ಸೆಪ್ಟೆಂಬರ್ ತಿಂಗಳಿನಲ್ಲಿ 4.8 ಲಕ್ಷ ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿದ Honda Motorcycle

ಜನಪ್ರಿಯ ದ್ವಿಚಕ್ರ ತಯಾರಕ ಕಂಪನಿಯಾದ ಹೋಂಡಾ ಮೋಟಾರ್‌ಸೈಕಲ್ ಮತ್ತು ಸ್ಕೂಟರ್ ಇಂಡಿಯಾ ಕಂಪನಿಯು ತನ್ನ 2021ರ ಸೆಪ್ಟೆಂಬರ್ ತಿಂಗಳ ಮಾರಾಟ ವರದಿಯನ್ನು ಬಹಿರಂಗಪಡಿಸಿದೆ. ಈ ಮಾರಾಟ ವರದಿಯ ಪ್ರಕಾರ, ಕಳೆದ ತಿಂಗಳು ಹೋಂಡಾ ಕಂಪನಿಯು 4,82,756 ಯುನಿಟ್‌ಗಳನ್ನು ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿದೆ.

ಸೆಪ್ಟೆಂಬರ್ ತಿಂಗಳಿನಲ್ಲಿ 4.8 ಲಕ್ಷ ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿದ Honda Motorcycle

ಇನ್ನು ಕಳೆದ ತಿಂಗಳು ಹೋಂಡಾ ಮೋಟಾರ್‌ಸೈಕಲ್ ಕಂಪನಿಯು 19,077 ಯುನಿಟ್‌ಗಳನ್ನು ರಫ್ತು ಮಾಡಿದೆ. ಇನ್ನು ಹೋಂಡಾ ಮೋಟಾರ್‌ಸೈಕಲ್ ಕಳೆದ ವರ್ಷದ ಸೆಪ್ಟೆಂಬರ್ ತಿಂಗಳಿನಲ್ಲಿ 5,26,865 ಯುನಿಟ್‌ಗಳನ್ನು ಮಾರಾಟಗೊಳಿಸಲಾಗಿದೆ, ವರ್ಷದಿಂದ ವರ್ಷದ ಮಾರಾಟದಲ್ಲಿ ಹೋಂಡಾ ಮೋಟಾರ್‌ಸೈಕಲ್ ಕುಸಿತವನ್ನು ಕಂಡಿದೆ. ಇನ್ನು ಕಳೆದ ವರ್ಷ ಹೋಂಡಾ 25,978 ಯುನಿಟ್‌ಗಳನ್ನು ರಫ್ತು ಮಾಡಲಾಗಿತ್ತು. ಇದನ್ನು ಕಳೆದ ವರ್ಷದ ರಫ್ತಿಗೆ ಹೋಲಿಸಿದರೆ ಕುಸಿತವನ್ನು ಕಂಡಿದೆ.

ಸೆಪ್ಟೆಂಬರ್ ತಿಂಗಳಿನಲ್ಲಿ 4.8 ಲಕ್ಷ ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿದ Honda Motorcycle

ಹೋಂಡಾ ಮೋಟಾರ್ ಸೈಕಲ್ ಮತ್ತು ಸ್ಕೂಟರ್ ಇಂಡಿಯಾ ಪ್ರೈ. ಲಿಮಿಟೆಡ್ ನಿರ್ದೇಶಕ ದವಿಂದರ್ ಸಿಂಗ್ ಗುಲೇರಿಯಾ ಅವರು ಕಳೆದ ತಿಂಗಳ ಮಾರಾಟದ ಕುರಿತು ಪ್ರತಿಕ್ರಿಯಿಸಿ, ಗ್ರಾಹಕರ ವಿಚಾರಣೆಯಲ್ಲಿ ಏರಿಕೆಯಾಗುತ್ತಿರುವ ಪ್ರತಿ ತಿಂಗಳು ನಾವು ವೇಗವನ್ನು ಮರಳಿ ಪಡೆಯುತ್ತಿದ್ದೇವೆ. ಮುಂಬರುವ ಕೆಲವು ತಿಂಗಳುಗಳು ಬೆಳವಣಿಗೆಯ ಮುನ್ಸೂಚನೆಯನ್ನು ನಿರ್ಧರಿಸುವಲ್ಲಿ ನಿರ್ಣಾಯಕವಾಗಿರುತ್ತವೆ,

ಸೆಪ್ಟೆಂಬರ್ ತಿಂಗಳಿನಲ್ಲಿ 4.8 ಲಕ್ಷ ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿದ Honda Motorcycle

ಇದು ವರ್ಷದ ಅತ್ಯಂತ ನಿರೀಕ್ಷಿತ ಹಬ್ಬಗಳ ಸೀಸನ್ ಬರುತ್ತಿದೆ. ಭಾರತವು ಹಬ್ಬದ ಸಂಭ್ರಮಕ್ಕೆ ಸಜ್ಜಾಗಿದೆ ಮತ್ತು ತಮ್ಮ ನೆಚ್ಚಿನ ಹೋಂಡಾ ದ್ವಿಚಕ್ರ ವಾಹನದೊಂದಿಗೆ ಗ್ರಾಹಕರನ್ನು ಸಂತೋಷಪಡಿಸಲು ಸಿದ್ಧವಾಗಿದೆ ಎಂದು ಅವರು ಹೇಳಿದರು,

ಸೆಪ್ಟೆಂಬರ್ ತಿಂಗಳಿನಲ್ಲಿ 4.8 ಲಕ್ಷ ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿದ Honda Motorcycle

ಕರೋನಾ ಸಾಂಕ್ರಾಮಿಕದ ಸಂದರ್ಭದಲ್ಲಿ ಗ್ರಾಹಕರ ಸುರಕ್ಷತೆಗಾಗಿ ಹೋಂಡಾ ಮೋಟಾರ್‌ಸೈಕಲ್ ಕಂಪನಿಯು ತನ್ನ ದ್ವಿಚಕ್ರ ವಾಹನಗಳ ಮಾರಾಟಕ್ಕಾಗಿ ವರ್ಚುವಲ್ ಶೋರೂಂ ಅನ್ನು ಇತ್ತೀಚೆಗೆ ತೆರೆದಿದೆ. ಈ ಶೋರೂಂ ಮೂಲಕ ಗ್ರಾಹಕರು ದ್ವಿಚಕ್ರ ವಾಹನ ಖರೀದಿಸುವಾಗ ಡಿಜಿಟಲ್ ಅನುಭವವನ್ನು ಪಡೆಯಲಿದ್ದಾರೆ. ಹೋಂಡಾ ತನ್ನ ಪ್ರೀಮಿಯಂ ಬಿಗ್ ವಿಂಗ್ ಡೀಲರ್‌ಶಿಪ್‌ಗಳಿಗಾಗಿ ಈ ವರ್ಚುವಲ್ ಶೋರೂಂ ಅನ್ನು ಆರಂಭಿಸಿದೆ.

ಸೆಪ್ಟೆಂಬರ್ ತಿಂಗಳಿನಲ್ಲಿ 4.8 ಲಕ್ಷ ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿದ Honda Motorcycle

ಗ್ರಾಹಕರು ಬಿಗ್ ವಿಂಗ್ ಡೀಲರ್‌ಶಿಪ್‌ನಲ್ಲಿ ಮಾರಾಟವಾಗುವ ಬೈಕ್‌ಗಳನ್ನು ಮಾತ್ರ ಈ ವರ್ಚುವಲ್ ಶೋರೂಂ ಮೂಲಕ ಖರೀದಿಸಬಹುದು. ಹೋಂಡಾ ಮೋಟಾರ್‌ಸೈಕಲ್ ಈ ವರ್ಚುವಲ್ ಶೋರೂಂ ಮೂಲಕ ಗ್ರಾಹಕರು ತಮ್ಮ ಮನೆಯಲ್ಲಿಯೇ ಕುಳಿತು ಬೈಕ್ ಖರೀದಿಸಬಹುದು. ಹೋಂಡಾ ಬಿಗ್‌ವಿಂಗ್‌ನ ವೆಬ್‌ಸೈಟ್ www.hondabigwingindia.com ವರ್ಚುವಲ್ ಶೋರೂಂ ಮೂಲಕ ಗ್ರಾಹಕರು ಬೈಕ್ ಖರೀದಿಸಬಹುದು.

ಸೆಪ್ಟೆಂಬರ್ ತಿಂಗಳಿನಲ್ಲಿ 4.8 ಲಕ್ಷ ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿದ Honda Motorcycle

ವಿಭಿನ್ನ ಬೈಕ್ ಗಳ ಆಕ್ಸೇಸರಿಸ್'ಗಳು ವರ್ಚುವಲ್ ಶೋರೂಂನಲ್ಲಿ ಲಭ್ಯವಿರುವುದರಿಂದ ಗ್ರಾಹಕರು ಬೈಕ್ ಖರೀದಿಸುವಾಗ ಅವುಗಳನ್ನು ಕಸ್ಟಮೈಸ್ ಮಾಡಬಹುದು. ವರ್ಚುವಲ್ ಶೋರೂಂನಲ್ಲಿ ಬೈಕ್ ಖರೀದಿಸುವ ಅನುಭವವು ನೈಜ ಶೋರೂಂನಲ್ಲಿ ಬೈಕ್ ಖರೀದಿಸಿದಂತೆ ಮಾಡಲು ಬೈಕಿನ 360 ಡಿಗ್ರಿ ಚಿತ್ರಗಳನ್ನು ತೋರಿಸಲಾಗುತ್ತದೆ.

ಸೆಪ್ಟೆಂಬರ್ ತಿಂಗಳಿನಲ್ಲಿ 4.8 ಲಕ್ಷ ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿದ Honda Motorcycle

ಈ ಚಿತ್ರಗಳು ಬೈಕಿನ ಪ್ರತಿಯೊಂದು ಭಾಗದ ಸಂಪೂರ್ಣ ಮಾಹಿತಿಯನ್ನು ನೀಡುತ್ತವೆ. ಇದರ ಹೊರತಾಗಿ ಆಡಿಯೋ, ವೀಡಿಯೊ ಮೂಲಕ ಬೈಕ್‌ಗಳ ಪ್ರತಿಯೊಂದು ಬಿಡಿ ಭಾಗಗಳ ಬಗ್ಗೆಯೂ ವಿವರವಾದ ಮಾಹಿತಿಯನ್ನು ನೀಡಲಾಗುತ್ತದೆ. ಈ ವೆಬ್‌ಸೈಟ್‌ನಲ್ಲಿ ವರ್ಚುವಲ್ ಚಾಟ್ ಸಪೋರ್ಟ್ ಸಹ ನೀಡಲಾಗುತ್ತದೆ.

ಸೆಪ್ಟೆಂಬರ್ ತಿಂಗಳಿನಲ್ಲಿ 4.8 ಲಕ್ಷ ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿದ Honda Motorcycle

ಇದರಿಂದ ಗ್ರಾಹಕರ ಪ್ರತಿಯೊಂದು ಸಮಸ್ಯೆಗೂ ಪರಿಹಾರ ಸಿಗಲಿದೆ. ತಮ್ಮ Honda ಬೈಕ್ ಅನ್ನು ಕಸ್ಟಮೈಸ್ ಮಾಡಿದ ನಂತರ ಗ್ರಾಹಕರು ತಮ್ಮ ಹತ್ತಿರದ ಬಿಗ್ ವಿಂಗ್ ಡೀಲರ್‌ಶಿಪ್‌ನಿಂದ ಬೈಕ್ ವಿತರಣೆಯನ್ನು ಪಡೆದು ಕೊಳ್ಳಬಹುದು. ಕಂಪನಿಯು ಈ ವೆಬ್‌ಸೈಟ್‌ನಲ್ಲಿ ವೈವಿಧ್ಯಮಯ ಬಿಡಿ ಭಾಗ ಹಾಗೂ ಪ್ರೀಮಿಯಂ ಬೈಕುಗಳ ರೈಡಿಂಗ್ ಉಡುಪುಗಳನ್ನು ಸಹ ಲಭ್ಯವಾಗುವಂತೆ ಮಾಡಿದೆ.

ಸೆಪ್ಟೆಂಬರ್ ತಿಂಗಳಿನಲ್ಲಿ 4.8 ಲಕ್ಷ ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿದ Honda Motorcycle

ಹೋಂಡಾ ಮೋಟಾರ್‌ಸೈಕಲ್ ಕಂಪನಿಯ Hness CB350, CB350 RS, CB500X, CB650R, CBR650R, Africa Twin, CBR1000RR-R ನಂತಹ ಬಿಗ್ ವಿಂಗ್ ಡೀಲರ್‌ಶಿಪ್‌ನಿಂದ ಮಾರಾಟವಾಗುವ ಪ್ರೀಮಿಯಂ ಬೈಕ್ ಗಳು ಕಂಪನಿಯ ಈ ವರ್ಚುವಲ್ ಶೋರೂಂನಲ್ಲಿ ಲಭ್ಯವಿರಲಿವೆ.

ಸೆಪ್ಟೆಂಬರ್ ತಿಂಗಳಿನಲ್ಲಿ 4.8 ಲಕ್ಷ ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿದ Honda Motorcycle

ಹೋಂಡಾ ಟೂ ವ್ಹೀಲರ್ಸ್ ಇಂಡಿಯಾ ಕಂಪನಿಯು ತನ್ನ ಹೊಸ ಸಿಬಿ200ಎಕ್ಸ್ (CB200X) ಅಡ್ವೆಂಚರ್ ವಿತರಣೆಯನ್ನು ಪ್ರಾರಂಭಿಸಿದೆ. ಈ ಹೊಸ ಹೋಂಡಾ ಸಿಬಿ200ಎಕ್ಸ್ ಅಡ್ವೆಂಚರ್ ಬೈಕನ್ನು ಎಕ್ಸ್ ಶೋರೂಂ ಪ್ರಕಾರ ರೂ.1.44 ಲಕ್ಷಗಳಾಗಿದೆ. ಆಸಕ್ತ ಗ್ರಾಹಕರು ಈ ಅಡ್ವೆಂಚರ್ ಬೈಕಿನ ಖರೀದಿಗಾಗಿ ಆನ್‌ಲೈನ್ ಅಥವಾ ಡೀಲರ್ ಬಳಿ ತೆರಳಿ ಬುಕ್ಕಿಂಗ್ ಮಾಡಿಕೊಳ್ಳಬಹುದು. ಈ ಸಿಬಿ200ಎಕ್ಸ್ ಬೈಕ್ ಅಡ್ವಂಚರ್-ಟೂರರ್ ವಿಭಾಗದಲ್ಲಿ ಇರಿಸಲಾಗಿದೆ.

ಸೆಪ್ಟೆಂಬರ್ ತಿಂಗಳಿನಲ್ಲಿ 4.8 ಲಕ್ಷ ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿದ Honda Motorcycle

ಈ ಬೈಕಿನಲ್ಲಿ ಗಾಳಿಯಿಂದ ರಕ್ಷಣೆ ಪಡೆಯಲು ಎತ್ತರದ ವಿಂಡ್‌ಸ್ಕ್ರೀನ್ ಅನ್ನು ನೀಡಿದೆ. ಈ ಬೈಕಿನ ಹೆಚ್ಚಿನ ಗ್ರೌಂಡ್ ಕ್ಲಿಯರೆನ್ಸ್ ಅನ್ನು ಹೊಂದಿದೆ. ಇದರಲ್ಲಿ ಆಫ್-ರೋಡ್ ಕಾರ್ಯಕ್ಷಮತೆಗಾಗಿ ಕೆಲವು ಫೀಚರ್ಸ್ ಗಳನ್ನು ನೀಡಲಾಗಿದೆ. ಈ ಬೈಕಿನಲ್ಲಿ ಎಲ್‌ಇಡಿ ಹೆಡ್‌ಲ್ಯಾಂಪ್‌ಗಳು, ಎಲ್‌ಇಡಿ ಟೈಲ್‌ಲ್ಯಾಂಪ್‌ಗಳು, ನಕಲ್ ಗಾರ್ಡ್‌ಗಳು, ಸ್ಪ್ಲಿಟ್-ಸೀಟ್‌ಗಳು ಮತ್ತು ಹಝರ್ಡ್ ಲೈಟ್ ಅನ್ನು ಹೊಂದಿದೆ. ಇನ್ನು ಈ ಹೊಸ ಹೋಂಡಾ ಸಿಬಿ200ಎಕ್ಸ್ ಅಡ್ವೆಂಚರ್ ಬೈಕ್ ಮಾರಾಟವನ್ನು ಹೆಚ್ಚಿಸಲು ಸಹಕಾರವಾಗುತ್ತದೆ.

Most Read Articles

Kannada
English summary
Honda motorcycle and scooter india sells 482756 units in september 2021 details
Story first published: Monday, October 4, 2021, 20:24 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X