Just In
Don't Miss!
- News
ತೊಂದರೆಗೊಳಗಾಗಿರುವ ರಾಜ್ಯಗಳಿಗೆ ಮುಂದಿನ ವಾರದೊಳಗೆ ಮತ್ತಷ್ಟು ಲಸಿಕೆ: ಕೇಂದ್ರ
- Finance
UMANG APP: ಇಪಿಎಫ್ಗೆ ಸಂಬಂಧಿಸಿದ ಆ್ಯಪ್, ವೈಶಿಷ್ಟ್ಯಗಳೇನು ತಿಳಿಯಿರಿ
- Movies
ಜಾಕಿ ಚಾನ್ ತಮ್ಮ ಮಗನಿಗೆ ಸಾವಿರಾರು ಕೋಟಿ ಆಸ್ತಿಯನ್ನು ಕೊಡುತ್ತಿಲ್ಲವೇಕೆ?
- Lifestyle
ಭಾನುವಾರದ ಭವಿಷ್ಯ: ಈ ದಿನ ಯಾವ ರಾಶಿಯವರಿಗೆ ಅದೃಷ್ಟದ ದಿನ
- Sports
ಹೈದರಾಬಾದ್ ಸೋಲಿಸಿ ಅಗ್ರ ಸ್ಥಾನಕ್ಕೇರಿದ ಮುಂಬೈ ಇಂಡಿಯನ್ಸ್
- Education
Ninasam Diploma Admission 2020-21: ಮೇ ತಿಂಗಳಲ್ಲಿ ನೀನಾಸಂ ಡಿಪ್ಲೋಮಾ ಪ್ರವೇಶಾತಿ ಆರಂಭ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಭಾರತದಲ್ಲಿ ಹೊಸ ಹೋಂಡಾ ಸಿಬಿ500ಎಕ್ಸ್ ಅಡ್ವೆಂಚರ್ ಬೈಕ್ ಬಿಡುಗಡೆ
ಹೋಂಡಾ ಮೋಟಾರ್‌ಸೈಕಲ್ ಮತ್ತು ಸ್ಕೂಟರ್ ಇಂಡಿಯಾ ಕಂಪನಿಯು ತನ್ನ ಪ್ರೀಮಿಯಂ ಸಿಬಿ500ಎಕ್ಸ್ ಅಡ್ವೆಂಚರ್ ಬೈಕನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದೆ. ಈ ಹೊಸ ಹೋಂಡಾ ಸಿಬಿ500ಎಕ್ಸ್ ಅಡ್ವೆಂಚರ್ ಬೈಕಿನ ಬೆಲೆಯು ಗುರುಗ್ರಾಮ್ ಎಕ್ಸ್ ಶೋರೂಂ ಪ್ರಕಾರ ರೂ.6.87 ಲಕ್ಷಗಳಾಗಿದೆ.

ಬಿಡುಗಡೆಗೊಂಡ ಹೊಸ ಹೋಂಡಾ ಸಿಬಿ500ಎಕ್ಸ್ ಅಡ್ವೆಂಚರ್ ಬೈಕನ್ನು ಸಿಕೆಡಿ (ಕಂಪ್ಲೀಟ್ಲಿ ನಾಕ್ ಡೌನ್) ಮಾರ್ಗದ ಮೂಲಕ ಭಾರತಕ್ಕೆ ಆಮದು ಮಾಡಿಕೊಳ್ಳಲಾಗುತ್ತಿದೆ. ಹೊಸ ಹೋಂಡಾ ಅಡ್ವೆಂಚರ್ ಟೂರರ್ ಅನ್ನು ಬಿಗ್‌ವ್ಹಿಂಗ್ ಡೀಲರ್‌ಶಿಪ್ ನೆಟ್‌ವರ್ಕ್ ಮೂಲಕ ಮಾರಾಟ ಮಾಡಲಾಗುತ್ತದೆ. ಈ ಹೊಸ ಸಿಬಿ500ಎಕ್ಸ್ ಅಡ್ವೆಂಚರ್ ಬೈಕ್ ಆಗಿರುವುದರಿಂದ ಹೆಚ್ಚು ಅಗ್ರೇಸಿವ್ ಲುಕ್ ಅನ್ನು ಹೊಂದಿದೆ.

ಹೊಸ ಹೋಂಡಾ ಸಿಬಿ500ಎಕ್ಸ್ ಅಡ್ವೆಂಚರ್ ಬೈಕಿನಲ್ಲಿ 471ಸಿಸಿ, ಲಿಕ್ವಿಡ್-ಕೂಲ್ಡ್, ಡಿಒಹೆಚ್‌ಸಿ ಪ್ಯಾರಲಲ್-ಟ್ವಿನ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 8,500 ಆರ್‌ಪಿಎಂನಲ್ಲಿ 47 ಬಿಹೆಚ್‍ಪಿ ಪವರ್ ಮತ್ತು 6,500 ಆರ್‌ಪಿಎಂನಲ್ಲಿ 43.2 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಇನ್ನು ಎಂಜಿನ್ ನೊಂದಿಗೆ ಸ್ಲಿಪ್ಪರ್ ಮತ್ತು ಅಸಿಸ್ಟ್ ಕ್ಲಚ್ ಜೊತೆಗೆ 6-ಸ್ಪೀಡ್ ಗೇರ್‌ಬಾಕ್ಸ್ ಅನ್ನು ಜೋಡಿಸಲಾಗಿದೆ.
MOST READ: ಹೊಸ ಹೀರೋ ಎಕ್ಸ್‌ಟ್ರಿಮ್ 160ಆರ್ 100 ಮಿಲಿಯನ್ ಎಡಿಷನ್ ಬಿಡುಗಡೆ

ಇನ್ನು ಈ ಹೋಂಡಾ ಸಿಬಿ500ಎಕ್ಸ್ ಅಡ್ವೆಂಚರ್ ಬೈಕಿನ ಸಸ್ಪೆಂಕ್ಷನ್ ಸೆಟಪ್ ಬಗ್ಗೆ ಹೇಳುವುದಾದರೆ, 150ಎಂಎಂ ಟ್ರ್ಯಾವೆಲ್ ನೊಂದಿಗೆ 41 ಎಂಎಂ ಟೆಲಿಸ್ಕೋಪಿಕ್ ಫೋರ್ಕ್‌ಗಳು ಮತ್ತು ಹಿಂಭಾಗದ ಆಕ್ಸಲ್‌ಗಳಲ್ಲಿ 135 ಎಂಎಂ ಟ್ರಾವೆಲ್ ಯುನಿಟ್ ಮೊನೊಶಾಕ್ ಸೆಟಪ್ ಅನ್ನು ಒಳಗೊಂಡಿದೆ.

ಇನ್ನು ಈ ಹೊಸ ಹೋಂಡಾ ಅಡ್ವೆಂಚರ್ ಬೈಕಿನ ಮುಂಭಾಗದಲ್ಲಿ 19 ಇಂಚಿನ (110/80 ಆಲ್-ಟೆರೈನ್ ಟೈರ್) ಮತ್ತು ಹಿಂಭಾಗದಲಿ 17 ಇಂಚಿನ (160/60 ಆಲ್-ಟೆರೈನ್ ಟೈರ್) ಅಲಾಯ್ ವ್ಹೀಲ್ ಅನ್ನು ಅಳವಡಿಸಲಾಗಿದೆ.
MOST READ: ಬಿಡುಗಡೆಯಾಯ್ತು ಹೊಸ ಕವಾಸಕಿ ವಲ್ಕನ್ ಎಸ್ ಬೈಕ್

ಇನ್ನು ಈ ಹೋಂಡಾ ಸಿಬಿ500ಎಕ್ಸ್ ಅಡ್ವೆಂಚರ್ ಬೈಕಿನ ಬ್ರೇಕಿಂಗ್ ಸಿಸ್ಟಂ ಬಗ್ಗೆ ಹೇಳುವುದಾದರೆ, ಮುಂಭಾಗದಲ್ಲಿ 320 ಎಂಎಂ ಡಿಸ್ಕ್ ಬ್ರೇಕ್ ಮತ್ತು ಹಿಂಭಾಗದಲ್ಲಿ 230 ಎಂಎಂ ಡಿಸ್ಕ್ ಬ್ರೇಕ್ ಅನ್ನು ಅಳವಡಿಸಲಾಗಿದೆ. ಇದರೊಂದಿಗೆ ಡ್ಯುಯಲ್-ಚಾನೆಲ್ ಎಬಿಎಸ್ (ಆಂಟಿ-ಲಾಕ್ ಬ್ರೇಕಿಂಗ್ ಸಿಸ್ಟಂ) ಅನ್ನು ಕೂಡ ನೀಡಲಾಗಿದೆ.

ಈ ಹೊಸ ಹೋಂಡಾ ಸಿಬಿ500ಎಕ್ಸ್ ಬೈಕಿನಲ್ಲಿ ಹೊಂದಾಣಿಕೆ ಮಾಡಬಹುದಾದ ವಿಂಡ್‌ಸ್ಕ್ರೀನ್, ಸ್ಟೆಪ್ ಅಪ್ ಸೀಟ್ ಮತ್ತು ಅಪ್‌ಸ್ವೆಪ್ಟ್ ಎಕ್ಸಾಸ್ಟ್ ಸಿಸ್ಟಂನಂತಹ ಫೀಚರ್ ಗಳೊಂದಿಗೆ ಇದು ಪೂರ್ಣ ಎಲ್ಇಡಿ ಸಿಸ್ಟಂ ಅನ್ನು ಹೊಂದಿದೆ. ಈ ಬೈಕಿನಲ್ಲಿ ಸಂಪೂರ್ಣ ಡಿಜಿಟಲ್ ಎಲ್‌ಸಿಡಿ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಕೂಡ ಇದೆ.
MOST READ: ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್‍ಮಾಸ್ಟರ್ ಬೈಕ್

ಹೋಂಡಾ ಮೋಟಾರ್‌ಸೈಕಲ್ ಮತ್ತು ಸ್ಕೂಟರ್ ಇಂಡಿಯಾ ಕಂಪನಿಯ ಸೇಲ್ಸ್ ಮತ್ತು ಮಾರ್ಕೆಟಿಂಗ್ ವಿಭಾಗದ ನಿರ್ದೇಶಕರಾದ ಯಾದವಿಂದರ್ ಸಿಂಗ್ ಗುಲೇರಿಯಾ ಅವರು ಮಾತನಾಡಿ, ಮಧ್ಯಮ ಗಾತ್ರದ ಪ್ರೀಮಿಯಂ ಬೈಕ್ ವಿಭಾಗವನ್ನು ಮತ್ತಷ್ಟು ಬಲಪಡಿಸುವ ಮೂಲಕ ಮತ್ತಷ್ಟು ಬೈಕ್ ಪ್ರಿಯರನ್ನು ಸೆಳೆಯಲು ಪ್ರಯತ್ನಸುತ್ತೇವೆ ಎಂದು ಹೇಳಿದರು.

ಭಾರತೀಯ ಮಾರುಕಟ್ಟೆಯಲ್ಲಿ ಅಡ್ವೆಂಚರ್ ಬೈಕುಗಳಿಗೆ ಬೇಡಿಕೆ ಹೆಚ್ಚಾಗುತ್ತಿರುವ ವೇಳೆಯಲ್ಲಿ ಹೋಂಡಾ ಹೊಸ ಸಿಬಿ500ಎಕ್ಸ್ ಅಡ್ವೆಂಚರ್ ಬೈಕನ್ನು ಬಿಡುಗಡೆಗೊಳಿಸಿದೆ. ಈ ಹೊಸ ಬೈಕ್ ಭಾರತೀಯ ಮಾರುಕಟ್ಟೆಯಲ್ಲಿ ಬೆನೆಲ್ಲಿ ಟಿಆರ್ಕೆ 502, ಸುಜುಕಿ ವಿ-ಸ್ಟ್ರೋಮ್ 650ಎಕ್ಸ್‌ಟಿ ಮತ್ತು ಕವಾಸಕಿ ವರ್ಸಿಸ್ 650 ಬೈಕುಗಳಿಗೆ ಪೈಪೋಟಿ ನೀಡುತ್ತದೆ.