10 ಸಾವಿರ ಯುನಿಟ್ ಮಾರಾಟ ಗುರಿ ಸಾಧಿಸಿದೆ.

10 ಸಾವಿರ ಯುನಿಟ್ ಮಾರಾಟ ದಾಖಲೆಗೆ ಕಾರಣವಾದ ಹೋಂಡಾ ಹೈನೆಸ್ ಸಿಬಿ350

ಹೈನೆಸ್ ಸಿಬಿ 350 ಬೈಕಿನ ವಿನ್ಯಾಸವು ಹಳೆಯ ಕ್ಲಾಸಿಕ್ ಸಿಬಿ ಬೈಕ್ ಸರಣಿಯನ್ನು ನೆನಪಿಸಲಿದ್ದು, ಈ ಬೈಕಿನ ಮುಂಭಾಗದಲ್ಲಿ ರೌಂಡ್ ಎಲ್ಇಡಿ ಹೆಡ್‌ಲ್ಯಾಂಪ್ ಕ್ರೋಮ್ ಫ್ರಂಟ್ ಫೆಂಡರ್‌ ಹಾಗೂ ಫೋರ್ಕ್‌ಗಳನ್ನು ಪಡೆದುಕೊಂಡಿದೆ. ಈ ಬೈಕಿನಲ್ಲಿ ದೊಡ್ಡದಾದ 15-ಲೀಟರಿನ ಫ್ಯೂಯಲ್ ಟ್ಯಾಂಕ್ ಜೋಡಿಸಲಾಗಿದ್ದು, ಈ ಬೈಕಿನ ಸೈಡ್ ಗಳಲ್ಲಿ ಹೊಂಡಾ ಬ್ಯಾಡ್ಜಿಂಗ್ ಅಳವಡಿಸಲಾಗಿದೆ.

10 ಸಾವಿರ ಯುನಿಟ್ ಮಾರಾಟ ದಾಖಲೆಗೆ ಕಾರಣವಾದ ಹೋಂಡಾ ಹೈನೆಸ್ ಸಿಬಿ350

ಎಂಜಿನ್ ಕವರ್, ಎಕ್ಸಾಸ್ಟ್ ಸೇರಿದಂತೆ ಈ ಬೈಕಿನ ಹಲವು ಭಾಗಗಳಲ್ಲಿ ಕ್ರೋಮ್ ಬಣ್ಣವನ್ನು ನೀಡಲಾಗಿದ್ದು, ಎಕ್ಸಾಸ್ಟ್ ಕ್ಲಾಸಿಕ್ ಲೋ-ಪಿಚ್ ಥಂಪಿ ನೋಟ್ ಹೊಂದಿದೆ. ಬೈಕ್ ವಿನ್ಯಾಸವನ್ನು ಸರಳಗೊಳಿಸಲು ಹಿಂಭಾಗವನ್ನು ಚಿಕ್ಕದು ಮಾಡಲಾಗಿದ್ದು, ಈ ಸೆಗ್ ಮೆಂಟಿನಲ್ಲಿ ಮೊದಲ ಬಾರಿಗೆ ಈ ಬೈಕಿನಲ್ಲಿ ರಿಂಗ್-ಟೈಪ್ ವಿಂಕರ್ ಗಳನ್ನು ನೀಡಲಾಗಿದೆ.

10 ಸಾವಿರ ಯುನಿಟ್ ಮಾರಾಟ ದಾಖಲೆಗೆ ಕಾರಣವಾದ ಹೋಂಡಾ ಹೈನೆಸ್ ಸಿಬಿ350

ಹೋಂಡಾ ಹೈನೆಸ್ ಸಿಬಿ 350 ಬೈಕಿನಲ್ಲಿ ಅಸಿಸ್ಟ್ ಸ್ಲಿಪ್ಪರ್-ಕ್ಲಚ್, ಎಂಜಿನ್ ಸ್ಟಾರ್ಟ್/ಸ್ಟಾಪ್ ಸ್ವಿಚ್, ಯುಎಸ್‌ಬಿ ಟೈಪ್-ಸಿ ಚಾರ್ಜಿಂಗ್ ಪೋರ್ಟ್‌, ಹೋಂಡಾ ಸೆಲೆಕ್ಟಬಲ್ ಟಾರ್ಕ್ ಕಂಟ್ರೋಲ್ ಸಿಸ್ಟಂ ಸೇರಿದಂತೆ ಹಲವಾರು ಫೀಚರ್ಸ್‌ಗಳಿವೆ.

MOST READ: ಅತಿ ಹೆಚ್ಚು ಮೈಲೇಜ್ ನೀಡುವ ಟಾಪ್ 10 ಬಜೆಟ್ ಬೆಲೆಯ ಬೈಕುಗಳಿವು..!

10 ಸಾವಿರ ಯುನಿಟ್ ಮಾರಾಟ ದಾಖಲೆಗೆ ಕಾರಣವಾದ ಹೋಂಡಾ ಹೈನೆಸ್ ಸಿಬಿ350

ಬೇಸ್ ಮಾದರಿಯನ್ನು ಪ್ರೆಷಿಯಸ್ ರೆಡ್ ಮೆಟಾಲಿಕ್, ಮ್ಯಾಟ್ ಮಾರ್ಷಲ್ ಗ್ರೀನ್ ಮೆಟಾಲಿಕ್ ಹಾಗೂ ಪರ್ಲ್ ನೈಟ್ ಸ್ಟಾರ್ ಬ್ಲ್ಯಾಕ್ ಎಂಬ ಮೂರು ಸಿಂಗಲ್-ಟೋನ್ ಬಣ್ಣಗಳಲ್ಲಿ ಮಾರಾಟ ಮಾಡಲಾಗುತ್ತಿದ್ದು, ಸದ್ಯ ಹೊಸ ಬೈಕ್ ಮಾದರಿಯ ಹೋಂಡಾ ಬಿಗ್‌ವಿಂಗ್ ಮಾರಾಟ ಮಳಿಗೆಗಳಿಗೆ ಮಾತ್ರವೇ ಖರೀದಿಗೆ ಲಭ್ಯವಿದೆ.

10 ಸಾವಿರ ಯುನಿಟ್ ಮಾರಾಟ ದಾಖಲೆಗೆ ಕಾರಣವಾದ ಹೋಂಡಾ ಹೈನೆಸ್ ಸಿಬಿ350

ಇನ್ನು ಟಾಪ್-ಎಂಡ್ ಡಿಎಲ್ಎಕ್ಸ್ ಪ್ರೊ ಮಾದರಿಯನ್ನು ಮ್ಯಾಟ್ ಗ್ರೇ ಮೆಟಾಲಿಕ್, ಮ್ಯಾಟ್ ಸ್ಟೀಲ್ ಬ್ಲ್ಯಾಕ್ ಮೆಟಾಲಿಕ್, ವರ್ಚುವಸ್ ವೈಟ್ ಅಥ್ಲೆಟಿಕ್ ಬ್ಲೂ ಮೆಟಾಲಿಕ್ ಹಾಗೂ ಸ್ಪಿಯರ್ ಸಿಲ್ವರ್ ಮೆಟಾಲಿಕ್ ಪರ್ಲ್ ನೈಟ್ ಸ್ಟಾರ್ ಮೆಟಾಲಿಕ್ ಎಂಬ ಮೂರು ಡ್ಯುಯಲ್-ಟೋನ್ ಬಣ್ಣಗಳಲ್ಲಿ ಮಾರಾಟ ಮಾಡಲಾಗುತ್ತದೆ.

MOST READ: ಪ್ರತಿ ಚಾರ್ಜ್‌ಗೆ ಬರೋಬ್ಬರಿ 240ಕಿ.ಮೀ ಮೈಲೇಜ್ ನೀಡುವ ಇವಿ ಸ್ಕೂಟರ್ ಬಿಡುಗಡೆ ಮಾಡಲಿದೆ ಓಲಾ

10 ಸಾವಿರ ಯುನಿಟ್ ಮಾರಾಟ ದಾಖಲೆಗೆ ಕಾರಣವಾದ ಹೋಂಡಾ ಹೈನೆಸ್ ಸಿಬಿ350

ಈ ಬೈಕ್ ಅನಲಾಗ್-ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಹೋಂಡಾ ಸ್ಮಾರ್ಟ್‌ಫೋನ್ ವಾಯ್ಸ್ ಕಂಟ್ರೋಲ್ ಸಿಸ್ಟಂಗಳನ್ನು ಹೊಂದಿದ್ದು, 5-ಸ್ಪೀಡ್ ಗೇರ್‌ಬಾಕ್ಸ್ ಪ್ರೇರಣೆಯ 348.36 ಸಿಸಿ ಏರ್-ಕೂಲ್ಡ್ ಸಿಂಗಲ್ ಸಿಲಿಂಡರ್ ಎಂಜಿನ್‌ನೊಂದಿಗೆ 20.8-ಬಿಎಚ್‌ಪಿ ಮತ್ತು 30-ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ.

More from DriveSpark

Article Published On: Wednesday, February 10, 2021, 15:23 [IST]
English summary
Honda H’ness CB350 Sales Crosses 10,000 Units In 3 Months Since Launch. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+