ವಿದೇಶಿ ಮಾರುಕಟ್ಟೆಗೂ ಲಗ್ಗೆಯಿಟ್ಟ ಮೇಡ್ ಇನ್ ಇಂಡಿಯಾ ಹೋಂಡಾ ಹೈನೆಸ್ ಸಿಬಿ 350

ಕ್ಲಾಸಿಕ್ ಬೈಕ್ ಮಾರಾಟದಲ್ಲಿ ಸದ್ಯ ಹೊಸ ಸಂಚಲನಕ್ಕೆ ಕಾರಣವಾಗಿರುವ ಹೋಂಡಾ ಹೊಚ್ಚ ಹೊಸ ಹೈನೆಸ್ ಸಿಬಿ 350 ಬೈಕ್ ಮಾದರಿಯು ಭಾರತದಲ್ಲಿ ಬಿಡುಗಡೆಯಾದ ಕೆಲವೇ ತಿಂಗಳಿನಲ್ಲಿ ನೀರಿಕ್ಷೆಗೂ ಮೀರಿ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಕಂಪನಿಯು ಹೊಸ ಬೈಕ್ ಮಾದರಿಯನ್ನು ಭಾರತದಲ್ಲೇ ಅಭಿವೃದ್ದಿಗೊಳಿಸಿ ತನ್ನ ತವರು ರಾಷ್ಟ್ರ ಜಪಾನ್‌ನಲ್ಲೂ ಬಿಡುಗಡೆ ಮಾಡಿದೆ.

ವಿದೇಶಿ ಮಾರುಕಟ್ಟೆಗೂ ಲಗ್ಗೆಯಿಟ್ಟ ಮೇಡ್ ಇನ್ ಇಂಡಿಯಾ ಹೈನೆಸ್

ಹೋಂಡಾ ಮೋಟಾರ್‌ಸೈಕಲ್ ಕಂಪನಿಯು ಭಾರತದಲ್ಲಿ ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿರುವ ಹೈನೆಸ್ ಸಿಬಿ 350 ಬೈಕ್ ಮಾದರಿಯನ್ನು ಜಪಾನ್ ಮಾರುಕಟ್ಟೆಯಲ್ಲೂ ಬಿಡುಗಡೆ ಮಾಡಿರುವ ಕಂಪನಿಯು ಭಾರತದಲ್ಲಿರುವ ಮಾದರಿಯೆಂತೆಯೇ ತಾಂತ್ರಿಕ ಅಂಶಗಳನ್ನು ಮುಂದುವರಿಸಿದ್ದು, ಜಪಾನ್ ನಂತರ ಹೊಸ ಬೈಕ್ ಮಾದರಿಯು ಅಂತರ್‌ರಾಷ್ಟ್ರೀಯ ಮಟ್ಟದಲ್ಲಿ ಹೊಸ ಸಂಚಲನ ಮೂಡಿಸುವ ಭರವಸೆಯಲ್ಲಿದೆ.

ವಿದೇಶಿ ಮಾರುಕಟ್ಟೆಗೂ ಲಗ್ಗೆಯಿಟ್ಟ ಮೇಡ್ ಇನ್ ಇಂಡಿಯಾ ಹೈನೆಸ್

ಸದ್ಯ ಕ್ಲಾಸಿಕ್ ಬೈಕ್ ಮಾದರಿಗಳ ಮಾರಾಟದಲ್ಲಿ ಮುಂಚೂಣಿಯಲ್ಲಿರುವ ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 350, ಜಾವಾ ಮೋಟಾರ್‌ಸೈಕಲ್ ಮತ್ತು ಬೆನೆಲ್ಲಿ ಇಂಪೀರಿಯಲ್ 400 ಬೈಕ್‌ ಮಾದರಿಗಳಿಗೆ ಭರ್ಜರಿ ಪೈಪೋಟಿ ನೀಡುತ್ತಿರುವ ಹೊಸ ಹೈನೆಸ್ ಸಿಬಿ350 ಬೈಕ್ ಮಾದರಿಯು ನಿಧಾನವಾಗಿ ಕ್ಲಾಸಿಕ್ ಬೈಕ್ ಮಾರಾಟದಲ್ಲಿ ತನ್ನದೆ ಆದ ಜನಪ್ರಿಯತೆ ಪಡೆದುಕೊಳ್ಳುತ್ತಿದೆ.

ವಿದೇಶಿ ಮಾರುಕಟ್ಟೆಗೂ ಲಗ್ಗೆಯಿಟ್ಟ ಮೇಡ್ ಇನ್ ಇಂಡಿಯಾ ಹೈನೆಸ್

ಆಕರ್ಷಕ ಬೆಲೆ ಮತ್ತು ಪ್ರೀಮಿಯಂ ಫೀಚರ್ಸ್ ಗ್ರಾಹಕರನ್ನು ಸೆಳೆಯುವಲ್ಲಿ ಯಶಸ್ವಿಯಾಗುತ್ತಿರುವ ಹೈನೆಸ್ ಸಿಬಿ 350 ಬೈಕ್ ಮಾದರಿಯು ಭಾರತದಲ್ಲಿ ಹೋಂಡಾ ಬಿಗ್‌ವಿಂಗ್ ಮೂಲಕ ಮಾರಾಟಗೊಳ್ಳುತ್ತಿದ್ದು, ಕಳೆದ ಎರಡು ತಿಂಗಳಿನಿಂದ ಹೊಸ ಬೈಕ್ ಮಾರಾಟದಲ್ಲಿ ಸಾಕಷ್ಟು ಏರಿಕೆ ಕಂಡುಬಂದಿದೆ.

ವಿದೇಶಿ ಮಾರುಕಟ್ಟೆಗೂ ಲಗ್ಗೆಯಿಟ್ಟ ಮೇಡ್ ಇನ್ ಇಂಡಿಯಾ ಹೈನೆಸ್

ಹೈನೆಸ್ ಸಿಬಿ 350 ಬೈಕಿನ ವಿನ್ಯಾಸವು ಹಳೆಯ ಕ್ಲಾಸಿಕ್ ಸಿಬಿ ಬೈಕ್ ಸರಣಿಯನ್ನು ನೆನಪಿಸಲಿದ್ದು, ಈ ಬೈಕಿನ ಮುಂಭಾಗದಲ್ಲಿ ರೌಂಡ್ ಎಲ್ಇಡಿ ಹೆಡ್‌ಲ್ಯಾಂಪ್ ಕ್ರೋಮ್ ಫ್ರಂಟ್ ಫೆಂಡರ್‌ ಹಾಗೂ ಫೋರ್ಕ್‌ಗಳನ್ನು ಪಡೆದುಕೊಂಡಿದೆ. ಈ ಬೈಕಿನಲ್ಲಿ ದೊಡ್ಡದಾದ 15-ಲೀಟರಿನ ಫ್ಯೂಯಲ್ ಟ್ಯಾಂಕ್ ಜೋಡಿಸಲಾಗಿದ್ದು, ಈ ಬೈಕಿನ ಸೈಡ್ ಗಳಲ್ಲಿ ಹೊಂಡಾ ಬ್ಯಾಡ್ಜಿಂಗ್ ಅಳವಡಿಸಲಾಗಿದೆ.

ವಿದೇಶಿ ಮಾರುಕಟ್ಟೆಗೂ ಲಗ್ಗೆಯಿಟ್ಟ ಮೇಡ್ ಇನ್ ಇಂಡಿಯಾ ಹೈನೆಸ್

ಎಂಜಿನ್ ಕವರ್, ಎಕ್ಸಾಸ್ಟ್ ಸೇರಿದಂತೆ ಈ ಬೈಕಿನ ಹಲವು ಭಾಗಗಳಲ್ಲಿ ಕ್ರೋಮ್ ಬಣ್ಣವನ್ನು ನೀಡಲಾಗಿದ್ದು, ಎಕ್ಸಾಸ್ಟ್ ಕ್ಲಾಸಿಕ್ ಲೋ-ಪಿಚ್ ಥಂಪಿ ನೋಟ್ ಹೊಂದಿದೆ. ಬೈಕ್ ವಿನ್ಯಾಸವನ್ನು ಸರಳಗೊಳಿಸಲು ಹಿಂಭಾಗವನ್ನು ಚಿಕ್ಕದು ಮಾಡಲಾಗಿದ್ದು, ಈ ಸೆಗ್ ಮೆಂಟಿನಲ್ಲಿ ಮೊದಲ ಬಾರಿಗೆ ಈ ಬೈಕಿನಲ್ಲಿ ರಿಂಗ್-ಟೈಪ್ ವಿಂಕರ್ ಗಳನ್ನು ನೀಡಲಾಗಿದೆ.

ವಿದೇಶಿ ಮಾರುಕಟ್ಟೆಗೂ ಲಗ್ಗೆಯಿಟ್ಟ ಮೇಡ್ ಇನ್ ಇಂಡಿಯಾ ಹೈನೆಸ್

ಹೋಂಡಾ ಹೈನೆಸ್ ಸಿಬಿ 350 ಬೈಕಿನಲ್ಲಿ ಅಸಿಸ್ಟ್ ಸ್ಲಿಪ್ಪರ್-ಕ್ಲಚ್, ಎಂಜಿನ್ ಸ್ಟಾರ್ಟ್/ಸ್ಟಾಪ್ ಸ್ವಿಚ್, ಯುಎಸ್‌ಬಿ ಟೈಪ್-ಸಿ ಚಾರ್ಜಿಂಗ್ ಪೋರ್ಟ್‌, ಹೋಂಡಾ ಸೆಲೆಕ್ಟಬಲ್ ಟಾರ್ಕ್ ಕಂಟ್ರೋಲ್ ಸಿಸ್ಟಂ ಸೇರಿದಂತೆ ಹಲವಾರು ಫೀಚರ್ ಗಳಿದ್ದು, ಬೇಸ್ ಮಾದರಿಯನ್ನು ಪ್ರೆಷಿಯಸ್ ರೆಡ್ ಮೆಟಾಲಿಕ್, ಮ್ಯಾಟ್ ಮಾರ್ಷಲ್ ಗ್ರೀನ್ ಮೆಟಾಲಿಕ್ ಹಾಗೂ ಪರ್ಲ್ ನೈಟ್ ಸ್ಟಾರ್ ಬ್ಲ್ಯಾಕ್ ಎಂಬ ಮೂರು ಸಿಂಗಲ್-ಟೋನ್ ಬಣ್ಣಗಳಲ್ಲಿ ಮಾರಾಟ ಮಾಡಲಾಗುವುದು.

MOST READ: ಪ್ರತಿ ಚಾರ್ಜ್‌ಗೆ ಬರೋಬ್ಬರಿ 240ಕಿ.ಮೀ ಮೈಲೇಜ್ ನೀಡುವ ಇವಿ ಸ್ಕೂಟರ್ ಬಿಡುಗಡೆ ಮಾಡಲಿದೆ ಓಲಾ

ವಿದೇಶಿ ಮಾರುಕಟ್ಟೆಗೂ ಲಗ್ಗೆಯಿಟ್ಟ ಮೇಡ್ ಇನ್ ಇಂಡಿಯಾ ಹೈನೆಸ್

ಟಾಪ್-ಎಂಡ್ ಡಿಎಲ್ಎಕ್ಸ್ ಪ್ರೊ ಮಾದರಿಯನ್ನು ಮ್ಯಾಟ್ ಗ್ರೇ ಮೆಟಾಲಿಕ್, ಮ್ಯಾಟ್ ಸ್ಟೀಲ್ ಬ್ಲ್ಯಾಕ್ ಮೆಟಾಲಿಕ್, ವರ್ಚುವಸ್ ವೈಟ್ ಅಥ್ಲೆಟಿಕ್ ಬ್ಲೂ ಮೆಟಾಲಿಕ್ ಹಾಗೂ ಸ್ಪಿಯರ್ ಸಿಲ್ವರ್ ಮೆಟಾಲಿಕ್ ಪರ್ಲ್ ನೈಟ್ ಸ್ಟಾರ್ ಮೆಟಾಲಿಕ್ ಎಂಬ ಮೂರು ಡ್ಯುಯಲ್-ಟೋನ್ ಬಣ್ಣಗಳಲ್ಲಿ ಮಾರಾಟ ಮಾಡಲಾಗುತ್ತದೆ.

ವಿದೇಶಿ ಮಾರುಕಟ್ಟೆಗೂ ಲಗ್ಗೆಯಿಟ್ಟ ಮೇಡ್ ಇನ್ ಇಂಡಿಯಾ ಹೈನೆಸ್

ಈ ಬೈಕ್ ಅನಲಾಗ್-ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಹೋಂಡಾ ಸ್ಮಾರ್ಟ್‌ಫೋನ್ ವಾಯ್ಸ್ ಕಂಟ್ರೋಲ್ ಸಿಸ್ಟಂಗಳನ್ನು ಹೊಂದಿದ್ದು, 5-ಸ್ಪೀಡ್ ಗೇರ್‌ಬಾಕ್ಸ್ ಪ್ರೇರಣೆಯ 348.36 ಸಿಸಿ ಏರ್-ಕೂಲ್ಡ್ ಸಿಂಗಲ್ ಸಿಲಿಂಡರ್ ಎಂಜಿನ್‌ನೊಂದಿಗೆ 20.8-ಬಿಎಚ್‌ಪಿ ಮತ್ತು 30-ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ.

MOST READ: ಅತಿ ಹೆಚ್ಚು ಮೈಲೇಜ್ ನೀಡುವ ಟಾಪ್ 10 ಬಜೆಟ್ ಬೆಲೆಯ ಬೈಕುಗಳಿವು..!

ವಿದೇಶಿ ಮಾರುಕಟ್ಟೆಗೂ ಲಗ್ಗೆಯಿಟ್ಟ ಮೇಡ್ ಇನ್ ಇಂಡಿಯಾ ಹೈನೆಸ್

ದೆಹಲಿ ಎಕ್ಸ್‌ಶೋರೂಂ ಪ್ರಕಾರ ಹೈನೆಸ್ ಸಿಬಿ 350 ಡಿಲಕ್ಸ್ ಮಾದರಿಗೆ ರೂ. 1.87 ಲಕ್ಷ ಮತ್ತು ಡಿಲಕ್ಸ್ ಪ್ರೋ ಮಾದರಿಗೆ ರೂ. 1.93 ಲಕ್ಷ ಬೆಲೆ ಹೊಂದಿದ್ದು, ಕ್ಲಾಸಿಕ್ ಬೈಕ್ ಖರೀದಿದಾರರನ್ನು ಸೆಳೆಯುವಲ್ಲಿ ಯಶಸ್ವಿಯಾಗುತ್ತಿದೆ.

Article Published On: Tuesday, January 19, 2021, 20:37 [IST]
English summary
Honda H’Ness CB350 Launched In Japan. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+