ಯೂನಿಕಾರ್ನ್ ಬೈಕಿನ ಬೆಲೆ ಹೆಚ್ಚಿಸಿದ ಹೋಂಡಾ ಮೋಟಾರ್‌ಸೈಕಲ್
ಹೋಂಡಾ ಮೋಟಾರ್‌ಸೈಕಲ್ ಮತ್ತು ಸ್ಕೂಟರ್ ಇಂಡಿಯಾ ಕಂಪನಿಯು ತನ್ನ ಸರಣಿಯಲ್ಲಿರುವ ದ್ವಿಚಕ್ರ ವಾಹನಗಳ ಬೆಲೆಗಳನ್ನು ಭಾರತೀಯ ಮಾರುಕಟ್ಟೆಯಲ್ಲಿ ಪರಿಷ್ಕರಿಸಿದೆ. ಇದರ ಪರಿಣಾಮವಾಗಿ ಜನಪ್ರಿಯ ಯೂನಿಕಾರ್ನ್ ಮಾದರಿಯು ದುಬಾರಿಯಾಗಿದೆ.

ಹೋಂಡಾ ಮೋಟಾರ್‌ಸೈಕಲ್ ಕಂಪನಿಯು ಭಾರತೀಯ ಮಾರುಕಟ್ಟೆಯಲ್ಲಿ ಯೂನಿಕಾರ್ನ್ ಬೈಕನ್ನು ಒಂದೇ ವೆರಿಯೆಂಟ್ ನಲ್ಲಿ ಮಾರಾಟ ಮಾಡುತ್ತಿದ್ದಾರೆ. ಬಿಎಸ್-6 ಯೂನಿಕಾರ್ನ್ ಬೈಕನ್ನು ರೂ.95,152 ಬೆಲೆಯಲ್ಲಿ ಮಾರಾಟವನ್ನು ಮಾಡುತ್ತಿದ್ದರು. ಆದರೆ ಇದೀಗ ಬೆಲೆ ಏರಿಕೆಯ ಬಳಿಕ, ಇದರ ಬೆಲೆಯು ರೂ.95,738 ಗಳಾಗಿದೆ. ಈ ಎಲ್ಲಾ ಬೆಲೆಗಳು ಎಕ್ಸ್ ಶೋರೂಂ ಪ್ರಕಾರವಾಗಿದ

ಬಿಎಸ್-6 ಯೂನಿಕಾರ್ನ್ ಬೈಕ್ ಭಾರತೀಯ ಮಾರುಕಟ್ಟೆಯಲ್ಲಿ ಉತ್ತಮವಾಗಿ ಮಾರಾಟವಾಗುತ್ತಿದೆ, ಈ ಹೊಸ ಬೈಕಿನಲ್ಲಿ 162.7 ಸಿಸಿ, ಸಿಂಗಲ್ ಸಿಲಿಂಡರ್, ಫ್ಯೂಯಲ್-ಇಂಜೆಕ್ಟ್ ಎಂಜಿನ್ ಅನ್ನು ಅಳವಡಿಸಲಾಗಿದೆ.
MOST READ: ಹೊಸ ಹೋಂಡಾ ಗ್ರಾಜಿಯಾ 125 ಸ್ಕೂಟರ್ ಮೇಲೆ ಆಕರ್ಷಕ ಕ್ಯಾಶ್‌ಬ್ಯಾಕ್ ಆಫರ್

ಈ ಎಂಜಿನ್ 7,500 ಆರ್‌ಪಿಎಂನಲ್ಲಿ 12.5 ಬಿಹೆಚ್‍ಪಿ ಪವರ್ ಮತ್ತು 5,500 ಆರ್‌ಪಿಎಂನಲ್ಲಿ 14 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ 5-ಸ್ಪೀಡ್ ಗೇರ್ ಬಾಕ್ಸ್ ಅನ್ನು ಅಳವಡಿಸಲಾಗಿದೆ.

ಹೋಂಡಾ ಯೂನಿಕಾರ್ನ್ ಬೈಕ್ ಭಾರತೀಯ ಮಾರುಕಟ್ಟೆಯಲ್ಲಿ ಇಂಪೀರಿಯಲ್ ರೆಡ್ ಮೆಟಾಲಿಕ್, ಮ್ಯಾಟ್ ಆಕ್ಸಿಸ್ ಗ್ರೇ ಮೆಟಾಲಿಕ್, ಪರ್ಲ್ ಇಗ್ನಿಯಸ್ ಬ್ಲ್ಯಾಕ್ ಎಂಬ ಮೂರು ಬಣ್ಣಗಳಲ್ಲಿ ಮಾರಾಟವಾಗುತ್ತಿದೆ.
MOST READ: ಹೊಸ ಬಣ್ಣದ ಆಯ್ಕೆಯನ್ನು ಪಡೆದುಕೊಂಡ 2021ರ ಕವಾಸಕಿ ನಿಂಜಾ 1000 ಎಸ್‌ಎಕ್ಸ್ ಬೈಕ್

ಇನ್ನು ಹೊಸ ಹೋಂಡಾ ಯೂನಿಕಾರ್ನ್ ಬೈಕಿನ ಸಸ್ಪೆಂಕ್ಷನ್ ಸೆಟಪ್ ಬಗ್ಗೆ ಹೇಳುವುದಾದರೆ, ಮುಂಭಾಗದಲ್ಲಿ ಟೆಲಿಸ್ಕೋಪಿಕ್ ಫೋರ್ಕ್ಸ್ ಮತ್ತು ಹಿಂಭಾಗದಲ್ಲಿ ಮೊನೊ-ಶಾಕ್ ಸೆಟಪ್ ಅನ್ನು ಅಳವಡಿಸಲಾಗಿದೆ.

ಇನ್ನು ಇದರ ಬ್ರೇಕಿಂಗ್ ಸಿಸ್ಟಂ ಬಗ್ಗೆ ಹೇಳುವುದಾದರೆ, ಮುಂಭಾಗದಲ್ಲಿ ಡಿಸ್ಕ್ ಬ್ರೇಕ್ ಮತ್ತು ಹಿಂಭಾಗದಲ್ಲಿ ಡ್ರಮ್ ಬ್ರೇಕ್ ಅನ್ನು ಅಳವಡಿಸಲಾಗಿದೆ. ಇದರೊಂದಿಗೆ ಸಿಂಗಲ್-ಚಾನೆಲ್ ಎಬಿಎಸ್ ಅನ್ನು ನೀಡಲಾಗಿದೆ.
MOST READ: ಬಿಡುಗಡೆಯಾಯ್ತು ಹೊಸ ಕವಾಸಕಿ ವಲ್ಕನ್ ಎಸ್ ಬೈಕ್

ಬಿಎಸ್-6 ಹೋಂಡಾ ಯೂನಿಕಾರ್ನ್ ಬೈಕಿನಲ್ಲಿ ಮುಂಭಾಗದ ಕೌಲ್, ಅರೆ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್, ಬದಿಯಲ್ಲಿ ಕ್ರೋಮ್ ಎಕ್ಸಾಸ್ಟ್, ನೇಮ್‌ಪ್ಲೇಟ್‌ಗಾಗಿ ಕ್ರೋಮ್ ಅಕ್ಷರಗಳು ಮತ್ತು ಡಿ ಹೋಂಡಾ ಲೋಗೊವನ್ನು ಒಳಗೊಂಡಿದೆ.

ಇನ್ನು ಹೋಂಡಾ ಮೋಟಾರ್‌ಸೈಕಲ್ ಕಂಪನಿಯು ಹಿಂದಿನ ತಿಂಗಳಲ್ಲಿ ಒಟ್ಟು ದ್ವಿಚಕ್ರ ವಾಹನಗಳ 2,63,027 ಯುನಿಟ್‌ಗಳನ್ನು ಮಾರಾಟಗೊಳಿಸಿವೆ. ಮಾರಾಟದಲ್ಲಿ ಶೇ.3 ರಷ್ಟು ಬೆಳವಣಿಗೆಯನ್ನು ಸಾಧಿಸಿದೆ. ಇನ್ನು ಹೋಂಡಾ ಕಂಪನಿಯು 20,981 ಯುನಿಟ್‌ಗಳ ದ್ವಿಚಕ್ರ ವಾಹನಗಳನ್ನು ವಿವಿಧ ಅಂತರರಾಷ್ಟ್ರೀಯ ಮಾರುಕಟ್ಟೆಗಳಿಗೆ ರಫ್ತು ಮಾಡಲಾಗುತ್ತಿದೆ.

ಕಚ್ಚಾ ವಸ್ತುಗಳ ಬೆಲೆ ಏರಿಕೆ ಮತ್ತು ದುಬಾರಿ ನಿರ್ವಹಣೆ ವೆಚ್ಚದಿಂದ ಹೋಂಡಾ ಮೋಟಾರ್‌ಸೈಕಲ್ ಮತ್ತು ಸ್ಕೂಟರ್ ಇಂಡಿಯಾ ಕಂಪನಿಯು ತನ್ನ ಸರಣಿಯಲ್ಲಿರುವ ದ್ವಿಚಕ್ರ ವಾಹನಗಳ ಬೆಲೆಗಳನ್ನು ಪರಿಷ್ಕರಿಸಿದೆ. ಅದರೆ ಈ ಬೆಲೆ ಏರಿಕೆಯು ಮಾರಾಟದ ಮೇಲೆ ಪರಿಣಾಮವನ್ನು ಬೀರುವುದಿಲವೆಂದು ನಿರೀಕ್ಷಿಸುತ್ತೇವೆ.


Click it and Unblock the Notifications








