ಹೊಸ ಡಿಯೋ ಸ್ಕೂಟರ್ ಬೆಲೆಯನ್ನು ಹೆಚ್ಚಿಸಿದ ಹೋಂಡಾ ಮೋಟಾರ್‌ಸೈಕಲ್

ಹೋಂಡಾ ಮೋಟಾರ್‌ಸೈಕಲ್ ಮತ್ತು ಸ್ಕೂಟರ್ ಇಂಡಿಯಾ ಕಂಪನಿಯು ತನ್ನ ಸರಣಿಯಲ್ಲಿರುವ ದ್ವಿಚಕ್ರ ವಾಹನಗಳ ಬೆಲೆಗಳನ್ನು ಭಾರತೀಯ ಮಾರುಕಟ್ಟೆಯಲ್ಲಿ ಪರಿಷ್ಕರಿಸಿದೆ. ಇದರ ಪರಿಣಾಮವಾಗಿ ಜನಪ್ರಿಯ ಡಿಯೋ ಸ್ಕೂಟರ್ ದುಬಾರಿಯಾಗಿವೆ.

ಹೊಸ ಡಿಯೋ ಸ್ಕೂಟರ್ ಬೆಲೆಯನ್ನು ಹೆಚ್ಚಿಸಿದ ಹೋಂಡಾ ಮೋಟಾರ್‌ಸೈಕಲ್

ಬಿಎಸ್-6 ಹೋಂಡಾ ಡಿಯೋ ಸ್ಕೂಟರ್ ಭಾರತೀಯ ಮಾರುಕಟ್ಟೆಯಲ್ಲಿ ಸ್ಟ್ಯಾಂಡರ್ಡ್, ಡಿಲಕ್ಸ್ ಮತ್ತು ರೆಪ್ಸೋಲ್ ಎಡಿಷನ್ ಎಂಬ ಮೂರು ರೂಪಾಂತರಗಳಲ್ಲಿ ಮರಾಟವಾಗುತ್ತಿವೆ. ಹೋಂಡಾ ಮೋಟಾರ್‌ಸೈಕಲ್ ಕಂಪನಿಯು ಸ್ಟ್ಯಾಂಡರ್ಡ್ ರೂಪಾಂತರದ ಬೆಲೆಯನ್ನು ರೂ.259 ಗಳವರೆಗೆ ಹೆಚ್ಚಿಸಿದೆ. ಇನ್ನು ಡಿಎಲ್ಎಕ್ಸ್ ಮತ್ತು ರೆಪ್ಸೋಲ್ ರೂಪಾಂತರಗಳ ಬೆಲೆಯನ್ನು ರೂ.307 ಗಳವರೆಗೆ ಹೆಚ್ಚಿಸಲಾಗಿದೆ.

ಹೊಸ ಡಿಯೋ ಸ್ಕೂಟರ್ ಬೆಲೆಯನ್ನು ಹೆಚ್ಚಿಸಿದ ಹೋಂಡಾ ಮೋಟಾರ್‌ಸೈಕಲ್

ಬೆಲೆ ಏರಿಕೆಯ ಬಳಿಕ, ಪ್ರಸ್ತುತ ಸ್ಟ್ಯಾಂಡರ್ಡ್ ರೂಪಾಂತರದ ಬೆಲೆಯು ರೂ.62,229 ಗಳಾಗಿದೆ. ಇನ್ನು ಡಿಎಲ್ಎಕ್ಸ್ ಮತ್ತು ರೆಪ್ಸೋಲ್ ರೂಪಾಂತರಗಳ ಬೆಲೆಗಳು ಕ್ರಮವಾಗಿ ರೂ.65,627 ಮತ್ತು ರೂ.68,127 ಗಳಾಗಿದೆ. ಈ ಎಲ್ಲಾ ಬೆಲೆಗಳು ಎಕ್ಸ್-ಶೋರೂಂ ಪ್ರಕಾರವಾಗಿದೆ.

MOST READ: ಹೊಸ ಹೋಂಡಾ ಗ್ರಾಜಿಯಾ 125 ಸ್ಕೂಟರ್ ಮೇಲೆ ಆಕರ್ಷಕ ಕ್ಯಾಶ್‌ಬ್ಯಾಕ್ ಆಫರ್

ಹೊಸ ಡಿಯೋ ಸ್ಕೂಟರ್ ಬೆಲೆಯನ್ನು ಹೆಚ್ಚಿಸಿದ ಹೋಂಡಾ ಮೋಟಾರ್‌ಸೈಕಲ್

ಹೋಂಡಾ ಡಿಯೋ ಸ್ಕೂಟರ್ ಅನ್ನು 2002ರಲ್ಲಿ ಭಾರತದಲ್ಲಿ ಮೊದಲ ಬಾರಿಗೆ ಬಿಡುಗಡೆಗೊಳಿಸಲಾಗಿತ್ತು. ಡಿಯೋ ಸ್ಕೂಟರ್‍ ಇಲ್ಲಿಯವರೆಗೆ 33 ಲಕ್ಷ ಗ್ರಾಹಕರನ್ನು ಹೊಂದಿದೆ. ಹೋಂಡಾ ಡಿಯೋ ಭಾರತದಿಂದ ಅತಿ ಹೆಚ್ಚು ರಫ್ತು ಮಾಡುವ ಸ್ಕೂಟರ್ ಆಗಿದೆ. ದೇಶದಲ್ಲಿ ಮಾರಾಟವಾಗುವ ಟಾಪ್ 10 ಸ್ಕೂಟರ್‍‍ಗಳಲ್ಲಿ ಡಿಯೋ ಕೂಡ ಒಂದಾಗಿದೆ.

ಹೊಸ ಡಿಯೋ ಸ್ಕೂಟರ್ ಬೆಲೆಯನ್ನು ಹೆಚ್ಚಿಸಿದ ಹೋಂಡಾ ಮೋಟಾರ್‌ಸೈಕಲ್

ಬಿಎಸ್-6 ಹೋಂಡಾ ಡಿಯೋ ಸ್ಕೂಟರ್‍‍ನಲ್ಲಿ ಫುಲ್ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಅನ್ನು ಅಳವಡಿಸಲಾಗಿದೆ. ಇದರಲ್ಲಿ ರೇಂಜ್, ಸರಾಸರಿ ಇಂಧನ ದಕ್ಷತೆ ಮತ್ತು ರಿಯಲ್ ಟೈಮ್ ಇಂಧನ ದಕ್ಷತೆಯ ವಿವರದ ಮಾಹಿತಿಯನ್ನು ಪ್ರದರ್ಶಿಸುತ್ತದೆ. ಇದಲ್ಲದೆ ಇದು ಟ್ರಿಪ್ ಮೀಟರ್, ಕ್ಲಾಕ್ ಮತ್ತು ಸರ್ವಿಸ್ ಇಂಡಿಕೇಟರ್ ಅನ್ನು ಕೂಡ ಪ್ರದರ್ಶಿಸುತ್ತದೆ.

MOST READ: ಹೊಸ ಬಣ್ಣದ ಆಯ್ಕೆಯನ್ನು ಪಡೆದುಕೊಂಡ 2021ರ ಕವಾಸಕಿ ನಿಂಜಾ 1000 ಎಸ್‌ಎಕ್ಸ್ ಬೈಕ್

ಹೊಸ ಡಿಯೋ ಸ್ಕೂಟರ್ ಬೆಲೆಯನ್ನು ಹೆಚ್ಚಿಸಿದ ಹೋಂಡಾ ಮೋಟಾರ್‌ಸೈಕಲ್

2020ರ ಹೋಂಡಾ ಡಿಯೋ ಆಕರ್ಷಕ ವಿನ್ಯಾಸವನ್ನು ಹೊಂದಿದೆ. ಡಿಯೋ ಸ್ಕೂಟರ್ ಮುಂಭಾಗ ಆಕ್ಟಿವಾ 6ಜಿ ಸ್ಕೂಟರ್‍‍ನಂತೆ ಫುಲ್ ಎಲ್‍ಇಡಿ ಹೆಡ್‍‍ಲ್ಯಾಂಪ್ ಮತ್ತು ಡಿ‍ಆರ್‍ಎಲ್ ಅನ್ನು ಅಳವಡಿಸಲಾಗಿದೆ. ಬಿಎಸ್-6 ಹೋಂಡಾ ಡಿಯೋ ಸ್ಕೂಟರ್ ಟೆಲಿಸ್ಕೋಪಿಕ್ ಫೋರ್ಕ್ ಅನ್ನು ಹೊಂದಿದೆ. ಹೊಸ ಡಿಯೋ ಅಗ್ರೆಸಿವ್ ವಿನ್ಯಾಸವನ್ನು ಹೊಂದಿದೆ.

ಹೊಸ ಡಿಯೋ ಸ್ಕೂಟರ್ ಬೆಲೆಯನ್ನು ಹೆಚ್ಚಿಸಿದ ಹೋಂಡಾ ಮೋಟಾರ್‌ಸೈಕಲ್

ಹೋಂಡಾ ಆಕ್ಟಿವಾ 6ಜಿಯಂತೆಯೇ ಹೋಂಡಾ ಡಿಯೊ ಕೂಡ ಅದೇ ಪ್ಲಾಟ್‍‍ಫಾರ್ಮ್ ಅನ್ನು ಆಧರಿಸಿದೆ. ಹೊಸ ಡಿಯೋ ಸ್ಕೂಟರ್‍‍ನಲ್ಲಿ ಸ್ಟ್ಯಾಂಡರ್ಡ್ ರೂಪಾಂತರವು ಮ್ಯಾಟ್ ಆಕ್ಸಿಸ್ ಗ್ರೇ ಮೆಟಾಲಿಕ್, ಕ್ಯಾಂಡಿ ಝಾಸಿ ಬ್ಲೂ, ಸ್ಪೋರ್ಟ್ ರೆಡ್ ಮತ್ತು ವೈಬ್ರಂಟ್ ಆರೆಂಜ್ ಎಂಬ ನಾಲ್ಕು ಬಣ್ಣಗಳಲ್ಲಿ ಲಭ್ಯವಿದೆ.

MOST READ: ದುಬಾರಿಯಾಯ್ತು ಜನಪ್ರಿಯ ಬಿಎಸ್-6 ಯಮಹಾ ಎಂಟಿ-15 ಬೈಕ್

ಹೊಸ ಡಿಯೋ ಸ್ಕೂಟರ್ ಬೆಲೆಯನ್ನು ಹೆಚ್ಚಿಸಿದ ಹೋಂಡಾ ಮೋಟಾರ್‌ಸೈಕಲ್

ಇನ್ನು ಬಿ‍ಎಸ್-6 ಹೋಂಡಾ ಡಿಯೋ ಡಿಲಕ್ಸ್ ರೂಪಾಂತರವು ಮ್ಯಾಟ್ ಸಾಂಗ್ರಿಯಾ ರೆಡ್ ಮೆಟಾಲಿಕ್, ಡ್ಯಾಜ್ಲ್ ಎಲ್ಲೊ ಮೆಟಾಲಿಕ್ ಮತ್ತು ಮ್ಯಾಟ್ ಆಕ್ಸಿಸ್ ಗ್ರೇ ಮೆಟಾಲಿಕ್ ಎಂಬ ಮೂರು ಬಣ್ಣಗಳಲ್ಲಿ ಲಭ್ಯವಿದೆ.

ಹೊಸ ಡಿಯೋ ಸ್ಕೂಟರ್ ಬೆಲೆಯನ್ನು ಹೆಚ್ಚಿಸಿದ ಹೋಂಡಾ ಮೋಟಾರ್‌ಸೈಕಲ್

ಹೊಸ ಡಿಯೋ ಸ್ಕೂಟರ್‍‍ನ 110 ಸಿಸಿ ಎಂಜಿನ್ 7.9 ಬಿ‍‍ಹೆಚ್‍‍ಪಿ ಪವರ್ ಮತ್ತು 8.9 ಎನ್‍ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಇನ್ನು ಹಿಂದಿನ ಹೋಂಡಾ ಡಿಯೋ ಬಿಎಸ್-4 ಮಾದರಿಯು 8 ಬಿ‍‍ಹೆಚ್‍‍ಪಿ ಪವರ್ ಮತ್ತು 9 ಎನ್‍ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಹೊಸ ಡಿಯೋ ಸ್ಕೂಟರ್ ಬೆಲೆಯನ್ನು ಹೆಚ್ಚಿಸಿದ ಹೋಂಡಾ ಮೋಟಾರ್‌ಸೈಕಲ್

ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸಿದಾಗ ಎಂಜಿನ್‍‍ನ ದಕ್ಷತೆಯ ಅಂಕಿ ಅಂಶಗಳಲ್ಲಿ ತುಸು ಕಡಿಮೆಯಾಗಿದೆ. ಹೋಂಡಾ ಡಿಯೋ ಸ್ಕೂಟರ್ ದೇಶಿಯ ಮಾರುಕಟ್ಟೆಯಲ್ಲಿ ಯಮಹಾ ರೇ-ಝಡ್ ಮತ್ತು ಹೀರೋ ಮೆಸ್ಟ್ರೋ ಎಡ್ಜ್ ಸ್ಕೂಟರ್‍‍ಗಳಿಗೆ ಪೈಪೋಟಿ ನೀಡುತ್ತಿದೆ.

Most Read Articles

Kannada
English summary
Honda Dio Receives First Price Hike For 2021 In Kannada. Read In Kannada.
Story first published: Friday, January 8, 2021, 18:52 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X