ಬೆಲೆ ಏರಿಕೆ ಪಡೆದುಕೊಂಡ ಹೋಂಡಾ ಶೈನ್, ಎಸ್‌ಪಿ 125 ಬೈಕ್‌ಗಳು
ಹೋಂಡಾ ಮೋಟಾರ್‌ಸೈಕಲ್ ಮತ್ತು ಸ್ಕೂಟರ್ ಇಂಡಿಯಾ ಕಂಪನಿಯು ತನ್ನ ಶೈನ್ ಮತ್ತು ಎಸ್‌ಪಿ 125 ಬೈಕ್‌ಗಳ ಬೆಲೆಯನ್ನು ಹೆಚ್ಚಿಸಲಾಗಿದೆ. ಇದರಿಂದ ಜನಪ್ರಿಯ ಹೋಂಡಾ ಶೈನ್ ಮತ್ತು ಎಸ್‌ಪಿ 125 ಬೈಕ್‌ಗಳು ಭಾರತೀಯ ಮಾರುಕಟ್ಟೆಯಲ್ಲಿ ತುಸು ದುಬಾರಿಯಾಗಿರುತ್ತದೆ.

ಹೋಂಡಾ ಶೈನ್ ಮತ್ತು ಎಸ್‌ಪಿ 125 ಬೈಕ್‌ಗಳು ಡ್ರಮ್ ಮತ್ತು ಡಿಸ್ಕ್ ಎಂಬ ಎರಡು ರೂಪಾಂತರಗಳಲ್ಲಿ ಲಭ್ಯವಿದೆ. ಈ ಎರಡು ಬೈಕ್‌ಗಳ ಬೆಲೆಯನ್ನು ರೂ,1,236 ಗಳವರೆಗೆ ಹೆಚ್ಚಿಸಲಾಗಿದೆ. ಬೆಲೆ ಏರಿಕೆಯ ಬಳಿಕ ಹೋಂಡಾ ಶೈನ್ ಬೈಕಿನ ಆರಂಭಿಕ ಬೆಲೆಯು ರೂ.74,240 ಗಳಾದರೆ, ಹೋಂಡಾ ಎಸ್‌ಪಿ 125 ಬೈಕಿನ ಆರಂಭಿಕ ಬೆಲೆಯು ರೂ.78,453 ಗಳಾಗಿದೆ. ಈ ಎಲ್ಲಾ ಬೆಲೆಗಳು ಹೈದರಾಬಾದ್ ಎಕ್ಸ್ ಶೋರೂಂ ಪ್ರಕಾರವಾಗಿದೆ.

ಈ ಎರಡು ಬೈಕ್‌ಗಳಲ್ಲಿ ಬೆಲೆ ಏರಿಕೆಯನ್ನು ಹೊರತುಪಡಿಸಿ ಉಳಿದಂತೆ ಯಾವುದೇ ಬದಲಾವಣೆಗಳನ್ನು ಮಾಡಲಾಗುವುದಿಲ್ಲ. ಇದರಲ್ಲಿ ಹೋಂಡಾ ಶೈನ್ ಭಾರತೀಯ ಮಾರುಕಟ್ಟೆಯಲ್ಲಿ ಅತ್ಯಂತ ಜನಪ್ರಿಯ ಕಮ್ಯೂಟರ್ ಬೈಕ್ ಗಳಲ್ಲಿ ಒಂದಾಗಿದೆ.

ಹೋಂಡಾ ಶೈನ್ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದಗಿನಿಂದ ಇಲ್ಲಿಯವರೆಗೂ 90 ಲಕ್ಷಕ್ಕೂ ಹೆಚ್ಚು ಯೂನಿಟ್‌ಗಳು ಮಾರಾಟವಾಗಿವೆ. ಈ ಹೋಂಡಾ ಶೈನ್ ಬೈಕಿನಲ್ಲಿ 124 ಸಿಸಿ, ಸಿಂಗಲ್-ಸಿಲಿಂಡರ್, ನಾಲ್ಕು-ಸ್ಟ್ರೋಕ್ ಎಂಜಿನ್ ಅನ್ನು ಅಳವಡಿಸಲಾಗಿದೆ.

ಈ ಎಂಜಿನ್ 7500 ಆರ್‌ಪಿಎಂನಲ್ಲಿ 10.7 ಬಿಹೆಚ್ಪಿ ಪವರ್ ಮತ್ತು 6000 ಆರ್‌ಪಿಎಂನಲ್ಲಿ 11 ಎನ್ಎಂ ಪೀಕ್ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ಅನ್ನು 5-ಸ್ಪೀಡ್ ಗೇರ್‌ಬಾಕ್ಸ್‌ಗೆ ಜೋಡಿಸಲಾಗಿದೆ.

ಇನ್ನು ಹೋಂಡಾ ಶೈನ್ ಸಸ್ಪೆಂಕ್ಷನ್ ಸೆಟಪ್ ಬಗ್ಗೆ ಹೇಳುವುದಾದರೆ, ಮುಂಭಾಗದಲ್ಲಿ ಟೆಲಿಸ್ಕೋಪಿಕ್ ಮತ್ತು ಹಿಂಭಾಗದಲ್ಲಿ ಹೈಡ್ರಾಲಿಕ್ ಯುನಿಟ್ ಸಸ್ಪೆಂಕ್ಷನ್ ಸೆಟಪ್ ಅನ್ನು ಹೊಂದಿದೆ. ಇದರ ಬ್ರೇಕಿಂಗ್ ಸಿಸ್ಟಂ ಬಗ್ಗೆ ಹೇಳುವುದಾದರೆ, ಮುಂಭಾಗ ಮತ್ತು ಹಿಂಭಾಗದಲ್ಲಿ ಡ್ರಮ್ ಬ್ರೇಕ್‌ಗಳನ್ನು ಹೊಂದಿವೆ. ಇದರೊಂದಿಗೆ ಮುಂಭಾಗದಲ್ಲಿ 240 ಎಂಎಂ ಡಿಸ್ಕ್ ಬ್ರೇಕ್ ಆಯ್ಕೆಯನ್ನು ನೀಡಲಾಗಿದೆ.

ಇನ್ನು ಹೋಂಡಾ ಎಸ್‌ಪಿ 125 ಬೈಕಿನ ಬಗ್ಗೆ ಹೇಳುವುದಾದರೆ, 124 ಸಿಸಿ ಸಿಂಗಲ್ ಸಿಲಿಂಡರ್ ಏರ್-ಕೂಲ್ಡ್ ಪೆಟ್ರೋಲ್ ಎಂಜಿನ್ ಅಳವಡಿಸಲಾಗಿದೆ. ಈ ಎಂಜಿನ್ 7,500 ಆರ್‌ಪಿಎಂನಲ್ಲಿ 10.7 ಬಿಹೆಚ್ಪಿ ಪವರ್ ಹಾಗೂ 9,000 ಆರ್‌ಪಿಎಂನಲ್ಲಿ 10.9 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್‍ನಲ್ಲಿ 5-ಸ್ಪೀಡ್ ಗೇರ್‌ಬಾಕ್ಸ್ ಅಳವಡಿಸಲಾಗಿದೆ.

ಈ ಎಸ್‌ಪಿ 125 ಬೈಕಿನಲ್ಲಿ ಪೂರ್ಣ ಪ್ರಮಾಣದ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಅನ್ನು ಹೊಂದಿದೆ. ಇದು ಬೈಕಿನ ಸರಾಸರಿ ಮೈಲೇಜ್, ಚಲಿಸಿರುವ ದೂರ, ಗೇರ್ ಪೊಸಿಷನ್ ಇಂಡಿಕೇಟರ್ ಹಾಗೂ ಸರ್ವಿಸ್ ಡ್ಯೂ ಇಂಡಿಕೇಟರ್‍ಗಳ ಮಾಹಿತಿಗಳನ್ನು ಪ್ರದರ್ಶಿಸುತ್ತದೆ.

ಹೋಂಡಾ ಎಸ್‌ಪಿ 125 ಬೈಕಿನಲ್ಲಿ ಎಲ್‌ಇಡಿ ಹೆಡ್‌ಲ್ಯಾಂಪ್, ಎಂಜಿನ್ ಸ್ಟಾರ್ಟ್/ಸ್ಟಾಪ್, ಇಂಟಿಗ್ರೇಟೆಡ್ ಹೆಡ್‌ಲ್ಯಾಂಪ್ ಬೀಮ್, ಪಾಸಿಂಗ್ ಸ್ವಿಚ್, ಸ್ಪೋರ್ಟಿ ಅಲಾಯ್ ವ್ಹೀಲ್ಸ್ ಹಾಗೂ ಕ್ರೋಮ್ ಎಕ್ಸಾಸ್ಟ್ ಮಫ್ಲರ್ ಕವರ್‍ಗಳನ್ನು ಸಹ ಹೊಂದಿದೆ.

ಈ ಹೋಂಡಾ ಎಸ್‍ಪಿ 125 ಸ್ಪೋರ್ಟಿ ಬಾಡಿ ಗ್ರಾಫಿಕ್ಸ್ ಹಾಗೂ ಸ್ಪೋರ್ಟಿ ಟ್ಯಾಂಕ್ ವಿನ್ಯಾಸವನ್ನು ಹೊಂದಿದೆ. ಈ ಬೈಕ್ ಸ್ಟ್ರೈಕಿಂಗ್ ಗ್ರೀನ್, ಇಂಪೀರಿಯಲ್ ರೆಡ್ ಮೆಟಾಲಿಕ್, ಪರ್ಲ್ ಸೈರನ್ ಬ್ಲೂ ಹಾಗೂ ಮ್ಯಾಟ್ ಆಕ್ಸಿಸ್ ಗ್ರೇ ಮೆಟಾಲಿಕ್ ಬಣ್ಣಗಳ ಆಯ್ಕೆಯಲ್ಲಿ ಲಭ್ಯವಿರುತ್ತದೆ.


Click it and Unblock the Notifications